ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಪೊಲೀಸ್ ಠಾಣೆಯಲ್ಲೇ ಪತ್ನಿಯ ಕೊಲೆಗೆ ಯತ್ನಿಸಿದ ಪತಿ

Posted by Vidyamaana on 2023-11-21 16:38:20 |

Share: | | | | |


ಪೊಲೀಸ್ ಠಾಣೆಯಲ್ಲೇ ಪತ್ನಿಯ ಕೊಲೆಗೆ ಯತ್ನಿಸಿದ ಪತಿ

ಹಾಸನ: ಪೊಲೀಸ್ ಠಾಣೆಯಲ್ಲೇ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ಸೋಮವಾರ ನಡೆದಿದೆ.ಕಿರುಕುಳದಿಂದ ಬೇಸತ್ತು ಪತ್ನಿ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.ಹರೀಶ್​ (34) ಪ್ರಕರಣದ ಆರೋಪಿ. ಶಿಲ್ಪಾ ಗಂಡನಿಂದ ಹಲ್ಲೆಗೊಳಗಾದವರು. 


ಹರೀಶ್ ಮತ್ತು​ ಶಿಲ್ಪಾ ಕಳೆದ 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ಹಾಸನದ ಕೈಗಾರಿಕಾ ಪ್ರದೇಶದ ಸಮೀಪವಿರುವ ಬಿಟ್ಟಗೌಡನಹಳ್ಳಿಯಲ್ಲಿ ವಾಸವಿದ್ದರು. ಪತ್ನಿ ವಿರುದ್ಧ ಆರೋಪಿ ಅನುಮಾನ ಪಡುತ್ತಿದ್ದ. ಈ ನಡೆಯನ್ನು ಪ್ರಶ್ನಿಸಿದರೆ ಹಲ್ಲೆ ಮಾಡುತ್ತಿದ್ದ. ಹೀಗೆ ಪ್ರತಿನಿತ್ಯದ ಕಿರುಕುಳದಿಂದ ನೊಂದ ಶಿಲ್ಪಾ ಕೊನೆಗೆ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದರು.


ದೂರಿನಂತೆ ಪೊಲೀಸರು ಆರೋಪಿಯನ್ನು ಕರೆಯಿಸಿ ಬುದ್ಧಿ ಹೇಳಲು ಮುಂದಾಗಿದ್ದರು. ಈ ವೇಳೆ ಪಿಎಸ್‌ಐ ಉಮಾ ಅವರು ಹರೀಶ್​ನನ್ನು ವಿಚಾರಣೆ ಮಾಡುತ್ತಿದ್ದರು. ಇದರಿಂದ ಕುಪಿತನಾದ ಆತ ಪೊಲೀಸರೆದುರೇ ಪತ್ನಿಯ ಹತ್ಯೆ ಮುಂದಾದ. ತಾನು ಮೊದಲೇ ತಂದಿದ್ದ ಚಾಕುವಿನಿಂದ ಕುತ್ತಿಗೆ ಕೊಯ್ದಿದ್ದಾನೆ.ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಚಾಕು ಕಿತ್ತುಕೊಂಡಿದ್ದಾರೆ.


ಗಾಯಾಳು ಶಿಲ್ಪಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹರೀಶ್‌ ವಿರುದ್ಧ ಹಾಸನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಸುಳ್ಯ | ಚಿರತೆ ಸಾವು ಪ್ರಕರಣ: ಇಬ್ಬರ ಬಂಧನ

Posted by Vidyamaana on 2023-08-30 07:43:57 |

Share: | | | | |


ಸುಳ್ಯ | ಚಿರತೆ ಸಾವು ಪ್ರಕರಣ: ಇಬ್ಬರ ಬಂಧನ

ಸುಳ್ಯ: ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ.

ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ

BREAKING : ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭ : ದೆಹಲಿಗೆ ಆಗಮಿಸಿದ ಮಾಲ್ಮೀಮ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝ

Posted by Vidyamaana on 2024-06-09 15:02:46 |

Share: | | | | |


BREAKING : ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭ : ದೆಹಲಿಗೆ ಆಗಮಿಸಿದ ಮಾಲ್ಮೀಮ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝು ನವದೆಹಲಿಗೆ ಆಗಮಿಸಿದ್ದಾರೆ.

ದ.ಕ., ಉಡುಪಿ ಜಿಲ್ಲೆ: (ಮಾ.12) ಮಂಗಳವಾರದಿಂದ ರಮಝಾನ್ ಉಪವಾಸ ಆರಂಭ

Posted by Vidyamaana on 2024-03-11 19:42:48 |

Share: | | | | |


ದ.ಕ., ಉಡುಪಿ ಜಿಲ್ಲೆ: (ಮಾ.12) ಮಂಗಳವಾರದಿಂದ ರಮಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾ ಮಸೀದಿಯ ಕೋಶಾಧಿಕಾರಿ ಎಸ್‌.ಎಂ. ರಶೀದ್‌ ಹಾಜಿ ತಿಳಿಸಿದ್ದಾರೆ.

*ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಬಳ್ ಅಲ್ ಬುಖಾರಿ ಪ್ರತ್ಯೇಕ ಹೇಳಿಕೆಯಲ್ಲಿ ಮಂಗಳವಾರದಿಂದ ಉಪವಾಸ ಆಚರಿಸಲು ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಬಿಜೆಪಿಯವರು ಮುಸ್ಲಿಂ ಮಕ್ಕಳ ವಿದ್ಯಾಬ್ಯಾಸವನ್ನು ತಡೆಯಲು ಸ್ಕಾಲರ್ ಶಿಪ್ ರದ್ದು ಮಾಡಿದ್ದರು

Posted by Vidyamaana on 2023-09-05 21:37:46 |

Share: | | | | |


ಬಿಜೆಪಿಯವರು ಮುಸ್ಲಿಂ ಮಕ್ಕಳ ವಿದ್ಯಾಬ್ಯಾಸವನ್ನು ತಡೆಯಲು ಸ್ಕಾಲರ್ ಶಿಪ್ ರದ್ದು ಮಾಡಿದ್ದರು

ಪುತ್ತೂರು: ಅಲ್ಪಸಂಖ್ಯಾತ ಮಕ್ಕಳು ವಿದ್ಯೆ ಕಲಿಯಬಾರದು, ಅವರು ವಿದ್ಯೆಯಿಂದ ವಂಚಿತರಾಗಬೇಕು ಎಂಬ ಏಕೈಕ ಉದ್ದೇಶದಿಂದ ಕಳೆದ ಅವಧಿಯ ಬಿಜೆಪಿ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುತ್ತಿದ್ದ ಸ್ಕಾಲರ್ ಶಿಪ್ ರದ್ದು ಮಾಡಿದ್ದರು ಆ ಮೂಲಕ ವಿದ್ಯೆಯ ಹೆಸರಿನಲ್ಲೂ ಕೋಮುವಾದ ಮಾಡಿದ್ದರು ಎಂದು ರಾಜ್ಯ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕಫ್ ಸಚಿವರಾ ಝಮೀರ್ ಅಹ್ಮದ್ ಹೇಳಿದರು.

ಅವರು ಇಡ್ಕಿದು ಗ್ರಾಮದ ಮಿತ್ತೂರು ದಾರುಲ್ ಇರ್ಷಾದ್ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ಜನವಿಕಾಶ ಯೋಜನೆಯಡಿ ನಿರ್ಮಿಸಲಾದ ಪ್ರೌಢ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.


ಇಲ್ಲಿ ನಿರ್ಮಾಣವಾದ ಶಾಲೆ ಕೇಂದ್ರ ಸರಕಾರದ ಅನುದಾನದಿಂದ ಮಾತ್ರ ನಿರ್ಮಾಣವಾಗಿದ್ದಲ್ಲ ಇದರಲ್ಲಿ ರಾಜ್ಯ ಸರಕಾರದ ಅನುದಾನವೂ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಜನ ನೆಮ್ಮದಿಯಿಂದ ಇದ್ದಾರೆ, ಬಿಜೆಪಿಯ ಕೋಮುವಾದಕ್ಕೆ ನಾವು ಬ್ರೇಕ್ ಹಾಕಿದ್ದೇವೆ ಎಂದು ಹೇಳಿದರು. ನಾವು ನಮ್ಮ ಮಕ್ಕಳಿಗೆ ಮದ್ರಸದಲ್ಲಿ ಸೌಹಾರ್ಧತೆಯ ಪಾಠವನ್ನು ಮಾಡುತ್ತೇವೆ ಹೊರತು ಕೋಮುವಾದವನ್ನು ಕಲಿಸುತ್ತಿಲ್ಲ, ಇಸ್ಲಾಂ ಧರ್ಮದಲ್ಲಿ ಕೋಮುವಾದ , ಜಾತಿ ಪದ್ದತಿಗೆ ಅವಕಾಶವೇ ಇಲ್ಲ ನಮ್ಮದೇನಿದ್ದರೂ ದೇಶಪ್ರೇಮದ ಶಿಕ್ಷಣವಾಗಿದೆ, ದೇಶಪ್ರೇಮದ ಸಿದ್ದಾಂತವಾಗಿದೆ. ನಮ್ಮ ಸೌಹಾರ್ಧತೆಯ ಸಿದ್ದಾಂತವನ್ನು ನಾವು ಮುಂದೆಯೋ ಮುಂದುವರೆಸುತ್ತೇನೆ ಎಂದು ಹೇಳಿದರು. ಸಿದ್ದರಾಮಯ್ಯ ಅವರ ಸರಕಾರದಲ್ಲಿ ಎಲ್ಲರನ್ನೂ ಒಂದೇ ಸಮಾನಾಗಿ ಕಾಣಲಾಗುತ್ತಿದೆ, ಯಾವ ಧರ್ಮದವರಿಗೂ ಅನ್ಯಾಯ ಮಾಡುತ್ತಿಲ್ಲ, ಯಾವ ಜಾತಿಯವರನ್ನು ಕಡೆಗಣಿಸುತ್ತಿಲ್ಲ, ಜನ ಮೆಚ್ಚಿದ ಸರಕಾರವನ್ನು ಕಾಂಗ್ರೆಸ್ ನೀಡುತ್ತಿದೆ ಎಂದು ಹೇಳಿದರು.

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ

ನಾವು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ವಿದ್ಯೆ ಇಲ್ಲದೇ ಇದ್ದರೆ ಮುಂದೆ ಏನೂ ಮಾಡಲು ಸಾಧ್ಯವಿಲ್ಲ. ಶಿಕ್ಷಣಕ್ಕಾಗಿ ನಾವು ಒಗ್ಗೂಡಬೇಕು, ಯಾವುದೇ ಒಂದು ಮಗು ಶಿಕ್ಷಣದಿಂದ ವಂಚಿತರಾಗಬಾರದು ಆ ರೀತಿ ಆಗದಂತೆ ಎಚ್ಚರಿಕೆಯಿಂದ ಇರಬೇಕಾದದ್ದು ಪೋಷಕರ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿದರು. ಮಿತ್ತೂರು ದಾರುಲ್ ಇರ್ಷಾದ್ ಸಂಶ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಿರುವುದು ಅಬಿನಂದನೀಯವಾಗಿದೆ ಈ ಸಂಸ್ಥೆಗೆ ಸರಕಾರದಿಂದ ದೊರೆಯುವ ಎಲ್ಲಾ ಸಹಾಯ ಧನವನ್ನು ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.


ಪುತ್ತೂರು ಶಾಸಕರಾದ ಅಶೋಕ್ ರೈ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ಕರ್ನಾಟಕ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಜಿಪಂ ಸದಸ್ಯ ಎಂ ಎಸ್ ಮಹಮ್ಮದ್ , ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ. ಜಿಪಂ ಸಿಇಒ ಆನಂದ, ಟಿಎಂ ಶಹೀದ್ ಸುಳ್ಯ, ವಕಫ್ ಬೋರ್ಡು ಮಾಜಿ ಅಧ್ಯಕ್ಷ ಶಾಪಿ ಮುಸ್ಲಿಯಾರ್ ಸಅದಿ, ಮಾಣಿ ಉಸ್ತಾದ್ ಸಹಿತ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ತಿತರಿದ್ದರು.

ಪುತ್ತೂರು : ನಳಿನ್ ಹಾಗೂ ಡಿವಿ ಕುರಿತು ಅವಹೇಳನಕಾರಿ ಬ್ಯಾನರ್ ಅಳವಡಿಸಿದ ಪ್ರಕರಣ. –ವಿಶ್ವನಾಥ್- ಮಾಧವ ಪೊಲೀಸ್ ವಶಕ್ಕೆ

Posted by Vidyamaana on 2023-05-15 13:48:30 |

Share: | | | | |


ಪುತ್ತೂರು : ನಳಿನ್ ಹಾಗೂ ಡಿವಿ ಕುರಿತು ಅವಹೇಳನಕಾರಿ ಬ್ಯಾನರ್ ಅಳವಡಿಸಿದ ಪ್ರಕರಣ. –ವಿಶ್ವನಾಥ್- ಮಾಧವ ಪೊಲೀಸ್ ವಶಕ್ಕೆ

ಪುತ್ತೂರು : ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ವಿರುದ್ಧ ಅವಹೇಳನಕಾರಿ ಬರಹದೊಂದಿಗೆ  ಭಾವಚಿತ್ರ ಲಗತ್ತಿಸಿ ಬ್ಯಾನರ್‌ ಅಳವಡಿಸಿದ ಪುತ್ತೂರು ಬಸ್ಸು ನಿಲ್ದಾಣದ ಬಳಿ ಪ್ರಕರಣದಲ್ಲಿ ಇಬ್ಬರನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್‌ ಹಾಗೂ ಮಾಧವ ಪೊಲೀಸ್‌ ವಶದಲ್ಲಿರುವವರು. ಪುತ್ತೂರು ಕೆ.ಎಸ್ಆರ್.ಟಿಸಿ ಬಸ್ಸು ನಿಲ್ದಾಣದ ಎದುರು ಅರಣ್ಯ ಇಲಾಖೆಯ ಆವರಣ ಗೋಡೆ ಬಳಿ ಅವಹೇಳನಕಾರಿ ಬ್ಯಾನರ್ ಅಳವಡಿಸಲಾಗಿತ್ತು.

ಪುತ್ತೂರು ನಗರಸಭಾ ಆಯುಕ್ತ ಮಧು ಎಸ್‌ ಮನೋಹರ್‌  ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 ಅದರಲ್ಲಿ   “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರಧ್ಧಾಂಜಲಿ “ ಎಂದು ನಳಿನ್‌ ಕುಮಾರ್‌ ಕಟೀಲು ಹಾಗೂ  ಡಿ.ವಿ ಸದಾನಂದ ಗೌಡ ಎಂದು ಬರೆಯಲಾಗಿತ್ತು.  ಆ ಬ್ಯಾನರ್‌ ಗೆ  ಚಪ್ಪಲಿ ಹಾರವನ್ನು ಹಾಕಿರುವ ಬಗ್ಗೆಯೂ  ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಲಾಗಿತ್ತು.



Leave a Comment: