ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

Posted by Vidyamaana on 2024-04-14 07:59:23 |

Share: | | | | |


ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

ಮಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶದುದ್ದಕ್ಕೂ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಇಂದು (ಏ.14) ರಾಜ್ಯಕ್ಕೆ ಆಗಮಿಸಲಿದ್ದು, ಸಂಜೆ 4.30 ರಿಂದ 5.20ರವರೆಗೆ ಮೈಸೂರಿನಲ್ಲಿ ಸಮಾವೇಶ ನಡೆಸಿ ಹಳೇ ಮೈಸೂರು ಭಾಗದ NDA ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಮೋದಿಗೆ ಸಾಥ್ ನೀಡಲಿದ್ದಾರೆ.

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗೆ ಉಚಿತ ತರಬೇತಿ

Posted by Vidyamaana on 2024-01-08 12:51:41 |

Share: | | | | |


ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗೆ ಉಚಿತ ತರಬೇತಿ

 ಪುತ್ತೂರು /ಸುಳ್ಯ :ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಿರುವ  ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ದಿನಾಂಕ 23.01.2024ರಂದು ನಡೆಯಲಿರುವ ಪಿ ಎಸ್ ಐ 545 ಹುದ್ದೆಗಳ ಮರು ಪರೀಕ್ಷೆಯನ್ನು ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ತರಬೇತಿಯನ್ನು ನೀಡುತ್ತಿದ್ದು, ದಿನಾಂಕ 09.01.2024 ರಿಂದ ತರಗತಿಗಳು ಪ್ರಾರಂಭವಾಗಲಿದೆ,ಈ ತರಗತಿಗಳು ಆನ್ ಲೈನ್ ಮೂಲಕ ತರಗತಿಗಳು ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಛೇರಿ ಸಂಖ್ಯೆ 9448527606ನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಸಿರಾಜುದ್ದೀನ್ ಮೃತ್ಯು

Posted by Vidyamaana on 2023-04-21 11:46:41 |

Share: | | | | |


ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಸಿರಾಜುದ್ದೀನ್ ಮೃತ್ಯು

ರಿಯಾದ್: ಸೌದಿ ಅರೇಬಿಯಾದಲ್ಲಿ ಮಸೀದಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಮಂಗಳೂರಿನ ಯುವಕ ಮೃತಪಟ್ಟಿರೋ ಘಟನೆ ನಡೆದಿದೆ.

ಸಜಿಪದ ಕೋಣೆಕಣಿ ಮೂಲದ ಖಾಸಿಮ್ ಮತ್ತು ಮೈನಬಾ ದಂಪತಿ ಪುತ್ರ ಸಿರಾಜುದ್ದೀನ್ ಮೃತಪಟ್ಟ ಯುವಕ. ಈತ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಮೇ 02 : ಪುತ್ತೂರು ಬಾರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ, ನೂತನ ಪದಾಧಿಕಾರಿಗಳ ಪದಗ್ರಹಣ

Posted by Vidyamaana on 2024-05-01 15:30:14 |

Share: | | | | |


ಮೇ 02 : ಪುತ್ತೂರು ಬಾರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ, ನೂತನ ಪದಾಧಿಕಾರಿಗಳ ಪದಗ್ರಹಣ

ಪುತ್ತೂರು ಬಾರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ ಹಾಗೂ ಪುತ್ತೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮೇ.2 ರಂದು ಪುತ್ತೂರು ಬಾರ್ ಅಸೋಸಿಯೇಶನ್ ನ ಪರಾಶರ ಹಾಲ್ ನಲ್ಲಿ ನಡೆಯಲಿದೆ.

ಹೈಕೋರ್ಟ್ ನ್ಯಾಯಾಧೀಶರಾದ ಎಸ್. ವಿಶ್ವಜಿತ್ ಶೆಟ್ಟಿ, ಹಿರಿಯ ವಕೀಲರಾದ ಎಂ. ರಾಮ್ ಮೋಹನ್ ರಾವ್, ಪಿಬಿಎ ಮಾಜಿ ಅಧ್ಯಕ್ಷರಾದ ಬಿ. ನಿರ್ಮಲ್ ಕುಮಾರ್ ಜೈನ್, ಪಿಬಿಎ ಅಧ್ಯಕ್ಷರಾದ ಜಗನ್ನಾಥ ಜಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಬೃಹತ್ ಮರ ರಸ್ತೆಗೆ: ಮಡಿಕೇರಿ-ಮಂಗಳೂರು ಹೆದ್ದಾರಿ ಸಂಚಾರಕ್ಕೆ ಮುಕ್ತ

Posted by Vidyamaana on 2023-07-24 16:48:04 |

Share: | | | | |


ಬೃಹತ್ ಮರ ರಸ್ತೆಗೆ: ಮಡಿಕೇರಿ-ಮಂಗಳೂರು ಹೆದ್ದಾರಿ ಸಂಚಾರಕ್ಕೆ ಮುಕ್ತ

ಮಡಿಕೇರಿ: ಮಡಿಕೇರಿ -ಮಂಗಳೂರು ಹೆದ್ದಾರಿ ಮದೆ ಸಮೀಪದ ಕರತೋಜಿ ಬಳಿ ಹೆಚ್ಚಿನ ಮಳೆಯಿಂದಾಗಿ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಸಾರಿಗೆ ಸಂಚಾರದಲ್ಲಿ‌ ವ್ಯತ್ಯಯ ಉಂಟಾಗಿತ್ತು.

ಈ ಸಂಬಂಧ ಉಪ ವಿಭಾಗಾಧಿಕಾರಿ ಡಾ.ಯತೀಶ್‌ ಉಲ್ಲಾಳ್, ತಹಶೀಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬಂದಿಯವರು, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರ ಕಲ್ಪಿಸಲಾಯಿತು.

ರಾಜ್ಯ ಬಿಜೆಪಿಗೆ ವಿಜಯೇಂದ್ರ ಹೊಸ ಟೀಮ್ ಅಸ್ತಿತ್ವಕ್ಕೆ, ಸುನಿಲ್ ಕುಮಾರ್, ಬೃಜೇಶ್ ಚೌಟ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ

Posted by Vidyamaana on 2023-12-24 06:57:47 |

Share: | | | | |


ರಾಜ್ಯ ಬಿಜೆಪಿಗೆ ವಿಜಯೇಂದ್ರ ಹೊಸ ಟೀಮ್ ಅಸ್ತಿತ್ವಕ್ಕೆ, ಸುನಿಲ್ ಕುಮಾರ್, ಬೃಜೇಶ್ ಚೌಟ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ

ಬೆಂಗಳೂರು, ಡಿ.24: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಸತಾಗಿ ರಾಜ್ಯ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ ರೆಡ್ಡಿ, ಜಿ. ಪ್ರೀತಂ ಗೌಡ ಅವರನ್ನು ನೇಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾ. ಬೃಜೇಶ್ ಚೌಟ ಅವರನ್ನು ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ. 


ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.‌ಅರುಣ್, ಬಸವರಾಜ್ ಮತ್ತಿಮೋಡ್, ಸಿ. ಮುನಿರಾಜು, ವಿನಯ್ ಬಿದರೆ, ಕ್ಯಾ.ಬೃಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ. ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ಅವರನ್ನು ನೇಮಿಸಲಾಗಿದೆ. ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.‌ಮಂಜುಳಾ, ಯುವಮೋರ್ಚಾ ರಾಜ್ಯಾಧ್ಯಕ್ಷರಾಗಿ ಧೀರಜ್ ಮುನಿರಾಜು ನೇಮಕವಾಗಿದೆ. ಎಸ್ಟಿ ಮೋರ್ಚಾಗೆ ಬಂಗಾರು ಹನುಮಂತು, ಎಸ್ಸಿ ಮೋರ್ಚಾಗೆ ಎಸ್. ಮಂಜುನಾಥ್, ಹಿಂ. ವರ್ಗಗಳ ರಾಜ್ಯಾಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾಗೆ ಎ.ಎಸ್. ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಅನಿಲ್ ಥಾಮಸ್ ನೇಮಕ ಮಾಡಲಾಗಿದೆ. 


ಇದಲ್ಲದೆ, ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ ಸೇರಿದಂತೆ ಹತ್ತು ಮಂದಿಯನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಹುತೇಕ ಯುವಕರ ಪಡೆಯನ್ನು ವಿಜಯೇಂದ್ರ ಆಯ್ಕೆ ಮಾಡಿದ್ದು ಎರಡು ದಿನಗಳ ಹಿಂದೆ ಹೈಕಮಾಂಡ್ ಮುಂದೆ ತೋರಿಸಿ ಒಪ್ಪಿಗೆ ಪಡೆದು ಬಂದಿದ್ದಾರೆ.



Leave a Comment: