ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಯಾವುದೇ ಸಹಕಾರಿ ಸಂಘದಲ್ಲೂ ಕೃಷಿಕರಿಗೆ ಈ ಸಾಲಸಿಗುತ್ತಿಲ್ಲ; ಅಧಿವೇಶನದಲ್ಲಿ ಸರಕಾರದ ಗಮನಸೆಳೆದ ಶಾಸಕ ರೈ

Posted by Vidyamaana on 2024-02-29 21:43:42 |

Share: | | | | |


ಯಾವುದೇ ಸಹಕಾರಿ ಸಂಘದಲ್ಲೂ ಕೃಷಿಕರಿಗೆ ಈ ಸಾಲಸಿಗುತ್ತಿಲ್ಲ; ಅಧಿವೇಶನದಲ್ಲಿ ಸರಕಾರದ ಗಮನಸೆಳೆದ ಶಾಸಕ ರೈ

ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ ೩ ಲಕ್ಷದಿಂದ ೫ ಲಕ್ಷಕ್ಕೆ ಏರಿಸಿತ್ತು, ಶೇ. ೩ ಬಡ್ಡಿದರದಲ್ಲಿ ಕೃಷಿಕರಿಗೆ ದೊರೆಯುತ್ತಿದ್ದ ಸಾಲದ ಮೊತ್ತವನ್ನು ೧೦ ರಿಂದ ೧೫ ಲಕ್ಷಕ್ಕೆ ಏರಿಕೆ ಮಾಡಿದೆ ಆದರೆ ಈ ಎರಡೂ ಯೋಜನೆಗಳು ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಅನುಷ್ಠಾನವಾಗಿಲ್ಲ ಇದುವರೆಗೂ ಯಾವುದೇ ಕೃಷಿಕರಿಗೆ ಯೋಜನೆಯ ತಲುಪಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದರು.


ಅಧಿವೇಶನದಲ್ಲಿ ಮಾತನಾಡಿದ ಶಾಸಕರು ಸರಕಾರ ಕೃಷಿಕರ ಅಥವಾ ರೈತರಿಗೆ ನೆರವಾಗಲು ಈ ಯೋಜನೆಯನ್ನು ಜಾರಿಗೆ ತಂದಿದೆ. ಯಾವುದೇ ಸರಕಾರ ನೀಡಿದ ಸೌಲಭ್ಯವನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ. ಆದರೆ ಈ ಯೋಜನೆಯಿಂದ ಕರಾವಳಿ ಜಿಲ್ಲೆಯ ಕೃಷಿಕರು ವಂಚಿತರಾಗಿದ್ದಾರೆ. ಉಭಯ ಜಿಲ್ಲೆಗಳ ಯಾವುದೇ ಸಹಕಾರಿ ಸಂಘಗಳಲ್ಲಿ ಈ ಸಾಲವನ್ನು ಕೃಷುಕರಿಗೆ ನೀಡುತ್ತಿಲ್ಲ ಎಂದು ಸರಕಾರದ ಗಮನಕ್ಕೆ ತಂದರು. ಈಗಾಗಲೇ ೬೭೧೫ ಅರ್ಜಿಗಳು ಬಂದಿದ್ದು ಈ ಪೈಕಿ ೬೩೫೪ ಅರ್ಜಿದಾರರಿಗೆ ಸಾಲವನ್ನು ನೀಡಲಾಗಿದೆ. ದಕ ಮತ್ತು ಉಡುಪಿ ಜಿಲ್ಲೆಯ ಕೃಷಿಕರು ಮಾತ್ರ ಈ ಸಾಲದಿಂದ ವಂಚಿತರಾಗಿದ್ದಾರೆ. ಯಾವ ಕಾರಣಕ್ಕೆ ಸಹಕಾರಿ ಸಂಘಗಳಲ್ಲಿ ಸಾಲವನ್ನು ನೀಡುತ್ತಿಲ್ಲ ಎಂದು ಅಧಿವೇಶನದಲ್ಲಿ ಪ್ರಶ್ನಿಸಿದ ಶಾಸಕರು ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ದ ಕ ಮತ್ತು ಉಡುಪಿ ಜಿಲ್ಲೆಯ ಕೃಷಿಕರಿಗೆ ಸರಕಾರದ ಕೃಷಿ ಸಾಲ ದೊರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಶಾಸಕರ ಮನವಿಗೆ ಸ್ಪೀಕರ್ ಯು ಟಿ ಖಾದರ್ ದ್ವನಿಗೂಡಿಸಿದರು.

ಲೋಪವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಚಿವರ ಸ್ಪಷ್ಟನೆ

ಸರಕಾರ ಜಾರಿಗೆ ತಂದಿರುವ ಶೂನ್ಯ ಬಡ್ಡಿದರದಲ್ಲಿ ದೊರೆಯುವ ಅಲ್ಪಾವಧಿ ಸಾಲ ಮತ್ತು ಶೇ. ೩ ಬಡ್ಡಿದರದಲ್ಲಿ ದೊರೆಯುತ್ತಿದ್ದ ಸಾಲದ ಮೊತ್ತವನ್ನು ೧೦ ರಿಂದ ೧೫ ಲಕ್ಷಕ್ಕೆ ಏರಿಕೆ ಮಾಡಿತ್ತು. ಅರ್ಹ ಕೃಷಿಕರಿಗೆ ಈ ಸಾಲವನ್ನು ನೀಡಲಾಗಿದೆ. ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ವಿಳಂಬವಾಗಿರುವ ಬಗ್ಗೆ ಶಾಸಕರು ಗಮನ ಸೆಳೆದಿದ್ದಾರೆ. ಯಾವ ಕಾರಣಕ್ಕೆ ಹೀಗಾಯ್ತು ಎಂಬುದನ್ನು ಪರಿಶೀಲಿಸುತ್ತೇನೆ. ಅರ್ಹ ಫಲಾನುಭವಿಗಳನ್ನು ಹುಡುಕಿ ಅಂಥವರಿಗೆ ಸಾಲವನ್ನು ಕೊಡುವ ಕೆಲಸವನ್ನು ಮಾಡುವುದಾಗಿ ಸಚಿವ ಪ್ರಿಯಾಂಗ ಖರ್ಗೆ ಸ್ಪಷ್ಟಪಡಿಸಿದರು.

ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಬಜ್ಪೆ ನಿವಾಸಿ ಶಾಕಿರ್ ಮೃತ್ಯು

Posted by Vidyamaana on 2023-11-21 07:18:37 |

Share: | | | | |


ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಬಜ್ಪೆ ನಿವಾಸಿ ಶಾಕಿರ್ ಮೃತ್ಯು

ಸುರತ್ಕಲ್: ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಸೋಮವಾರ ನಡೆದಿದೆ.



ಮೃತರನ್ನು ಮೂಲತಃ ಬಜ್ಪೆ ನಿವಾಸಿ ಪ್ರಸ್ತುತ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ವಾಸವಾಗಿರುವ ಶಾಕಿರ್‌ (30) ಎಂದು ತಿಳಿದುಬಂದಿದೆ.


ಮೃತ ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು. ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.


ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.


ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆರ್ನೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-29 15:04:31 |

Share: | | | | |


ಪೆರ್ನೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಪುತ್ತೂರಿನ ಜನತೆಯ ಆಶೀರ್ವಾದದಿಂದ ನಾನು ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಶಾಸಕನಾಗಿ ಆಯ್ಕೆಯಾದಲ್ಲಿ ಶಾಸಕನಾದವನಿಗೆ ಸಿಗುವ ಸರಕರಿ ವೇತನ ಹಾಗೂ ಎಲ್ಲಾ ಭತ್ಯೆಯನ್ನು ತಾನು ಸಮಾಜ ಸೇವೆಗೆ ಬಳಸುತ್ತೇನೆ, ಜನರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದರಿಂದ ನನಗೆ ಸಿಗುವ ಆ ಮೊತ್ತವನ್ನು ಜನರಿಗೆ ಬಳಸುತ್ತೇನೆ, ಬಡವರಿಗಾಗಿಯೇ ಖರ್ಚು ಮಾಡುತ್ತೇನೆ ಅದರಲ್ಲಿ ಒಂದು ರುಪಾಯಿಯನ್ನೂ ತನ್ನ ಸ್ವಂತ ಬಳಕೆಗೆ ಬಳಸುವುದೇ ಇಲ್ಲ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ನೇಣು ಬಿಗಿದು ನೆಟ್ಟಾರು ನಿವಾಸಿ ಚರಣ್ ಆತ್ಮಹತ್ಯೆ

Posted by Vidyamaana on 2024-05-13 17:08:28 |

Share: | | | | |


ನೇಣು ಬಿಗಿದು  ನೆಟ್ಟಾರು ನಿವಾಸಿ ಚರಣ್ ಆತ್ಮಹತ್ಯೆ

ಬೆಳ್ಳಾರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರುವಿನಲ್ಲಿ ನಡೆದಿದೆ.

ಬೆಳ್ಳಾರೆ ನೆಟ್ಟಾರು ನಿವಾಸಿ ಚರಣ್ (22) ಆತ್ಮಹತ್ಯೆಗೆ ಶರಣಾದ ಯುವಕ.

ಅಡ್ಡಾದಿಡ್ಡಿ ವಾಹನ ನಿಲ್ಲಿಸುವ ಸವಾರರೇ ಎಚ್ಚರಿಕೆ!!!

Posted by Vidyamaana on 2023-08-22 16:09:29 |

Share: | | | | |


ಅಡ್ಡಾದಿಡ್ಡಿ ವಾಹನ ನಿಲ್ಲಿಸುವ ಸವಾರರೇ ಎಚ್ಚರಿಕೆ!!!

ಪುತ್ತೂರು: ಪೇಟೆಯಲ್ಲಿ ವಾಹನ ದಟ್ಟಣೆ ಕೈಮೀರಿ ಹೋಗಲು ಒಂದು ಕಾರಣ ಅಡ್ಡಾದಿಡ್ಡಿ ವಾಹನ ನಿಲ್ಲಿಸುವುದೂ. ಇದನ್ನು ನಿಯಂತ್ರಿಸುವಲ್ಲಿ ಟ್ರಾಫಿಕ್ ಪೊಲೀಸರು ಬಿಗು ನಿಲುವು ಕೈಗೊಂಡಿದ್ದು, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಆಸುಪಾಸು ಕೆಲ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಬಸ್ ನಿಲ್ದಾಣ ಮುಂಭಾಗದ ಖಾಸಗಿ ಕಟ್ಟಡದ ಎದುರು ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಮಾಡುತ್ತಿದ್ದರು. ಇದು ದೊಡ್ಡ ತಲೆನೋವಾಗಿದ್ದು, ದಿನನಿತ್ಯ ಸಂಚಾರ ದಟ್ಟಣೆ ಉದ್ಭವವಾಗುತ್ತಿತ್ತು. ಇದಕ್ಕೆ ಪರಿಹಾರವಾಗಿ, ದ್ವಿಚಕ್ರ ವಾಹನ ನಿಲ್ದಾಣ ಹಾಗೂ ಆಟೋ ರಿಕ್ಷಾಗಳಿಗೆ ಪ್ರತ್ಯೇಕ ಸ್ಥಳವನ್ನು ಪಾರ್ಕಿಂಗಿಗಾಗಿ ನಿಗದಿ ಮಾಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಇದರಿಂದ ಹೊರಭಾಗದಲ್ಲಿ‌ ತಮ್ಮ ವಾಹನಗಳನ್ನು‌ ಪಾರ್ಕಿಂಗ್ ಮಾಡಿದ್ದೇ ಆದರೆ, ಸಂಚಾರ ಪೊಲೀಸರು ಕ್ರಮ ಕೈಗೊಳ್ಳುವುದು ನಿಶ್ಚಿತ.

ಇದೇ ರೀತಿ ಗಾಂಧೀ ಕಟ್ಟೆ, ನಗರಸಭೆಯ ವಾಣಿಜ್ಯ ಸಂಕೀರ್ಣ ಮೊದಲಾದ ಕಡೆಗಳಲ್ಲೂ ಸುಧಾರಣಾ ಕ್ರಮಗಳನ್ನು ಅಳವಡಿಸಿದ್ದಾರೆ. ಸೂಕ್ತ ಯಲ್ಲೋ ಮಾರ್ಕ್ ಮಾಡಿದ್ದಾರೆ.

ಟ್ರಾಫಿಕ್ ಪಿ.ಎಸ್.ಐ. ಉದಯರವಿ ನೇತೃತ್ವದ ಪೊಲೀಸರ ತಂಡದ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

Posted by Vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.



Leave a Comment: