ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಸ್ನೇಹಿತನಿಂದಲೇ ಕೊಲೆಯಾದ ಶಿವಮ್ಮ – ಅಮ್ಮನ ದುಡುಕುತನಕ್ಕೆ ಬಲಿಯಾದ ಮಕ್ಕಳು

Posted by Vidyamaana on 2024-01-07 14:01:18 |

Share: | | | | |


ಸ್ನೇಹಿತನಿಂದಲೇ ಕೊಲೆಯಾದ ಶಿವಮ್ಮ – ಅಮ್ಮನ ದುಡುಕುತನಕ್ಕೆ ಬಲಿಯಾದ ಮಕ್ಕಳು

ಹಾಸನ, ಜ.07: ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ(Hassan Mother Children Death). ಪತಿ ಮನೆಯಲ್ಲಿ ಇಲ್ಲದಿದ್ದಾಗ ಮನೆಗೆ ಬಂದಿದ್ದ ಸ್ನೇಹಿತ (Friend) ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಎಂಬ ಭಯಾನಕ ಸತ್ಯ ಬಯಲಾಗಿದೆ. ಪತಿ ಇಲ್ಲದ ವೇಳೆ ಮನೆಗೆ ಬಂದಿದ್ದ ವಿಜಯಪುರ ಮೂಲದ ನಿಂಗಪ್ಪ ಕಾಗವಾಡ ಎಂಬ ವ್ಯಕ್ತಿ ಹಣಕ್ಕಾಗಿ ಶಿವಮ್ಮನನ್ನು ಪೀಡಿಸಿ ಆಕೆ ಹಣ ನೀಡಲು ನಿರಾಕರಿಸಿದಾಗ ಶಿವಮ್ಮ, ಮಕ್ಕಳಾದ ಪವನ್(10), ಸಿಂಚನಾ(8) ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಪೆನ್ಷನ್‌ ಮೊಹಲ್ಲಾ ಪೊಲೀಸರು ಬಂಧಿಸಿದ್ದಾರೆ.ಜ.01ರಂದು ಹಾಸನ ಹೊರವಲಯದ ದಾಸರಕೊಪ್ಪಲಿನ ಮನೆಯೊಂದರಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಿಗೂಡ ರೀತಿಯಲ್ಲಿ ಮೃತಪಟ್ಟಿದ್ದರು. ಬೇಕರಿ ಕೆಲಸಕ್ಕೆ ತುಮಕೂರಿಗೆ ಹೋಗಿದ್ದ ಪತಿ ಮನೆಗೆ ಬಂದು ನೋಡಿದಾಗ ಘಟನೆ ಬಯಲಾಗಿತ್ತು. ಪ್ರಕರಣದಲ್ಲಿ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು ಇದು ಕೊಲೆಯೋ ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದರು. ಸದ್ಯ ಕೊಲೆಯ ಹಿಂದಿನ ರಹಸ್ಯ ಬಯಲಾಗಿದೆ. ಗಂಡನಿಲ್ಲದ ವೇಳೆ‌ ಮನೆಗೆ ಬಂದಿದ್ದ ಸ್ನೇಹಿತನೇ ಕೊಲೆ ಮಾಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ರೀಲ್ಸ್ ಸುಂದರಿ ಗೆಳತಿಯನ್ನೇ ಕೊಲೆಗೈದು ತಲೆ‌ ಮರಿಸಿಕೊಂಡಿದ್ದ ಗೆಳೆಯ ಈಗ ಜೈಲು ಸೇರಿದ್ದಾನೆ.ಹೊಸ ವರ್ಷ ಆಚರಿಸಲು ಗೆಳೆಯನನ್ನು ಮನೆಗೆ ಕರಿಸಿ ಕೊಲೆಯಾದ ಮಹಿಳೆ

ಮೃತ ಶಿವಮ್ಮ ಪತಿ ತೀರ್ಥಪ್ರಸಾದ್ ಅವರು ಬಿಜಾಪುರದಲ್ಲಿ ಬೇಕರಿ ಇಟ್ಟಿದ್ದರು. ಈ ವೇಳೆ ಬಿಜಾಪುರ ಮೂಲದ ನಿಂಗಪ್ಪ ಕಾಗವಾಡ ಹಾಗೂ ಶಿವಮ್ಮನ ಸ್ನೇಹ ಬೇಳೆದಿತ್ತು. ಬಿಜಾಪುರದಲ್ಲಿ ಬೇಕರಿ ಲಾಸ್ ಆಗಿದ್ದರಿಂದ ಮುಚ್ಚಿ ವಾಪಸ್ ಬಂದು ತುಮಕೂರಿನ ಬೇಕರಿಯಲ್ಲಿ ಶಿವಮ್ಮ ಪತಿ ತೀರ್ಥ ಕೆಲಸ ಮಾಡುತ್ತಿದ್ದರು. ದೂರವಿದ್ದ ಗಂಡನಿಗೆ ಮರೆಮಾಚಿ ಗೆಳೆಯ ನಿಂಗಪ್ಪನ ಜೊತೆ ಶಿವಮ್ಮ ಸಲುಗೆಯಿಂದಿದ್ದರು. ಕಾರು ಚಾಲಕ ಎಂದು ತನ್ನ ಪತಿಗೆ ಗೆಳೆಯನ ಪರಿಚಯ ಮಾಡಿಕೊಟಿದ್ದರು.


ಹೊಸ ವರ್ಷದಂದು ಗಂಡ ಬೇಕರಿ ಕೆಲಸಕ್ಕೆ ಆಚೆ ಹೋಗಿದ್ದಾನೆಂದು ಹೊಸ ವರ್ಷಾಚರಣೆಗೆ ಶಿವಮ್ಮ ತನ್ನ ಸ್ನೇಹಿತನನ್ನು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ ಮೃತ ಶಿವಮ್ಮ ಹಾಗೂ ಆರೋಪಿ ನಡುವೆ ಹಣಕ್ಕೆ ಜಗಳವಾಗಿದೆ. ಆರೋಪಿ ಹಣ ನೀಡುವಂತೆ ಪೀಡಿಸಿದ್ದಾನೆ. ನಿರಾಕರಿಸಿದಕ್ಕೆ ಕತ್ತು ಹಿಸುಕಿ ಶಿವಮ್ಮ ಕೊಲೆ ಮಾಡಿದ್ದಾನೆ. ಬಳಿಕ ಮಕ್ಕಳಾದ ಸಿಂಚನಾ, ಪವನ್ ಹತ್ಯೆ ಮಾಡಿ ಅಡುಗೆ ಸಿಲಿಂಡರ್ ಪೈಪ್ ತೆಗೆದು ಶಿವಮ್ಮನ ಮೊಬೈಲ್, ತಾಳಿ ಸರದೊಂದಿಗೆ ಎಸ್ಕೇಪ್ ಆಗಿದ್ದಾನೆ. ಮರು ದಿನ ಶಿವಮ್ಮ ಪತಿ ಮನೆಗೆ ಬಂದಾಗ ತಾಯಿ-ಮಕ್ಕಳ ಶವ ಕಂಡು ಶಾಕ್ ಆಗಿದ್ದಾರೆ. ಸದ್ಯ ಕೊಲೆ ಆರೋಪಿ ಅರೆಸ್ಟ್ ಆಗಿದ್ದು ಜೈಲು ಸೇರಿದ್ದಾನೆ

ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

Posted by Vidyamaana on 2023-06-06 07:41:54 |

Share: | | | | |


ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

ಪುತ್ತೂರು: ಪ್ರಾಕೃತಿಕ ವಿಕೋಪದಿಂದಾಗುವ ಹಾನಿಯನ್ನು ತಡೆಗಟ್ಟುವ ಸಲುವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜೂನ್ 6ರಂದು ಮಧ್ಯಾಹ್ನ 3.30ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ.

ನೂರುಲ್ ಹುದಾ ನೂತನ ಪುತ್ತೂರು ವಲಯ ಸಮಿತಿ ಅಸ್ತಿತ್ವಕ್ಕೆ

Posted by Vidyamaana on 2024-06-28 11:57:48 |

Share: | | | | |


ನೂರುಲ್ ಹುದಾ ನೂತನ ಪುತ್ತೂರು ವಲಯ ಸಮಿತಿ ಅಸ್ತಿತ್ವಕ್ಕೆ

ಪುತ್ತೂರು: ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯು ದಶವಾರ್ಷಿಕೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ಆಶಿ ಕಂಫರ್ಟ್‌ನಲ್ಲಿ ನಡೆದ ರಿವೈವ್ ಸ್ನೇಹಕೂಟ ಕಾರ್ಯಕ್ರಮದಲ್ಲಿ ನೂರುಲ್ ಹುದಾ ಪುತ್ತೂರು ವಲಯ ಸಮಿತಿ ರಚಿಸಲಾಯಿತು.


ನೂತನ ಪುತ್ತೂರು ವಲಯ ಸಮಿತಿಯ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಪ್ರಧಾನ ಕಾರ್ಯದರ್ಶಿ ಯಾಗಿ ಅಬೂಬಕ್ಕರ್ ಕಲ್ಲರ್ಪೆ, ಕೋಶಾಧಿಕಾರಿಯಾಗಿ ಹುಸೈನ್ ಗಾರ್ಬಲ್ ಪಡೀಲ್, ಸಂಘಟನಾ ಕಾರ್ಯದರ್ಶಿಯಾಗಿ ಅಶ್ರಫ್ ಮುಕೈ ಅವರನ್ನು ಆಯ್ಕೆ ಮಾಡಲಾಯಿತು.


ಉಪಾಧ್ಯಕ್ಷರಾಗಿ ಅಬ್ದುಲ್‌ ಹಮೀದ್ ಲಲ್ಲಿ ಬಪ್ಪಳಿಗೆ, ಇಬ್ರಾಹೀಂ ಗೋಳಿಕಟ್ಟೆ, ಡಾ. ನಝೀರ್ ಅಹ್ಮದ್, ಉಮ್ಮರ್ ಫೈಝಿ ಸಾಲರ, ಶರೀಫ್ ಬೀಟಿಗೆ, ಅಬೂಬಕ್ಕರ್ ಮಲ್ನಾಡ್, ಆರ್.ಪಿ. ರಝಾಕ್ ಪಡೀಲ್, ಅಝೀಝ್ ಬೀಟಿಗೆ ಹಾಗೂ ಕಾರ್ಯದರ್ಶಿಗಳಾಗಿ ಶರೀಫ್ ಮುಕ್ರಂಪಾಡಿ, ನಂದಿನಿ ಹನೀಫ್

ಕೇರಳ; ಮನೆಯಲ್ಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ಮಲಯಾಳಂ ನಟಿ ಅಪರ್ಣಾ

Posted by Vidyamaana on 2023-09-01 06:55:17 |

Share: | | | | |


ಕೇರಳ; ಮನೆಯಲ್ಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ಮಲಯಾಳಂ ನಟಿ ಅಪರ್ಣಾ

ತಿರುವನಂತಪುರಂ: ಸೆ 1: ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ 31 ವರ್ಷದ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 


ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ


ನಟಿ ಅಪರ್ಣಾ ನಾಯರ್ ಅವರ ಹಠಾತ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದಂತಾಗಿದೆ. ಅಲ್ಲದೆ ಇವರ ಅಭಿಮಾನಿ ಬಳಗಕ್ಕೆ ನಟಿ ಮೃತಪಟ್ಟಿರುವ ವಿಚಾರ ಅರಗಿಸಿಕೊಳ್ಳಲು ಆಗದಂತಾಗಿದೆ.


ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲವಾಗಿದ್ದು ತಾವು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದ್ದು ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.


ಮೇಘತೀರ್ಥಂ, ಮುದ್ದುಗೌವ್, ಅಚಾಯನ್ಸ್, ಕೊಡತಿ ಸಮಕ್ಷಂ ಬಾಲನ್ ವಕೀಲ್, ಕಲ್ಕಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಪರ್ಣಾ ನಟಿಸಿದ್ದಾರೆ. ಚಂದನಮಜ, ಆತ್ಮಸಖಿ ಸೇರಿದಂತೆ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಅವರು ತ್ರಯಾ ಮತ್ತು ಕೃತಿಕಾ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.


ಘಟನೆ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುತ್ತೂರು: ಕುರಿಯ ಜಾಗದ ತಕರಾರು ಅಕ್ರಮ ಪ್ರವೇಶ ಮನೆ ಧ್ವಂಸ ಲಕ್ಷಾಂತರ ರೂ. ನಷ್ಟ ದೂರು ದಾಖಲು

Posted by Vidyamaana on 2024-03-10 15:42:26 |

Share: | | | | |


ಪುತ್ತೂರು: ಕುರಿಯ ಜಾಗದ ತಕರಾರು ಅಕ್ರಮ ಪ್ರವೇಶ ಮನೆ ಧ್ವಂಸ ಲಕ್ಷಾಂತರ ರೂ. ನಷ್ಟ ದೂರು ದಾಖಲು

ಪುತ್ತೂರು:ಸಂಬಂಧಿಸಿದ ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹೆಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿದ ಘಟನೆ ಮಾ.9ರ ಮಧ್ಯಾಹ್ನ ಕುರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಪುತ್ತೂರು ಆದರ್ಶ ಆಸ್ಪತ್ರೆ ಬಳಿಯಿರುವ ಹೊಟೇಲ್ ಶ್ರೀಲಕ್ಷ್ಮೀ ಇದರ ಮಾಲಕ, ಕುರಿಯ ಹೊಸಮಾರು ನಿವಾಸಿ ವಸಂತ ಪೂಜಾರಿ ಎಂಬವರು ಘಟನೆ ಕುರಿತು ಸಂಪ್ಯ ಪೊಲೀಸರಿಗೆ ದೂರು ನೀಡಿ. ನಮ್ಮ ಸ್ವಾಧೀನದಲ್ಲಿರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಯೊಳಗೆ ಜೆಸಿಬಿ ನುಗ್ಗಿಸಿ ಮನೆಯನ್ನು ಕೆಡವಿ ಮನೆಯ ವಸ್ತುಗಳನ್ನೆಲ್ಲಾ ನಾಶ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.ಶಶಿಕಲಾ ರೈ,ಮತ್ತವರ ಮಗ ಉಜ್ವಲ್ ರೈ ಹಾಗೂ ಜೆಸಿಬಿ ಆಪರೇಟರ್ ವಿರುದ್ಧ ಅವರು ದೂರು ನೀಡಿದ್ದಾರೆ.ಪೊಲೀಸರು ಕಲಂ 447,448,427,34 ಐಪಿಸಿಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ

Posted by Vidyamaana on 2024-03-05 10:14:24 |

Share: | | | | |


ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ

ಬೆಳ್ಳಾರೆ, ಮಾ. 05. ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ.ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, . ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.



Leave a Comment: