ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಇಂದು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಪುತ್ತೂರಿನಲ್ಲಿ ಬೃಹತ್ ರೋಡ್ ಶೋ -ಮತಯಾಚನೆ

Posted by Vidyamaana on 2023-05-08 01:32:03 |

Share: | | | | |


ಇಂದು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಪುತ್ತೂರಿನಲ್ಲಿ ಬೃಹತ್ ರೋಡ್ ಶೋ -ಮತಯಾಚನೆ

ಪುತ್ತೂರು: ಪ್ರತಿಯೊಬ್ಬ ಕಾರ್ಯಕರ್ತನೂ ನಮ್ಮ ಸ್ಟಾರ್ ಪ್ರಚಾರಕ ಎಂಬ ಘೋಷವಾಕ್ಯದೊಂದಿಗೆ ಮೇ 8ರಂದು ಮಧ್ಯಾಹ್ನ ಗಂಟೆ 1ರಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಕಾರ್ಯಕರ್ತರೊಂದಿಗೆ ಬೊಳುವಾರುನಿಂದ ದರ್ಬೆ ವೃತ್ತದ ತನಕ ಬೃಹತ್ ರೋಡ್ ಶೋ ಮತ್ತು ಮತಯಾಚನೆ ನಡೆಯಲಿದೆ.

ನಮ್ಮ ಚಿಹ್ನೆ ಬ್ಯಾಟ್ ಎಂಬ ಘೋಷಣೆಯೊಂದಿಗೆ ಹಿಂದುತ್ವಕ್ಕಾಗಿ ಕಾರ್ಯಕರ್ತರ ಗೆಲುವಾಗಲಿ ಎಂದು ಮಹಾಸಂಗಮ ರೋಡ್ ಶೋ ನಡೆಯಲಿದೆ.ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ರೋಡ್ ಶೋದಲ್ಲಿ ಭಾಗವಹಿಸುವಂತೆ ಅವರ ಬೆಂಬಲಿಗರು ವಿನಂತಿಸಿದ್ದಾರೆ.

ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, ಧನುಷ್

Posted by Vidyamaana on 2024-04-08 21:59:35 |

Share: | | | | |


 ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, ಧನುಷ್

ನವದೆಹಲಿ : ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಮತ್ತು ನಟ-ನಿರ್ದೇಶಕ ಧನುಷ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನದ ಸೆಕ್ಷನ್ 13 ಬಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ದಂಪತಿಗೆ ಹತ್ತಿರದ ಮೂಲಗಳು ತಿಳಿಸಿವೆ.ಇಬ್ಬರೂ ಜನವರಿ 2022ರಲ್ಲಿ ಬೇರ್ಪಡುವ ನಿರ್ಧಾರವನ್ನ ಘೋಷಿಸಿದರು. ಆ ಸಮಯದಲ್ಲಿ, ಅವರ ಪ್ರಕಟಣೆಯು ಅವರ ಅನುಯಾಯಿಗಳಿಗೆ ಭಾರಿ ಆಘಾತವನ್ನುಂಟು ಮಾಡಿತು.

ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹೋಗುವಾಗ ಮತ್ತೊಂದು ದುರ್ಘಟನೆ! ಯುವಕನ ಸ್ಥಿತಿ ಗಂಭೀರ

Posted by Vidyamaana on 2024-01-08 22:14:52 |

Share: | | | | |


ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹೋಗುವಾಗ ಮತ್ತೊಂದು ದುರ್ಘಟನೆ! ಯುವಕನ ಸ್ಥಿತಿ ಗಂಭೀರ

ಗದಗ, ಜ.8: ರಾಕಿಂಗ್ ಸ್ಟಾರ್ ಯಶ್ (Yash) ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.


ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಗ್ರಾಮಕ್ಕೆ ಭೇಟಿ ನೀಡಿದ ನಂತರ ಹುಬ್ಬಳ್ಳಿಯ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳು ಆರೋಗ್ಯ ವಿಚಾರಿಸಿ ಯಶ್ ಹಿಂದಿರುಗುವಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ.ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಸವಾರನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಗಾಯಾಳು ಯುವಕನ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಗಾಯಾಳುವನ್ನು ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (32) ಎಂದು ಗುರುತಿಸಲಾಗಿದೆ.

ಪಾಟ್ರಕೋಡಿ ಜುಮಾ ಮಸೀದಿಯಲ್ಲೊಂದು ಸೌಹಾರ್ದ ಇಫ್ತಾರ್ ಕೂಟ- ಇದರ ಹಿಂದಿದೆ ಒಂದು ರೀಸನ್

Posted by Vidyamaana on 2024-03-26 08:11:30 |

Share: | | | | |


ಪಾಟ್ರಕೋಡಿ ಜುಮಾ ಮಸೀದಿಯಲ್ಲೊಂದು ಸೌಹಾರ್ದ ಇಫ್ತಾರ್ ಕೂಟ- ಇದರ ಹಿಂದಿದೆ ಒಂದು ರೀಸನ್

ಬಂಟ್ವಾಳ : ಈ ನೆಲದ ಸಾಮರಸ್ಯ ಸೌಹಾರ್ದತೆಯ ಪರಂಪರೆಗೆ ಸಾಕ್ಷಿಯಾಗಬಲ್ಲ ವಿನೂತನ ಕಾರ್ಯಕ್ರಮವೊಂದು ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಪಾಟ್ರಕೋಡಿ ಜುಮಾ ಮಸೀದಿ ವಠಾರದಲ್ಲಿ ಭಾನುವಾರ ನಡೆಯಿತು.

     ಬಂಟ್ವಾಳ ತಾಲೂಕಿನ ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಆಡಳಿತ ಸಮಿತಿ ವತಿಯಿಂದ ಪಾಟ್ರಕೋಡಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಹಿಂದು - ಮುಸ್ಲಿಂ - ಕ್ರೈಸ್ತ ಧರ್ಮದ ನೂರಾರು ಮಂದಿ ಕೂಡುವಿಕಯ ಸೌಹಾರ್ದ ಇಫ್ತಾರ್ ಸಂಗಮ ಇಲ್ಲಿನ ಶಾಂತಿ ಸೌಹಾರ್ದತೆಗೆ ಸಾಕ್ಷಿಯಾಯಿತು.

     ಪರಸ್ಪರ ಮತಭೇದ ಮರೆತು ನಾವೆಲ್ಲರೂ ಒಂದೇ ತತ್ವ-ಸತ್ಯ ಸಾರಲು ಮಸೀದಿ - ದೈವಸ್ಥಾನ ಪ್ರಮುಖರು ಮುಂದಾಗಿರುವುದು 

ನಿಜಕ್ಕೂ ಇದೊಂದು ಅಪರೂಪದ ಕಾರ್ಯಕ್ರಮ. ಹಿಂದು ಮತ್ತು ಮುಸ್ಲಿಂ ಭಾಂದವರ ಅಪೂರ್ವ ಸಂಗಮ. ಕೋಮುಭಾವನೆ ಕೆರಳಿಸಿ, ಮತೀಯ ಸಂಘರ್ಷ ಸೃಷ್ಠಿಸಿ ಸಮಾಜ ಒಡೆಯುವ ಶಕ್ತಿಗಳ ನಡುವೆ ಇಂತಹ ಕಾರ್ಯಕ್ರಮಗಳು ಅನಿವಾರ್ಯವೇ ಸರಿ.

    ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಇತ್ತೀಚೆಗೆ ಬ್ರಹ್ಮಕಲಶೋತ್ಸವ ನಡೆದಿತ್ತು. ಬ್ರಹ್ಮಕಲಶೋತ್ಸವಕ್ಕೆ ಹೊರೆಕಾಣಿಕೆ ಬರುವ ಸಂದರ್ಭ ಪರಿಸರದ ಮಸೀದಿ ವ್ಯಾಪ್ತಿಯ ಮುಸ್ಲಿಂ ಭಾಂದವರು ಅಲ್ಲಲ್ಲಿ ರಸ್ತೆಯಂಚಿನಲ್ಲಿ ನಿಂತು ಹೊರೆಕಾಣಿಕೆ ಮೆರವಣಿಗೆಯಲ್ಲಿ ಸಾಗುತ್ತಿದ್ದವರಿಗೆ ಶರಬತ್ತು ಹಂಚಿ ಹೊರೆ ಕಾಣಿಕೆ ನೀಡುವ ಮೂಲಕ ಮೆರವಣಿಗೆಯ ಯಶಸ್ವಿಗೆ ಸಹಕರಿಸಿ ಸಾಮರಸ್ಯ ಮೆರೆದಿದ್ದರು. ಅಲ್ಲದೆ ಮುಸ್ಲಿಂ ಮುಖಂಡರು ಅಲ್ಲಲ್ಲಿ ಬ್ರಹ್ಮ ಕಲಶೋತ್ಸವಕ್ಕೆ ಶುಭ ಕೋರಿ ಬ್ಯಾನರ್ ಅಳವಡಿಸಿದ್ದರು. 


    ಈ ಸೌಹಾರ್ದತೆಯ ವಾತಾವರಣ, ಮಾನವೀಯತೆ, ಬಂಧುತ್ವವನ್ನು ಕಂಡ ದೈವಸ್ಥಾನದ ಆಡಳಿತ ಸಮಿತಿಯವರು ಮುಸ್ಲಿಂ ಭಾಂದವರ ಮನೆ ಮನೆಗೆ ಹೋಗಿ ಬ್ರಹ್ಮಕಲಶೋತ್ಸವದ ಆಮಂತ್ರಣ ನೀಡಿ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದರು. 

ಇದರಿಂದ ಪ್ರೇರಿತರಾದ ಮುಸ್ಲಿಂ ಭಾಂದವರೂ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವ ಮೂಲಕ ಭಾವೈಕ್ಯತೆಯ ವಾತಾವರಣ ಸೃಷ್ಠಿಯಾಗಿತ್ತು. ಇಂತಹ ಸೌಹಾರ್ದತೆಯ ವಾತಾವರಣ ಮತ್ತು ಬ್ರಹ್ಮಕಲಶೋತ್ಸವದಲ್ಲಿ ಮೆರೆದ ಸಾಮರಸ್ಯದ ಸವಿನೆನಪು  ಶಾಶ್ವತವಾಗಿರಿಸಬೇಕು ಎಂಬ ದೃಷ್ಠಿಯಿಂದ ಇದೀಗ ದೈವಸ್ಥಾನದ ಆಡಳಿತ ಸಮಿತಿಯವರು ಮಸೀದಿಯಲ್ಲಿ ಇಫ್ತಾರ್ ಕೂಟ ಆಯೋಜಿಸುವ ಮೂಲಕ ಪರಸ್ಪರ ಮಾನವೀಯತೆಯ ಸಂದೇಶ ಸಾರಿದ್ದಾರೆ.  ದೈವಸ್ಥಾನ ಮತ್ತು ಮಸೀದಿಯ ಈ ಕಾರ್ಯ ಇತರೆಡೆಗಳಿಗೆ ಮಾದರಿಯಾಗಿದೆ.


    ಈ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮಸೀದಿ ಖತೀಬ್ ಖಲಂದರ್ ಶಾಫಿ ಬಾಖವಿ, ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಅದ್ಯಕ್ಷ ಕೃಷ್ಣ ಭಟ್, ಉಪಾಧ್ಯಕ್ಷ ಪರಮೇಶ್ವರ ನಾವಡ, ಕೋಶಾಧಿಕಾರಿ ಚೆನ್ನಪ್ಪ ಗೌಡ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಕುಲಾಲ್, ಕಾರ್ಯದರ್ಶಿ ಚರಣ್ ಕುಲಾಲ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಹಾಜಿ ಆದಂ ಕುಂಞಿ,  ಕೆದಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಮಾಜಿ ಉಪಾಧ್ಯಕ್ಷ ಉಮೇಶ್ ಮುರುವ, ಮಾಜಿ ಸದಸ್ಯ ರಾಬರ್ಟ್ ಲಸ್ರಾದೋ, ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಬೆ, ಮಸೀದಿ ಕೋಶಾಧಿಕಾರಿ ಹಮೀದ್ ಹಾಜಿ ಕೋಡಿ, ಪೂರ್ವಾದ್ಯಕ್ಷರುಗಳಾದ ಮುಹಮ್ಮದ್ ಮಾಸ್ಟರ್, ಕೆ.ಎಸ್. ಯೂಸುಫ್, ಉಮ್ಮರ್ ಹಾಜಿ ಕರಿಮಜಲು, ಪ್ರಮುಖರಾದ ವಿಶ್ವನಾಥ ಶೆಟ್ಟಿ, ಬಾಲಕೃಷ್ಣ ಗೌಡ, ಚೆನ್ನಪ್ಪ ಕಂಪ, ಮಸೀದಿ ಆಡಳಿತ ಸಮಿತಿ ಸದಸ್ಯರು, ಗೌಸಿಯಾ ಯಂಗ್ ಮೆನ್ಸ್ ನಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.


    ಇದೇ ವೇಳೆ ಮಸೀದಿ ವತಿಯಿಂದ ದೈವಸ್ಥಾನದ ಅದ್ಯಕ್ಷ ಸಹಿತ ಪ್ರಮುಖರನ್ನು ಸನ್ಮಾನಿಸಲಾಯಿತು. ಅದೇ ರೀತಿ ದೈವಸ್ಥಾನದ ವತಿಯಿಂದ ಮಸೀದಿ ಅಧ್ಯಕ್ಷ, ಕಾರ್ಯದರ್ಶಿ, ಖತೀಬರ ಸಹಿತ ದೈವಸ್ಥಾನಕ್ಕೆ ಸ್ಥಳದಾನ ಮಾಡಿದ ದಿ. ಪಕ್ರಬ್ಬ ಹಾಜಿ ಅವರ ಪುತ್ರ ಹಮೀದ್ ಹಾಜಿ, ಬ್ರಹ್ಮ ಕಲಶೋತ್ಸವ ಸಂದರ್ಭದಲ್ಲಿ ಉಚಿತವಾಗಿ ಆಟೋ ಸೇವೆಯನ್ನು ನೀಡಿದ ರಿಕ್ಷಾ ಚಾಲಕ ಅಶ್ರಫ್ ಅವರನ್ನು ಸನ್ಮಾನಿಸಲಾಯಿತು.

ಮಸೀದಿ ಅಧ್ಯಕ್ಷ ಬಾತಿಶ್ ಪಾಟ್ರಕೋಡಿ ಸ್ವಾಗತಿಸಿ, ಕಾರ್ಯದರ್ಶಿ ತಶ್ರೀಫ್ ವಂದಿಸಿದರು. ಕೆ.ಎ.ಶರೀಫ್ ಕೋಲ್ಪೆ ಕಾರ್ಯಕ್ರಮ ನಿರೂಪಿಸಿದರು

ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು

Posted by Vidyamaana on 2024-03-23 15:17:51 |

Share: | | | | |


ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು

ಕಾಸರಗೋಡು:  ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಸುಳ್ಯದ ಸುಲೈಮಾನ್ ಹಾಗೂ ಪೆರಿಯಾ ನಿವಾಸಿ ಅಬ್ದುಲ್ ರಜಾಕ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರಕರಣದಲ್ಲಿ ಪುತ್ತೂರಿನ ವ್ಯಕ್ತಿ ಓರ್ವರ ಕೈವಾಡ ಇರುವುದು ತನಿಖೆ ವೇಳೆ ಪೊಲೀಸರಿಗೆ ತಿಳಿದು ಬಂದಿದೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಕಾರು

Posted by Vidyamaana on 2023-07-05 10:45:16 |

Share: | | | | |


ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಕಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ.ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದೆ.ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ



Leave a Comment: