ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


BREAKING: ಚುನಾವಣೋತ್ತರ ಸಮೀಕ್ಷೆ ನಿಷೇಧಿಸಿ ಚುನಾವಣಾ ಆಯೋಗ ಖಡಕ್ ಆದೇಶ

Posted by Vidyamaana on 2024-04-18 17:11:23 |

Share: | | | | |


BREAKING: ಚುನಾವಣೋತ್ತರ ಸಮೀಕ್ಷೆ ನಿಷೇಧಿಸಿ ಚುನಾವಣಾ ಆಯೋಗ ಖಡಕ್ ಆದೇಶ

ಬೆಂಗಳೂರು : ಲೋಕಸಭಾ ಚುನಾವಣೆ ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆಯನ್ನು ನಿಷೇಧಿಸಿ ಚುನಾವಣಾ ಆಯೋಗವು ಖಡಕ್ ಆದೇಶ ಹೊರಡಿಸಿದೆ.


ಈ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಸೂರಳ್ ಕರ್ ವಿಕಾರ್ ಕಿಶೋರ್ ಅವರು ಎಲ್ಲಾ ಮಾಧ್ಯಮಗಳ ಸಂಪಾದಕರು, ವರದಿಗಾರರು, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ಪತ್ರ ಬರೆದಿದ್ದಾರೆ.

ಗದಗ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ :ತಂದೆ, ತಾಯಿ ಕೊಲೆಗೆ ಮನೆ ಮಗನಿಂದಲೇ ಸುಪಾರಿ, ಗುರಿ ತಪ್ಪಿ ಸಂಬಂಧಿಕರನ್ನು ಮುಗಿಸಿದ್ದ ಕಿಲ್ಲರ್ ಗ್ಯಾಂಗ್

Posted by Vidyamaana on 2024-04-23 04:50:30 |

Share: | | | | |


ಗದಗ ನಾಲ್ವರ ಹತ್ಯೆ ಪ್ರಕರಣಕ್ಕೆ  ಟ್ವಿಸ್ಟ್ :ತಂದೆ, ತಾಯಿ ಕೊಲೆಗೆ ಮನೆ ಮಗನಿಂದಲೇ ಸುಪಾರಿ, ಗುರಿ ತಪ್ಪಿ ಸಂಬಂಧಿಕರನ್ನು ಮುಗಿಸಿದ್ದ ಕಿಲ್ಲರ್ ಗ್ಯಾಂಗ್

ಗದಗ, ಎ.22: ಇಡೀ ರಾಜ್ಯದ ಜನರನ್ನು ಬೆಚ್ಚಿಬೀಳುವಂತೆ ಮಾಡಿದ್ದ ಗದಗ ಜಿಲ್ಲೆಯ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಪೊಲೀಸರ ವಿಚಾರಣೆಯಲ್ಲಿ ಮನೆಯ ಮಗನೇ ಇಡೀ ಕುಟುಂಬವನ್ನು ಮುಗಿಸಲು ಸುಪಾರಿ ನೀಡಿರುವುದು ಬೆಳಕಿಗೆ ಬಂದಿದೆ. 


ಮನೆಯ ಹಿರಿಯ ಮಗನೇ ಆಸ್ತಿ ಮೇಲಿನ ದಾಹದಿಂದ ತನ್ನ ತಂದೆ, ತಾಯಿಯನ್ನು ಕೊಲೆ ಮಾಡಲು ಸುಪಾರಿ ನೀಡಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಆದರೆ, ಸುಪಾರಿ ಕಿಲ್ಲರ್‌ಗಳ ಎಡವಟ್ಟಿನಿಂದಾಗಿ, ಆ ದಿನ ಮನೆಗೆ ಬಂದು ಉಳಿದುಕೊಂಡಿದ್ದ ಅಮಾಯಕ ನೆಂಟರು ಜೀವ ತೆತ್ತಿದ್ದಾರೆ! 


ಗದಗ ನಗರದ ದಾಸರ ಓಣಿಯಲ್ಲಿ ಎರಡು ದಿನಗಳ ಹಿಂದೆ ನಾಲ್ವರ ಭೀಕರ ಹತ್ಯೆ ನಡೆದಿತ್ತು. ಶುಕ್ರವಾರ ಬೆಳಗಿನ ಜಾವ ಮೂರು ಗಂಟೆಗೆ ಕೊಲೆ ನಡೆದಿತ್ತು. ಬೆಟಗೇರಿ ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್ ಬಾಕಳೆ, ಹಾಲಿ ಉಪಾಧ್ಯಕ್ಷೆ ಸುನಂದಾ ಬಾಕಳೆ ಟಾರ್ಗೆಟ್ ಮಾಡಿ ಕೃತ್ಯ ನಡೆದಿತ್ತು. ಆದರೆ ಹಂತಕರು ಮನೆಗೆ ನುಗ್ಗಿ ಮೇಲಿನ ಮಹಡಿಯಲ್ಲಿ ಮಲಗಿದ್ದ ಪ್ರಕಾಶ್ ಅವರ ಕಿರಿಯ ಮಗ ಕಾರ್ತಿಕ್ ಬಾಕಳೆ (28), ಸಂಬಂಧಿಕರಾಗಿ ಮನೆಗೆ ಬಂದಿದ್ದ ಪರಶುರಾಮ್ ಹಾದಿಮನಿ (55), ಲಕ್ಷ್ಮೀ ಹಾದಿಮನಿ (45) ಮತ್ತು ಅವರ ಮಗಳು ಆಕಾಂಕ್ಷಾ (16) ಅವರನ್ನು ಹತ್ಯೆ ಮಾಡಿದ್ದರು. ಮಹಡಿಯಲ್ಲಿ ಸದ್ದು ಕೇಳಿ ಆತಂಕಗೊಂಡ ಪ್ರಕಾಶ್‌ ಬಾಕಳೆ ಪೊಲೀಸರಿಗೆ ಫೋನ್‌ ಮಾಡಿದಾಗ ಕೊಲೆಗಾರರು ಪರಾರಿಯಾಗಿದ್ದರು.

ಜಿಪಂ ಟಿಕೆಟ್ ಕೊಡಿಸುವುದಾಗಿ 2 ಲಕ್ಷ ರೂ.ವಂಚನೆ; ಡ್ರೋನ್‌ ಪ್ರತಾಪ್‌ ವಿರುದ್ಧ ಕೇಸ್

Posted by Vidyamaana on 2024-02-03 18:18:08 |

Share: | | | | |


ಜಿಪಂ ಟಿಕೆಟ್ ಕೊಡಿಸುವುದಾಗಿ 2 ಲಕ್ಷ ರೂ.ವಂಚನೆ; ಡ್ರೋನ್‌ ಪ್ರತಾಪ್‌ ವಿರುದ್ಧ ಕೇಸ್

ಬೆಂಗಳೂರು: ಬಿಗ್‌ ಬಾಸ್‌ ರನ್ನರ್‌ ಅಪ್‌ ಡ್ರೋನ್‌ ಪ್ರತಾಪ್‌ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ  ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್‌ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ.ಪಡೆದುಕೊಂಡು ವಂಚಿಸಿರುವುದಾಗಿ ಚಂದನ್‌ ಕುಮಾರ್‌ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್‌ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಹೆಚ್‌.ಡಿ. ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್‌ ಹೌಸ್‌ ಗೆ ಭೇಟಿ ನೀಡುತ್ತೇನೆ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್‌ ಬಾಸ್‌ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು  ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್‌ ಬಾಸ್‌ ರನ್ನರ್‌ ಅಪ್‌ ಆದ ಬಳಿಕ ಪ್ರತಾಪ್‌ ನನ್ನ ಕರೆ ಹಾಗೂ ಮೆಸೇಜ್‌ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ತನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್‌ ದೂರಿನಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ ಚಂದನ್‌ ಕುಮಾರ್‌ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್‌ ಮಾಡಲಾಗಿದೆ.ಆಡಿಯೋದಲ್ಲಿ ಏನಿದೆ?: ನನ್ನನ್ನು ಕಾಂಗ್ರೆಸ್‌ಗೆ ಬನ್ನಿ ಯೂತ್ ಕಾಂಗ್ರೆಸ್ ಪ್ರೆಸಿಡೆಂಟ್ ಮಾಡ್ತೀನಿ ಅಂದಿದ್ದರು. ಆಗ ನಾನು ಕುಮಾರಸ್ವಾಮಿಯವರ ಜೊತೆ ಓಡಾಡುತ್ತಿದ್ದೆನು. ಈಗಲೂ ಕುಮಾರಸ್ವಾಮಿಯವರನ್ನು ಭೇಟಿ ಮಾಡಲು ಹೋಗುತ್ತೇನೆ. ಆದರೆ, ಕುಮಾರಸ್ವಾಮಿಯವರ ಜೊತೆಗಿನ ಫೋಟೋ ಹಾಕಲ್ಲ. ನನ್ನ ಜೊತೆ ಕುಮಾರಸ್ವಾಮಿಯವರ ತೋಟದ ಮನೆಗೆ ಬಾ ಪರಿಚಯ ಮಾಡಿಸುತ್ತೇನೆ. ಅವರು ಕೆಟ್ಟ ಪದದಿಂದ ಬೈಯಬಹುದು, ಆದರೆ ತುಂಬಾ ಒಳ್ಳೆಯ ಮನುಷ್ಯ. ಡಿಸಿಎಂ ಡಿ.ಕೆ. ಶಿವಕುಮಾರ್ ತರ ಪೇಪರ್ ಎಸೆಯೋದು ಮಾಡಲ್ಲ. ಕುಮಾರಸ್ವಾಮಿ ಯಾರೇ ಹೋದ್ರು ದುಡ್ಡು ಕೊಡ್ತಾರೆ ಎಂದು ಹೇಳಿ ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಮಗಳನ್ನೇ ಕೊಂದ ತಾಯಿ!

Posted by Vidyamaana on 2024-04-30 08:26:23 |

Share: | | | | |


ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ   ಮಗಳನ್ನೇ ಕೊಂದ ತಾಯಿ!

ಬೆಂಗಳೂರು: ತಾಯಿಯೇ ಮಗಳನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ತಾಯಿ ಮೇಲೆ ಮಗಳು ಕೂಡ ಚಾಕುವಿನಿಂದ ದಾಳಿ ಮಾಡಿದ್ದು, ಗಾಯಗೊಂಡ ತಾಯಿ ಆಸ್ಪತ್ರೆ ಪಾಲಾಗಿದ್ದಾರೆ. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮಗಳ ನಡುವೆ ಜಗಳ ನಡೆದಿದೆ. ಎಕ್ಸಾಂಗೆ ಕಾಲೇಜಿಗೆ ಹೋಗ್ತೀನಿ ಎಂದು ಮನೆಯಿಂದ ಹೊರಡುತ್ತಿದ್ದ ಮಗಳು ಪರೀಕ್ಷೆಗೆ ಗೈರು ಹಾಜರಾಗಿದ್ದ ವಿಚಾರ ಸೋಮವಾರ ತಾಯಿಗೆ ತಿಳಿದಿದ್ದು, ಜಗಳ ಶುರು ಆಗಿತ್ತು

ಅರ್ಧ ಗಂಟೆ ಕಾಲ ಸರತಿ ಸಾಲಿನಲ್ಲಿ ನಿಂತು ತನ್ನ ಹಕ್ಕು ಚಲಾಯಿಸಿದ ಪದ್ಮರಾಜ್

Posted by Vidyamaana on 2024-04-26 11:05:12 |

Share: | | | | |


ಅರ್ಧ ಗಂಟೆ ಕಾಲ ಸರತಿ ಸಾಲಿನಲ್ಲಿ ನಿಂತು ತನ್ನ ಹಕ್ಕು ಚಲಾಯಿಸಿದ ಪದ್ಮರಾಜ್

ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಪತ್ನಿ ಮತ್ತು ಮಗಳ ಜೊತೆ ಮತ ಚಲಾಯಿಸಿದರು. 

ಮತಗಟ್ಟೆಯತ್ತ ಬರುವಾಗಲೇ ಮತದಾರರಿಗೆ ಕೈಮುಗಿಯುತ್ತಲೇ ಒಳಬಂದ ಪದ್ಮರಾಜ್, ಸರತಿ ಸಾಲಿನಲ್ಲಿ ಅರ್ಧ ಗಂಟೆ ಕಾಲ ನಿಂತು ಮತ ಚಲಾಯಿಸಿದರು.

ರಸ್ತೆ ವಿಭಜಕಕ್ಕೆ ಆಂಬುಲೆನ್ಸ್ ಡಿಕ್ಕಿ: ಚಾಲಕ ಸಾವು

Posted by Vidyamaana on 2024-07-02 20:15:00 |

Share: | | | | |


ರಸ್ತೆ ವಿಭಜಕಕ್ಕೆ ಆಂಬುಲೆನ್ಸ್ ಡಿಕ್ಕಿ: ಚಾಲಕ ಸಾವು

ಕುಣಿಗಲ್: ಆಂಬುಲೆನ್ಸ್ ವಾಹನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಸಿಂಗೋನಹಳ್ಳಿ ಅಗ್ರಹಾರ ಗೇಟ್ ಬಳಿ ಮಂಗಳವಾರ ಸಂಭವಿಸಿದೆ.ಮೃತನನ್ನು ಮುಳಬಾಗಿಲಿನ ಶ್ರೀಕಾಂತ (26) ಎಂದು ಗುರುತಿಸಲಾಗಿದೆ.



Leave a Comment: