ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಅಲ್ಪಸಂಖ್ಯಾತ ಇಲಾಖೆಯ ಕಂಕನಾಡಿ ಹಾಸ್ಟೆಲ್ ಗೆ ಸಚಿವ ಜಮೀರ್ ಅಹ್ಮದ್ ದಿಢೀರ್ ಭೇಟಿ

Posted by Vidyamaana on 2023-09-06 13:22:24 |

Share: | | | | |


ಅಲ್ಪಸಂಖ್ಯಾತ ಇಲಾಖೆಯ ಕಂಕನಾಡಿ ಹಾಸ್ಟೆಲ್ ಗೆ ಸಚಿವ ಜಮೀರ್ ಅಹ್ಮದ್ ದಿಢೀರ್ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ನಗರದ ವೆಲೆನ್ಸಿಯಾದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ. 


ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ  ನಜೀರ್ ಅಹಮದ್ ಅವರ ಜೊತೆಗೆ ಸಚಿವರು ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ   ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.

ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೇ  ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು. ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲೇ ಆರೋಪಿಸಿದರು.


ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ತರಾಟೆಗೆತ್ತಿಕೊಂಡಿದ್ದಲ್ಲದೆ, ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.‌ ಅಲ್ಲದೆ, ಹಾಸ್ಟೆಲ್ ಉಸ್ತುವಾರಿ ಹೊಂದಿರುವ ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಗೆ ಶೋಕಾಸ್ ನೋಟಿಸ್ ನೀಡಲು ಸಚಿವರು ಸೂಚಿಸಿದರು.

ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ- ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-05-17 15:19:00 |

Share: | | | | |


ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣ ಹಾಗೂ ನಂತರದ ಬೆಳವಣಿಗೆಯಲ್ಲಿ ಆರೋಪಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣಗಳನ್ನು ಉಲ್ಲೇಖಿಸಿ ಮಾತನಾಡಿರುವ ನೂತನ ಶಾಸಕ ಅಶೋಕ್‌ ಕುಮಾರ್ ರೈ ಅವರು, ತನ್ನ‌ ಕ್ಷೇತ್ರದಲ್ಲಿ ಇಂತಹ ದೌರ್ಜನ್ಯಕ್ಕೆ ಅವಕಾಶ ನೀಡುವುದಿಲ್ಲ ಎಂಬ ಖಡಕ್ ಸಂದೇಶ ರವಾನಿಸಿದ್ದಾರೆ.

ವಿದ್ಯಮಾನದ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯದ ಬಗೆಗಿನ ಪೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಘಟನೆಯ ಸತ್ಯಾಂಶದ ಬಗ್ಗೆ ಸಂಬಂಧಪಟ್ಟವರ ಜೊತೆ ಮಾಹಿತಿ ಪಡೆದುಕೊಳ್ಳುವೆ. ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಇಂತಹ ಅಶಾಂತಿಯ ವಾತಾವರಣ ಕದಡುವ‌ ಪ್ರಯತ್ನದ ಪೂರ್ವದಲ್ಲೇ ಶಾಸಕ ಅಶೋಕ್ ಕುಮಾರ್ ರೈ ಅವರು ಎಚ್ಚರಿಕೆ ಸಂದೇಶ ನೀಡಿರುವುದರಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2023-07-26 03:52:42 |

Share: | | | | |


ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

ಪುತ್ತೂರು: ವಿಧಾನಸಭೆ ಚುನಾವಣೆಯಲ್ಲಿ ವೀರೋಚಿತ ಸೋಲುಂಡು, ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಸತ್ವ ಪರೀಕ್ಷೆಗೆ ಇಳಿದ ಪುತ್ತಿಲ ಪರಿವಾರ ಜಯದ ಖಾತೆ ತೆರೆದಿದೆ. ಆರ್ಯಾಪು ಗ್ರಾಮ ಪಂಚಾಯತಿನ 2ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಭೇರಿ ಬಾರಿಸುವ ಮೂಲಕ ಪುತ್ತಿಲ ಪರಿವಾರದ ರಾಜಕೀಯ ಆಟ ಶುರುವಾದಂತಾಗಿದೆ.

ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499ಮತ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ ಗೆಣಸಿನಕುಮೇರು140 ಮತ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಿ. ಪುರುಷೋತ್ತಮ ಪ್ರಭು ಅಬ್ಬುಗದ್ದೆ.353. ಮತ ಪಡೆದುಕೊಂಡಿದ್ದಾರೆ. 1237 ಮತದಾರರನ್ನು ಹೊಂದಿರುವ ಆರ್ಯಾಪಿನ ವಾರ್ಡ್ 2ರಲ್ಲಿ 999 ಮತ ಚಲಾವಣೆಯಾಗಿತ್ತು.

ಆರ್ಯಾಪು ಗ್ರಾ.ಪಂ.ನ ಚುನಾವಣಾಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿದ್ದ ಪಿಡಿಓ ನಾಗೇಶ್ ಎಂ.ರವರ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.

ಅಪ್ರಾಪ್ತಿಯ ಖಾಸಗಿ ವಿಡಿಯೋ, ಫೋಟೋ ಹಿಡಿದು ಬ್ಲಾಕ್‌ಮೇಲ್! ಹೆದರಿದ ಕುಟುಂಬ ಆತ್ಮಹತ್ಯೆಗೆ ಯತ್ನ

Posted by Vidyamaana on 2024-06-09 08:42:11 |

Share: | | | | |


ಅಪ್ರಾಪ್ತಿಯ ಖಾಸಗಿ ವಿಡಿಯೋ, ಫೋಟೋ ಹಿಡಿದು ಬ್ಲಾಕ್‌ಮೇಲ್! ಹೆದರಿದ ಕುಟುಂಬ ಆತ್ಮಹತ್ಯೆಗೆ ಯತ್ನ

ಚಾಮರಾಜನಗರ, ಜೂ.08: ಆಕೆ ಈಗ ತಾನೇ ಮೊದಲ ವರ್ಷದ ಪಿಯುಸಿ(PUC) ಮುಗಿಸಿ ದ್ವಿತೀಯ ವರ್ಷಕ್ಕೆ ಅಡ್ಮಿಷನ್ ಆಗಿದ್ದಳು. ಉತ್ತಮ ವ್ಯಾಸಾಂಗ ಪಡೆದು ಐಎಎಸ್ ಅಧಿಕಾರಿ ಆಗುವ ಕನಸ್ಸು ಕಂಡಿದ್ದಳು. ಆದ್ರೆ, ಆಕೆಯ ಬಾಳಲ್ಲಿ ಕಾಮ ಕ್ರಿಮಿಯ ಪ್ರವೇಶವಾಗಿತ್ತು. ಮದ್ವೆಯಾಗಿ ಎರೆಡು ಮಕ್ಕಳಿದ್ದರೂ ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ. ಜೊತೆಗೆ ಆಕೆಯ ಖಾಸಗಿ ಫೋಟೊ, ವಿಡಿಯೋ ಹಿಡಿದು ಬ್ಲಾಕ್​ಮೇಲ್ ಮಾಡಿದ್ದ ಪರಿಣಾಮ ಈಗ ಒಂದೇ ಕುಟುಂಬದ ನಾಲ್ವರು ವಿಷ ಪ್ರಾಶಾಣ ಮಾಡಿದ್ದು, ಓರ್ವ ಮೃತ ಪಟ್ಟಿದ್ರೆ, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಹೌದು, ತಾಳ ಬೆಟ್ಟದಲ್ಲಿ ಕೆ.ಆರ್ ನಗರ ತಾಲೂಕಿನ ಚಂದಗಾಲು ಗ್ರಾಮದ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದರಲ್ಲಿ ಮಾಹದೇವನಾಯ್ಕ ಎಂಬಾತ ಸಾವನ್ನಪ್ಪಿದ್ರೆ, ಲೀಲಾವತಿ ಗೌರಮ್ಮ ಹಾಗೂ ಅಪ್ರಾಪ್ಥೆಯ ಸ್ಥಿತಿ ಚಿಂತಾಜನಕವಾಗಿದೆ.

ಮಿತ್ತೂರು: ರಸ್ತೆಗಡ್ಡವಾಗಿ ಬಿದ್ದ ರೈಲ್ವೇ ಸೇಫ್ ಗಾರ್ಡ್

Posted by Vidyamaana on 2024-02-20 20:42:29 |

Share: | | | | |


ಮಿತ್ತೂರು: ರಸ್ತೆಗಡ್ಡವಾಗಿ ಬಿದ್ದ ರೈಲ್ವೇ ಸೇಫ್ ಗಾರ್ಡ್

ಪುತ್ತೂರು: ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬ ಹೆದ್ದಾರಿಗಡ್ಡವಾಗಿ ಬಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಘನ ವಾಹನಗಳು ಸೇತುವೆಗೆ ಅಪ್ಪಳಿಸದಂತೆ ಮುಂಜಾಗರೂಕತೆಯಾಗಿ ಈ ಕಂಬವನ್ನು ಅಳವಡಿಸಲಾಗುತ್ತದೆ. ಈ ಸೇಫ್ ಗಾರ್ಡ್ ಗೆ ಘನ ವಾಹನವೊಂದು ಢಿಕ್ಕಿ ಹೊಡೆದಿದೆ. ಇದರಿಂದ ಕಂಬ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಮಾಣಿ - ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮಿತ್ತೂರು ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂದಿದೆ.

ಈ ಹಿಂದೆಯೂ ಹಲವು ಬಾರಿ ಈ ರೈಲ್ವೇ ಸೇಫ್ ಗಾರ್ಡ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು ಎನ್ನುವುದನ್ನು ಸ್ಥಳೀಯರು ಸ್ಮರಿಸಿಕೊಂಡಿದ್ದಾರೆ.

ಸುಳ್ಯ ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಡಗನ್ನೂರು ನಿವಾಸಿ ಪ್ರೀತಂ ಆತ್ಮಹತ್ಯೆ

Posted by Vidyamaana on 2023-12-03 20:28:31 |

Share: | | | | |


ಸುಳ್ಯ ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಡಗನ್ನೂರು ನಿವಾಸಿ ಪ್ರೀತಂ ಆತ್ಮಹತ್ಯೆ

ಪುತ್ತೂರು : ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.


ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗನ್ನೂರು ನಿವಾಸಿ ಪ್ರೀತಂ (26) ಆತ್ಮಹತ್ಯೆ ಮಾಡಿಕೊಂಡವರು.


ಪರಿವಾರ ಕ್ರೆ ಕೋ ಓಪರೇಟಿವ್ ಸೊಸೈಟಿಯಲ್ಲಿ ದ್ವಿ. ದರ್ಜೆ ಸಹಾಯಕರಾದ ಪ್ರೀತಮ್ ಎನ್ ರವರು ಕಳೆದ 5 ವರ್ಷಗಳಿಂದ ಕೆಲಸನಿರ್ವಹಿಸುತ್ತಿದ್ದು ಪ್ರಸಕ್ತ ಸುಳ್ಯದ ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಪ್ರೀತಮ್ ಅವರು ಡಿ.2ರಂದು ಕೆಲಸ ಮುಗಿಸಿ ಸಂಜೆ ಮನೆಗೆ ಬಂದಿದ್ದರು. ಮನೆಯಲ್ಲಿ ಎಲ್ಲರೂ ಊಟ ಮಾಡಿ ರಾತ್ರಿ ಮಲಗಿದ್ದರು. ತಾಯಿ ಹತ್ತಿರ ನಾಳೆ ಮೂಡಬಿದರೆಯಲ್ಲಿ ತರಬೇತಿ ಇದೆ. ಬೇಗ ಎಬ್ಬಿಸಿ ಎಂದು ತಿಳಿಸಿದ್ದರು. ಬಳಿಕ ಪ್ರೀತಮ್ ಅವರ ಕೋಣೆಯಲ್ಲಿ ಮಲಗಿದ್ದರು.


ಡಿ.3ರಂದು ತಾಯಿ ಪ್ರೀತಂ ಅವರನ್ನು ಎಬ್ಬಿಸಲು ಆತನ ಕೋಣೆಗೆ ಹೋದಾಗ ಅಲ್ಲಿ ಅವರು ಇರಲಿಲ್ಲ. ಮನೆಯ ಸುತ್ತಮುತ್ತ ಹುಡಿಕಾಡಿ ನಂತರ ಮನೆಯ ಅಂಗಳದ ಬಾವಿಗೆ ಹೋಗಿ ನೋಡಿದಾಗ ಪಕ್ಕದಲ್ಲಿ ಚಪ್ಪಲಿ ಮತ್ತು ಮೊಬೈಲ್ ಕಂಡಿತ್ತು. ಬಾವಿಯಲ್ಲಿ ನೋಡಿದಾಗ ಏನೂ ಕಂಡಿರಲಿಲ್ಲ. ನೆರೆ ಮನೆಯವರನ್ನು ಕರೆದು ಅಗ್ನಿಶಾಮಕದವರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಅವರು ಬಂದು ಬಾವಿಗಿಳಿದು ನೋಡಿದ್ದು ಪ್ರೀತಂ ಮೃತದೇಹ ದೊರೆತಿದೆ. ಪ್ರೀತಂ ಯಾವುದೋ ಕಾರಣಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ದಕ್ಷ  ಪ್ರಾಮಾಣಿಕ

ರಾಗಿದ್ದು ಸುಳ್ಯ ಶಾಖೆಯ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದಾರು.


ಪ್ರೀತಮ್ ಅವರ ತಂದೆ ಆನಂದ ಗೌಡ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಮೃತರು ತಂದೆ ತಾಯಿ ತಮ್ಮನನ್ನು ಅಗಲಿದ್ದಾರೆ 



Leave a Comment: