ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಇಂದು ಬೆಳಿಗ್ಗೆ ಪುತ್ತೂರು ಮಹಿಳಾ ಕಾಲೇಜಿನಲ್ಲಿ NSUI ಪ್ರತಿಭಟನೆ

Posted by Vidyamaana on 2023-05-31 03:01:17 |

Share: | | | | |


ಇಂದು ಬೆಳಿಗ್ಗೆ ಪುತ್ತೂರು ಮಹಿಳಾ ಕಾಲೇಜಿನಲ್ಲಿ NSUI ಪ್ರತಿಭಟನೆ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿಯೋರ್ವರು ಪಕ್ಷದ ಪರವಾಗಿ ಪೋಸ್ಟ್ ಹಾಕಿರುವ ವಿರುದ್ಧ ಎನ್.ಎಸ್.ಯು.ಐ. ವಿದ್ಯಾರ್ಥಿ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಳಿಗ್ಗೆ 9.30ಕ್ಕೆ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಬಳಿಕ  ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಗುವುದು. ನಂತರ ಶಾಸಕರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವರಿಷ್ಠರ ಭೇಟಿಗೆ ವಿಜಯೇಂದ್ರ, ಅಶೋಕ್‌ ಡಿ.1ರಂದು ದೆಹಲಿಗೆ

Posted by Vidyamaana on 2023-11-28 17:08:52 |

Share: | | | | |


ವರಿಷ್ಠರ ಭೇಟಿಗೆ ವಿಜಯೇಂದ್ರ, ಅಶೋಕ್‌ ಡಿ.1ರಂದು ದೆಹಲಿಗೆ

ಬೆಂಗಳೂರು (ನ.28) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಅವರು ಡಿ.1ರಂದು ಶುಕ್ರವಾರ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಸಂಬಂಧ ದೆಹಲಿಗೆ ತೆರಳಲಿದ್ದಾರೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಮತ್ತು ಅಶೋಕ್ ಅವರು ಪ್ರತಿಪಕ್ಷದ ನಾಯಕರಾದ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ತಿಳಿಸುವುದರ ಜತೆಗೆ ಕೋರ್ ಕಮಿಟಿ ಪುನಾರಚನೆ, ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ, ವಿಧಾನಸಭೆಯ ಉಪನಾಯಕ, ಮುಖ್ಯ ಸಚೇತಕ, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ, ಉಪನಾಯಕ ಮತ್ತು ಮುಖ್ಯ ಸಚೇತಕ ಹುದ್ದೆಗಳಿಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ ಎಂದು ಮುೂಲಗಳು ತಿಳಿಸಿವೆ.ಅಲ್ಲದೆ, ಉಭಯ ನಾಯಕರ ನೇಮಕಕ್ಕೆ ಸಂಬಂಧಿಸಿದಂತೆ ಬೃಹತ್ ಸಮಾವೇಶ ಆಯೋಜಿಸುವ ಉದ್ದೇಶವನ್ನು ಹೊಂದಲಾಗಿದೆ. ಹೀಗಾಗಿ, ಈ ಸಮಾವೇಶದ ದಿನಾಂಕ, ರಾಷ್ಟ್ರೀಯ ನಾಯಕರ ಲಭ್ಯತೆ ಆಧರಿಸಿ ಅವರನ್ನು ಆಹ್ವಾನಿಸುವ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆಯಿದೆ.


ಜತೆಗೆ ಪಕ್ಷದ ಸಂಘಟನೆ ಬಲಪಡಿಸುವ ಕುರಿತಂತೆ ಹೋರಾಟಗಳನ್ನು ಹಮ್ಮಿಕೊಳ್ಳುವ ಬಗ್ಗೆ ವರಿಷ್ಠರಿಂದ ಸಲಹೆ- ಸೂಚನೆಗಳನ್ನು ಪಡೆಯಬಹುದು. ಮುಖ್ಯವಾಗಿ ಪಕ್ಷ ತೊರೆಯಲು ಸಜ್ಜಾಗಿರುವ ಕೆಲವು ನಾಯಕರನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ವಿಜಯೇಂದ್ರ ಅವರು ವರಿಷ್ಠರೊಂದಿಗೆ ಮಾತುಕತೆ ನಡೆಸುವ ಸಂಭ‍ವ ಹೆಚ್ಚಾಗಿದೆ ಎನ್ನಲಾಗಿದೆ.

ಮಂಗಳೂರು ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ ತಪ್ಪಿದ ಭಾರೀ ಅನಾಹುತ

Posted by Vidyamaana on 2023-10-10 15:32:41 |

Share: | | | | |


ಮಂಗಳೂರು ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ ತಪ್ಪಿದ ಭಾರೀ ಅನಾಹುತ

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ದಕ್ಕೆ ಬಂದರ್ ಬಳಿ ಇಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ.

ಲಂಗರು ಹಾಕಿದ್ದ ದೋಣಿಯಲ್ಲಿದ್ದ ಡೀಸೆಲ್ ಗೆ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಹಗ್ಗ ಬಿಚ್ಚಿ ಬಿಟ್ಟಿದ್ದರಿಂದ ದೋಣಿ ಕೆಲವು ದೂರ ನೀರಿನಲ್ಲಿ ಸಾಗಿತ್ತು. ಹಾಗಾಗಿ ಇತರ ದೋಣಿಗಳಿಗೆ ಬೆಂಕಿ ತಗುಲುವುದು ತಪ್ಪಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

Posted by Vidyamaana on 2023-07-10 16:41:37 |

Share: | | | | |


ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

ಚಿಕ್ಕಮಗಳೂರು: ಜಿನುಗು ಮಳೆಯ ನಡುವೆಯೇ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರತಿನಿತ್ಯವೂ ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರವಾಸಿಗರು ರಸ್ತೆಗಳ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ.

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ-ಕೇಳೋರಿಲ್ಲ ಎಂಬಂತಾಗಿದ್ದು, ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಪ್ರವಾಸಿಗರು ಮುಂದಾಗಿದ್ದಾರೆ. ಈ ಭಾಗದಲ್ಲಿ ಮೊದಲೇ ಕಿರಿದಾದ ರಸ್ತೆಗಳು ಇದ್ದು, ವಾಹನ ಸವಾರರಿಗೆ ಇಕ್ಕಟ್ಟು ಆದಂತಾಗಿದೆ. ಇಂತಹದ್ದರಲ್ಲೂ ಕೆಲವರು ರಸ್ತೆ ಮಧ್ಯೆಯೆ ಕಾರ್ಗಳನ್ನು ನಿಲ್ಲಿಸಿ ಪುಂಡಾಟ ಮೆರೆಯುವ ಮೂಲಕ ಇನ್ನುಳಿದ ವಾಹನ ಸವಾರರಿಗೂ ಕಿರಿಕಿರಿ ಆಗುವಂತೆ ಮಾಡುತ್ತಿದ್ದಾರೆ. ದಟ್ಟ ಮಂಜು ಕವಿದ ದಾರಿಯಲ್ಲಿ ವಾಹನ ಪಾರ್ಕಿಂಗ್ ಮಾಡಿ ಡ್ಯಾನ್ಸ್ ಮಾಡುವ ಭರದಲ್ಲಿ ಇನ್ನುಳಿದ ವಾಹನಗಳಿಗೂ ಅಡ್ಡಲಾಗಿ ನಿಲ್ಲುತ್ತಿದ್ದಾರೆ.

ಇದರಿಂದ ಅಪಾಘಾತ, ಟ್ರಾಫಿಕ್ ಜಾಮ್ಗೂ ಆಹ್ವಾನ ನೀಡಿದಂತಾಗಿದೆ. ಅಷ್ಟೇ ಅಲ್ಲದೆ ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಕೂಡ ಕೆಲವು ಪ್ರವಾಸಿಗರು ಮುಂದಾಗುತ್ತಿದ್ದಾರೆ. ಈ ಹುಚ್ಚಾಟದಿಂದ ಬೇಸತ್ತ ಸ್ಥಳೀಯರು ಜಲಪಾತಗಳ ಬಳಿ ಪೊಲೀಸರು ಬೀಟ್ ಹಾಕುವಂತೆ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ; ಪೆಟ್ರೋಲ್ ಡೀಸೆಲ್ ದರ ಕಡಿತ

Posted by Vidyamaana on 2024-03-15 06:19:54 |

Share: | | | | |


ಲೋಕಸಭಾ ಚುನಾವಣೆ ಹಿನ್ನೆಲೆ ; ಪೆಟ್ರೋಲ್ ಡೀಸೆಲ್ ದರ ಕಡಿತ

ನವದೆಹಲಿ, ಮಾ 15: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ದೇಶದ ಜನರಿಗೆ ಗಿಫ್ಟ್ ಕೊಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತಲಾ 2 ರೂ.ಗಳಂತೆ ಇಳಿಕೆ ಮಾಡಿ ಪ್ರಕಟಣೆ ಹೊರಡಿಸಿದೆ. ಮಾ. 15ರ ಬೆಳಗ್ಗೆ 6 ಗಂಟೆಯಿಂದ ಹೊಸ ದರಗಳು ಜಾರಿಯಾಗುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇತ್ತೀಚೆಗೆ ಎಲ್ ಪಿಜಿ ಗ್ಯಾಸ್ ಹಾಗೂ ಸಿಎನ್ ಜಿ ಇಂಧನಗಳ ಬೆಲೆಯನ್ನು ಕೇಂದ್ರ ಸರ್ಕಾರ ಅಲ್ಪ ಇಳಿಸಿತ್ತು. ಅದರ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ದರಗಳೂ ಇಳಿಮುಖವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆ ನಿರೀಕ್ಷೆಯೀಗ ನಿಜವಾಗಿದೆ.


ಬೆಂಗಳೂರಿನಲ್ಲಿ ಮಾ. 13- 14ರ ಪೆಟ್ರೋಲ್ ದರ ಪ್ರತಿ ಲೀಟರಿಗೆ 101.94 ರೂ.ಇದ್ದು, ಪರಿಷ್ಕತರ ದರಗಳು ಅನ್ವಯವಾದ ನಂತರ ಮಾ. 14ರ ಮಧ್ಯರಾತ್ರಿಯಿಂದ ಪ್ರತಿ ಲೀಟರಿಗೆ 99.94 ರೂ. ಆಗಲಿದೆ. ಇನ್ನು, ಮಾ. 13- 14ರಂದು ಪೆಟ್ರೋಲ್ ನ ದರ ಪ್ರತಿ ಲೀಟರ್ ಗೆ 87.89 ಇದ್ದು, ಇದರ ದರ ಪ್ರತಿ ಲೀಟರ್ ಗೆ 85.89 ರೂ. ಆಗಲಿದೆ.

ನನ್ನನು ಸಿ ಎಸ್ ಕೆ ತಂಡಕ್ಕೆ ಸೇರಿಸಿಕೊಳ್ಳಿ; ಯೋಗಿ ಬಾಬು ಮಾತಿಗೆ ಧೋನಿ ಕೊಟ್ಟ ರಿಪ್ಲೈ ಸಖತ್ ವೈರಲ್‌

Posted by Vidyamaana on 2023-07-11 06:20:15 |

Share: | | | | |


ನನ್ನನು ಸಿ ಎಸ್ ಕೆ ತಂಡಕ್ಕೆ ಸೇರಿಸಿಕೊಳ್ಳಿ; ಯೋಗಿ ಬಾಬು ಮಾತಿಗೆ ಧೋನಿ ಕೊಟ್ಟ ರಿಪ್ಲೈ ಸಖತ್ ವೈರಲ್‌

ಚೆನ್ನೈ: ಮಹೇಂದ್ರ ಸಿಂಗ್‌ ಈಗ ಕ್ರಿಕೆಟಿಗ ಮಾತ್ರವಲ್ಲದೆ ಸಿನಿಮಾ ನಿರ್ಮಾಪಕರೂ ಆಗಿದ್ದಾರೆ. ಧೋನಿ ಎಂಟರ್ಟೈನ್ಮೆಂಟ್ ಬ್ಯಾನರ್‌ ಅಡಿಯಲ್ಲಿ ಸಿನಿಮಾ ರೆಡಿ ಆಗಿರುವುದು ಗೊತ್ತೇ ಇದೆ. ಇದೀಗ ಈ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ.ಟೀಮ್‌ ಇಂಡಿಯಾದ ಮಾಜಿ ನಾಯಕ, ಚೆನ್ನೈ ಸೂಪರ್‌ ಕಿಂಗ್ಸ್‌ ಕಪ್ತಾನ ಮಹೇಂದ್ರ ಧೋನಿ “ಧೋನಿ ಎಂಟರ್ಟೈನ್ಮೆಂಟ್” ಬ್ಯಾನರ್‌ ಅಡಿಯಲ್ಲಿ “ಎಲ್‌ ಜಿಎಂ” ( ಲೆಟ್ಸ್‌ ಗೆಟ್‌ ಮ್ಯಾರೇಡ್)‌  ಸಿನಿಮಾದ ಟ್ರೇಲರ್‌ ಹಾಗೂ ಆಡಿಯೋ ಲಾಂಚ್‌ ಅದ್ಧೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಧೋನಿ ದಂಪತಿ ಹಾಗೂ ಕಲಾವಿದರು ಭಾಗಿಯಾಗಿದ್ದರು.ಚೆನ್ನೈನ ಲೀಲಾ ಪ್ಯಾಲೇಸ್‌ನಲ್ಲಿ ‘ಎಲ್‌ಜಿಎಂ’ ಚಿತ್ರದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.


ಈ ವೇಳೆ ಸಿನಿಮಾದಲ್ಲಿ ನಟಿಸಿರುವ ಕಾಲಿವುಡ್‌ ನ ಖ್ಯಾತ ಹಾಸ್ಯನಟ ಯೋಗಿ ಬಾಬು ಅವರು ಧೋನಿ ಅವರ ಬಳಿ ಕೇಳಿರುವ ಒಂದು ಮಾತಿಗೆ ಧೋನಿ ಕೊಟ್ಟ ಉತ್ತರ ವೈರಲ್‌ ಆಗಿದೆ.ಧೋನಿ ಅವರೇ ನನ್ನನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ನೇಮಿಸಿಕೊಳ್ಳಿ” ಎಂದಿದ್ದಾರೆ.


“ಅಂಬಾಟಿ ರಾಯುಡು ನಿವೃತ್ತರಾಗಿದ್ದಾರೆ. ಆದ್ದರಿಂದ ನಿಮಗೆ ಸಿಎಸ್‌ಕೆಯಲ್ಲಿ ಸ್ಥಾನವಿದೆ. ನಾನು ಮ್ಯಾನೇಜ್‌ಮೆಂಟ್‌ನೊಂದಿಗೆ ಮಾತನಾಡುತ್ತೇನೆ. ಆದರೆ, ನೀವು ಚಲನಚಿತ್ರಗಳಲ್ಲಿ ತುಂಬಾ ಬ್ಯುಸಿಯಾಗಿದ್ದೀರಿ. ನೀವು ನಿರಂತರವಾಗಿ ಆಡಬೇಕು. ಅವರು ತುಂಬಾ ವೇಗವಾಗಿ ಬೌಲ್ ಮಾಡುತ್ತಾರೆ ಮತ್ತು ಅವರು ನಿಮ್ಮನ್ನು ಗಾಯಗೊಳಿಸಲು ಬೌಲ್ ಮಾಡುತ್ತಾರೆ.” ಎಂದು ತಮಾಷೆಯಾಗಿ ಉತ್ತರ ನೀಡಿದ್ದಾರೆ.


‘ಲೆಟ್ಸ್ ಗೆಟ್ ಮ್ಯಾರೀಡ್’ (‘ಎಲ್‌ಜಿಎಂ’) ಫ್ಯಾಮಿಲಿ ಎಂಟರ್‌ಟೈನರ್ ಆಗಿದ್ದು, ಹರೀಶ್ ಕಲ್ಯಾಣ್ ಮತ್ತು ಇವಾನಾ ,ನದಿಯಾ ತಾಯಿಯ ಯೋಗಿ ಬಾಬು ಮತ್ತು ಮಿರ್ಚಿ ವಿಜಯ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಸಿನಿಮಾವನ್ನು ರಮೇಶ್ ತಮಿಳ್ಮನಿ ನಿರ್ದೇಶನ  ಮಾಡಿದ್ದಾರೆ.


ಟ್ರೇಲರ್‌ ಗಮನ ಸೆಳೆಯುತ್ತಿದ್ದು ವರ್ಷದ ಕೊನೆಯಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ.



Leave a Comment: