ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಮೈಸೂರಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗೆ ಸೇರಿದ ಕಟ್ಟಡದಲ್ಲೇ ವೇಶ್ಯಾವಾಟಿಕೆ ಜಾಲ ಬಯಲು

Posted by Vidyamaana on 2023-11-02 11:03:58 |

Share: | | | | |


ಮೈಸೂರಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗೆ ಸೇರಿದ ಕಟ್ಟಡದಲ್ಲೇ ವೇಶ್ಯಾವಾಟಿಕೆ ಜಾಲ ಬಯಲು

ಮೈಸೂರು : ನಿವೃತ್ತ ಪೊಲೀಸ್ ಅಧಿಕಾರಿಗೆ ಸೇರಿದ ಕಟ್ಟಡದಲ್ಲೇ ವೇಶ್ಯಾವಾಟಿಕೆ ಜಾಲ ಬಯಲಾಗಿದ್ದು, ಮೈಸೂರಿನ ತಿ. ನರಸೀಪುರ ರಸ್ತೆಯಲ್ಲಿರುವ ಲಲಿತಮಹಲ್ ನಗರದಲ್ಲಿದ್ದ ಸಲೂನ್ ಮೇಲೆ ದಾಳಿ ಮಾಡಲಾಗಿದೆ. ಒಡನಾಡಿ ಸೇವಾ ಸಂಸ್ಥೆ ಹಾಗೂ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.ನಿವೃತ್ತ ಪೊಲೀಸ್ ಅಧಿಕಾರಿ ಜೆ.ಬಿ. ರಂಗಸ್ವಾಮಿ ಅವರಿಗೆ ವಾಸದ ಮನೆ ಮೇಲೆ ದಾನಿಯಾ ಸಲೂನ್ ನಡೆಯುತ್ತಿದೆ. ಕಳೆದ ಹಲವಾರು ತಿಂಗಳುಗಳಿಂದ ವೇಶ್ಯಾ ದಂಧೆ ನಡೆಯುತ್ತಿದೆ.


ದಾಳಿ ವೇಳೆ ವೇಶ್ಯಾವಾಟಿಕೆ ಕಿಂಗ್‌ ಪಿನ್ ಬಾಣಲಿ ಮಹೇಶ ಹಾಗೂ ಮಧು ಸುಧಾ ಬಂಧನವಾಗಿದೆ. ಇಬ್ಬರು ಗಿರಾಕಿಗಳು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಆರು ಮಂದಿ ಹೆಣ್ಣುಮಕ್ಕಳನ್ನ ರಕ್ಷಣೆ ಮಡಿದ್ದು, ಬಾಣಲಿ ಮಹೇಶನ ಆಡಿಯೋದಲ್ಲಿ ಮಾಲೀಕರ ಪ್ರಸ್ತಾಪ ನಡೆಸಿದ್ದು, ಈ ಹಿಂದೆಯೇ ಸಲೂನ್ ಮೇಲೆ ಒಡನಾಡಿ ದಾಳಿಗೆ ಪ್ಲಾನ್ ಮಾಡಿದ್ದರು.ಪೊಲೀಸರ‌ ಜತೆ ಚರ್ಚಿಸುತ್ತಿದ್ದಂತೆ ಜೆ.ಬಿ. ರಂಗಸ್ವಾಮಿಗೆ ಮಾಹಿತಿ ಸೋರಿಕೆಯಾಗಿದೆ. ಆ ದಿನ ಸಲೂನ್ ಬಂದ್ ಮಾಡಿಸಿದ್ದರೆಂಬ ಮಾಹಿತಿ ದೊರಕಿದ್ದು, ಗಿರಾಕಿ ಜತೆ ಬಾಣಲಿ ಮಹೇಶ್ ಮಾತನಾಡಿರುವ ಆಡಿಯೋ ತುಣುಕು ಬಯಲಾಗಿದೆ. ಇವತ್ತು ರೇಡ್ ಆಗುತ್ತೆ ಅಂತಾ ಮಾಲೀಕರು ಹೇಳಿದ್ದಾರೆ. ಹಾಗಾಗಿ ಬಾಣಲಿ ಮಹೇಶ ಸಲೂನ್ ಬಂದ್ ಮಾಡಿದ್ದೇವೆ ಎಂದಿದ್ದಾರೆ. ಈ ಸಂಬಂಧ ಅಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ನೇಹಿತರ ಬೆಟ್ಟಿಂಗ್ - ಯುವತಿಯ ಹಿಂಭಾಗ ಟಚ್ ಮಾಡಿದ ಪೋಲಿ ಇದೀಗ ಪೊಲೀಸರ ಅತಿಥಿ!

Posted by Vidyamaana on 2024-01-31 20:32:27 |

Share: | | | | |


ಸ್ನೇಹಿತರ ಬೆಟ್ಟಿಂಗ್ - ಯುವತಿಯ ಹಿಂಭಾಗ ಟಚ್ ಮಾಡಿದ ಪೋಲಿ ಇದೀಗ ಪೊಲೀಸರ ಅತಿಥಿ!

ಬೆಂಗಳೂರು :ಇತ್ತೀಚೆಗೆ ನಮ್ಮೂರ ಹೋಟೆಲ್‌ನಲ್ಲಿ ನಿಂತಿದ್ದ ಯುವತಿಗೆ ಅಲ್ಲೇ ಇದ್ದ ಯುವಕನೋರ್ವ ಯುವತಿಯ ಹಿಂದಿನ ಭಾಗಕ್ಕೆ ಬೇಕಂತಲೇ ಟಚ್‌ ಮಾಡಿ ಕೀಟಲೆ ಮಾಡಿ ಅಲ್ಲಿಂದ ಎಸ್ಕೇಪ್‌ ಆಗಿದ್ದ. ಈ ಕುರಿತು ಯುವತಿಯ ಪೋಷಕರು ನೀಡಿದ ದೂರಿಯನನ್ವಯ ವಿಜಯನಗರ ಪೊಲೀಸರು ಕೇಸು ದಾಖಲಿಸಿದ್ದು, ಇದೀಗ ಆರೋಪಿ ಚಂದನ್‌ ಎಂಬಾತನನ್ನು ಬಂಧಿಸಿದ್ದಾರೆ.


ಡಿ.30 ರಂದು ಸಂಜೆ 7.30ರ ಸುಮಾರಿಗೆ ಸ್ನೇಹಿತೆಯೊಂದಿಗೆ ನಮ್ಮೂರ ಹೋಟೆಲ್‌ಗೆ ತಿಂಡಿ ತಿನ್ನಲೆಂದು ಯುವತಿ ಬಂದಿದ್ದು, ಆಕೆಯನ್ನು ಕಂಡ ಯುವಕ ಬೇಕೆಂತಲೇ ಆಕೆಯ ಸೊಂಟದ ಹಿಂಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಕೂಡಲೇ ಯುವತಿ ತರಾಟೆ ತೆಗೆದುಕೊಂಡಾಗ ಅಲ್ಲಿಂದ ಓಡಿ ಹೋಗಿದ್ದ. ಈ ಘಟನೆ ಸಂಬಂಧ ವೀಡಿಯೋ ಜ.18 ರಂದು ವೈರಲ್‌ ಆಗಿತ್ತು. ಯುವತಿ ಪೋಷಕರು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಕಾಮುಕ ಚಂದನ್‌ನನ್ನು ಬಂಧಿಸಿದ್ದಾರೆ.


ಗ್ಯಾಸ್‌ ಸಿಲಿಂಡರ್‌ ಡೆಲಿವರಿ ಕೆಲಸ ಮಾಡುವ ವೃತ್ತಿ ಮಾಡಿಕೊಂಡಿದ್ದ ಆರೋಪಿ ಚಂದನ್‌, ಹಂಪಿನಗರ ನಿವಾಸಿ. ಘಟನೆ ನಡೆದ ದಿನ ಸ್ನೇಹಿತರೊಂದಿಗೆ ಸಿನಿಮಾ ನೋಡಿಕೊಂಡು ಬಂದ ಚಂದನ್‌ ಭರ್ಜರಿ ಪಾರ್ಟಿ, ಕಂಠ ಪೂರ್ತಿ ಕುಡಿದು ಊಟಕ್ಕೆ ಎಂದು ವಿಜಯನಗರ ಹೋಟೆಲ್‌ಗೆ ಬಂದಿದ್ದ. ಊಟ ಮುಗಿಸಿ ಹೋಟೆಲ್‌ ಹೊರಗೆ ಚಂದನ್‌ ಗ್ಯಾಂಗ್‌ ಮಾತಾಡಿಕೊಂಡು ನಿಂತಿದ್ದರು.


ಈ ಸಂದರ್ಭದಲ್ಲಿ ಯುವತಿ ಅಲ್ಲಿಗೆ ಬಂದಿದ್ದಾಳೆ. ಇದನ್ನು ಕಂಡ ಸ್ನೇಹಿತನೋರ್ವ ಆಕೆಯನ್ನು ಮುಟ್ಟಿದರೆ ಐದು ಸಾವಿರ ಕೊಡುತ್ತೀನಿ ಎಂದು ಚಂದನ್‌ಗೆ ಹೇಳಿದ್ದಾನೆ. ಅಷ್ಟಕ್ಕೇ ಚಂದನ್‌ ಕುಡಿದ ಅಮಲಿನಲ್ಲಿ ಹಿಂಬದಿಯಿಂದ ಹೋಗಿ ಯುವತಿಗೆ ಮುಟ್ಟಿ ಅನುಚಿತವಾಗಿ ವರ್ತನೆ ಮಾಡಿ ಕಾಲ್ಕಿತ್ತಿದ್ದ. ನಂತರ ಯುವತಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಳು. ಇದೀಗ ಪೊಲೀಸರು ಆರೋಪಿ ಚಂದನ್‌ನನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಜನತೆಯ ಆಶೀರ್ವಾದವೇ ನಮ್ಮ ಟ್ರಸ್ಟಿಗೆ ಆಧಾರ - ಸುಮಾ ಅಶೋಕ್ ರೈ

Posted by Vidyamaana on 2023-11-05 21:44:23 |

Share: | | | | |


ಜನತೆಯ ಆಶೀರ್ವಾದವೇ ನಮ್ಮ ಟ್ರಸ್ಟಿಗೆ ಆಧಾರ - ಸುಮಾ ಅಶೋಕ್ ರೈ

ಪುತ್ತೂರು: ಸುಮಾರು ಹತ್ತು ವರ್ಷಗಳಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ಪ್ರತೀ ದೀಪಾವಳಿಯಂದು ವಸ್ತ್ರ ವಿತರಣೆ ಕಾರ್ಯಕ್ರಮ‌ನಡೆಸುತ್ತಿದ್ದು ಇದು ಜನರ ಜೊತೆ ಸಹಭೋಜನ ನಡೆಸುವ ಏಕೈಕ ಉದ್ದೇಶವನ್ನು ಹೊಂದಿದ್ದು ಜನತೆಯ ಆಶೀರ್ವಾದವೇ ನಮ್ಮ ಟ್ರಸ್ಟಿಗೆ ಆಧಾರವಾಗಿದೆ ಎಂದು ಟ್ರಸ್ಟಿನ‌ಮುಖ್ಯಸ್ಥೆ ಸುಮಾ ಅಶೋಕ್ ರೈ ಹೇಳಿದರು.

ನ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನುದ್ದೇಶಿಸಿ‌ ಮಾತನಾಡಿದರು.‌ಸಭೆಯು ಟ್ರಸ್ಟ್ ಕಚೇರಿಯಲ್ಲಿ ನ.4 ರಂದು ನಡೆಯಿತು.

ಹಲವು ವರ್ಷಗಳಿಂದ ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ನಡೆಯುತ್ತಿದ್ದ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಕಳೆದ ವರ್ಷ ಕಿಲ್ಲೆ ಮೈದಾನದಲ್ಲಿ ಆಯೋಜನೆ ಮಾಡಲಾಗಿತ್ತು .ಕಳೆದ ಬಾರಿ 30 ಸಾವಿರ ಮಂದಿ ಅನ್ನದಾನ ಹಾಗೂ ವಸ್ತ್ರ ದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಬಾರಿ 50 ಸಾವಿರಕ್ಕೂ‌ಮಿಕ್ಕಿ ಬಂಧುಗಳು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರಿಗೂ ವಸ್ತ್ರದಾನ ಹಾಗೂ ಅನ್ನದಾನ ನಡೆಯುತ್ತದೆ. ಕಾರ್ಯಕ್ರಮದ ಆಹ್ವಾನ ನೀಡುವ ಉದ್ದೇಶದಿಂದ ಪ್ರತೀ ಗ್ರಾಮದಲ್ಲಿ ಟ್ರಸ್ಟ್ ಸಭೆಯನ್ನು ಆಯೋಜಿಸಲಾಗುತ್ತಿದೆ. ಅದೇ ದಿನ ಶಾಸಕರು ಹಾಗೂ ನಮ್ಮ ಟ್ರಸ್ಟಿನ ಪ್ರಮುಖರು,ಸದಸ್ಯರು ಫಲಾನುಭವಿಗಳ‌ಜೊತೆ ಸಹಭೋಜನ ಕಾರ್ಯಕ್ರಮವನ್ನು ನಡೆಸಲಿದ್ದು ಅದುವೇ ನಮ್ಮ‌ ಟ್ರಸ್ಟಿನ ಉದ್ದೇಶವಾಗಿದೆ. ಜಾತಿ.ಮತ,ಧರ್ಮ ರಾಜಕೀಯ ಬೇಧಭಾವವಿಲ್ಲದೆ ಪ್ರತೀಯೊಬ್ಬರೂ ಈ ಕಾರ್ಯಕ್ರಮದಲ್ಲಿ‌ಭಾಗವಹಿಸುವಂತೆ ಸುಮಾ ಅಶೋಕ್ ರೈ ಮನವಿ‌ಮಾಡಿದರು. ಟ್ರಸ್ಟಿನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಸಹಿತ ಟ್ರಸ್ಟಿನ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ಧರು.

ಇಕ್ಬಾಲ್ ಅನ್ಸಾರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ

Posted by Vidyamaana on 2024-01-06 04:42:27 |

Share: | | | | |


ಇಕ್ಬಾಲ್  ಅನ್ಸಾರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ

ಅಯೋಧ್ಯೆ: ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ಮೊಕದ್ದಮೆ ಹೂಡಿದ್ದ ಇಕ್ಬಾಲ್ ಅನ್ಸಾರಿ ಶುಕ್ರವಾರ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಆಹ್ವಾನವನ್ನು ಸ್ವೀಕರಿಸಿದ್ದು, ಈ ಮಹಾಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.ಇದು ಅಯೋಧ್ಯೆ ನಗರಿ, ಇದು ಧರ್ಮದ ನಗರ, ಹಿಂದೂ ಮತ್ತು ಮುಸ್ಲಿಂ ಸಮುದಾಯದ ದೇವತೆಗಳು ಇಲ್ಲಿ ಇದ್ದಾರೆ. ಅಯೋಧ್ಯೆಯ ಹಿಂದೂಗಳು ಮತ್ತು ಮುಸ್ಲಿಮರಲ್ಲಿ ಸಹೋದರತೆ ಮತ್ತು ಏಕತೆ ಇದೆ ಮತ್ತು ಯಾವುದೇ ಅಶಾಂತಿ ಇಲ್ಲ. ದೇವಸ್ಥಾನ, ಮಸೀದಿ, ಗುರುದ್ವಾರ ಎಂಬ ಭೇದಭಾವವಿಲ್ಲ. ಅಯೋಧ್ಯೆಗೆ ಬರುವವರಲ್ಲಿ ಸೌಹಾರ್ದತೆಯ ಭಾವನೆ ಇದೆ’ ಎಂದು ಆಹ್ವಾನ ಸ್ವೀಕರಿಸಿದ ಕೂಡಲೇ ಪಿಟಿಐಗೆ ಹೇಳಿಕೆ ನೀಡಿದ್ದಾರೆ.ರಾಮ್ ಪಥ್ ಬಳಿಯ ಕೋಟ್ಯ ಪಂಜಿತೋಲದಲ್ಲಿರುವ ನಿವಾಸದಲ್ಲಿ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಲಾಯಿತು ಎಂದು ಅವರ ಪುತ್ರಿ ಶಮಾ ಪರ್ವೀನ್ ಪಿಟಿಐಗೆ ತಿಳಿಸಿದ್ದಾರೆ.


ಜನವರಿ 22 ರಂದು ‘ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯ ಪಟ್ಟಣಕ್ಕೆ ಬರುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಆಹ್ವಾನಿತರ ಪಟ್ಟಿಯಲ್ಲಿ ಭಾರತ ಮತ್ತು ವಿದೇಶಗಳಿಂದ ಸುಮಾರು 7,000 ಅತಿಥಿಗಳು ಸೇರಿದ್ದಾರೆ.ಅನ್ಸಾರಿ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ರಾಮ ಮಂದಿರ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ 2019ರ ತೀರ್ಪನ್ನು ಮುಸ್ಲಿಂ ಸಮುದಾಯ ಗೌರವಿಸುತ್ತದೆ ಎಂದು ಹೇಳಿದ್ದರು.



ಅನ್ಸಾರಿಯವರ ತಂದೆ ಹಾಶಿಮ್ ಅನ್ಸಾರಿ ಅವರು 2016 ರಲ್ಲಿ 90 ರ ಹರೆಯದಲ್ಲಿ ನಿಧನ ಹೊಂದಿದ್ದು ಕೊನೆಯವರೆಗೂ ಅಯೋಧ್ಯೆ ಪ್ರಕರಣದ ಪ್ರಮುಖ ದಾವೆದಾರರಲ್ಲಿ ಒಬ್ಬರಾಗಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಕ್ರಮ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿಕೆ

Posted by Vidyamaana on 2023-03-31 04:03:57 |

Share: | | | | |


ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಕ್ರಮ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿಕೆ

ಮಂಗಳೂರು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದ್ದಾರೆ.


ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು ದುರುಪಯೋಗ, ಮತದಾರರ ಓಲೈಕೆ ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.ಇನ್ನು ಮದುವೆ ಇನ್ನಿತರ ಸಮಾರಂಭಗಳನ್ನು ನಡೆಸಲು ಯಾವುದೇ ನಿರ್ಬಂಧವಿಲ್ಲ ಆದರೆ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಬೇಕಿದೆ.ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ದೂರುಗಳನ್ನು ಸಲ್ಲಿಸಲು ಸಿ- ವಿಜಿಲ್ ಮೊಬೈಲ್ ಆಪ್


ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಮೂಲಕ ಜಿಲ್ಲೆಯ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಹೇಳಿದ್ದಾರೆ.


ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ನಿಗಾ ವಹಿಸಲಾಗುವುದು, ಇಲಾಖೆ ಈ ಬಗ್ಗೆ ನಿಗಾವಹಿಸಿ ಅಂತವರ ಮೇಲೆ ಸ್ವಯಂ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ನಿಗಾ ವಹಿಸಲಾಗುವುದು, ಇಲಾಖೆ ಈ ಬಗ್ಗೆ ನಿಗಾವಹಿಸಿ ಅಂತವರ ಮೇಲೆ ಸ್ವಯಂ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡಿದ್ದ ಆಶಿಕ್ ಪೊಲೀಸ್ ವಶಕ್ಕೆ‌

Posted by Vidyamaana on 2023-08-03 12:40:38 |

Share: | | | | |


ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡಿದ್ದ ಆಶಿಕ್  ಪೊಲೀಸ್ ವಶಕ್ಕೆ‌

ಉಡುಪಿ: ಮಣಿಪಾಲ ಡಿಸಿ ಕಚೇರಿ‌ ರಸ್ತೆಯಲ್ಲಿ ರೀಲ್ಸ್ ಶೋಕಿಗಾಗಿ ಯದ್ವಾ ತದ್ವಾ ಸ್ಕೂಟರ್ ಚಲಾಯಿಸಿ ಇತರೆ ವಾಹನ ಸವಾರರಿಗೆ ತೊಂದರೆ ನೀಡಿದ್ದ‌‌ ಯುವಕ ನನ್ನು ಮತ್ತು ಸ್ಕೂಟರ್ ವಶಕ್ಕೆ ಪಡೆದು ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪರ್ಕಳ ನಿವಾಸಿ ಆಶಿಕ್(19) ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡುತ್ತಿದ್ದ ಯುವಕ.


ಆಶಿಕ್ ಯದ್ವಾ ತದ್ವಾ ಸ್ಕೂಟಿ ಓಡಿಸಿ ಹುಚ್ಚಾಟ ಮೆರೆದಿರುವ ವಿಡಿಯೋವೊಂದು ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ಕೂಟಿ ಉಡುಪಿಯ ನೋಂದಣಿ ಸಂಖ್ಯೆ ಹೊಂದಿದ್ದು ವಿಡಿಯೋದಲ್ಲಿ ಮಣಿಪಾಲದ ಡಿಸಿ ಆಫೀಸ್ ರಸ್ತೆ ಹಾಗೂ ಉಡುಪಿಯ ಭಾಗದ ರಸ್ತೆಯಲ್ಲಿ ಯದ್ವಾ ತದ್ವಾವಾಗಿ ಸಂಚರಿಸಿರುವುದು ಕಂಡು ಬಂದಿದೆ. ಒಂದು ಕಡೆ ಹೋಗುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆಯುವ ಸಂದರ್ಭವೂ ಎದುರಾಗಿರುವುದು ವಿಡಿಯೋದಲ್ಲಿ ಕಾಣಬಹುದು.



Leave a Comment: