ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಮಠಂದೂರು ಮನೆಗೆ ಆಗಮಿಸಿದ ಬಿಜೆಪಿ ಮುಖಂಡರನ್ನು ತರಾಟೆಗೆತ್ತಿಕೊಂಡ ಕಾರ್ಯಕರ್ತರು

Posted by Vidyamaana on 2023-04-12 14:48:48 |

Share: | | | | |


ಮಠಂದೂರು ಮನೆಗೆ  ಆಗಮಿಸಿದ ಬಿಜೆಪಿ ಮುಖಂಡರನ್ನು ತರಾಟೆಗೆತ್ತಿಕೊಂಡ ಕಾರ್ಯಕರ್ತರು

ಪುತ್ತೂರು: ಬುಧವಾರ ಸಂಜೆ ಸಂಜೀವ ಮಠಂದೂರು ಅವರ ಮನೆಗಾಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು ಕಾರ್ಯಕರ್ತರು ತರಾಟೆಗೆತ್ತಿಕೊಂಡ ಘಟನೆ ನಡೆಯಿತು.

ಮನೆಗೆ ಆಗಮಿಸುತ್ತಿದ್ದಂತೆ ದಾರಿಮಧ್ಯವೇ ತಡೆದ ಕಾರ್ಯಕರ್ತರು, ತಮ್ಮ ಆಕ್ರೋಶ ಹೊರಗೆಡವಿದರು. ಸಂಜೀವ ಮಠಂದೂರು ಅವರನ್ನು ಕಡೆಗಣಿಸಲು ಕಾರಣವೇನು ಎಂದು ಪ್ರಶ್ನಿಸಿದ ಕಾರ್ಯಕರ್ತರು, ಹಾಗಾದರೆ ಮಂಡಲ, ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ? ಬೆಲೆ ಇಲ್ಲ ಎಂದಾದರೆ ನೀವು ಆ ಹುದ್ದೆಯಲ್ಲಿ ಇರುವುದಾದರೂ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರುಸಂಜೀವ ಮಠಂದೂರು ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಪ್ರಾಮಾಣಿಕವಾಗಿ ದುಡಿದಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಈಗ ಅವರನ್ನು ಕಡೆಗಣಿಸುವುದು ಎಂದಾದರೆ, ಇದರ ಅರ್ಥವೇನು? ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಬೆಲೆಯೇ ಇಲ್ಲ ಎಂದಾಯಿತು. ನಾವು ಬಿಜೆಪಿ ಪರವಾಗಿ ಕೆಲಸವೇ ಮಾಡುವುದಿಲ್ಲ. ನೀವೇ ಪ್ರಚಾರ ಕಾರ್ಯ ನಡೆಸಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಿ ಎಂದು ತಮ್ಮ ಅಸಹನೆ ಹೊರಗೆಡವಿದರು.ಪುತ್ತೂರು ಬಿಜೆಪಿಯ ಕಾರ್ಯಕರ್ತರೆಂದರೆ ಒಂದು ಕುಟುಂಬದಂತಿದ್ದೇವೆ. ನಾವು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ವರಿಷ್ಠರು ಪ್ರಾಮಾಣಿಕರನ್ನು ಕಡೆಗಣಿಸುವುದಾದರೆ, ನಾವು ಕೆಲಸ ಮಾಡುವುದಾದರೂ ಯಾಕಾಗಿ. ಇದುವರೆಗೆ ಭೇಟಿ ನೀಡದವರು ಈಗ ಯಾಕಾಗಿ ಭೇಟಿ ನೀಡುವುದು ಎಂದು ಪ್ರಶ್ನಿಸಿದರು.

ಜನವರಿ 22ರಂದು ದೀಪಾವಳಿ ಆಚರಿಸಿ : ದೇಶದ 140 ಕೋಟಿ ಭಾರತೀಯರಿಗೆ ಪ್ರಧಾನಿ ಮೋದಿ ಮನವಿ

Posted by Vidyamaana on 2023-12-30 16:09:52 |

Share: | | | | |


ಜನವರಿ 22ರಂದು ದೀಪಾವಳಿ ಆಚರಿಸಿ : ದೇಶದ 140 ಕೋಟಿ ಭಾರತೀಯರಿಗೆ ಪ್ರಧಾನಿ ಮೋದಿ ಮನವಿ

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉದ್ಘಾಟನೆಗೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ಆಗಮಿಸಿದ್ದು, ನೂತನವಾಗಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಉದ್ಘಾಟಿಸಿದರು.ನಂತ್ರ ಅಯೋಧ್ಯೆಯಲ್ಲಿ ಮೆಗಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, 2024ರ ಜನವರಿ 22 ರಂದು ರಾಮ ಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆ ಕ್ಷಣಕ್ಕಾಗಿ ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದೆ ಎಂದು ಹೇಳಿದರು. ಇನ್ನು ಜನವರಿ 22ರಂದು 140 ಕೋಟಿ ಭಾರತೀಯರು ದೀಪಗಳ ಹಬ್ಬವಾಗಿ ಆಚರಿಸಬೇಕು ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಪ್ರಧಾನಿ ನಗರದ ಮೂಲಕ ಮೆಗಾ ರೋಡ್ ಶೋ ನಡೆಸಿದ ನಂತರ ನವೀಕರಿಸಿದ ರೈಲ್ವೆ ನಿಲ್ದಾಣವನ್ನ ಉದ್ಘಾಟಿಸಿದ್ದರು.ಇಂದು ಇಡೀ ಜಗತ್ತು ಜನವರಿ 22ರ ಐತಿಹಾಸಿಕ ಕ್ಷಣಕ್ಕಾಗಿ ಕಾತುರದಿಂದ ಕಾಯುತ್ತಿದೆ, ಅಂತಹ ಪರಿಸ್ಥಿತಿಯಲ್ಲಿ ಅಯೋಧ್ಯೆಯ ಜನರಲ್ಲಿ ಈ ಉತ್ಸಾಹವು ತುಂಬಾ ಸಹಜವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇನ್ನು "ನಾನು ಭಾರತದ ಪ್ರತಿಯೊಂದು ಮಣ್ಣಿನ ಕಣ ಮತ್ತು ಜನರ ಆರಾಧಕ. ನನಗೂ ನಿಮ್ಮಷ್ಟೇ ಕುತೂಹಲವಿದೆ" ಎಂದರು.


ಪ್ರಧಾನಿ ಮೋದಿ ಅವರು 15 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನ ಉಡುಗೊರೆಯಾಗಿ ನೀಡಿದ್ದಾರೆ ಎಂದು ಹೇಳಿದರು. ಇದಕ್ಕಾಗಿ ಅಯೋಧ್ಯೆಯ ಜನತೆಯನ್ನು ಪ್ರಧಾನಿ ಅಭಿನಂದಿಸಿದ್ದಾರೆ. ನಾವು ನಮ್ಮ ಪರಂಪರೆಯನ್ನು ಗುರುತಿಸಬೇಕು ಎಂದು ಪ್ರಧಾನಿ ಹೇಳಿದರು. ನಮ್ಮ ಪರಂಪರೆ ನಮಗೆ ಸ್ಫೂರ್ತಿ ನೀಡುತ್ತದೆ. ಇದೇ ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಗುಡಾರದಲ್ಲಿ ಕುಳಿತಿದ್ದ ಕಾಲವಿತ್ತು ಮತ್ತು ಇಂದು ರಾಮ ಲಲ್ಲಾ ಮಾತ್ರವಲ್ಲ, ದೇಶದ ನಾಲ್ಕು ಕೋಟಿ ಬಡವರಿಗೂ ಶಾಶ್ವತ ಮನೆ ಸಿಕ್ಕಿದೆ ಎಂದು ಪ್ರಧಾನಿ ಹೇಳಿದರು.

ವಿಟ್ಲ : ಮಹಿಳೆಯ ಜೊತೆ ಅಸಭ್ಯ ವರ್ತನೆ ಪ್ರಕರಣ : ಆರೋಪಿ ಅಬೂಬಕ್ಕರ್ ಬಂಧನ.

Posted by Vidyamaana on 2023-05-17 06:16:59 |

Share: | | | | |


ವಿಟ್ಲ : ಮಹಿಳೆಯ ಜೊತೆ ಅಸಭ್ಯ ವರ್ತನೆ ಪ್ರಕರಣ : ಆರೋಪಿ ಅಬೂಬಕ್ಕರ್ ಬಂಧನ.

ವಿಟ್ಲ : ಮಹಿಳೆಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಕನ್ಯಾನದ ಅಬೂಬಕ್ಕರ್ (46) ಬಂಧಿತ ಆರೋಪಿಈತ ಮೋಟಾರ್ ಸೈಕಲ್ ನಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದ.

ಆರೋಪಿ ಪತ್ತೆಯ ಕಾರ್ಯದಲ್ಲಿ ವಿಟ್ಲ ಠಾಣೆಯ ಪೊಲೀಸ್ ನಿರೀಕ್ಷಕರಾದ ನಾಗರಾಜ್‌ ಹೆಚ್ ಈ ರವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ಹೆಚ್‌ಸಿ ರಕ್ಷಿತ್ ಮತ್ತು ಪಿಸಿ ಹೇಮರಾಜ ರವರು ಪಾಲ್ಗೊಂಡಿದ್ದರು.

ಸುಳ್ಯ ತಾಲೂಕಿನಾದ್ಯಂತ ನಾಳೆ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Posted by Vidyamaana on 2023-07-24 12:49:01 |

Share: | | | | |


ಸುಳ್ಯ ತಾಲೂಕಿನಾದ್ಯಂತ ನಾಳೆ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸುಳ್ಯ: ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 25ರಂದು (ಮಂಗಳವಾರ) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ

ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು

Posted by Vidyamaana on 2024-01-08 20:04:25 |

Share: | | | | |


ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ  ನೀಡಿದ ಶಾಸಕರು

ಪುತ್ತೂರು: ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಕ್ಸಿಜನ್ ಯಂತ್ರವನ್ನು ನೀಡಿದರು.

ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು , ಆರ್ಥಿಕವಾಗಿ ತೀರ ಬಾಡತನದಲ್ಲಿರುವ ಇವರಿಗೆ ಆಕ್ಸಿಜನ್ ಯಂತ್ರ ಖರೀದಿಸಲು ಹಣಕಾಸಿನ ಅಡಚಣೆಯಾಗಿತ್ತು. ತನ್ನ ಸಂಕಷ್ಟವನ್ನು ಕಳೆದ ಮೂರು ದಿನಗಳ ಹಿಂದೆ ಶಾಸಕರ ಬಳಿ ಹೇಳಿಕೊಂಡಿದ್ದರು. ಆಕ್ಸಿಜನ್ ಯಂತ್ರ ಕೊಡಿಸುವ ಭರವಸೆ ನೀಡಿದ್ದ ಶಾಸಕರು ಮೂರು ದಿನದೊಳಗೆ ಅದನ್ನು ಸಂತ್ರಸ್ಥ ಮಹಿಳೆಗೆ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಅಳಿಕೆ ಗ್ರಾಪಂ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಉಪಸ್ಥಿತರಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ನನ್ನ ಬಳಿ ಸಹಾಯ ಕೇಳಿ ಈ ಬಡ ಕುಟುಂಬ ಕಚೇರಿಗೆ ಕಳೆದ ಮೂರದಿನಗಳ ಹಿಂದೆ ಬಂದಿದ್ರು. ತಕ್ಷಣವೇ ಮಹಿಳೆಯ ಉಸಿರಾಟಕ್ಕೆ ಅಗತ್ಯವಾಗಿ ಬೇಕಾದ ಆಕ್ಸಿಜನ್ ಯಂತ್ರವನ್ನು ಕೊಡಿಸಿದ್ದೇನೆ. ಅವರು ಆರೋಗ್ಯವಂತರಾಗಿರಲಿ ಎಂಬುದೇ ನನ್ನ ಆಶಯವಾಗಿದೆ ಎಂದು ತಿಳಿಸಿದ್ದಾರೆ.

ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

Posted by Vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.



Leave a Comment: