ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಚಿನ್ನಾಭರಣ ಪ್ರಿಯರನ್ನು ಯಶಸ್ವಿಯಾಗಿ ಆಕರ್ಷಿಸುತ್ತಿರುವ ಆಟಿ ಸೇಲ್

Posted by Vidyamaana on 2023-08-14 13:01:30 |

Share: | | | | |


ಚಿನ್ನಾಭರಣ ಪ್ರಿಯರನ್ನು ಯಶಸ್ವಿಯಾಗಿ ಆಕರ್ಷಿಸುತ್ತಿರುವ ಆಟಿ ಸೇಲ್

ಪುತ್ತೂರು: ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ನ ಪುತ್ತೂರು ಹಾಗೂ ಸುಳ್ಯ ಚಿನ್ನಾಭರಣ ಮಳಿಗೆಗಳಲ್ಲಿ ಆಗಸ್ಟ್ 7ರಂದು ಆರಂಭಗೊಂಡ ‘ಆಟಿ ಸೇಲ್’ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆ. 15ರಂದು ಕೊನೆ ದಿನವಾಗಿದ್ದು, ಆಟಿ ಸೇಲ್ ನಿರೀಕ್ಷೆಗಳನ್ನು ಹೆಚ್ಚಳಗೊಳಿಸಿದೆ.

ಚಿನ್ನಾಭರಣಗಳ ಪ್ರತೀ ಗ್ರಾಂ ಮೇಲೆ ರೂ. 100 ರಿಯಾಯಿತಿ, ವಜ್ರಾಭರಣಗಳ ಪ್ರತೀ ಕ್ಯಾರೆಟ್ ಮೇಲೆ ರೂ. 5,000ದವರೆಗೆ ರಿಯಾಯಿತಿ, ಬೆಳ್ಳಿಯ ಆಭರಣಗಳ ಮೇಲೆ ಪ್ರತಿ ಕಿಲೋ ಗ್ರಾಂಗೆ ರೂ.2,000 ರಿಯಾಯಿತಿ ನೀಡಲಾಗಿದೆ. ಸಾವಿರಾರು ಹೊಸ ಹೊಸ ಬಗೆಯ ವಿನ್ಯಾಸದ ನೆಕ್ಲೆಸ್ ಗಳು, ಪ್ರಾಚಿ ಎಂಬ ಹೆಸರಿನ ಆಂಟಿಕ್ ಆಭರಣಗಳು, ವಜ್ರಾಭರಣಗಳು, ಮಕ್ಕಳ, ಮಹಿಳೆಯರ ಹಾಗೂ ಪುರುಷರ ನಾನಾ ಅಭಿರುಚಿಗೆ ಒಪ್ಪುವ ಆಭರಣಗಳ ಅಪೂರ್ವ ಸಂಗ್ರಹ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಎಲ್ಲಾ ಪೀಳಿಗೆಯ ಅಭಿರುಚಿಗೆ ತಕ್ಕಂತೆ ಚಿನ್ನದ ಆಭರಣಗಳ ವಿಶಿಷ್ಟ ಕಲೆಕ್ಷನ್ ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆದಿಟ್ಟಿದೆ.

ವಿಶಾಲವಾದ ವಾಹನ ಪಾರ್ಕಿಂಗ್, ಸಿಬ್ಬಂದಿಗಳಿಂದ ನಗುಮೊಗದ ಸೇವೆ, ಸಂಪೂರ್ಣ ಪಾರದರ್ಶಕ ವ್ಯವಹಾರ, ನ್ಯಾಯೋಚಿತ ತಯಾರಿಕಾ ವೆಚ್ಚ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ನ ವೈಶಿಷ್ಟ್ಯಗಳು ಎಂಬ ಶ್ಲಾಘನೆ ಗ್ರಾಹಕರಿಂದ ವ್ಯಕ್ತವಾಗಿದೆ.

ಪುತ್ತೂರಿಗೆ ಬಂದ್ರು ಆಂಜನೇಯ ರೆಡ್ಡಿ – ನಗರ ಠಾಣೆ ಪಿ.ಎಸ್.ಐ. ಆಗಿ ಅಧಿಕಾರ ಸ್ವೀಕಾರ

Posted by Vidyamaana on 2023-09-10 18:44:08 |

Share: | | | | |


ಪುತ್ತೂರಿಗೆ ಬಂದ್ರು ಆಂಜನೇಯ ರೆಡ್ಡಿ – ನಗರ ಠಾಣೆ ಪಿ.ಎಸ್.ಐ. ಆಗಿ ಅಧಿಕಾರ ಸ್ವೀಕಾರ

ಪುತ್ತೂರು: ನಗರ ಠಾಣಾ ಪಿ.ಎಸ್.ಐ. ಆಗಿ ಆಂಜನೇಯ ರೆಡ್ಡಿ ನೇಮಕವಾಗಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯ ನಾಲ್ಕು ಪಿ.ಎಸ್.ಐ. ಹುದ್ದೆಗಳಲ್ಲಿ ಮೂರು ಹುದ್ದೆ ಖಾಲಿಯಾಗಿಯೇ ಇದೆ ಎಂದು ವಿದ್ಯಮಾನ ವರದಿ ಮಾಡಿತ್ತು. ಇದರ ಬಗ್ಗೆ ಶಾಸಕರಲ್ಲಿ ಕೇಳಿದಾಗ, ಒಂದು ವಾರದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ ವಿದ್ಯಮಾನದ ವರದಿ ಬಳಿಕ ತಕ್ಷಣವೇ ಸ್ಪಂದಿಸಿ, ಪಿ.ಎಸ್.ಐ. ಆಂಜನೇಯ ರೆಡ್ಡಿ ಅವರನ್ನು ನೇಮಕ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಪಿ.ಎಸ್.ಐ. ಶ್ರೀಕಾಂತ್ ರಾಥೋಡ್ ಅವರ ವರ್ಗಾವಣೆ ಬಳಿಕ ಹುದ್ದೆ ಖಾಲಿಯಾಗಿಯೇ ಇತ್ತು.

ಆಂಜನೇಯ ರೆಡ್ಡಿ ಅವರು ಈ ಮೊದಲು ಕಡಬ, ಬೆಳ್ಳಾರೆ ಸಹಿತ ಜಿಲ್ಲೆಯ ಹಲವು ಕಡೆಗಳಲ್ಲಿ ಕಾರ್ಯ ನಿರ್ವಹಿಸಿದ್ದು, ತಮ್ಮ ದಕ್ಷ ಮತ್ತು ಪ್ರಾಮಾಣಿಕ ಸೇವೆಯಿಂದಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮಡಿಕೇರಿ: ಕಾಮಗಾರಿ ನಡೆಯುತ್ತಿದ್ದ ವೇಳೆ ಬರೆ ಕುಸಿತ

Posted by Vidyamaana on 2023-10-31 20:08:42 |

Share: | | | | |


ಮಡಿಕೇರಿ: ಕಾಮಗಾರಿ ನಡೆಯುತ್ತಿದ್ದ ವೇಳೆ ಬರೆ ಕುಸಿತ

ಮಡಿಕೇರಿ: ಸ್ಟೀವರ್ಟ್ ಹಿಲ್ ಬಳಿ ಕಟ್ಟಡ ಕಾಮಗಾರಿಗೆ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮೂವರು ಮಣ್ಣಿನ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ವರದಿಯಾಗಿದೆ.



ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಬಸವ, ಲಿಂಗಪ್ಪ, ಆನಂದ ಎಂದು ಗುರುತಿಸಲಾಗಿದೆ.


ಮಣ್ಣಿನಡಿಯಲ್ಲಿ ಸಿಲುಕಿದ್ದ ಓರ್ವನ ಮೃತದೇಹ ಪತ್ತೆಯಾಗಿದ್ದು ಮತ್ತಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳೀಯರಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ಕೂಳೂರಿನ ಅಖ್ತರ್ ದುಬೈಯಲ್ಲಿ ಹೃದಯಾಘಾತದಿಂದ ಮೃತ್ಯು

Posted by Vidyamaana on 2023-10-27 08:08:49 |

Share: | | | | |


ಮಂಗಳೂರು: ಕೂಳೂರಿನ  ಅಖ್ತರ್ ದುಬೈಯಲ್ಲಿ ಹೃದಯಾಘಾತದಿಂದ ಮೃತ್ಯು

ಮಂಗಳೂರು: ದುಬೈಯ ಸಲಾವುದ್ದೀನ್ ಎಂಬಲ್ಲಿ ಕರಾವಳಿ ಮೂಲದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ.



ಮೃತರನ್ನು ಕೂಳೂರು ಪಂಜಿಮೊಗರು ವಿದ್ಯಾನಗರ ನಿವಾಸಿ ಮುಹಮ್ಮದ್ ಎಂಬವರು ಪುತ್ರ ಅಖ್ತರ್(27) ಎಂದು ಗುರುತಿಸಲಾಗಿದೆ. ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ದುಡಿಯುತ್ತಿದ್ದರು.


ಭಾನುವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಖ್ತರ್ ಏಳದಿದ್ದಾಗ ಸಂಗಡಿಗರು ಪರಿಶೀಲಿಸಿದಾದ ಅವರು ನಿಧನರಾಗಿದ್ದರು ಎಂದು ತಿಳಿದುಬಂದಿದೆ.


ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು, ಸೌದಿಯಲ್ಲಿರುವ ಮೃತರ ಸಹೋದರ ಇರ್ಫಾನ್ ಸ್ಥಳಕ್ಕೆ ಆಗಮಿಸಿದ್ದು ಕ್ರಮ ಕೈಗೊಂಡಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

Posted by Vidyamaana on 2024-04-24 04:30:45 |

Share: | | | | |


ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

ಪುತ್ತೂರು : 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ನಡೆಯುವ ಚಿನ್ನೋತ್ಸವಕ್ಕೆ ಈ ಬಾರಿ ಚಿನ್ನದ ಹಬ್ಬ ” ಮುಳಿಯ ಚಿನ್ನೋತ್ಸವ” ಕ್ಕೆ ಎ.22 ರಂದು ಚಾಲನೆ ನೀಡಲಾಯಿತು.

ಮೇ.20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ನ ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು ಅನಾವರಣಗೊಳಿಸಿದರು.

ಆಭರಣದಲ್ಲಿ ಹೊಸ ವಿನ್ಯಾಸದ ಆಕಾಂಕ್ಷೆಯನ್ನು ಮುಳಿಯ ಪೂರೈಸುತ್ತಿದೆ :


ಮುಳಿಯ ಚಿನ್ನೋತ್ಸವವನ್ನು ಉದ್ಘಾಟಿಸಿದ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಇದರ ಪ್ರೊ. ಡಾ. ಸೌಮ್ಯ ಅವರು ಮಾತನಾಡಿ ನನ್ನ ಸುಮಾರು 30 ವರ್ಷದ ಅನುಭವದಲ್ಲಿ ಮುಳಿಯ ಜ್ಯುವೆಲ್ಸ್ನೊಂದಿಗೆ ಉತ್ತಮ ಸಂಬಂಧವಿದೆ. ಯಾಕೆಂದರೆ ನಮ್ಮ ಕಟುಂಬ ಸಮೇತ ಇಲ್ಲಿನ ಗ್ರಾಹಕರಾಗಿದ್ದೇವೆ. ಇದಕ್ಕೆ ಕಾರಣ ಮುಳಿಯ ನಂಬಿಕೆಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಪ್ರತಿಯೊಬ್ಬರಿಗೂ ನನ್ನ ಆಭರಣ ಇತರರಿಗಿಂತ ಭಿನ್ನ ಹೊಸತನ ಹೊಸ ಶೈಲಿಯಲ್ಲಿರಬೇಕೆಂಬ ಆಸೆ ಇರುತ್ತದೆ. ಅದಕ್ಕೆ ತಕ್ಕಂತೆ ಮುಳಿಯ ಜ್ಯುವೆಲ್ಸ್ ಆ ಹೊಸತನದ ಆಕಾಂಕ್ಷೆಯನ್ನು ಪೂರೈಸುತ್ತಿದೆ ಎಂದ ಅವರು ಇದರ ಜೊತೆಗೆ ಸಿಬ್ಬಂದಿಗಳ ನಗುಮೊಗದ ಸೇವೆ ನಾವು ಚಿನ್ನಾಭರಣ ನೋಡಲು ಬಂದವರು ಖರೀದಿಸುವಷ್ಟರ ಮಟ್ಟಿಗೆ ಹೋಗುತ್ತೇವೆ ಎಂದರು

ಬೆಂಗಳೂರು :ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ : ಓರ್ವ ಶಂಕಿತನನ್ನು ವಶಪಡಿಸಿಕೊಂಡ ಪೊಲೀಸರು

Posted by Vidyamaana on 2024-03-02 07:21:16 |

Share: | | | | |


ಬೆಂಗಳೂರು :ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ : ಓರ್ವ ಶಂಕಿತನನ್ನು ವಶಪಡಿಸಿಕೊಂಡ ಪೊಲೀಸರು

ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆ ಬಂದಿದ್ದಾನೆ.

ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ ಕ್ಯಾಪ್ ಹಾಕಿಕೊಂಡು ರಾಮೇಶ್ವರಂ ಕೆಫೆ ಪ್ರವೇಶಿಸಿದ್ದಾನೆ. ಹೊಟೇಲ್ ನಲ್ಲಿ ಸ್ವಲ್ಪ ಹೊತ್ತು ಗಮನಿಸಿ ಕಾಲ ಕಳೆದಿದ್ದಾನೆ. ನಂತರ ತಿಂಡಿ ತಿಂದು ಬ್ಯಾಗ್ ವೊಂದನ್ನ ಹ್ಯಾಂಡ್ ವಾಷ್ ಬಳಿ ಇರಿಸಿದ್ದಾನೆ. ಅಲ್ಲಿಂದ ಕೆಫೆ ಸಮೀಪದಲ್ಲಿರೋ ನಿಲ್ದಾಣದಿಂದ ಬಸ್ ಹತ್ತಿ ತೆರಳಿರೋ ಸಾಧ್ಯೆತೆಗಳಿವೆ.ಬ್ಯಾಗ್ ಇಟ್ಟು ಒಂದು ಘಂಟೆಯ ನಂತರ ಬ್ಲಾಸ್ಟ್ ಆಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿ ಯಾರೆಂದು ಆಲ್ ಮೋಸ್ಟ್ ಗೊತ್ತಾಗಿದೆ. ಆರೋಪಿ ಪತ್ತೆಗಾಗಿ ಸಿಸಿಬಿಯಿಂದ ಕಾರ್ಯಾಚರಣೆ ನಡೆಸಿದ್ದು, ಕೆಲವೇ ಘಂಟೆಗಳಲ್ಲಿ ಆರೋಪಿಯನ್ನ ಬಂಧನ ಮಾಡಲಾಗತ್ತದೆ ಎಂದು ಅವರು ಹೇಳಿದರು.

ಶಂಕಿತ 28-30 ವರ್ಷ ವಯಸ್ಸಿನವನಾಗಿದ್ದು, BMTC ಬಸ್‌ನಲ್ಲಿ ರಾಮೇಶ್ವರಂ ಕೆಫೆಗೆ ಬಂದು ಕೂಪನ್ ಖರೀದಿಸಿ, ರವಾ ಇಡ್ಲಿ ಆರ್ಡರ್ ಮಾಡಿ, ಬ್ಯಾಗ್ ಇಟ್ಟು ಹೊರಟುಹೋಗಿದ್ದಾನೆ. ಶೋಧ ಕಾರ್ಯಕ್ಕಾಗಿ 8 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆತನ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ.



Leave a Comment: