ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಉಡುಪಿಯ ಸರಕಳ್ಳನನ್ನು ಬಂಧಿಸಿದ ಮೂಡುಬಿದ್ರೆ ಪೊಲೀಸರು, ಕದ್ದ ಚಿನ್ನದ ಸರ, ಮೊಬೈಲ್ ವಶ.

Posted by Vidyamaana on 2024-01-13 21:05:21 |

Share: | | | | |


ಉಡುಪಿಯ ಸರಕಳ್ಳನನ್ನು ಬಂಧಿಸಿದ ಮೂಡುಬಿದ್ರೆ ಪೊಲೀಸರು, ಕದ್ದ ಚಿನ್ನದ ಸರ, ಮೊಬೈಲ್ ವಶ.

ಮೂಡುಬಿದಿರೆ: ಉಡುಪಿ ಜಿಲ್ಲೆ ಮಣಿಪಾಲ ಮತ್ತು ಬ್ರಹ್ಮಾವರದಲ್ಲಿ ನಡೆದ ಪ್ರತ್ಯೇಕ ಕಳವು ಪ್ರಕರಣದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.ಬ್ರಹ್ಮಾವರಬೆಳ್ಮಾರು ಆರೂರುಬೈಲು ಮನೆಯ ದೀಕ್ಷಿತ್(27) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಕಳವಾದ ಕಳುವಾದ ಸುಮಾರು ರೂ 50,000 ಮೌಲ್ಯದ ಬಂಗಾರದ ತಾಳಿ ಸರ ಮತ್ತು ಮೊಬೈಲ್ ಫೋನ್ ವಶ ಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಆರೋಪಿಯ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಕ್ರ:121/2016 ಕಲಂ:454, 380 ಐಪಿಸಿ ಅಕ್ರ:71/2023 ಕಲಂ:457,380,511 ಐಪಿಸಿ ಮತ್ತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಕ್ರ:310/2023 ಕಲಂ:380 ಐಪಿಸಿ ಯಂತೆ ಪ್ರಕರಣಗಳು ದಾಖಲಾಗಿವೆ.ಕಾರ್ಯಚರಣೆಯಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ ಮತ್ತು ದಿವಾಕರ್ ರೈ , ಸಿದ್ದಪ್ಪ ನರನೂರು ಪೊಲೀಸ್ ಉಪ ನಿರೀಕ್ಷಕರು ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂಧಿಯವರಾದ ಮೊಹಮ್ಮದ್ ಇಕ್ಬಾಲ್, ನಾಗರಾಜ್ ಲಮಾಣಿ, ಅಕೀಲ್ ಅಹಮ್ಮದ್, ಚಂದ್ರಹಾಸ ರೈ ಮತ್ತು ವೆಂಕಟೇಶ್ ರವರುಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

ಫೆಲಸ್ತೀನ್ ಗೆ ಬೆಂಬಲ ಸೂಚಿಸಿ ಎಸ್.ಡಿ.ಪಿ.ಐ ವತಿಯಿಂದ ಪುತ್ತೂರು ತಾಲೂಕಿನ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Posted by Vidyamaana on 2023-10-20 16:35:47 |

Share: | | | | |


ಫೆಲಸ್ತೀನ್ ಗೆ ಬೆಂಬಲ ಸೂಚಿಸಿ ಎಸ್.ಡಿ.ಪಿ.ಐ ವತಿಯಿಂದ ಪುತ್ತೂರು ತಾಲೂಕಿನ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

ಪುತ್ತೂರು: ಮಾತೃ ಭೂಮಿಗಾಗಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಫೆಲೆಸ್ತೀನಿಗೆ ಭಾರತದ ಬೆಂಬಲ ಮುಂದುವರಿಸಬೇಕು ಮತ್ತು ಫೆಲಸ್ತೀನ್ ಹೋರಾಟಕ್ಕೆ ಭಾರತೀಯರಾದ ನಮ್ಮ ಬೆಂಬಲವಿದೆ ಎಂದು ಸೂಚಿಸಿ ತಾಲೂಕಿನ ವಿವಿಧ ಕಡೆಗಳಲ್ಲಿ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು. ಕೂರ್ನಡ್ಕ, ಪರ್ಲಡ್ಕ, ಬನ್ನೂರು, ಸಾಲ್ಮರ, ಕಬಕ, ಬೀಟಿಕೆ ಮುರ,ಉರಿಮಜಲು, ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೇಬಂಡಾಡಿ, ಕೊಲ್ಪೆ ವಲಯದ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಲಾಯಿತು.

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ಪ್ರವೀಣ್ ಹೃದಯಾಘಾತದಿಂದ ಮೃತ್ಯು..!!!

Posted by Vidyamaana on 2023-05-05 11:57:17 |

Share: | | | | |


ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ಪ್ರವೀಣ್ ಹೃದಯಾಘಾತದಿಂದ ಮೃತ್ಯು..!!!

ಪುಂಜಾಲಕಟ್ಟೆ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.5ರ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ.ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಇಲ್ಲಿನ ನಿವಾಸಿ ಪ್ರವೀಣ್ ನಾಯಕ್( 45) ಮೃತಪಟ್ಟವರಾಗಿದ್ದಾರೆ.ಪ್ರವೀಣ್ ಮತ್ತು ತಂಡ ಅವರ ನಿವಾಸದ ಪರಿಸರದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಗಂಟೆಯ ಹೊತ್ತಿಗೆ ಎದೆನೋವೆಂದು ಕುಸಿದು ಬಿದ್ದಿದ್ದರು. ತತ್ ಕ್ಷಣ ಅವರನ್ನು ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಮುಲ್ಕಾಜೆ ಮಾಡದಲ್ಲಿ ಪ್ರವೀಣ್ ಡಿಜಿಟಲ್ ಸ್ಟುಡಿಯೋ ನಡೆಸುತ್ತಿದ್ದ ಅವರು ಸೌಮ್ಯ ವ್ಯಕ್ತಿತ್ವದಿಂದ ಜನಾನುರಾಗಿಯಾಗಿದ್ದರು.

ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಚಿರ ನಿದ್ರೆಗೆ

Posted by Vidyamaana on 2023-12-29 16:22:57 |

Share: | | | | |


ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಚಿರ ನಿದ್ರೆಗೆ

ಉಪ್ಪಿನಂಗಡಿ: ರಾತ್ರಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಲಾರಿಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಉಪ್ಪಿನಂಗಡಿಯಲ್ಲಿ ನಡೆದಿದೆ.


ಮೈಸೂರು ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಮೃತ ವ್ಯಕ್ತಿ ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಖಲೀಲ್, ಲೋಡ್ ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದರು.ಲಾರಿಯ ಕ್ಯಾಬಿನ್‍ನ ಬಾಗಿಲು ಹಾಕಿದ್ದರಿಂದ ಚಾಲಕ ಲಾರಿಯೊಳಗೆ ಮೃತಪಟ್ಟಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಡಿ.29ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡ ಸ್ಥಳೀಯರು ಪರಿಶೀಲಿಸಿದಾಗ ಲಾರಿ ಚಾಲಕ ಮಲಗಿದ್ದಲ್ಲೇ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಲಾರಿಯಿಂದ ಲಾರಿ ಚಾಲಕನ ಮೃತದೇಹವನ್ನು ತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ನಾಳೆ ಸೂರ್ಯ ಶಿಕಾರಿ ಗೆ ಹೊರಟ ಇಸ್ರೋ : ಆದಿತ್ಯ- ಎಲ್1 ಉಡಾವಣೆ ಬಗ್ಗೆ ಮಹತ್ವದ ಮಾಹಿತಿ

Posted by Vidyamaana on 2023-09-01 13:37:41 |

Share: | | | | |


ನಾಳೆ ಸೂರ್ಯ ಶಿಕಾರಿ ಗೆ ಹೊರಟ ಇಸ್ರೋ : ಆದಿತ್ಯ- ಎಲ್1 ಉಡಾವಣೆ ಬಗ್ಗೆ ಮಹತ್ವದ ಮಾಹಿತಿ

ಬೆಂಗಳೂರು : ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ಇದೀಗ ಸೂರ್ಯಯಾನಕ್ಕೆ ಸಜ್ಜಾಗಿದ್ದು ಸೆಪ್ಟೆಂಬರ್ 2ರಂದು ಆದಿತ್ಯಾ ಎಲ್ 1 ಉಡಾವಣೆಯಾಗಲಿದೆ.ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಉಪಗ್ರಹವನ್ನು ಸೆಪ್ಟೆಂಬರ್ 2ರ ನಾಳೆ ಬೆಳಗ್ಗೆ 11.50 ಕ್ಕೆ ಇಸ್ರೋದ ಪಿಎಸ್‌ಎಲ್ ವಿ ಸಿ 57 ಉಡಾವಣಾ ನೌಕೆಯು ಗಗನದತ್ತ ಹೊತ್ತು ಸಾಗಲಿದೆ.ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಇಸ್ರೋ, ಸೆಪ್ಟೆಂಬರ್ 2, 2023 ರಂದು ಭಾರತೀಯ ಕಾಲಮಾನ 11:50 ಗಂಟೆಗೆ ಉಡಾವಣೆಗೆ ಕಾರಣವಾಗುವ ಕ್ಷಣಗಣನೆಯನ್ನು ಶ್ಲಾಘಿಸಲಾಗಿದೆ.


ಉಡಾವಣೆಯನ್ನು ಲೈವ್ ನಲ್ಲಿ ವೀಕ್ಷಿಸಬಹುದು


ಇಸ್ರೋ ವೆಬ್ ಸೈಟ್ ನಲ್ಲಿ https://isro.gov.in


ಫೇಸ್ ಬುಕ್ https://facebook.com/ISRO


ಯೂಟ್ಯೂಬ್ https://youtube.com/watch?v=_IcgGYZTXQw


ಡಿಡಿ ನ್ಯಾಷನಲ್ ಟಿವಿ ಚಾನೆಲ್


ಭಾರತೀಯ ಕಾಲಮಾನ 11:20 ಗಂಟೆಯಿಂದ ನೇರ ಪ್ರಸಾರ ಇರಲಿದೆ.ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆಯು ಸೌರ ಕರೋನದ ದೂರಸ್ಥ ವೀಕ್ಷಣೆಗಳನ್ನು ಒದಗಿಸಲು ಮತ್ತು ಭೂಮಿಯಿಂದ ಸುಮಾರು 1 ಪಾಯಿಂಟ್ 5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಎಲ್ 1(ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್) ನಲ್ಲಿ ಸೌರ ಮಾರುತದ ಸಿತು ವೀಕ್ಷಣೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆ ಸೂರ್ಯನ ವೀಕ್ಷಣೆಗಾಗಿ ನಿರ್ಮಿಸಿರುವ ಮೊದಲ ಮೀಸಲಾದ ಬಾಹ್ಯಾಕಾಶ ಕಾರ್ಯಾಚರಣೆ ಇದಾಗಿದೆ.

ಪ್ರಗತಿ ಸ್ಟಡಿ ಸೆಂಟರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Posted by Vidyamaana on 2023-08-31 07:33:50 |

Share: | | | | |


ಪ್ರಗತಿ ಸ್ಟಡಿ ಸೆಂಟರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ಅನುತ್ತೀರ್ಣರಾದ ವಿದ್ಯಾರ್ಥಿಗಳ ಬಾಳಿಗೆ ಹೊಸ ಬೆಳಕಾಗಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಗುರುವಾರ ಭೇಟಿ ನೀಡಿದರು.

ಸಂಸ್ಥೆಯ ಸಂಚಾಲಕ ಪಿ.ವಿ. ಗೋಕುಲ್’ನಾಥ್, ಪ್ರಾಂಶುಪಾಲೆ ಹೇಮಲತಾ ಗೋಕುಲ್’ನಾಥ್ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು, ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.



Leave a Comment: