ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಸುದ್ದಿಗಳು News

Posted by vidyamaana on 2024-07-08 20:09:58 |

Share: | | | | |


ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಮಂಗಳೂರು: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 09/07/224 ರಂದು ರಜೆಯನ್ನು ಘೋಷಿಸಲಾಗಿದೆ.

 Share: | | | | |


ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆ: ಮೂವರು ಅರೆಸ್ಟ್

Posted by Vidyamaana on 2023-09-12 16:56:22 |

Share: | | | | |


ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆ: ಮೂವರು ಅರೆಸ್ಟ್

ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು

ಪೊಲೀಸರು ಬಂಧಿಸಿದ್ದಾರೆ.


ಮೈಲಾರಿ(22), ನವೀನ್(22) ಹಾಗೂ ಶಿವರಾಜ್(30) ಬಂಧಿತ ಆರೋಪಿಗಳು.


ಸೋಮ ಅಲಿಯಾಸ್ ಸೋನು, ಕೀರ್ತಿ ಅಲಿಯಾಸ್ ಉಮೇಶ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.


ಬೆಂಗಳೂರು ಉತ್ತರ ತಾಲೂಕಿನ ರಾವುತನಹಳ್ಳಿಯಲ್ಲಿ ಆ.24ರಂದು ನ್ಯಾನೊ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್​ ಕೇಂದ್ರದ (ಸಿಇಎನ್‌ಎಸ್) 34 ವರ್ಷದ ವಿಜ್ಞಾನಿ ಅಶುತೋಷ್ ಕುಮಾರ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆಗೆ ಯತ್ನಿಸಿದ್ದರು

ಸಾಮಾಜಿಕ ಜಾಲತಾಣದಲ್ಲಿ ಕಾಮಗಾರಿಗಳ ವಿವರ ಕೊಡಿ ; ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆ – ಬ್ಯಾಂಡ್ ನೊಂದಿಗೆ ತೆರಳಿ ಬ್ಯಾನರ್ ಪ್ರದರ್ಶನ : ಅಕ್ರಮ ಪ್ರವೇಶ - ನಿಂದನೆ ಪ್ರಕರಣ ದಾಖಲು

Posted by Vidyamaana on 2024-03-18 10:13:07 |

Share: | | | | |


ಸಾಮಾಜಿಕ ಜಾಲತಾಣದಲ್ಲಿ ಕಾಮಗಾರಿಗಳ ವಿವರ ಕೊಡಿ ; ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆ – ಬ್ಯಾಂಡ್ ನೊಂದಿಗೆ ತೆರಳಿ ಬ್ಯಾನರ್ ಪ್ರದರ್ಶನ  : ಅಕ್ರಮ ಪ್ರವೇಶ - ನಿಂದನೆ ಪ್ರಕರಣ ದಾಖಲು

ಪುತ್ತೂರು: ವಿಧಾನಸಭಾ ಕ್ಷೇತ್ರದಲ್ಲಿ ಅಶೋಕ್‌ ಕುಮಾ‌ರ್ ರೈಯವರು ಶಾಸಕರಾದ 10 ತಿಂಗಳಿನಲ್ಲಿ ಅಭಿವೃದ್ಧಿಯ ಪರ್ವವನ್ನೇ ನಡೆಸಿದ್ದಾರೆ... ಸುಮಾರು 1474.29 ಕೋಟಿ ರೂಪಾಯಿಗಳ ದಾಖಲೆಯ ಅನುದಾನವನ್ನು ಪುತ್ತೂರು ಕ್ಷೇತ್ರಕ್ಕೆ ಬಿಡುಗಡೆ ಮಾಡಿಸಿದ್ದಾರೆ.... ಈ ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸುವ ರೀತಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪುತ್ತೂರಿನ ತಾರೀತ್ತಡಿ ನಿವಾಸಿ ಜಯಾನಂದ ಬಂಗೇರ ವ್ಯಂಗ್ಯರೀತಿಯಲ್ಲಿ ಬರಹಗಳನ್ನು ಬರೆದು ಅನುದಾನ ಬಿಡುಗಡೆ ಆಗಿಲ್ಲ....ಕಾಮಗಾರಿಗಳ ವಿವರ ಕೊಡಿ ಎಂಬುದಾಗಿ ಪೋಸ್ಟು ಗಳನ್ನು ಹಾಕುತ್ತಿದ್ದ.ಇದನ್ನು ಗಮನಿಸಿದ ಶಾಸಕರ ಅಭಿಮಾನಿ ಬಳಗದ ಸದಸ್ಯರು ಬ್ಯಾಂಡ್ ಮೂಲಕ ಜಯಾನಂದರ ಮನೆಗೆ ತೆರಳಿ ಕಾಮಗಾರಿಗಳ ವಿವರದ ಪ್ಲೆಕ್ಸ್ ಅನ್ನು ಓದಿಸಿ ಇನ್ನು ಮುಂದೆ ಅಪಪ್ರಚಾರ ಮಾಡಬಾರದು ಎಂಬುದಾಗಿ ಎಚ್ಚರಿಕೆ ನೀಡಿದ್ದರು.

ಚೆಂಡೆ – ಬ್ಯಾಂಡ್ ನೊಂದಿಗೆ ತೆರಳಿ ಬ್ಯಾನರ್ ಪ್ರದರ್ಶನ  : ಅಕ್ರಮ ಪ್ರವೇಶ - ನಿಂದನೆ ಪ್ರಕರಣ ದಾಖಲು

ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ.


ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನ‌ರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ ಪ್ರವೇಶ ಮಾಡಿ ತನಗೆ, ತಾಯಿಗೆ, ಪತ್ನಿ, ಮಕ್ಕಳಿಗೆ ಅವಾಚ್ಯವಾಗಿ ನಿಂಧಿಸಿದ್ದಾರೆ. ಗೋಡೆಗೆ ಕಾಲಿನಿಂದ ಒದ್ದು ಅಸಭ್ಯವಾಗಿ ವರ್ತನೆ ತೋರಿದ್ದಲ್ಲದೆ, ನೀನು ಬಾರಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಿಯಾ ಎಂದು ಗದರಿಸಿ, ನಿನ್ನನ್ನು ನೋಡಿಕೊಳ್ಳುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

non

er id="mvp-main-he

non

-wrap" class="left relative" style="margin: 0px; p

non

ding: 0px; border: 0px; vertical-align: baseline; position: relative; float: left; width: 360px;">
non

er>

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

Posted by Vidyamaana on 2024-07-08 20:09:58 |

Share: | | | | |


ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಮಂಗಳೂರು: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಮೇ 3ರಂದು ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ?

Posted by Vidyamaana on 2024-05-01 13:00:55 |

Share: | | | | |


ಮೇ 3ರಂದು ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ?

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ (Karnataka politics) ಅತೀವ ಕೋಲಾಹಲ ಸೃಷ್ಟಿಸಿರುವ ಹಾಸನದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ.ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Posted by Vidyamaana on 2024-05-04 21:14:26 |

Share: | | | | |


ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ವಿಟ್ಲ: ಬಿಸಿಲಿನ ತೀವ್ರತೆಯಿಂದಾಗಿ ಚಲಿಸುತ್ತಿದ್ದ ಬಸ್ಸಿನ ಗಾಜು ಇದ್ದಕ್ಕಿಂದ್ದಂತೆ ಒಡೆದ ಘಟನೆ ವಿಟ್ಲದ ಉರಿಮಜಲು ಎಂಬಲ್ಲಿ ನಡೆದಿದೆ. ಕೇರಳ ರಾಜ್ಯ ಸಾರಿಗೆ ಬಸ್ಸಿನ ಗಾಜು ಒಡೆದಿದ್ದು, ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡಿದ್ದಾರೆ.

ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ.

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗೆ ಉಚಿತ ತರಬೇತಿ

Posted by Vidyamaana on 2024-01-08 12:51:41 |

Share: | | | | |


ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗೆ ಉಚಿತ ತರಬೇತಿ

 ಪುತ್ತೂರು /ಸುಳ್ಯ :ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಿರುವ  ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ದಿನಾಂಕ 23.01.2024ರಂದು ನಡೆಯಲಿರುವ ಪಿ ಎಸ್ ಐ 545 ಹುದ್ದೆಗಳ ಮರು ಪರೀಕ್ಷೆಯನ್ನು ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ತರಬೇತಿಯನ್ನು ನೀಡುತ್ತಿದ್ದು, ದಿನಾಂಕ 09.01.2024 ರಿಂದ ತರಗತಿಗಳು ಪ್ರಾರಂಭವಾಗಲಿದೆ,ಈ ತರಗತಿಗಳು ಆನ್ ಲೈನ್ ಮೂಲಕ ತರಗತಿಗಳು ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಛೇರಿ ಸಂಖ್ಯೆ 9448527606ನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Recent News


Leave a Comment: