ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

ಸುದ್ದಿಗಳು News

Posted by vidyamaana on 2024-07-22 11:26:34 |

Share: | | | | |


ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

ಮುಕ್ಕೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



ಮೂರು ದಿನಗಳ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರಿನ ಪಡೀಲು ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸದ್ಯ ಮೃತರ ಪಾರ್ಥಿವ ಶರೀರ ಮಂಗಳೂರಿನಲ್ಲಿ ಇದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

 Share: | | | | |


BREAKING : ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅನರ್ಹ : IOA ನಿಂದ ಅಧಿಕೃತ ಹೇಳಿಕೆ ಬಿಡುಗಡೆ

Posted by Vidyamaana on 2024-08-07 13:07:16 |

Share: | | | | |


BREAKING : ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅನರ್ಹ : IOA ನಿಂದ ಅಧಿಕೃತ ಹೇಳಿಕೆ ಬಿಡುಗಡೆ

ನವದೆಹಲಿ : ಇಂದು ಚಿನ್ನ ಗೆಲ್ಲುವ ಭಾರತದ ಕನಸು ಭಗ್ನಗೊಂಡಿದೆ. ಪ್ಯಾರಿಸ್: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ನಿಂದ ಅನರ್ಹಗೊಂಡಿದ್ದಾರೆ.50 ಕೆಜಿ ವಿಭಾಗದಲ್ಲಿ ಹೋರಾಡುವ ಕುಸ್ತಿಪಟು 100 ಗ್ರಾಂ ಅಧಿಕ ತೂಕ ಹೊಂದಿರುವುದು ಕಂಡುಬಂದಿದೆ.ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ವಿನೇಶ್ ಅವರ ಅನರ್ಹತೆಯ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಮುಕ್ವೆ : ಧಾರ್ಮಿಕ ಮತಪ್ರವಚನ, ಬೃಹತ್ ನಪ್ ತೇ ಶರೀಫ್ ಗೆ ಚಾಲನೆ

Posted by Vidyamaana on 2023-12-29 19:13:43 |

Share: | | | | |


ಮುಕ್ವೆ : ಧಾರ್ಮಿಕ ಮತಪ್ರವಚನ, ಬೃಹತ್ ನಪ್ ತೇ ಶರೀಫ್ ಗೆ ಚಾಲನೆ

ಪುತ್ತೂರು: ರಹ್ಮನಿಯಾ ಜುಮಾ ಮಸೀದಿ ಮುಕ್ವೆ  ಇದರ ಆಶ್ರಯದಲ್ಲಿ ನೂತನ ಮದ್ರಸ ಕಟ್ಟಡ ನಿರ್ಮಾಣದ ಅಂಗವಾಗಿ ನಡೆಯುವ  3 ದಿನಗಳ  ಧಾರ್ಮಿಕ ಮತ ಪ್ರವಚನ ಮತ್ತು ಬೃಹತ್ ನಹ್ ತೇ ಶರೀಫ್ ಕಾರ್ಯಕ್ರಮ ಡಿ.29 ರಿಂದ ಡಿ 31 ರವರೆಗೆ ಮುಕ್ವೆ ರಹ್ಮನಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದ್ದು ಡಿ. 29ರಂದು ಜುಮಾ ನಮಾಜು, ದರ್ಗಾ ಝಿಯಾರತ್ ಮಾಡಿದ ನಂತರ ಜಮಾತ್ ಕಮಿಟಿ ಅಧ್ಯಕ್ಷರಾದ ಇಬ್ರಾಹಿಂ ಮುಲಾರ್ ರವರು ಧ್ವಜಾರೋಹಣ ಮಾಡುವ ಮೂಲಕ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ರಹ್ಮಾನಿಯಾ ಜುಮಾ ಮಸೀದಿ ಮುಕ್ವೆ, ಖತೀಬರಾದ ಅನ್ವರ್ ಅಲಿ ದಾರಿಮಿ ಅಜ್ಜಾವಾರ, ಅದ್ಯಕ್ಷ ಇಬ್ರಾಹಿಂ ಮುಲಾರು

ಸ್ವಾಗತ ಸಮಿತಿ ಅಧ್ಯಕ್ಷ ಅಶ್ರಫ್ ಚಿಕ್ಕಾಲ,ಜಮಾಅತಿನ ಸದಸ್ಯರು,ಸ್ವಾಗತ ಸಮಿತಿಯ ಪದಾದಿಕಾರಿಗಳು,ಉಸ್ತುವಾರಿಗಳು ಮತ್ತು ಸದಸ್ಯರು,ನೂರು ಹುದಾ ಜಮಾಅತ್ ಕಮಿಟಿ ಪದಾದಿಕಾರಿಗಳು ಮತ್ತು ಸದಸ್ಯರು,SKSSF ಮುಕ್ವೆ ಶಾಖೆಯ ಪದಾದಿಕಾರಿಗಳುಮತ್ತು ಸದಸ್ಯರು, ಹಯಾತುಲ್ ಇಸ್ಲಾಂ ಮದರಸ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕರು, SKSBV ಪದಾದಿಕಾರಿಗಳು ಮತ್ತುHIM ಮದರಸ  ವಿದ್ಯಾರ್ಥಿಗಳು ಮತ್ತು ಜಮಾತರು ಉಪಸ್ತಿತರಿದ್ದರು.

ಬೆಳ್ತಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

Posted by Vidyamaana on 2024-07-02 16:30:31 |

Share: | | | | |


ಬೆಳ್ತಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ :ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ನಡೆದಿದೆ

ಮೋದಿ ಮತ್ತೊಮ್ಮೆ ಪ್ರಧಾನಿಯಾದ ಸಂಭ್ರಮ ಅನ್ನದಾನ ಮಾಡಿದ ಪಂಚಮುಖಿ ಫ್ರೆಂಡ್ಸ್

Posted by Vidyamaana on 2024-06-15 11:22:21 |

Share: | | | | |


ಮೋದಿ ಮತ್ತೊಮ್ಮೆ ಪ್ರಧಾನಿಯಾದ ಸಂಭ್ರಮ  ಅನ್ನದಾನ ಮಾಡಿದ ಪಂಚಮುಖಿ ಫ್ರೆಂಡ್ಸ್

ಪುತ್ತೂರು: ಕೋರ್ಟ್ ರಸ್ತೆ ಪಂಚಮುಖಿ ಫ್ರೆಂಡ್ಸ್ ವತಿಯಿಂದ ಬಿರುಮಲೆ ಪ್ರಜ್ಞಾ ಆಶ್ರಮದಲ್ಲಿ ಶುಕ್ರವಾರ ಮಧ್ಯಾಹ್ನ ಅನ್ನದಾನ ಸೇವೆ ಜರಗಿತು.


ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

Posted by Vidyamaana on 2024-03-25 04:45:39 |

Share: | | | | |


ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

ಶಿರಸಿ: ಜನಕ್ಕೆ ಸೇವೆಯ ಸೌಭಾಗ್ಯ ಕೊಟ್ಟ ಜನ‌ಮನಕ್ಕೆ ಸಾಷ್ಟಾಂಗ ಪ್ರಣಾಮ ಎಂದು ಸಂಸದ ಅನಂತಕುಮಾರ ಹೆಗಡೆ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯಿಂದ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಂಚಿತ ಅನಂತಕುಮಾರ ಹೆಗಡೆ ಅವರ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅದರ ಪೂರ್ಣ ಪಾಠ ಇಲ್ಲಿದೆ.

ಈ ಭೂಮಿಯಲ್ಲಿ ಒಂದು ಲೌಕಿಕ ಬದುಕಿನಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನ್ನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ‌ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ  ನಾನು ಈ ಪೂಜೆಯನ್ನು ಎಲ್ಲಿಂದ ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ಧನ ಆರಾಧನೆ. ಸರಿ‌ ಸುಮಾರು ೩೦ ವರ್ಷಗಳ ಲಾಲ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ‌ಪ್ರೀತಿ, ಸ್ನೇಹ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು. ಅದು ಅದಮ್ಯ.


ಯಾವುದೇ ಪೂಜೆ, ಆರಾಧ‌ನೆ ಅದು ಎಂದಿಗೂ‌ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ ಆಕೆಯ ಸೇವೆಯಲ್ಲಿ ನನ್ನನ್ನು‌ ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದ್ದಕ್ಕೆ ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದ ಪದ್ಮಗಳಿಗೆ ಅನಂತ‌ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ‌ ಮೂರು ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ . ಈ ಬದುಕಿನಲ್ಲಿ ಅದು ನನಗೊಂದು ಗುರುತು ನೀಡಿದೆ.ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೆ ಸಿಕ್ಕೀತು? ಎಂದೂ ಕೇಳಿದ್ದಾರೆ.

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ, ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ಮು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ ಮತ್ತೊಮ್ಮೆ ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯಾಂತರಾಳದ ಕೃತಜ್ಞತೆಗಳು ಎಂದು ಪತ್ರ ಬರೆದಿದ್ದಾರೆ

ಬೆಂಗಳೂರು ಮಳೆ ಅನಾಹುತ

Posted by Vidyamaana on 2023-05-21 12:55:48 |

Share: | | | | |


ಬೆಂಗಳೂರು ಮಳೆ ಅನಾಹುತ

ಬೆಂಗಳೂರು : ನಗರದ ವಿವಿಧೆಡೆ ಮತ್ತು ಹೊರವಲಯದಲ್ಲಿ ಭಾನುವಾರ ಮಧ್ಯಾಹ್ನ ಭಾರಿ ಮಳೆ ಸುರಿದಿದ್ದು ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ನೀರಿನಲ್ಲಿ ಸಿಲುಕಿದ್ದ ಕಾರಿನಲ್ಲಿದ್ದ ಯುವತಿಯೊಬ್ಬಳು ದಾರುಣವಾಗಿ ಕೊನೆಯುಸಿರೆಳೆದಿದ್ದಾಳೆ.ಮೃತ ದುರ್ದೈವಿ ಆಂಧ್ರದ ವಿಜಯವಾಡದ ಮೂಲದ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ(22) ಎಂದು ತಿಳಿದು ಬಂದಿದೆ. ಕಾರಿನಲ್ಲಿ ಚಾಲಕ ಸೇರಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು. ಅಂಡರ್ ಪಾಸ್ ನಲ್ಲಿ ಏಕಾಏಕಿ ಮಳೆಯಿಂದ ಭಾರಿ ಪ್ರಮಾಣದ ನೀಡು ಸಂಗ್ರಹವಾಗಿತ್ತು. ಕಾರು ಮುಳುಗಡೆಯಾಗಿದ್ದು ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಭಾನುರೇಖಾ ಹೆಚ್ಚಿನ ಪ್ರಮಾಣದಲ್ಲಿ ನೀರುಕುಡಿದ ಕಾರಣ ಸ್ಥಿತಿ ಚಿಂತಾಜನಕವಾಗಿತ್ತು. ಆಕೆಯನ್ನು ಸ್ಥಳೀಯರು ಖಾಸಗಿ ಆಸತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಮತ್ತು ಸಿಬಂದಿ ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ವೇಳೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿತ್ತು.ಸಿಎಂ ಭೇಟಿ

ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರು. ಸ್ಥಳೀಯರು ಮತ್ತು ಆಸ್ಪತ್ರೆಯ ವೈದ್ಯರು ಮತ್ತು ಸಿಬಂದಿಗಳಿಂದ ಮಾಹಿತಿ ಪಡೆದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆಸ್ಪತ್ರೆ ವೈದ್ಯರುಗಳ ಪ್ರಕಾರ ಆಸ್ಪತ್ರೆಗೆ ತರುವಾಗಲೇ ಕೊನೆಯುಸಿರೆಳೆದಿದ್ದಾಳೆ ಎಂದರು.ಸರ್ಕಾರದ ವತಿಯಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಉಳಿದವರಿಗೆ ಸರಕಾರದ ವತಿಯಿಂದ ಚಿಕಿತ್ಸೆ ನೀಡಲಾಗುತ್ತದೆ ಎಂದರು.ಇನ್ನು ಮುಂದೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುತ್ತೇವೆ. ಮಳೆಗಾಲಕ್ಕೆ ಮುಂಚಿತವಾಗಿ ನೀರು ನಿಲ್ಲದಂತೆ ಕಾಮಗಾರಿ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

Recent News


Leave a Comment: