ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ ಗೆ ಡಿಕ್ಕಿ

Posted by Vidyamaana on 2024-06-27 12:46:15 |

Share: | | | | |


ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ ಗೆ ಡಿಕ್ಕಿ

ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ ಹೊಸ ಫಾರ್ಚೂನ‌ರ್ ಕಾರು ನಜ್ಜುಗುಜ್ಜಾಗಿದೆ.

ಬೆಂಗಳೂರು: ಅಂಗಡಿ ಮಾಲೀಕನಿಗೆ ಸುಳ್ಳು ಹೇಳಿ 1 ಕೆ.ಜಿಗೂ ಹೆಚ್ಚು ಚಿನ್ನ ದೋಚಿದ್ದ ಸೇಲ್ಸ್‌ಮ್ಯಾನ್ ಸೆರೆ

Posted by Vidyamaana on 2023-10-12 08:28:56 |

Share: | | | | |


ಬೆಂಗಳೂರು: ಅಂಗಡಿ ಮಾಲೀಕನಿಗೆ ಸುಳ್ಳು ಹೇಳಿ 1 ಕೆ.ಜಿಗೂ ಹೆಚ್ಚು ಚಿನ್ನ ದೋಚಿದ್ದ ಸೇಲ್ಸ್‌ಮ್ಯಾನ್ ಸೆರೆ

ಬೆಂಗಳೂರು : ಚಿನ್ನ ಇಡಲಾಗಿದ್ದ ಬ್ಯಾಗ್​ ಅನ್ನು ಅಪರಿಚಿತರು ಸುಲಿಗೆ ಮಾಡಿದ್ದಾರೆ ಎಂದು ಸುಳ್ಳು ಕಥೆ ಕಟ್ಟಿ ಜ್ಯುವೆಲ್ಲರಿ ಶಾಪ್ ಮಾಲೀಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಸೇಲ್ಸ್‌ಮ್ಯನ್ ಹಲಸೂರು ಗೇಟ್ ಪೊಲೀಸರ ಅತಿಥಿಯಾಗಿದ್ದಾನೆ.ಹಲಸೂರು ಗೇಟ್ ಠಾಣಾ ವ್ಯಾಪ್ತಿಯಲ್ಲಿರುವ ಚಿನ್ನದ ಮಳಿಗೆಯ ಮಾಲೀಕ ಅಭಿಷೇಕ್ ಎಂಬವರು ನೀಡಿದ ದೂರಿನ ಮೇರೆಗೆ ಇದೇ ಅಂಗಡಿಯಲ್ಲಿ‌ ಸೇಲ್ಸ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ರಾಜಸ್ತಾನ ಮೂಲದ ಲಾಲ್‌ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 1 ಕೆ.ಜಿಗೂ ಹೆಚ್ಚು ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಈತನಿಗೆ ಸಹಕರಿಸಿದ ಮತ್ತೋರ್ವ ಆರೋಪಿ‌ ರಾಜ್ ಪಾಲ್‌ ಎಂಬಾತನನ್ನೂ ಬಂಧಿಸಲಾಗಿದೆ.


ಏಳು ತಿಂಗಳಿಂದ ಅಭಿಷೇ‌ಕ್ ಅವರ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿ ಕೆಲಸ‌ ಮಾಡುತ್ತಿದ್ದ ಲಾಲ್​ ಸಿಂಗ್​ ಮಾಲೀಕರ ನಂಬಿಕೆ ಗಳಿಸಿಕೊಂಡಿದ್ದ. ಕಳೆದ‌ ತಿಂಗಳು 28ರಂದು ಆಂಧ್ರದ ನಲ್ಲೂರಿನಲ್ಲಿರುವ ಮುಕೇಶ್ ಹಾಗೂ ಶುಭಂ ಗೋಲ್ಡ್ ಜ್ಯುವೆಲ್ಲರಿ ಶಾಪ್​ಗಳ ಮಾಲೀಕರಿಗೆ 1.262 ಕೆ.ಜಿ ಚಿನ್ನಾಭರಣ ಕೊಟ್ಟು ಬರುವಂತೆ ಲಾಲ್​ ಸಿಂಗ್​ಗೆ ಮಾಲೀಕರು ಸೂಚಿಸಿದ್ದರು. ಚಿನ್ನಾಭರಣಬ್ಯಾಗ್ ನೀಡುತ್ತಿದ್ದಂತೆ ಆರೋಪಿ ತನ್ನ ವಕ್ರ ಬುದ್ಧಿ ಪ್ರದರ್ಶಿಸಿದ್ದಾನೆ‌. ಬೆಂಗಳೂರಿನಲ್ಲಿರುವ ಸಹಚರರಿಗೆ ವಿಷಯ ತಿಳಿಸಿ ದೋಚುವ ಬಗ್ಗೆ ಸಂಚು‌ ನಡೆಸಿದ್ದಾನೆ‌.‌


ನೆಲ್ಲೂರಿನ ಕಾಳಹಸ್ತಿ ಬಳಿ ತೆರಳಿ ಮಾಲೀಕರಿಗೆ ಫೋನ್‌ ಮಾಡಿ ಯಾರೋ ಅಪರಿಚಿತರು ಗನ್ ಇಟ್ಟು ಕೈಗಳಿಗೆ ಚಾಕುವಿನಿಂದ ಹಲ್ಲೆ ಮಾಡಿ ಚಿನ್ನವಿರುವ ಬ್ಯಾಗ್ ಕಸಿದುಕೊಂಡರು ಎಂದು ಸುಳ್ಳು ಹೇಳಿ ಫೋನ್​ ಸ್ವಿಚ್ ಆಫ್ ಮಾಡಿಕೊಂಡಿದ್ದ. ನಿರಂತರವಾಗಿ ಎರಡು ದಿನಗಳ ಕಾಲ ಫೋನ್​ ಮಾಡಿದರೂ ಸ್ವಿಚ್ ಆಫ್ ಬರುತ್ತಿರುವುದನ್ನು ಕಂಡು ಅನುಮಾನಗೊಂಡ ಮಾಲೀಕರು ಸ್ವತಃ ತಾನೇ ಕಾಳಹಸ್ತಿಗೆ ತೆರಳಿದ್ದರು‌.‌ ಅಷ್ಟೊತ್ತಿಗಾಗಲೇ ಲಾಲ್‌ಸಿಂಗ್ ಚಿನ್ನಾಭರಣವನ್ನು ಸಹಚರರ ಮೂಲಕ ರಾಜಸ್ತಾನಕ್ಕೆ ಕಳುಹಿಸಿದ್ದನು.


ಆ ನಂತರ ನಿರಂತರ ಶೋಧ ನಡೆಸಿದ ಬಳಿಕ ಲಾಲ್ ಸಿಂಗ್‌ನನ್ನು ಪತ್ತೆ ಹಚ್ಚಿ ಮಾಲೀಕರು ಬೆಂಗಳೂರಿಗೆ ಕರೆತಂದಿದ್ದರು. ಬ್ಲೇಡ್‌ನಿಂದ ಕೈಗಳನ್ನುಕೊಯ್ದುಕೊಂಡಿದ್ದನು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಇನ್ಸ್‌ಸ್ಪೆಕ್ಟರ್ ಹನುಮಂತ್ರ ಭಜಂತ್ರಿ, ಚಾಕುವಿನಿಂದ ಕೈಗಳ ಮೇಲೆ ಹಲ್ಲೆ‌ ಮಾಡಿರುವುದಾಗಿ ನೀಡಿದ ಹೇಳಿಕೆಗೂ ಕೈ ಮೇಲೆ ಆಗಿರುವ ಗಾಯಕ್ಕೂ ಸಾಮ್ಯತೆ ಬರದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಅಪರಾಧ ಕೃತ್ಯದ ಬಗ್ಗೆ ಆರೋಪಿ ಸತ್ಯ ಬಾಯ್ಬಿಟ್ಟಿದ್ದಾನೆ. 


10 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದು‌ ಕೂಲಂಕಷ ವಿಚಾರಣೆ ನಡೆಸಿದಾಗ ಕದ್ದ ಮಾಲನ್ನು ರಾಜಸ್ತಾನಕ್ಕೆ ಸಹಚರರ ಮೂಲಕ ಕಳುಹಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಸಹಚರ ರಾಜ್ ಆಲಿಯಾಸ್ ರಾಜಪಾಲ್‌ನನ್ನು ವಶಕ್ಕೆ ಪಡೆದು 75 ಲಕ್ಷ ರೂ ಮೌಲ್ಯದ 1.262 ಕೆ‌.ಜಿ ಚಿನ್ನವನ್ನು ವಶಕ್ಕೆ‌ ಪಡೆದುಕೊಳ್ಳಲಾಗಿದೆ. ಕೃತ್ಯವೆಸಗಲು ಸಹಕರಿಸಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದರು.

ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Posted by Vidyamaana on 2023-12-13 07:26:47 |

Share: | | | | |


ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು : ಪಂಜಾಬ್‌ನ ಲ್ಯಾಮ್ರಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ.



ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ.


ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುತ್ತಾರೆ.


ಸೌಮ್ಯಾ ರವರು ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿರುತ್ತಾರೆ.

ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ನೂತನ ಸಮಿತಿ ರಚನೆ

Posted by Vidyamaana on 2023-09-21 17:40:20 |

Share: | | | | |


ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ನೂತನ ಸಮಿತಿ ರಚನೆ

ಪುತ್ತೂರು :- ಸರಕಾರಿ ಪ್ರಥಮ ದರ್ಜೆ ಕಾಲೇಜು ನೆಲ್ಲಿಕಟ್ಟೆಯಲ್ಲಿ ವ್ಯಾಸಂಗ ಮಾಡಿದ ಹಳೇ ವಿದ್ಯಾರ್ಥಿಗಳು (2009-12 ಬ್ಯಾಚ್) ರಚಿಸಿದ ಚೋಕೊಲೇಟ್ ಬಾಯ್ಸ್ ಗ್ರೂಪಿನ ಅಧೀನದಲ್ಲಿ ಸಾಮಾಜಿಕ ಸೇವಾ ಉದ್ದೇಶದೊಂದಿಗೆ  ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ನೂತನ ಸಮಿತಿಯನ್ನು ರಚಿಸಲಾಯಿತು.


ಸಮಾಜದಲ್ಲಿನ ಅಸಾಹಯಕ ರೋಗಿಗಳಿಗೆ ಹಾಗೂ ಅರ್ಹ ಅಶಕ್ತ ಫಲಾನುಭವಿಗಳಿಗೆ ನೆರವಾಗುವ ಉತ್ತಮ ಉದ್ದೇಶವಿಟ್ಟುಕೊಂಡು ವಿದ್ಯಾರ್ಥಿ ಜೀವನದಲ್ಲೇ ಒಟ್ಟಿಗೆ ಇದ್ದಂತಹ ಸ್ನೇಹಿತರು ರಚಿಸಿದ ಈ ಸಂಘಟನೆಯ ಧ್ಯೇಯ ಸೇವೆ ಮಾತ್ರ ಎಂದು ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾದ ಜನಾಬ್ ಸಿದ್ದೀಕ್ ಗಡಿಪ್ಪಿಲ ಹೇಳಿದರು.


2023-24 ರ ನೂತನ ಸಮಿತಿಯ ಅಧ್ಯಕ್ಷರಾಗಿ ಸಿದ್ದೀಕ್ ಗಡಿಪ್ಪಿಲ ,ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಪರ್ಪುಂಜ ,ಉಪಾಧ್ಯಕ್ಷರಾಗಿ ಅಝೀರ್ ಕಲ್ಲಡ್ಕ ,ಕೋಶಾಧಿಕಾರಿಯಾಗಿ ರಿಯಾಝ್ ಪುರುಷರಕಟ್ಟೆ ಹಾಗೂ ಜೊತೆ ಕಾರ್ಯದರ್ಶಿಯಾಗಿ ಫಿರೋಝ್ ಪಾಲ್ತಾಡ್ ಆಯ್ಕೆಗೊಂಡರು.


ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಉಸ್ಮಾನ್ ಪೇರಮುಗೇರು,ಆಸಿಫ್ ಅಬುಧಾಬಿ ,ಆರಿಸ್ ಸವಣೂರು ,ಶಹೀರ್ ದುಬೈ,ರಝಾಕ್ ಸಾಲ್ಮರ,ನವಾಝ್ ಕಡಬ ,ನೌಶಾದ್ ಕಟ್ಟತ್ತಾರ್ ,ಸಾದಿಕ್ ಅರಿಯಡ್ಕ ,ಇರ್ಷಾದ್ ಕಾವು ಮತ್ತು ಸಮದ್ ಸವಣೂರು ಆಯ್ಕೆಗೊಂಡರು.


ಪದಾಧಿಕಾರಿಗಳು ಆಯ್ಕೆ ಪ್ರಕ್ರಿಯನ್ನು ಆಸಿಫ್ ಅಬುದಾಬಿ ಹಾಗೂ ರಝಾಕ್ ಸಾಲ್ಮರ ನಿರ್ವಹಿಸಿದರು.

ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ ಹಿನ್ನೆಲೆ ಶೋಕಾಚರಣೆ

Posted by Vidyamaana on 2024-06-12 08:17:46 |

Share: | | | | |


ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ ಹಿನ್ನೆಲೆ ಶೋಕಾಚರಣೆ

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಅವರ ನಿಧನಕ್ಕೆ ಶಾಸಕರು‌ ಸಂತಾಪ ಸೂಚಿಸಿ ತನ್ನ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಪಕ್ಷದ ಅತ್ಯಂತ ಪ್ರಾಮಾಣಿಕ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ಹಗಲಿರುಳು ಸೇವೆ ಮಾಡುತ್ತಿದ್ದ , ಸಮಾಜ ಸೇವಾ ಕೆಲಸದಲ್ಲೂ ತನನ್ನು ತೊಡಗಿಸಿಕೊಂಡಿರುವ ಪ್ರಕಾಶ್ ಅವರ ನಿಧನದಿಂದ ಅತ್ಯಂತ ದು:ಖಿತರಾಗಿರುವ ಶಾಸಕರು ತನ್ನ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಇವತ್ತಿನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

BREAKING: ಮೈಸೂರು ದಸರಾ ಖ್ಯಾತಿಯ ಆನೆ ಅಶ್ವತ್ಥಾಮ ಇನ್ನಿಲ್ಲ

Posted by Vidyamaana on 2024-06-11 16:20:39 |

Share: | | | | |


BREAKING: ಮೈಸೂರು ದಸರಾ ಖ್ಯಾತಿಯ ಆನೆ ಅಶ್ವತ್ಥಾಮ ಇನ್ನಿಲ್ಲ

ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ ಆನೆ, ಮೃತಪಟ್ಟಿರೋದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು, ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು-ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ.



Leave a Comment: