ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಘೋಷಣೆ

Posted by Vidyamaana on 2023-07-13 16:47:50 |

Share: | | | | |


ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಘೋಷಣೆ

ಬೆಂಗಳೂರು: ಸರ್ಕಾರದ ಮಹತ್ವಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಗೆ ರಾಜ್ಯ ಸರ್ಕಾರ ಡೆಡ್ ಲೈನ್ ವಿಧಿಸಿದೆ. ಗೃಹ ಜ್ಯೋತಿ ಕುರಿತಂತೆ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಖುದ್ದು ಇಂಧನ ಸಚಿವರೇ ಈ ಬಗ್ಗೆ ಉತ್ತರ ಕೊಟ್ಟಿದ್ದಾರೆ.ಇಂದು ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದವರು ಗೃಹ ಜ್ಯೋತಿ ಯೋಜನೆ ಜಾರಿಯಲ್ಲಿ ಆಗಿರುವ ಗೊಂದಲಗಳ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಉತ್ತರ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್, ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕವನ್ನು ನಿಗದಿಪಡಿಸಲು ನಿರ್ಧರಿಸಿದ್ದೇವೆ. ಅದರಂತೆ, ಜೂ. 27ರಂದು ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿರುತ್ತದೆ ಎಂದು ಜಾರ್ಜ್ ತಿಳಿಸಿದ್ದಾರೆ

ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ಆಗಿ ನೇಮಕ

Posted by Vidyamaana on 2023-02-12 10:44:47 |

Share: | | | | |


ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ಆಗಿ ನೇಮಕ

ನವದೆಹಲಿ; ಮೂಡಬಿದರೆ ಮೂಲದ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಆಂಧ್ರಪ್ರದೇಶ ಗವರ್ನರ್ ಆಗಿ ನೇಮಕವಾಗಿದ್ದಾರೆ. ಆಂಧ್ರಪ್ರದೇಶದ ಹಾಲಿ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ.ನೇಮಕಾತಿಗೆ ರಾಷ್ಟ್ರಪತಿ ದೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರಾಗಿದ್ದು, ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದ ಎಸ್.ಅಬ್ದುಲ್ ನಜೀರ್ ಅವರು ಜನವರಿ 14ರಂದು ನಿವೃತ್ತರಾಗಿದ್ದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯಾಲಯ ಸಂಕೀರ್ಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಜಸ್ಟಿಸ್ ನಜೀರ್ ಅವರು 1958ರ ಜನವರಿ 5ರಂದು ಜನಿಸಿದರು. ಫೆಬ್ರವರಿ 18, 1983 ರಂದು ವಕೀಲರಾಗಿ ನೋಂದಾಯಿಸಿಕೊಂಡರು. ಕರ್ನಾಟಕ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದ ಅವರು 2003ರ ಮೇ 12 ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ಅಂಡರ್ ಪಾಸ್ ವೇಶ್ಯಾವಾಟಿಕೆಯ ಅಡ್ಡೆ

Posted by Vidyamaana on 2023-11-02 16:40:48 |

Share: | | | | |


ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ಅಂಡರ್ ಪಾಸ್ ವೇಶ್ಯಾವಾಟಿಕೆಯ ಅಡ್ಡೆ

ಬೆಂಗಳೂರು: ಬೆಂಗಳೂರಿನ ಹೃದಯಭಾಗ ಹಾಗೂ ಅತ್ಯಂತ ಜನನಿಬಿಡ ಪ್ರದೇಶವಾದ ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ ನಡೆಯುವ ವೇಶ್ಯಾವಾಟಿಕೆ ದಂಧೆಯ ಕುರಿತು ಯೂಟ್ಯೂಬರ್‌ ವಿಕಾಸ್‌ಗೌಡ ವಿಡಿಯೋ ಮಾಡಿದ್ದಾನೆ.

ವಿಡಿಯೋ ಮಾಡುವಾಗ ಸಿಕ್ಕಿಬಿದ್ದ ಆತನ ಪಾಡು ನಿವೇ ನೋಡಿ...ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವೇಶ್ಯಾವಾಟಿಕೆ (Bengaluru Majestic Underpass) ನಡೆಯತ್ತದೆ ಎಂದು ಹಲವು ಪ್ರಯಾಣಿಕರು ಹೇಳುತ್ತಾರೆ. ಇನ್ನು ಹಳ್ಳಿಗಳಿಂದ ಬಂದು ಬೆಂಗಳೂರಿನ ಮೆಜೆಸ್ಟಿಕ್‌ ಅಂಡರ್‌ಪಾಸ್‌ ಹಾದುಹೋದ ಎಲ್ಲರ ಬಾಯಲ್ಲಿಯೂ ಇದೇ ಸುದ್ದು ಹರಿದಾಡುತ್ತದೆ.

ಕ್ಲಿಕ್ ಮಾಡಿ 👇

ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವೇಶ್ಯಾವಾಟಿಕೆ ದಂಧೆ ದೃಶ್ಯ


ಇನ್ನು ಬೆಂಗಳೂರಿಗರು ಇದನ್ನು ನೋಡಿಯೂ ನೋಡದಂತೆ ದಿನನಿತ್ಯ ಓಡಾಡುತ್ತಿದ್ದಾರೆ. ಇದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ವರದಿ ಮಾಡಿದಾಗ ಪೊಲೀಸರು ಒಂದು ವಾರ ಸಿಬ್ಬಂದಿ ನಿಯೋಜನೆ ಮಾಡಿ ಕ್ರಮ ಕೈಗೊಳ್ಳುತ್ತಾರೆ. ನಂತರ ಅದೇ ಹಾಡು.. ಅದೇ ರಾಗ ಎನ್ನುವಂತೆ ಲೈಂಗಿಕ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಪುರುಷರನ್ನು ಅಡ್ಡಹಾಕಿ ವೇಶ್ಯಾವಾಟಿಕೆಗೆ ಪುಸಲಾಯಿಸುವ ಘಟನೆಗಳಿ ಕಂಡುಬರುತ್ತವೆ.


ಈಗ ವಿಕಾಸ್‌ಗೌಡ ಎನ್ನುವ ಯೂಟ್ಯೂಬರ್‌ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವಿಡಿಯೋ ಮಾಡಿದ್ದು, ಆತನಿಗೆ ದಂಧೆ ಮಾಡುವವರು ಕೊಟ್ಟ ಕಿರುಕುಳವನ್ನು ನಿವೇ ಕಣ್ಣಾರೆ ನೋಡಬಹುದು.ಪೊಲೀಸ್‌ ಇಲಾಖೆಯಿಂದ ರಾಜ್ಯಾದ್ಯಂತ ಎಲ್ಲೇ ವೇಶ್ಯಾವಾಟಿಕೆ ದಂಧೆ ನಡೆದರೂ ಅವರನ್ನು ಮುಲಾಜಿಲ್ಲದೇ ಬಂಧಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಇನ್ನು ಲೈಂಗಿಕ ಅಲ್ಪ ಸಂಖ್ಯಾತರು ಕೂಡ ದಂಧೆ ನಡೆಸದಂತೆ ಕಠಿಣ ಕ್ರಮ ಕೈಗೊಂಡಿದ್ದಾರೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ (ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಅಂಡರ್‌ಪಾಸ್‌) ವೇಶ್ಯಾವಾಟಿಕೆ ದಂಧೆ ಮಾಡಲಾಗುತ್ತಿದೆ ಎಂದರೆ ನಾಚಿಕೆಗೇಡಿನ ವಿಚಾರವಾಗಿದೆ.ವಿಡಿಯೋ ಮಾಡುತ್ತಿದ್ದವನನ್ನು ತಡೆದು ಡಿಲೀಟ್‌ ಮಾಡಿಸಿದ್ರು: ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ಯೂಟ್ಯೂಬರ್‌ ವಿಕಾಸ್‌ಗೌಡ ಸೆಲ್ಫಿ ವಿಡಿಯೋ ಮಾಡುತ್ತಾ ನಡೆದುಕೊಂಡು ಹೋಗುತ್ತಾನೆ. ಆಗ ಪಕ್ಕದಲ್ಲಿಯೇ ಮಹಿಳೆಯೊಬ್ಬರು ವ್ಯಕ್ತಿಯನ್ನು ನಿಲ್ಲಿಸಿಕೊಂಡು ವ್ಯವಹಾರ ಕುದುರಿಸುತ್ತಿರುವ ವಿಡಿಯೋ ಕೂಡ ಸೆರೆಯಾಗಿದೆ. ಜೊತೆಗೆ, ಮುಂದಕ್ಕೆ ಹೋಗುತ್ತಿದ್ದಂತೆ ಐದಾರು ಜನರು ಸೇರಿಕೊಂಡು ಯ್ಯೂಟೂಬರ್‌ನನ್ನು ಪ್ರಶ್ನೆ ಮಾಡಿ ವಿಡಿಯೋ ಮಾಡದಂತೆ ಹೇಳಿದ್ದಾರೆ. ನಂತರ, ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ ಎಲ್ಲ ವಿಡಿಯೋ ಡಿಲೀಟ್‌ ಮಾಡಿಸಿದ್ದಾರೆ. ನಂತರ, ಅವರ ಎಲ್ಲ ಮಾಹಿತಿಯನ್ನು ಪಡೆದುಕೊಂಡು ಅಲ್ಲಿಂದ ಕಳಿಸಿದ್ದಾರೆ. ಕೊನೆಗೆ ಒಬ್ಬ ಮಹಿಳೆ ಯ್ಯೂಟೂಬರ್‌ನನ್ನು ದಂಧೆಗೆ ಪುಸಲಾಯಿಸಿದ ಘಟನೆ ಕೂಡ ನಡೆದಿದೆ.


ಕಾಲೇಜು ಹುಡುಗರು, ಅಂಕಲ್‌ಗಳು ಯಾರೇ ವ್ಯಕ್ತಿಗಳು ಇದ್ದರೂ ಜನಸಾಮಾನ್ಯರನ್ನು ತಮ್ಮ ವೇಶ್ಯಾವಾಟಿಕೆಗೆ ಕರೆದು ಮುಜುಗರ ಉಂಟುಮಾಡುತ್ತಿದ್ದಾರೆ. ಇದಕ್ಕೆ ಪೊಲೀಸರು ಕ್ರಮ ಕೈಗೊಳ್ಳಬೇಕು. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಂತಿರುವ ಬೆಂಗಳೂರಿನ ಹೃದಯ ಭಾಗದಲ್ಲಿಯೇ ಇಂತಹ ಘಟನೆಗಳು ನಡೆಯುತತಿರುವುದರಿಂದ ಬೆಂಗಳೂರು ಸುರಕ್ಷಿತ ತಾಣವಲ್ಲ ಎಂಬ ಭಾವನೆಯೂ ಬರುತ್ತದೆ. ಆದ್ದರಿಂದ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ಪ್ರಯಾಣಿಕರಿಗೆ ಸುರಕ್ಷೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಯ್ಯೂಟೂಬರ್‌ ಬ್ಲಾಗರ್‌ ಮನವಿ ಮಾಡಿಕೊಂಡಿದ್ದಾನೆ

ಜಿ.ಎಲ್. ಜ್ಯುವೆಲ್ಲರ್ಸ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಧ್ವಜವಂದನೆ

Posted by Vidyamaana on 2023-08-16 09:56:04 |

Share: | | | | |


ಜಿ.ಎಲ್. ಜ್ಯುವೆಲ್ಲರ್ಸ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಧ್ವಜವಂದನೆ

ಪುತ್ತೂರು: ಚಿನ್ನಾಭರಣಗಳಲ್ಲಿ ವಿಶಿಷ್ಟ ಸ್ಥಾನಮಾನ ಕಾಯ್ದುಕೊಂಡಿರುವ ಪುತ್ತೂರಿನ ಪ್ರತಿಷ್ಠಿತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಸಂಸ್ಥೆಯ ಮಾಲಕ ಜಿ.ಎಲ್‌ ಬಲರಾಮ ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು.

ಲಕ್ಷ್ಮೀಕಾಂತ ಆಚಾರ್ಯ, ಸುಧನ್ವ ಆಚಾರ್ಯ, ವೇದ ಲಕ್ಷ್ಮೀಕಾಂತ ಆಚಾರ್ಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ ರುದ್ರಾಕ್ಷಿ ಕಲೆಕ್ಷನ್ಸ್ ಅನಾವರಣ

Posted by Vidyamaana on 2024-05-17 14:22:09 |

Share: | | | | |


ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ ರುದ್ರಾಕ್ಷಿ ಕಲೆಕ್ಷನ್ಸ್ ಅನಾವರಣ


ಪುತ್ತೂರು: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ.

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ರುದ್ರಾಕ್ಷಿ ಹೊಸ ವಿನ್ಯಾಸದ ಸಂಗ್ರಹವನ್ನು ಅನಾವರಣಗೊಳಿಸಿದರು. ಆರಂಭದಲ್ಲಿ ದೀಪ ಪ್ರಜ್ವಲಿಸಿ, ಬಳಿಕ ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದರು. ಇದೇ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದವನ್ನು ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರಿಗೆ ನೀಡಿ ಸಂಸ್ಥೆಗೆ ಶ್ರೀ ದೇವರ ಅನುಗ್ರಹಕ್ಕೆ ಪ್ರಾರ್ಥಿಸಿದರು.


ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

Posted by Vidyamaana on 2024-03-12 10:00:00 |

Share: | | | | |


ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

ಪುತ್ತೂರು: ಅಂಬಿಕಾ ವಿದ್ಯಾ ಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಹೌದು.ವಿಶ್ವ ಹಿಂದೂ ಪರಿಷತ್ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ರಾಂ ಭಟ್ ಅವರ ಆತ್ಮೀಯರಾಗಿದ್ದು, ರಾಜಕೀಯವಾಗಿಯೂ ಸಾಕಷ್ಟು ಕೆಲಸ ನಿರ್ವಹಿಸಿದ್ದಾರೆ.


ಅವರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.



Leave a Comment: