ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಏಹ್ ಹೀರೋ..ರೈಗಳೇ... ಅಶೋಕ್ ರೈ ಹೆಗಲಿಗೆ ಕೈ ಹಾಕಿ ಭೇಷ್ ಎಂದ ಸಿ ಎಂ ಸಿದ್ಸರಾಮಯ್ಯ

Posted by Vidyamaana on 2024-05-21 14:15:19 |

Share: | | | | |


ಏಹ್ ಹೀರೋ..ರೈಗಳೇ... ಅಶೋಕ್ ರೈ ಹೆಗಲಿಗೆ ಕೈ ಹಾಕಿ ಭೇಷ್ ಎಂದ ಸಿ ಎಂ ಸಿದ್ಸರಾಮಯ್ಯ

ಮಂಗಳೂರು: ಏಹ್..ಹೀರೋ... ರೈ ಗಳೇ ಎಂದು ಹೇಳಿ ಪುತ್ತೂರು‌ಶಾಸಕರಾದ ಅಶೋಕ್ ರೈ ಅವರ ಹೆಗಲ ಮೇಲೆ ಕೈ ಹಾಕಿ ಭೇಷ್ ಎಂದು ಸಿ ಎಂ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಬೆಳ್ತಂಗಡಿ‌ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ‌ಭಾಗವಹಿಸಲು ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ಶಾಸಕರಾದ ಅಶೋಕ್ ರೈ ಯವರು ಸ್ವಾಗತಿಸಿದರು.



ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

Posted by Vidyamaana on 2024-03-23 15:52:34 |

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


ಪುತ್ತೂರು: ಆರಾಟ ಕನ್ನಡ ಸಿನಿಮಾ ತೆರೆಗೆ

Posted by Vidyamaana on 2024-06-22 15:14:51 |

Share: | | | | |


ಪುತ್ತೂರು: ಆರಾಟ ಕನ್ನಡ ಸಿನಿಮಾ ತೆರೆಗೆ

ಪುತ್ತೂರು: ಪಿ.ಎನ್.ಆರ್. ಪೊಡಕ್ಷನ್ ಬ್ಯಾನರ್‌ನಲ್ಲಿ ತಯಾರಾದ ಆರಾಟ ಕನ್ನಡ ಸಿನಿಮಾ ಜೂ. ೨೧ ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಪುತ್ತೂರಿನ ಭಾರತ್ ಸಿನಿಮಾಸ್‌ನಲ್ಲಿ ದೀಪ ಬೆಳಗಿಸಿ ಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ಉದ್ಘಾಟನೆ ನೆರವೇರಿಸಿದ ವೈದ್ಯ ಡಾ. ಸುರೇಶ್ ಪುತ್ತೂರಾಯ ಮಾತನಾಡಿ, ಧಾರ್ಮಿಕ ಹಿನ್ನೆಲೆಯ ಆರಾಟ ಹೆಸರು ಪುತ್ತೂರು ಮಹಾಲಿಂಗೇಶ್ವರ ದೇವರ ಅಪೂರ್ವ ಅವಭೃತವನ್ನು ನೆನಪಿಸುತ್ತದೆ. ಯೋಗ ದಿನಾಚರಣೆಯ ದಿನವೇ ಚಿತ್ರ ಬಿಡುಗಡೆಯಾಗುತ್ತಿರುವುದು ಸುಯೋಗ. ಲಕ್ಷಾಂತರ ಮಂದಿ ಸಿನಿಮಾವನ್ನು ವೀಕ್ಷಿಸಿ ಬೆಂಬಲಿಸಬೇಕು ಎಂದು ಶುಭಹಾರೈಸಿದರು.

ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಒಂದು ಚಿತ್ರ ನಿರ್ಮಾಣದ ಹಿಂದೆ ಬಹಳಷ್ಟು ಮಂದಿಯ ಪ್ರಯತ್ನ ಇರುತ್ತದೆ. ಜಿಲ್ಲೆ ಹಾಗೂ ಗಡಿ ಭಾಗಗಳಲ್ಲಿ ಚಿತ್ರೀಕರಣಗೊಂಡ ಜಿಲ್ಲೆಯವರೇ ಇರುವ ಸಿನಿಮಾ ಜನ ಮನ್ನಣೆ ಗಳಿಸುವಂತಾಗಲಿ ಎಂದು ಹಾರೈಸಿದರು.

ನಶೆ ಎಫೆಕ್ಟ್ ಆಸ್ಪತ್ರೆಯೊಳಗೇ ವೈದ್ಯರ ನೇಕೆಡ್ ಪೆರೇಡ್

Posted by Vidyamaana on 2024-03-10 14:47:09 |

Share: | | | | |


ನಶೆ ಎಫೆಕ್ಟ್ ಆಸ್ಪತ್ರೆಯೊಳಗೇ ವೈದ್ಯರ ನೇಕೆಡ್ ಪೆರೇಡ್

ಮಹಾರಾಷ್ಟ್ರ: ಆಸ್ಪತ್ರೆಯೊಳಗೆ ವೈದ್ಯರೊಬ್ಬರು ನಗ್ನವಾಗಿ ಓಡಾಡಿರುವ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವೈದ್ಯ  ನಗ್ನವಾಗಿ ತಿರುಗಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಡಿದ ಅಮಲಿನಲ್ಲಿ ವೈದ್ಯ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ವೈದ್ಯ ಮಾದಕ ವ್ಯಸನಿಯಾಗಿದ್ದು, ಔರಂಗಾಬಾದ್‌ನಿಂದ 20 ಕಿಮೀ ದೂರದಲ್ಲಿರುವ ಬಿಡ್ಕಿನ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ವೈದ್ಯ ಆಸ್ಪತ್ರೆಯ ಕಾರಿಡಾರ್‌ನಲ್ಲಿ ಬಟ್ಟೆಯ ತುಂಡನ್ನು ಬೀಸುತ್ತಿರುವುದನ್ನು ಕಾಣಬಹುದು, ವಾಶ್‌ರೂಮ್‌ನ ಒಳಗೆ ಹೋಗುವ ಮೊದಲು, ಅದರ ಬಾಗಿಲು ತೆರೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಕುರಿತು ವೈದ್ಯಕೀಯ ಅಧೀಕ್ಷಕರಿಗೆ ದೂರು ನೀಡಿದ್ದು, ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಛತ್ರಪತಿ ಸಂಭಾಜಿನಗರ ಜಿಲ್ಲೆಯ ಆರೋಗ್ಯ ಸೇವೆಗಳ ಮುಖ್ಯಸ್ಥರಾಗಿರುವ ಡಾ ದಯಾನಂದ ಮೋತಿಪಾವ್ಲೆಹೇಳಿದ್ದಾರೆ

ನೌಕಾಪಡೆ ಕಮಾಂಡೋ ಗಳಿಂದ ಅಪಹರಣಕ್ಕೊಳಗಾದ ಹಡಗಿನಲ್ಲಿದ್ದ ಎಲ್ಲ15 ಭಾರತೀಯರ ರಕ್ಷಣೆ

Posted by Vidyamaana on 2024-01-05 20:36:21 |

Share: | | | | |


ನೌಕಾಪಡೆ ಕಮಾಂಡೋ ಗಳಿಂದ ಅಪಹರಣಕ್ಕೊಳಗಾದ ಹಡಗಿನಲ್ಲಿದ್ದ ಎಲ್ಲ15 ಭಾರತೀಯರ ರಕ್ಷಣೆ

ವದೆಹಲಿ: ಅರೇಬಿಯನ್ ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗಿನಿಂದ ಎಲ್ಲಾ 15 ಭಾರತೀಯರನ್ನು ಭಾರತೀಯ ನೌಕಾಪಡೆಯ ಕಮಾಂಡೋಗಳು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತಿಳಿದ ನಂತರ, ಯುದ್ಧನೌಕೆ ಐಎನ್‌ಎಸ್ ಚೆನ್ನೈ ಸೊಮಾಲಿ ಕರಾವಳಿಯಲ್ಲಿ ಅಪಹರಣಕ್ಕೊಳಗಾದ ಹಡಗು ಎಂವಿ ಲೀಲಾ ನಾರ್ಫೋಕ್ನ್ನ ಸಮೀಪಿಸುತ್ತಿತ್ತು ಮತ್ತು ಅಪಹರಣಕ್ಕೊಳಗಾದ ಹಡಗನ್ನ ಬಿಡುಗಡೆ ಮಾಡುವಂತೆ ಭಾರತೀಯ ನೌಕಾಪಡೆ ಕಡಲ್ಗಳ್ಳರಿಗೆ ಎಚ್ಚರಿಕೆ ನೀಡಿತು.ಹಡಗಿನಲ್ಲಿದ್ದ ಭಾರತೀಯ ತಂಡ ಸುರಕ್ಷಿತವಾಗಿದೆ ಮತ್ತು ದರೋಡೆಕೋರರು ನೇರವಾಗಿ ಕೇಳದಿದ್ದರೆ, ಮೆರೈನ್ ಕಮಾಂಡೋ ಮಾರ್ಕೋಸ್ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಮಿಲಿಟರಿ ಅಧಿಕಾರಿಗಳು ಹೇಳಿದ್ದಾರೆ.


ಸರಕು ಹಡಗು ಎಂವಿ ಲೀಲಾ ನಾರ್ಫೋಕ್ ಅನ್ನು ನಿನ್ನೆ ಸಂಜೆ ಸೊಮಾಲಿಯಾ ಕರಾವಳಿಯಲ್ಲಿ ಅಪಹರಿಸಲಾಗಿದೆ. ಇದ್ರಲ್ಲಿ 15 ಭಾರತೀಯರಿದ್ದರು.


ಹಡಗಿನಲ್ಲಿ ಐದರಿಂದ ಆರು ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು ಇದ್ದರು.!

ಅರೇಬಿಯನ್ ಸಮುದ್ರದಲ್ಲಿ ಈ ಕಡಲ ಘಟನೆಗೆ ಭಾರತೀಯ ನೌಕಾಪಡೆ ತ್ವರಿತವಾಗಿ ಪ್ರತಿಕ್ರಿಯಿಸಿದೆ, ಇದರಲ್ಲಿ ಲೈಬೀರಿಯನ್ ಧ್ವಜ ಹೊಂದಿರುವ ಹಡಗನ್ನು ಅಪಹರಿಸುವ ಪ್ರಯತ್ನ ನಡೆದಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಸುಮಾರು ಐದರಿಂದ ಆರು ಅಪರಿಚಿತ ಸಶಸ್ತ್ರ ವ್ಯಕ್ತಿಗಳು ಹಡಗನ್ನು ಹತ್ತಿದ್ದಾರೆ ಎಂದು ಹಡಗು ಯುಕೆಎಂಟಿಒ ಪೋರ್ಟಲ್ಗೆ ಸಂದೇಶ ಕಳುಹಿಸಿದೆ ಎಂದು ಅವರು ಹೇಳಿದರು.

ಮೂಡಿಗೆರೆ: ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ… ಪೊಲೀಸರ ನಿಯೋಜನೆ

Posted by Vidyamaana on 2023-08-02 03:26:21 |

Share: | | | | |


ಮೂಡಿಗೆರೆ: ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ… ಪೊಲೀಸರ ನಿಯೋಜನೆ

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಇರುವ ಜಲಪಾತಗಳಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿ ಸೆಲ್ಫಿ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು ಇದಕ್ಕೆಲ್ಲಾ ಕಡಿವಾಣ ಹಾಕಲು ಇದೀಗ ಜಲಪಾತದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.


ಇತ್ತೀಚಿಗೆ ಕುಂದಾಪುರದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ದಾವಣಗೆರೆಯ ಶರತ್ ಸಾವನ್ನಪ್ಪಿದ್ದ ಈ ಘಟನೆ ನಡೆದ ಬಳಿಕವೂ ಪ್ರವಾಸಿಗರು ಜಲಪಾತಗಳಲ್ಲಿ ಅಪಾಯಕಾರಿಯಾಗಿ ಸೆಲ್ಫಿ, ರೀಲ್ಸ್ ಮಾಡುವುದು ಕಂಡುಬಂದಿದೆ ಅಲ್ಲದೆ ಚಾರ್ಮಾಡಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಕುಣಿಯುತ್ತಿದ್ದ ಪ್ರವಾಸಿಗರು ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು, ಅಷ್ಟು ಮಾತ್ರವಲ್ಲದೆ ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು ಇದರಿಂದ ಒಮ್ಮೆ ರೋಗಿ ಹೊತ್ತ ಆಂಬುಲೆನ್ಸ್ ಕೂಡ ಪರದಾಟ ನಡೆಸಿತ್ತು, ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ, ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ.


ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದ್ದು ಇಡೀ ದಿನ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಲಿದ್ದಾರೆ.



Leave a Comment: