ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ನಗರಸಭೆ ಬೈ ಎಲೆಕ್ಷನ್ - ಬಿಜೆಪಿ ಅಭ್ಯರ್ಥಿಗಳ ಜೊತೆ ಕಾಣಿಸಿಕೊಂಡ ಡಾ. ಸುರೇಶ್ ಪುತ್ತೂರಾಯರು

Posted by Vidyamaana on 2023-12-15 15:30:12 |

Share: | | | | |


ನಗರಸಭೆ ಬೈ ಎಲೆಕ್ಷನ್ - ಬಿಜೆಪಿ ಅಭ್ಯರ್ಥಿಗಳ ಜೊತೆ ಕಾಣಿಸಿಕೊಂಡ ಡಾ. ಸುರೇಶ್ ಪುತ್ತೂರಾಯರು

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಈಗಾಗಲೇ ಘೋಷಣೆಯಾಗಿದ್ದು, ಇಂದು ನಾಮಪತ್ರ ಸಲ್ಲಿಕೆ ನಡೆಯಲಿದೆ.ಈ ಹಿನ್ನೆಲೆ ಅಭ್ಯರ್ಥಿಗಳು ಹಾಗೂ ಪಕ್ಷದ ಪ್ರಮುಖರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.ಮಾಜಿ ಶಾಸಕ ಸಂಜೀವ ಮಠಂದೂರು, ಜೀವಂಧರ್ ಜೈನ್ ಸಹಿತ ಹಲವು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.


ಅರುಣ್ ಕುಮಾರ್ ಪುತ್ತಿಲ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆಗೆ ಇಳಿದ ಸಂದರ್ಭದಲ್ಲಿ ಅವರ ಜತೆಗೆ ಪ್ರಮುಖ ನಾಯಕರಾಗಿ ಕಾಣಿಸಿಕೊಂಡಿದ್ದ ಸುರೇಶ್ ಪುತ್ತೂರಾಯ ಅವರು ದಿಢೀರ್ ಆಗಿ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿದ್ದಾರೆ 


ಬಿಜೆಪಿಯಿಂದ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ಹಾಗೂ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.


ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ ಅಶೋಕ್ ರೈ

Posted by Vidyamaana on 2023-05-10 05:46:04 |

Share: | | | | |


ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ   ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಕೋಡಿಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದ್ದು, ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ. ಮತದಾನ ಆರಂಭವಾಗುತ್ತಿದ್ದಂತೆಯೇ ಮತದಾರರು ಉತ್ಸಾಹದಿಂದ ಮತದಾನ ಮಾಡಲು ಆಗಮಿಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ಎರಡು ಕಾರುಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೆ 3 ಸಾವು ಮೂವರು ಗಂಭೀರ

Posted by Vidyamaana on 2024-07-06 13:28:18 |

Share: | | | | |


ಶಿವಮೊಗ್ಗದಲ್ಲಿ ಎರಡು ಕಾರುಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೆ 3 ಸಾವು ಮೂವರು ಗಂಭೀರ

   ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ.ಮೂವರ ಸ್ಥಿತಿ ಗಂಭೀರವಾಗಿದೆ.ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.

ಪುತ್ತೂರು ನಗರಸಭೆಯಲ್ಲಿ ತೆರಿಗೆ ವಸೂಲಾತಿ ಆಂದೋಲನ

Posted by Vidyamaana on 2023-10-06 08:36:41 |

Share: | | | | |


ಪುತ್ತೂರು ನಗರಸಭೆಯಲ್ಲಿ ತೆರಿಗೆ ವಸೂಲಾತಿ ಆಂದೋಲನ

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡ ತೆರಿಗೆ, ಉದ್ಯಮ ಪರವಾನಿಗೆ, ನೀರಿನ ಶುಲ್ಕ ಇತ್ಯಾದಿ ತೆರಿಗೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ನಗರಸಭೆಯಿಂದ 31 ವಾರ್ಡ್‌ಗಳಲ್ಲಿ 15 ದಿನಗಳ ತೆರಿಗೆ ವಸೂಲಾತಿ ಆಂದೋಲನಕ್ಕೆ ಗುರುವಾರ ಚಾಲನೆ ನೀಡಲಾಯಿತು. ನಗರಸಭೆಯ ಪ್ರತಿ ವಾರ್ಡ್‌ಗಳಿಗೂ ನಗರಸಭೆ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಬಾಕಿದಾರರಿಗೆ ನೋಟೀಸ್ ನೀಡಿ ಎಚ್ಚರಿಕೆ ನೀಡಲಿದ್ದಾರೆ.


ನಗರಸಭೆ ಕಚೇರಿ ವಠಾರದಲ್ಲಿ ಆಂದೋಲನಕ್ಕೆ ತಮಟೆ ಬಡಿದು ಚಾಲನೆ ನೀಡಿದ ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಮಾತನಾಡಿ, ನಗರಸಭೆ ಪ್ರತಿ ವಾರ್ಡ್‌ಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ವಾರ್ಡ್‌ಗಳಲ್ಲಿ ಪರಿಶೀಲನೆ ನಡೆಸಿ ಬಾಕಿದಾರರನ್ನು ಜಾಗೃತಿಗೊಳಿಸಲಿದ್ದಾರೆ. ಬಾಕಿ ಮಾಡಿದವರಿಗೆ ನೋಟಿಸ್ ನೀಡುವ ಕಾರ್ಯ ಮಾಡಲಿದ್ದಾರೆ. ಈ ನಡುವೆ ಪ್ರತಿ ವಾರ್ಡ್‌ಗಳ ಗಲ್ಲಿಗಲ್ಲಿಯಲ್ಲೂ ವಾಹನದ ಮೂಲಕ ತಮಟೆ ಬಡಿಯುವ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ ಎಂದರು.ನಗರಸಭೆಯ ಎಲ್ಲಾ ಕಾಮಗಾರಿಗಳು, ಕೆಲಸ ಕಾರ್ಯಗಳಿಗೆ ತೆರಿಗೆ ಹಣವನ್ನೇ ಬಳಕೆ ಮಾಡಲಾಗುತ್ತದೆ. ಈಗಾಗಲೇ ರಾಜ್ಯ ಸರಕಾರದ ವತಿಯಿಂದ ಆದೇಶ ಮಾಡಿರುವಂತೆ ಶೇ. 100ರಷ್ಟು ತೆರಿಗೆ ವಸೂಲಾತಿ ಜನವರಿ ತಿಂಗಳ ಒಳಗೆ ಮಾಡಬೇಕಾಗಿದೆ. ಅದಕ್ಕಾಗಿ ಆಂದೋಲನ ಹಮ್ಮಿಕೊಂಡಿದ್ದೇವೆ. ಮುಂದಿನ ದಿನ ರಾಜ್ಯ ಮತ್ತು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಯಾವುದೇ ಅನುದಾನ ಬಿಡುಗಡೆ ಆಗಬೇಕಾದರೂ ಶೇ. 100ರಷ್ಟು ನಮ್ಮ ತೆರಿಗೆ ವಸೂಲಾತಿ ಆದರೆ ಮಾತ್ರ ನಮಗೆ ಅನುದಾನ ಬಿಡುಗಡೆಯಾಗಬಹುದು. ಈ ನಿಟ್ಟಿನಲ್ಲಿ 15 ದಿನಗಳ ಆಂದೋಲನದಲ್ಲಿ ನಾಗರಿಕರು ಬಾಕಿ ತೆರಿಗೆಯನ್ನು ಪಾವತಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನ ತೆರಿಗೆ ವಸೂಲಾತಿಗೆ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ ಎಂದರು.


ನಗರಸಭೆ ಸದಸ್ಯ ಯುಸೂಪ್ ಡೀಮ್, ಕಂದಾಯ ನಿರೀಕ್ಷಕ ರಾಜೇಶ್, ಬಿಲ್ ಕಲೆಕ್ಟರ್ ಪುರುಷೋತ್ತಮ, ರೇಣುಕಾ ಪ್ರಸಾದ್, ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್, ಕರುಣಾಕರ್, ಸಿ.ಆರ್. ದೇವಾಡಿಗ, ರವಿಪ್ರಕಾಶ್, ಹಿರಿಯ ಆರೋಗ್ಯ ನಿರೀಕ್ಷಕಿ ಶ್ವೇತಾಕಿರಣ್, ವರಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು. ನಗರಸಭೆಯ ವಿವಿಧ ಕಡೆ ರಾಧಾಕೃಷ್ಣ ಅವರು ತಮಟೆ ಬಾರಿಸಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು.

ಸುಳ್ಯ ಐವರ್ನಾಡು ಅಡಿಕೆ ಕಳವು ಪ್ರಕರಣ : ಸೊತ್ತು ಸಹಿತ ಮಂಡೆಕೋಲು ನಿವಾಸಿ ಸುಪೀತ್‌ ಪೊಲೀಸ್ ವಶಕ್ಕೆ

Posted by Vidyamaana on 2024-03-23 14:43:43 |

Share: | | | | |


ಸುಳ್ಯ ಐವರ್ನಾಡು ಅಡಿಕೆ ಕಳವು ಪ್ರಕರಣ  : ಸೊತ್ತು ಸಹಿತ ಮಂಡೆಕೋಲು ನಿವಾಸಿ ಸುಪೀತ್‌ ಪೊಲೀಸ್ ವಶಕ್ಕೆ

ಬೆಳ್ಳಾರೆ : ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಎಂಬಲ್ಲಿ ಮಾ.14ರ ಸಂಜೆಯಿಂದ 16ರ ಬೆಳಗ್ಗಿನ ಅವಧಿಯಲ್ಲಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುಳ್ಯ, ಮಂಡೆಕೋಲು ನಿವಾಸಿ ಸುಪೀತ್‌ ಕೆ (20) ಬಂಧಿತ.ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು 83,000/ ರೂ ಮೌಲ್ಯದ 209 ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000/ ಮೌಲ್ಯದ ಆಟೋ ರಿಕ್ಷಾವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಬೆಳ್ಳಾರೆ ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಬಿ.ಪಿ ಸಂತೋಷ್ ಹಾಗೂ ಠಾಣಾ ಸಿಬ್ಬಂದಿಗಳಾದ ನವೀನ ಕೆ , ಕೃಷ್ಣಪ್ಪ, ದೇವರಾಜ್‌, ಸಂತೋಷ್‌ ಕೆ ಜಿ, ಸುಭಾಸ್‌ ಕಿತ್ತೂರ, ಪುರಂದರ ರವರುಗಳ ತನಿಖಾ ತಂಡ ಕಾರ್ಯಚರಣೆ ನಡೆಸಿರುತ್ತಾರೆ.

ಬನ್ನೂರು : ಧರೆ ಕುಸಿದು ಮಜೀದ್ ರವರ ಮನೆಗೆ ಹಾನಿ ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು - ಅಪಾಯದಿಂದ ಪಾರು

Posted by Vidyamaana on 2024-06-27 07:26:59 |

Share: | | | | |


ಬನ್ನೂರು :  ಧರೆ ಕುಸಿದು ಮಜೀದ್ ರವರ ಮನೆಗೆ ಹಾನಿ ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು - ಅಪಾಯದಿಂದ ಪಾರು

ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ

Recent News


Leave a Comment: