ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಬಿಜೆಪಿ ಮುಖಂಡ ಅರೆಸ್ಟ್ - ರಾತ್ರೋರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

Posted by Vidyamaana on 2024-05-19 17:35:19 |

Share: | | | | |


ಬಿಜೆಪಿ ಮುಖಂಡ ಅರೆಸ್ಟ್ - ರಾತ್ರೋರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು.ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಳ್ತಂಗಡಿಯ ಮೆಲಂತಬೆಟ್ಟು ಎಂಬಲ್ಲಿ ಕಲ್ಲಿನ ಕೋರೆ ನಡೆಯುತ್ತಿದ್ದಲ್ಲಿಗೆ ಶನಿವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಮಂಗಳೂರು ಸಿಎಂ, ಡಿಸಿಎಂಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಬಿಜೆಪಿ ಕಾರ್ಯಕರ್ತ ಅರೆಸ್ಟ್

Posted by Vidyamaana on 2023-12-15 15:17:14 |

Share: | | | | |


ಮಂಗಳೂರು  ಸಿಎಂ, ಡಿಸಿಎಂಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಬಿಜೆಪಿ ಕಾರ್ಯಕರ್ತ ಅರೆಸ್ಟ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.ಮುತ್ತೂರು ಗ್ರಾಮದ ಬೊಳಿಯ ನಿವಾಸಿ ಸಂತೋಷ್ ಪೂಜಾರಿ ಬಂಧಿತ ಆರೋಪಿ.


ಡಿ. 11 ರಂದು ಬಿಜೆಪಿ ಕಾರ್ಯಕರ್ತ ಎನ್ನಲಾದ ಮುತ್ತೂರು ಗ್ರಾಮದ ಬೊಳಿಯ ನಿವಾಸಿ ಸಂತೋಷ್ ಪೂಜಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶ್ರೀ ನಾರಾಯಣ ಗುರು ಯುವ ವೇದಿಕೆ ಎಂಬ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವಾಯ್ಸ್ ಬಿಟ್ಟಿದ್ದು, ನಂತರ ಆ ವಾಯ್ಸ್ ಕ್ಲಿಪ್ ಗಳು ಇತರ ಗ್ರೂಪ್ ಗಳಲ್ಲೂ ವೈರಲ್ ಆಗಿತ್ತು ಎನ್ನಲಾಗಿದೆ. ಈ ಬಗ್ಗೆ ಮುತ್ತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಹರಿಯಪ್ಪ ಎಂಬವರು ಬಜ್ಪೆ ಠಾಣೆಗೆ ದೂರು ನೀಡಿದ್ದರು. ದೂರಿನಂತೆ ದಿನಾಂಕ 14-12-2023 ರಂದು ಬಜ್ಪೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸಂತೋಷ್ ಬೋಳಿಯ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ

Posted by Vidyamaana on 2024-03-27 12:26:28 |

Share: | | | | |


ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ

ಬೆಳ್ತಂಗಡಿ: ಕಾಂಗ್ರೆಸ್ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್,  ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

ಪುತ್ತೂರು : ಶತಾಯುಷಿ ಪದ್ಮಾವತಿ ತ್ಯಾಂಪಣ್ಣ ಪೂಜಾರಿ ನಿಧನ

Posted by Vidyamaana on 2023-12-25 04:40:12 |

Share: | | | | |


ಪುತ್ತೂರು : ಶತಾಯುಷಿ ಪದ್ಮಾವತಿ ತ್ಯಾಂಪಣ್ಣ ಪೂಜಾರಿ ನಿಧನ

ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಬಸಂತಕೋಡಿ ನಿವಾಸಿ ಪದ್ಮಾವತಿ ತ್ಯಾಂಪಣ್ಣ ಪೂಜಾರಿ

(102 ವ) ಅವರು ವಯೋಸಹಜ ಡಿ. 23 ರಂದು ಸ್ವ ಗೃಹದಲ್ಲಿ ನಿಧನ ಹೊಂದಿದರು


ಚುನಾವಣೆಯ ಪ್ರತಿ ಸಂದರ್ಭ ಇವರು ಸತತವಾಗಿ ಮತದಾನ ಮಾಡುತ್ತಿದ್ದರು. ಬಲ್ನಾಡು ಗ್ರಾಮ ಗ್ರಾಮ ಪಂಚಾಯತ್ ವತಿಯಿಂದ ಇತ್ತೀಚೆಗೆ ಇವರನ್ನು ಗೌರವಿಸಿ ಸನ್ಮಾನ ಮಾಡಲಾಗಿದೆ.


ಮೃತರು ಮಕ್ಕಳಾದ ಪುತ್ತೂರು ಸರಕಾರಿ ಆಸ್ಪತ್ರೆಯ ನಿವೃತ್ತ ವಾಹನ ಚಾಲಕ ನಾರಾಯಣ ಪೂಜಾರಿ ಬಸಂತಕೋಡಿ, ಮಂಗಳೂರಿನಲ್ಲಿ ಉದ್ಯಮಿ ಮೋಹನ್ ಬಲ್ನಾಡ್ ಮತ್ತು ಪುತ್ರಿ ಹರಿಣಿ ಎಲ್ಯಣ್ಣ ಪೂಜಾರಿ ಪೆರಿಯಾತ್ತೋಡಿ ಅವರನ್ನು ಅಗಲಿದ್ದಾರೆ.

ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

Posted by Vidyamaana on 2023-12-05 09:00:22 |

Share: | | | | |


ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

ಪುತ್ತೂರು: ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು ಪುತ್ತೂರು ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.


ಪುತ್ತೂರು ನಗರಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಸದಸ್ಯ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ಡಿ.8ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30ರಂದು ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ನಗರಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8ರಿಂದ

30ರ ತನಕ ಜಾರಿಯಲ್ಲಿರಲಿದೆ.



ಡಿ.8 ಅಧಿಸೂಚನೆ ಪ್ರಕಟ


ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನ


ಡಿ.16 ನಾಮಪತ್ರ ಪರಿಶೀಲನೆ


ಡಿ.18 ನಾಮಪತ್ರ ಹಿಂಪಡೆಯಲು ಅಂತಿಮ ದಿನ


ಡಿ.27 ಮತದಾನ

 ಡಿ.30 ಮತ ಎಣಿಕೆ

BREAKING : ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಸಂಸದೆ ಸುಮಲತಾ ಅಂಬರೀಶ್

Posted by Vidyamaana on 2024-04-05 14:00:14 |

Share: | | | | |


BREAKING : ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಮಂಡ್ಯ ಸಂಸದೆ ಅಂಬರೀಶ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.



Leave a Comment: