ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಬಪ್ಪಳಿಗೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವಿನ ರಕ್ಷಣೆ

Posted by Vidyamaana on 2023-09-26 21:54:16 |

Share: | | | | |


ಬಪ್ಪಳಿಗೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವಿನ ರಕ್ಷಣೆ

ಪುತ್ತೂರು: ಇಲ್ಲಿನ ಬಪ್ಪಳಿಗೆ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದನನ್ನ ಹಿಡಿದು ರಕ್ಷಣೆ ಮಾಡಲಾಗಿದೆ. ಬಪ್ಪಳಿಗೆ ಪರಿಸರದ ಜನನಿಬಿಡ ಪ್ರದೇಶ ರಸ್ತೆಯಲ್ಲಿ ಅಡ್ಡಲಾಗಿದ್ದ ಹೆಬ್ಬಾವನ್ನ ಕಂಡು ಯುವಕನೋರ್ವ ಬೆಚ್ಚಿ ಬಿದ್ದಿದ್ದಾನೆ.  ಬಳಿಕ ಸ್ನೇಕ್ ರಾಜೇಶ್ ನೂಜಿ ಅವರನ್ನ ಕರೆದು ಹೆಬ್ಬಾವನ್ನ ಹಿಡಿದು ರಕ್ಷಣೆ ಮಾಡಿ ಅರಣ್ಯವಲಯಕ್ಕೆ ಬಿಡಲಾಗಿದೆ.

ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

Posted by Vidyamaana on 2023-07-04 21:16:49 |

Share: | | | | |


ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5ರ ವರೆಗೆ ರೆಡ್ ಅಲಟ್೯ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.5ರಂದು ರಜೆ ಘೋಷಿಸಲಾಗಿದೆ.


ಇದಲ್ಲದೆ, ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿ ಶ್ರೀನಿವಾಸ್ ಶ್ವೇತಾ ದಂಪತಿ ಸ್ಥಳದಲ್ಲೇ ಸಾವು

Posted by Vidyamaana on 2023-04-21 17:37:05 |

Share: | | | | |


ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿ ಶ್ರೀನಿವಾಸ್ ಶ್ವೇತಾ ದಂಪತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿ. ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ದಂಪತಿ ಮಕ್ಕಳೊಂದಿಗೆ ಬೆಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯಾದ್ಯಂತ ರಂಜಾನ್ ಆಚರಣೆ ; ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2024-04-11 15:31:58 |

Share: | | | | |


ರಾಜ್ಯಾದ್ಯಂತ ರಂಜಾನ್ ಆಚರಣೆ ; ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದು, ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.

ಸುರತ್ಕಲ್ ನಲ್ಲಿ ಖಾಕಿ ಬಲೆಗೆ ಬಿದ್ರು ಖತರ್ನಾಕ್ ಖದೀಮರು

Posted by Vidyamaana on 2023-06-26 09:11:18 |

Share: | | | | |


ಸುರತ್ಕಲ್ ನಲ್ಲಿ ಖಾಕಿ ಬಲೆಗೆ ಬಿದ್ರು ಖತರ್ನಾಕ್ ಖದೀಮರು

ಪುತ್ತೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಸುರತ್ಕಲ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕೃಷ್ಣಾಪುರ ಮೂಲದ ಹಬೀಬ್ ಹಸನ್, (ಬಂಟ್ವಾಳದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ) ಮತ್ತು ಉಳ್ಳಾಲದ ಮೊಹಮ್ಮದ್ ಫೈಝಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಈ ಹಿಂದೆ ಮಂಗಳೂರು ಮತ್ತು ಕಾರವಾರ ಮತ್ತು ಮಂಗಳೂರು ಜೈಲಿನಲ್ಲಿದ್ದು ಸಜೆ ಅನುಭವಿಸಿದ್ದರು. ಹಬೀಬ್ ಹಸನ್ ವಿರುದ್ಧ ಒಟ್ಟು 35ಪ್ರಕರಣಗಳು ದಾಖಲಾಗಿದ್ದು, ಮೊಹಮ್ಮದ್ ಫೈಝಲ್ ವಿರುದ್ಧ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ 15 ಪ್ರಕರಣಗಳು ದಾಖಲಾಗಿವೆ.ಇವರ ಬಂಧನಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾರ್ಗದರ್ಶನದಲ್ಲಿ ತಂಡವನ್ನು ರಚಿಸಲಾಗಿತ್ತು.ಕಳವುಗೈದ ಮೋಟರ್ ಬೈಕ್ ಮತ್ತು ಸ್ಕೂಟರ್ ನಲ್ಲಿ ಅಲ್ಲಲ್ಲಿ ಕಳ್ಳತನ ಮಾಡುತ್ತಿದ್ದರು.

ಸಿಕ್ಕಿಬಿದ್ದಿದ್ದು ಹೇಗೆ?

ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಂಬೈಲ್‌ ಎಂಬಲ್ಲಿ ಪುಷ್ಪಾವತಿ ಎಂಬವರು ಜೂ.2 ರಂದು ಮುಂಜಾನೆ ತಮ್ಮ ಮನೆಯ ಕಂಪೌಂಡ್‌ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದರು. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರಿಗೆ ಕಳ್ಳರು ಕದ್ದ ಚಿನ್ನಾಭರಣವನ್ನು ಮಂಗಳೂರು ನಗರ ಮಾರಾಟಕ್ಕೆ ಯತ್ನಿಸಿ ವಿಫಲರಾಗಿ , ಸುರತ್ಕಲ್ ನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿತ್ತು. ಹೀಗಾಗಿ ಮಾದವ ನಗರ ಕೊಡಿಪ್ಪಾಡಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ, ದಿಚಕ್ರವಾಹನವೊಂದನ್ನು ನಿಲ್ಲಿಸಲು ಸೂಚಿಸಿದಾಗ ಸವಾರರಿಬ್ಬರು ವಾಹನದಿಂದ ಇಳಿದು ಓಡಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಸಿದ 13 ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಆರೋಪಿಗಳಿಂದ ಒಟ್ಟು 12ಲಕ್ಷದ 48 ಸಾವಿರದ 550 ಮೌಲ್ಯದ ಚಿನ್ನಾಭರಣಗಳನ್ನು 1ಲಕ್ಷದ 34ಸಾವಿರ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಯಸ್ಸಾದ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ ಆರೋಪಿಸಿಗಳು ಕದ್ದ ದ್ವಿಚಕ್ರ ವಾಹನಗಳನ್ನು ಚೈನ್ ಸ್ನ್ಯಾಚಿಂಗ್ ಗೆ ಬಳಸುತ್ತಿದ್ದರು.ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ 8000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.



ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್ ; ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಹಾನಿ

Posted by Vidyamaana on 2024-03-03 13:48:11 |

Share: | | | | |


ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್ ; ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಹಾನಿ

ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಹಾನಿಯಾಗಿರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಚಾಲಕ ಅಜಾಗರೂಕತೆಯಿಂದ ಬಸ್ ಹಿಮ್ಮುಖವಾಗಿ ಚಲಾಯಿಸಿದ್ದರಿಂದ ಬಸ್ ವಾಹನಗಳ ಪಾರ್ಕಿಂಗ್ ಪ್ರದೇಶ ದಾಟಿ ಅಂಗಡಿಗೆ ನುಗ್ಗಿದ್ದರಿಂದ ನಾಗರಾಜ್ ಭಟ್ ಎಂಬವರ ಸಿಹಿತಿಂಡಿ ಮತ್ತು ತಂಪು ಪಾನೀಯ ಮಾರಾಟದ ಅಂಗಡಿಗೆ ಹಾನಿಯಾಗಿದೆ. ಕಬ್ಬು ಅರೆಯುವ ಯಂತ್ರ ಸೇರಿದಂತೆ ಅಂಗಡಿಯ ಕಪಾಟುಗಳಿಗೂ ಹಾನಿಯಾಗಿದೆ. ಮಾತ್ರವಲ್ಲದೆ ಮೂರಾಲ್ಕು ದ್ವಿಚಕ್ರ ವಾಹನ ಹಾಗೂ ಕಾರಿಗೂ ಹಾನಿಯಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಈ ದುರ್ಘಟನೆಯ ಸಂದರ್ಭ ಕೆಲವೇ ಜನರಿದ್ದರಿಂದ, ಅವರು ಅಲ್ಲಿಂದ ಓಡಿ ಪಾರಾಗಿದ್ದಾರೆ. ಅದೃಷ್ಟವಶಾತ್ ಅಂಗಡಿಯವರು ಅಪಾಯದಿಂದ ಪಾರಾಗಿದ್ದಾರೆ



Leave a Comment: