ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಉಪ್ಪಿನಂಗಡಿ: ಮಹಿಳೆ ಮೃತ್ಯು; ಕೊಲೆ ಶಂಕೆ

Posted by Vidyamaana on 2024-06-17 14:08:49 |

Share: | | | | |


ಉಪ್ಪಿನಂಗಡಿ: ಮಹಿಳೆ ಮೃತ್ಯು; ಕೊಲೆ ಶಂಕೆ

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಇಲ್ಲಿನ ನಿವಾಸಿ ಹೇಮಾವತಿ (37 ) ಮೃತ ಮಹಿಳೆ.

ಹೇಮಾವತಿ ಅವರು ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ.

ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ನಿಧನ

Posted by Vidyamaana on 2024-05-23 09:53:42 |

Share: | | | | |


ನಿವೃತ್ತ ಶಿಕ್ಷಕ  ಚಂದ್ರಶೇಖರ ಕುಂಜತ್ತಾಯ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು

ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

Posted by Vidyamaana on 2024-01-17 09:31:21 |

Share: | | | | |


ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

ಹೊಸದಿಲ್ಲಿ: ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯವಾಗಲಿವೆ ಎಂದು ಈಗಾಗಲೇ ಎನ್‌ಎಚ್‌ಎಐ ಎಚ್ಚರಿಸಿದೆ. ಫಾಸ್ಟಾಗ್‌ಗೆ ಕೆವೈಸಿ ಪೂರ್ಣಗೊಂಡಿದೆಯೇ, ಇಲ್ಲವೇ ಎಂಬ ಸ್ಥಿತಿಗತಿ ತಿಳಿಯುವುದು ಹೇಗೆ ಹಾಗೂ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.


ಪರಿಶೀಲನೆ ಹೇಗೆ?

ಬಳಕೆದಾರರು https://fastag.ihmcl.com ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ಲಾಗಿನ್‌ ಆಗಲು ನೋಂದಾಯಿತ ಮೊಬೈಲ್‌ ಸಂಖ್ಯೆ, ಪಾಸ್‌ವರ್ಡ್‌ ಮತ್ತು ಬಳಿಕ ಮೊಬೈಲ್‌ಗೆ ಬರುವ ಒಟಿಪಿ ಬೇಕಾಗಲಿದೆ.

ಒಮ್ಮೆ ಲಾಗಿನ್‌ ಆದ ಅನಂತರ, ಡ್ಯಾಶ್‌ಬೋರ್ಡ್‌ಗೆ ತೆರಳಿ, “ಮೈ ಪ್ರೊಫೈಲ್‌’ ವಿಭಾಗದ ಮೇಲೆ ಕ್ಲಿಕ್‌ ಮಾಡಬೇಕು.

ಇಲ್ಲಿ ನಿಮ್ಮ ಕೈವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆಯೇ ಎಂಬ ಸ್ಥಿತಿಗತಿ ಹಾಗೂ ನೀವು ಸಲ್ಲಿಸಿರುವ ಪ್ರೊಫೈಲ್‌ ವಿವರ ಸಿಗಲಿದೆ.

ಪೂರ್ಣಗೊಳ್ಳದಿದ್ದರೆ ಏನು ಮಾಡಬೇಕು?

ಪ್ರೊಫೈಲ್‌ ವಿಭಾಗದಲ್ಲಿ, ಕೆವೈಸಿ ಎಂಬ ಉಪ ವಿಭಾಗವಿದೆ. ಅಲ್ಲಿ ಕ್ಲಿಕ್‌ ಮಾಡಿ ನೀವು ನಿಮ್ಮ ಕೆವೈಸಿ ಅಪ್‌ಡೇಟ್‌ ಮಾಡಬಹುದು.

ಬಳಕೆದಾರರು ಗುರುತು, ವಿಳಾಸದ ದಾಖಲೆಗಳನ್ನು ಸಲ್ಲಿಸಬೇಕು. ಪಾಸ್‌ಪೋರ್ಟ್‌ ಗಾತ್ರದ ಫೋಟೋ ಕೂಡ ಅಗತ್ಯ.

ಒಮ್ಮೆ ಪರಿಶೀಲಿಸಿ, ಅನಂತರ ದೃಢೀಕರಿಸಬೇಕಾಗುತ್ತದೆ.

ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ, “ಪ್ರೊಸೀಡ್‌’ ಕ್ಲಿಕ್‌ ಮಾಡಿ ದರೆ ಕೈವೈಸಿ ಪೂರ್ಣಗೊಳ್ಳಲಿದೆ.

ಮಂಗಳೂರು: ಶಸ್ತ್ರಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

Posted by Vidyamaana on 2023-07-20 03:57:30 |

Share: | | | | |


ಮಂಗಳೂರು: ಶಸ್ತ್ರಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಶಾಂತಿ ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಆದ ಕಾರಣ ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವನಿಗೆದಾರರು ಎಲ್ಲಾ ಶಸ್ತ್ರಾಸ್ತ್ರಗಳನ್ನು 2023ರ ಜು.19ರಿಂದ ಆಗಸ್ಟ್ 1ರವರೆಗೆ ಭಾರತೀಯ ಶಸ್ತ್ರ ಕಾಯಿದೆಯಡಿ ನಮೂನೆ 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಅಥವಾ ಹತ್ತಿರದಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು. ಈ ಬಗ್ಗೆ ಯಾವುದೇ ಅಕ್ಷೇಪಣೆಗಳಿದ್ದಲ್ಲಿ ತಮ್ಮ ಬೆಳೆ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದೆ ಎಂದಾದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಪೂರಕ ದಾಖಲೆಗಳೊಂದಿಗೆ ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ತುಮಕೂರಿನಲ್ಲಿ ತ್ರಿವಳಿ ಕೊಲೆ ಪ್ರಕರಣ: ಬೆಳ್ತಂಗಡಿಯ ಮನೆಗಳಿಗೆ ತಲುಪಿದ ಮೃತದೇಹ

Posted by Vidyamaana on 2024-03-29 11:32:14 |

Share: | | | | |


ತುಮಕೂರಿನಲ್ಲಿ ತ್ರಿವಳಿ ಕೊಲೆ ಪ್ರಕರಣ: ಬೆಳ್ತಂಗಡಿಯ ಮನೆಗಳಿಗೆ ತಲುಪಿದ ಮೃತದೇಹ

ಬೆಳ್ತಂಗಡಿ, ಮಾ.29: ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಕೊಲೆಯಾದವರ ಮೃತದೇಹಗಳು ಇಂದು (ಮಾ.29) ಮುಂಜಾನೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದೆ.


ನಡ ಗ್ರಾಮದ ಟಿ.ಬಿ. ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್ ಹಮೀದ್, ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ ಮತ್ತು ಶಿರ್ಲಾಲು ಗ್ರಾಮದ ಸಿದ್ದೀಕ್ ಯಾನೆ ಇಮ್ಮಿಯಾಝ್ ಎಂಬವರ ಮೃತದೇಹಗಳು ಕೊಲೆಗೈದು ಕಾರು ಸಹಿತ ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಾ.22ರಂದು ತುಮಕೂರಿನ ಕುಚ್ಚಂಗಿ ಕೆರೆ ಎಂಬಲ್ಲಿ ಪತ್ತೆಯಾಗಿದ್ದವು.ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಎನ್ ಎ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಬಂದಿರುವ ಕಾರಣ ಇದೀಗ ಮೂವರ ಮೃತದೇಹಗಳನ್ನು ಹಸ್ತಾಂತರಿಸಲಾಗಿದ್ದು, ಕೃತ್ಯ ಬೆಳಕಿಗೆ ಬಂದ ಏಳು ದಿನಗಳ ಬಳಿಕ ಅಂದರೆ ಇಂದು ಬೆಳಗ್ಗೆ ಉಜಿರೆಗೆ ತಲುಪಿವೆ.


.

ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು?: ಡಿ.ಕೆ ಶಿವಕುಮಾ‌ರ್ ಪ್ರಶ್ನೆ

Posted by Vidyamaana on 2024-08-04 06:21:46 |

Share: | | | | |


ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು?: ಡಿ.ಕೆ ಶಿವಕುಮಾ‌ರ್ ಪ್ರಶ್ನೆ

ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅವರಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು? ಆಗ ಕೊಟ್ಟಾಗ ಹಗರಣ ಅನಿಸಲಿಲ್ಲವೇ? ಈಗ ಎತ್ತುತ್ತಿದ್ದೀರಲ್ಲ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಪತ್ನಿಗೆ ಅವರ ಸಹೋದರ ಅರಿಶಿನ ಕುಂಕುಮಕ್ಕೆ ದಾನವಾಗಿ ನೀಡಿದ ಜಮೀನಿನ ವಿಚಾರದಲ್ಲಿ ಅಕ್ರಮ ನಡೆದಿದೆಯಾ?

Recent News


Leave a Comment: