ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಕುಕ್ಕುಜಡ್ಕದ ನವೀನ್ ಸಂಕೇಶ ಭೀಕರ ಅಪಘಾತಕ್ಕೆ ಬಲಿ

Posted by Vidyamaana on 2023-05-23 15:30:40 |

Share: | | | | |


ಕುಕ್ಕುಜಡ್ಕದ ನವೀನ್ ಸಂಕೇಶ ಭೀಕರ ಅಪಘಾತಕ್ಕೆ ಬಲಿ

ಪುತ್ತೂರು: ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅರಂತೋಡು ಗೂನಡ್ಕದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ

ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ

Posted by Vidyamaana on 2023-05-24 07:18:31 |

Share: | | | | |


ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ

 ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು.ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೆಲ ಜನರು ವಿದ್ಯುತ್​ ಬಿಲ್​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ.

ಇಷ್ಟು ದಿನ ಬರೀ ಮಾತಿನಲ್ಲಿ ನಡೆಯುತ್ತಿದ್ದ ಜಗಳ ಇಂದು ಹಲ್ಲೆ ಮಾಡುವ ಮಟ್ಟಿಗೆ ಬೆಳೆದಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​ ಮೇಲೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ.ವಿದ್ಯುತ್​ ಉಚಿತ ಅಂತ ಹೇಳಿದ್ದಾರೆ 

ಕಳೆದ ಆರು ತಿಂಗಳಿನಿಂದ ಚಂದ್ರಶೇಖರಯ್ಯ ಎಂಬುವವರು ವಿದ್ಯುತ್​ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್​ ಪಾವತಿ ಮಾಡದ ಹಿನ್ನೆಲೆಯಲ್ಲಿ ಬಿಲ್​ ವಸೂಲಾತಿಗೆಂದು ಅವರ ಮನೆಗೆ ಲೈನ್​ಮ್ಯಾನ್​ ಮಂಜುನಾಥ್​ ಎಂಬುವರು ತೆರಳಿದ್ದರು. ಬಿಲ್​ ಪಾವತಿಸುವಂತೆ ಚಂದ್ರಶೇಖರಯ್ಯ ಅವರನ್ನು ಕೇಳಿದರೆ, ಆತ ನಾನು ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್​ ಕಟ್ಟುವುದಿಲ್ಲ. ವಿದ್ಯುತ್​ ಉಚಿತ ಅಂತ ಹೇಳಿದ್ದಾರೆ ಎಂದು ವಾಗ್ವಾದಕ್ಕೆ ಇಳಿದನು.

ಚಪ್ಪಲಿಯಿಂದ ಹಲ್ಲೆ ಸರ್ಕಾರ ಇನ್ನು ಅಧಿಕೃತವಾಗಿ ಜಾರಿ ಮಾಡಿಲ್ಲ. ಜಾರಿ ಮಾಡಿದ ಬಳಿಕ ನೋಡೋಣ, ಸದ್ಯಕ್ಕೆ ಹಳೆಯ ಬಿಲ್​ ಅನ್ನು ಪಾವತಿಸಿ ಎಂದು ಮಂಜುನಾಥ್​ ಕೇಳಿದ್ದಾರೆ. ಆದರೆ, ಬಿಲ್​ ಕಟ್ಟಲು ಒಪ್ಪದ ಚಂದ್ರಶೇಖರಯ್ಯ,ಅವಾಚ್ಯ ಶಬ್ದಗಳಿಂದ ಮಂಜುನಾಥ್​ರನ್ನು ನಿಂದಿಸಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಂಜುನಾಥ್​ ಮೇಲೆ ಚಂದ್ರಶೇಖರಯ್ಯ ಚಪ್ಪಲಿಯಿಂದ ಹಲ್ಲೆ ಮಾಡಿ, ದುರ್ವರ್ತನೆ ತೋರಿದ್ದಾರೆ.ಹಲ್ಲೆ ನಡೆಸಿದ ಚಂದ್ರಶೇಖರಯ್ಯ ವಿರುದ್ಧ ಮಂಜುನಾಥ್​ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ಸುಳ್ಯ - ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಶಾಲೆ ಆವರಣದಲ್ಲಿ ಪತ್ತೆ

Posted by Vidyamaana on 2024-06-17 13:51:17 |

Share: | | | | |


ಸುಳ್ಯ - ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಶಾಲೆ ಆವರಣದಲ್ಲಿ ಪತ್ತೆ

ಸುಳ್ಯ ಜೂನ್ 17: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಪತ್ತೆಯಾಗಿದೆ.

ಸುಳ್ಯದ ಕಾಂತಮಂಗಲ ಸರಕಾರಿ ಶಾಲೆಯ ಬಳಿ ಮೃತದೇಹ ಪತ್ತೆಯಾಗಿದೆ. ಸುಮಾರು 25-30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ.

ಲೋಕ ಸಮರಕ್ಕೆ ಕಮಲ ನಾಯಕರ ಭರ್ಜರಿ ತಯಾರಿ

Posted by Vidyamaana on 2024-03-30 21:05:11 |

Share: | | | | |


ಲೋಕ ಸಮರಕ್ಕೆ ಕಮಲ ನಾಯಕರ ಭರ್ಜರಿ ತಯಾರಿ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವು ಏ.2ರಂದು ಮಧ್ಯಾಹ್ನ ಗಂಟೆ 2ಕ್ಕೆ ತೆಂಕಿಲ ಬೈಪಾಸ್‌ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.

ಪುತ್ತೂರು: ಮಹಿಳೆಯ ಚಿನ್ನದ ಸರ ಕಸಿದು ಪರಾರಿ

Posted by Vidyamaana on 2023-10-15 04:56:34 |

Share: | | | | |


ಪುತ್ತೂರು: ಮಹಿಳೆಯ ಚಿನ್ನದ ಸರ ಕಸಿದು ಪರಾರಿ

ಪುತ್ತೂರು : ವೃದ್ಧ ಮಹಿಳೆಯ ಕುತ್ತಿಗೆಯಲ್ಲಿದ್ದ ಸರವನ್ನು ಕಳ್ಳಿಯರ ತಂಡವೊಂದು ಹಾಡುಹಗಲೇ ರಾಜರೋಷವಾಗಿ ಪುತ್ತೂರಿನ ಬಸ್ಸು ನಿಲ್ದಾಣದ ಅವರಣದಲ್ಲಿ ಎಗರಿಸಿಕೊಂಡು ಹೋದ ಘಟನೆಯೊಂದು ಅ 14 ರಂದು ಶನಿವಾರ ಸಂಜೆ ನಡೆದಿದೆ.ಬಂಟ್ವಾಳ ತಾಲೂಕಿನ ಕನ್ಯಾನ ಸಮೀಪದ ನಂದರಬೆಟ್ಟು ನಿವಾಸಿ ಸುಂದರಿ ಚಿನ್ನದ ಸರ ಕಳಕೊಂಡವರು. ಸುಂದರಿಯವರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ವಠಾರದ ಗಾಂಧೀಕಟ್ಟೆಯ ಬಳಿ ಇದ್ದಾಗ ಆಕೆಯಕುತ್ತಿಗೆಯಲ್ಲಿದ್ದ ಮೂರು ಪವನ್ ತೂಕದ ಚಿನ್ನದ ಸರವನ್ನು ಮಹಿಳೆಯರ

ತಂಡವೊಂದು ಕದ್ದಿದೆ.


ಸುಂದರಿ ಅವರು ಶನಿವಾರ ಸಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ವಾಣಿಜ್ಯ ಸಂಕೀರ್ಣದಲ್ಲಿ ಗಾಂಧೀಕಟ್ಟೆ ಪಕ್ಕದಲ್ಲಿರುವ ಬೇಕರಿಯಲ್ಲಿ ತಿಂಡಿಗಳನ್ನು ಖರೀದಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದಂತೆಯೇ ನಾಲ್ವರಿದ್ದ ಕಳ್ಳಿಯರ ತಂಡವೊಂದು ಏಕಾಏಕಿಯಾಗಿ ಅವರ ಕುತ್ತಿಗೆಯಲ್ಲಿದ್ದ 25 ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿ ಎಸ್ಕೆಪ್ ಆಗಿದೆ. ಈ ವೇಳೆ ಮಹಿಳೆ ಜೋರಾಗಿ ಬೊಬ್ಬೆ ಹೊಡೆದು, ಸರ ಎಗರಿಸಿರುವ ಬಗ್ಗೆ ಅಲ್ಲಿದ್ದ ಸ್ಥಳೀಯರಲ್ಲಿ ತಿಳಿಸಿದ್ದಾರೆ.ಚಿನ್ನದ ಸರ ಕಳಕೊಂಡ ಮಹಿಳೆ  ಪುತ್ತೂರು ನಗರ ಠಾಣೆಗೆ ತೆರಳಿ ದೂರುನೀಡಿರುವುದಾಗಿ ತಿಳಿದು ಬಂದಿದೆ

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್‌ ಪ್ರೆಸ್‌ ವಿಮಾನದಲ್ಲಿ ಗೌರವಾರ್ಪಣೆ

Posted by Vidyamaana on 2023-11-23 12:27:22 |

Share: | | | | |


ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್‌ ಪ್ರೆಸ್‌ ವಿಮಾನದಲ್ಲಿ ಗೌರವಾರ್ಪಣೆ

ಮಂಗಳೂರು, ನ.23: ಹಿದಾಯ ಫೌಂಡೇಶನ್‌ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏ‌ರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.


ಹರೇಕಳ ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರನ್ನು ಗುರುತಿಸಿದ ಏ‌ರ್ ಇಂಡಿಯ ಎಕ್ಸ್‌ ಪ್ರೆಸ್ ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ "ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು" ಎಂದರು.


ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟ‌ರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಪೋರ್ಟ್‌ ವೇ ಈ ವೇಳೆ ಹಾಜಬ್ಬರ ಜೊತೆಗಿದ್ದರು.



Leave a Comment: