ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


Watch Video:ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ?

Posted by Vidyamaana on 2024-06-07 16:38:03 |

Share: | | | | |


Watch Video:ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ?

ಕೇರಳ: ಅಯ್ಯೋ ನನ್ನ ಸಾವು ಕಣ್ಣೆದುರೇ ಪಾಸ್ ಆದಂತೆ ಆಯ್ತು. ಆ ಘಟನೆಯಿಂದ ನಾನು ಬದುಕಿ ಬಂದಿದ್ದೇ ಪವಾಡ ಹಾಗೆ ಹೀಗೆ ಅಂತ ಹೇಳೋದನ್ನು ಕೇಳಿದ್ದೀರಿ. ಆದ್ರೇ ಇಲ್ಲೊಬ್ಬ ಸಾವಿನಿಂದ ಜಸ್ಟ್ ಮಿಸ್ ಆಗಿದ್ದಾರೆ. ಕಂಡೆಕ್ಟರ್ ಸಹಾಯದಿಂದ ಬದುಕಿ ಬಂದ ಬಡಜೀವದ ಬಗ್ಗೆ ಮುಂದೆ ಓದಿ.

ಕೇರಳದ ಮಲಬಾರ್ ಬಸ್ ನಲ್ಲಿ ವ್ಯಕ್ತಿಯೊಬ್ಬ ಪ್ರಯಾಣಿಸುತ್ತಿದ್ದನು. ಬಸ್ಸಿನ ಡೋರ್ ಬಳಿಯಲ್ಲೇ ನಿಂತು, ಟಿಕೆಟ್ ಖರೀದಿಸಲು ಮುಂದಾಗಿದ್ದಾನೆ. ಬಸ್ ಕಂಡಕ್ಟರ್ ತನ್ನ ಪಾಡಿಗೆ ತಾನು ಡೋರ್ ಸಮೀಪವೇ ನಿಂತಿದ್ದಂತ ವ್ಯಕ್ತಿಗೆ ಟಿಕೆಟ್ ಕೊಡೋದಕ್ಕೆ ಮುಂದಾಗಿದ್ದಾನೆ.

ಶ್ವೇತಾ ನಾಪತ್ತೆ

Posted by Vidyamaana on 2024-05-30 22:29:35 |

Share: | | | | |


ಶ್ವೇತಾ ನಾಪತ್ತೆ

ಮಂಗಳೂರು: ಮನೆಯಿಂದ ಹೊರಗೆ ತೆರಳಿದ್ದ ತಾಯಿ ಮತ್ತು ಮಗು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕಂಪಾಡಿ ಮೀನಕಳಿಯ ನಿವಾಸಿಗಳಾಗಿರುವ ಶ್ವೇತಾ(31) ಮತ್ತು ಇಶಿಕಾ(6) ನಾಪತ್ತೆಯಾದ ತಾಯಿ ಹಾಗೂ ಮಗಳು ಎಂದು ತಿಳಿದು ಬಂದಿದೆ.

ಪುತ್ತೂರು - ಪೊಲೀಸರಿಂದ ದೌರ್ಜನ್ಯ

Posted by Vidyamaana on 2023-05-18 06:51:04 |

Share: | | | | |


ಪುತ್ತೂರು - ಪೊಲೀಸರಿಂದ ದೌರ್ಜನ್ಯ

ಪುತ್ತೂರು : ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Dysp ಪುತ್ತೂರು, PSI ಪುತ್ತೂರು ಗ್ರಾಮಾಂತರ ಠಾಣೆ, PC, ಪುತ್ತೂರು ಗ್ರಾಮಾಂತರ ಠಾಣೆ

ರವರುಗಳ ವಿರುದ್ಧ ಪುತ್ತೂರು ನಗರ ಠಾಣೆ Cr no.39/23

u/s 323,324,506 r/w 34IPC ರಂತೆ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆಯನ್ನು Dysp ಬಂಟ್ವಾಳ ರವರಿಗೆ ವಹಿಸಲಾಗಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ

PSI ಪುತ್ತೂರು ಗ್ರಾಮಾಂತರ ಠಾಣೆ ಹಾಗೂ  PC ರವರುಗಳನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿದೆ ಹಾಗೂ DYSP ಪುತ್ತೂರು ರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟ

Posted by Vidyamaana on 2023-12-12 20:44:33 |

Share: | | | | |


ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟ

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಡಿ.8 ರಿಂದ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ.


ಗ್ರಾಹಕರು ಪ್ರಾಚಿ ಆ್ಯಂಟಿಕ್ ಚಿನ್ನಾಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಅಚ್ಚರಿಯ ಕೊಡುಗೆಗಳನ್ನು ಪಡೆಯುವ ಅವಕಾಶವಿದೆ.


1957ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು, ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.


ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ.


ಷರತ್ತುಗಳು ಅನ್ವಯದೊಂದಿಗೆ ಈ ಆಫರ್ ಪುತ್ತೂರು ಹಾಗೂ ಸುಳ್ಯ ಮಳಿಗೆಗಳಲ್ಲಿ ಮಾತ್ರ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ

ಗಾಯಗೊಂಡ ಕಾಡಾನೆ ದಾಳಿ : ಅರಣ್ಯ ಇಲಾಖೆಯ ಸಿಬ್ಬಂದಿ ವೆಂಕಟೇಶ್ ಮೃತ್ಯು

Posted by Vidyamaana on 2023-09-01 01:37:43 |

Share: | | | | |


ಗಾಯಗೊಂಡ ಕಾಡಾನೆ ದಾಳಿ : ಅರಣ್ಯ ಇಲಾಖೆಯ ಸಿಬ್ಬಂದಿ ವೆಂಕಟೇಶ್ ಮೃತ್ಯು

ಹಾಸನ : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಆಲೂರು ಸಮೀಪ(Hassan) ಹಳ್ಳಿಯೂರಿನಿಂದ ವರದಿಯಾಗಿದೆ.

ಗುರುವಾರ ಬೆಳಗ್ಗೆ ಗಾಯಗೊಂಡು ತಿರುಗಾಡುತಿದ್ದ ಭೀಮ ಹೆಸರಿನ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟೇಶ್ ಮುಂದಾಗಿದ್ದರು.ಈ ವೇಳೆ ವೆಂಕಟೇಶ್ ಅವರ ಮೇಲೆ ಆನೆ ದಾಳಿ ನಡೆಸಿದೆ.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ತಕ್ಷಣ ಹಾಸನದ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

 

“ಹಾಸನ ಅರಣ್ಯ ವಿಭಾಗದ ಆಲೂರು, ಬೇಲೂರು. ಯಸಳೂರು, ಸಕಲೇಶಪುರ ಮತ್ತು ಅರಕಲಗೂಡು ವಲಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಭೀಮ ಕಾಡಾನೆಗೆ ಇತರೆ ಕಾಡಾನೆಗಳು ಆಗಸ್ಟ್ ಎರಡನೇ ವಾರದಲ್ಲಿ ದಾಳಿ ಮಾಡಿರುವುದರಿಂದ ತೀವ್ರವಾಗಿ ಗಾಯಗೊಂಡಿತ್ತು”


ಕಾಡಾನೆಗೆ ಆ.25 ರಂದು ಚಿಕಿತ್ಸೆ ನೀಡಲಾಗಿದ್ದು, ಗಾಯವಾಸಿಯಾಗದೇ ಉಲ್ಬಣಗೊಂಡಿರುವುದರಿಂದ ಹೆಚ್ಚಿನ ಚಿಕಿತ್ಸೆ ನೀಡುವ ಕಾರ್ಯಾಚರಣೆ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಅನುಮತಿ ನೀಡಿದ್ದರು

ಇನ್ನು ಮುಂದೆ ಜಿಲ್ಲೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು-ರಾಜ್ಯ ಸರ್ಕಾರ ಆದೇಶ

Posted by Vidyamaana on 2023-11-29 10:36:19 |

Share: | | | | |


ಇನ್ನು ಮುಂದೆ ಜಿಲ್ಲೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು-ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲೆಗೆ ಒಬ್ಬರು ಪೊಲೀಸ್ ಅಧೀಕ್ಷಕರು, ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ.21 ಜಿಲ್ಲಾ ಘಟಕಗಳಿಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು ಸೃಜಿಸಿ ಸರ್ಕಾರ ಆದೇಶ ಹೊರಡಿಸಿದೆ.


ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದ ಅನ್ವಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. ಅವರಿಗೆ ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ವಿಭಾಗದ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ. 21 ಜಿಲ್ಲಾ ಪೊಲೀಸ್ ಘಟಕಗಳಲ್ಲಿ ತಲಾ ಎರಡು ಎಎಸ್ಪಿ ಹುದ್ದೆಗಳನ್ನು ಸೃಜಿಸಲಾಗಿದೆ.


ಹೆಚ್ಚುವರಿ ಪೊಲೀಸ್ ಅಧೀಕ್ಷಕರು 1 ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು 2 ಎಂದು ಹುದ್ದೆಗಳನ್ನು ವಿಂಗಡಿಸಲಾಗಿದ್ದು, ಅವರಿಗೆ ಕರ್ತವ್ಯ ಹಂಚಿಕೆ ಮಾಡಲಾಗಿದೆ.


ಎಎಸ್ಪಿ 1 ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ, ಬಂದೋಬಸ್ತ್, ಸಂಚಾರಕ್ಕೆ ಸಂಬಂಧಿಸಿದ ಎಲ್ಲಾ ಕರ್ತವ್ಯ ಸೇರಿ ಎಸ್.ಪಿ. ನಿರ್ದೇಶನದಂತೆ ಕಾರ್ಯನಿರ್ವಹಿಸುವುದು.


ಎಎಸ್ಪಿ 2 ಜಿಲ್ಲೆಯಲ್ಲಿ ಅಪರಾಧ, ನ್ಯಾಯಾಲಯಗಳ ವಿಚಾರಣೆ ನಿರ್ವಹಣೆ, ಡಿಎಆರ್ ಕೇಂದ್ರ ಕಚೇರಿ, ಜಿಲ್ಲಾ ಪೊಲೀಸ್ ಕಚೇರಿಗೆ ಸಂಬಂಧಿಸಿದ ವಿವಿಧ ಕರ್ತವ್ಯ ನಿರ್ವಹಣೆ ಸೇರಿ ಎಸ್.ಪಿ. ನಿರ್ದೇಶನದಂತೆ ಕಾರ್ಯನಿರ್ವಹಿಸುವುದು.



Leave a Comment: