ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ನಿಧನ

Posted by Vidyamaana on 2024-02-28 11:19:42 |

Share: | | | | |


ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ನಿಧನ

ರಾಜೀವ್​ ಗಾಂಧಿ(Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸಂತನ್​(Santhan) ಬುಧವಾರ ಬೆಳಗ್ಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಸಂತನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಿಡುಗಡೆಯಾದ ಬಳಿಕ ಅವರನ್ನು ತಿರುಚ್ಚಿಯ ಕೇಂದ್ರ ಕಾರಾಗೃಹದ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು.


ನವೆಂಬರ್ 11, 2022 ರಂದು, ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮರುದಿನವೇ ನಳಿನಿ, ಶ್ರೀಹರನ್, ಸಂತನ್, ರಾಬರ್ಟ್ ಪಾಯಸ್, ಜಯಕುಮಾರ್ ಮತ್ತು ರವಿಚಂದ್ರನ್ 32 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದರು.


ಇಲ್ಲಿ ಒಂದು ಸಮಸ್ಯೆ ಇತ್ತು. ನಳಿನಿ ಮತ್ತು ರವಿಚಂದ್ರನ್ ಅವರನ್ನು ಬಿಡುಗಡೆ ಮಾಡಲಾಯಿತು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡಲು ಅವಕಾಶ ನೀಡಲಾಯಿತು ಆದರೆ ಉಳಿದ ನಾಲ್ವರನ್ನು ತಿರುಚ್ಚಿ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು. ನಾಲ್ವರೂ ಶ್ರೀಲಂಕಾದ ಪ್ರಜೆಗಳಾಗಿದ್ದರಿಂದ ಹೀಗೆ ಮಾಡಲಾಗಿತ್ತು.


ಸಂತನ್ ಅವರು ತಿರುಚ್ಚಿ ಜೈಲಿನ ವಿಶೇಷ ಶಿಬಿರದಲ್ಲಿರುವ ತಮ್ಮ ಸೆಲ್ ನಿಂದ ಬಹಿರಂಗ ಪತ್ರ ಬರೆದಿದ್ದರು. ತ್ರದ ಮೂಲಕ, ಅವರು ತಮ್ಮ ದೇಶಕ್ಕೆ ಮರಳಲು ಧ್ವನಿ ಎತ್ತುವಂತೆ ವಿಶ್ವದಾದ್ಯಂತದ ತಮಿಳರಿಗೆ ಮನವಿ ಮಾಡಿದ್ದರು.32 ವರ್ಷಗಳಿಂದ ತಾಯಿಯನ್ನು ನೋಡಿಲ್ಲ ಎಂದಿದ್ದರು

ನನ್ನನ್ನು ಶ್ರೀಲಂಕಾಕ್ಕೆ ಕಳುಹಿಸಲು ವ್ಯವಸ್ಥೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವರು ಮತ್ತು ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದರು. ನನ್ನ ಪಾಸ್‌ಪೋರ್ಟ್ ಅನ್ನು ನವೀಕರಿಸಲು ಚೆನ್ನೈನಲ್ಲಿರುವ ಶ್ರೀಲಂಕಾದ ಡೆಪ್ಯುಟಿ ಹೈಕಮಿಷನ್ ಕಚೇರಿಗೆ ಹೋಗಲು ನನಗೆ ಅನುಮತಿ ನೀಡುವಂತೆ ನಾನು ಅಧಿಕಾರಿಗಳನ್ನು ವಿನಂತಿಸಿದೆ. ನನಗೆ ಇನ್ನೂ ಯಾವುದೇ ಉತ್ತರವೇ ಬಂದಿಲ್ಲ ಎಂದಿದ್ದರು.

ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿದ್ದ ಪೋರ್ನ್‌ಸ್ಟಾರ್‌ ಥೈನಾ ಶವವಾಗಿ ಪತ್ತೆ

Posted by Vidyamaana on 2024-01-12 21:51:53 |

Share: | | | | |


ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿದ್ದ ಪೋರ್ನ್‌ಸ್ಟಾರ್‌ ಥೈನಾ ಶವವಾಗಿ ಪತ್ತೆ

ಲೈಮಾ: ವಯಸ್ಕರ ಚಲನಚಿತ್ರ ಉದ್ಯಮದಲ್ಲಿ ತಾನು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದ ಪೆರುವಿನ ನೀಲಿ ಚಿತ್ರತಾರೆ ಥೈನಾ ಫೀಲ್ಡ್ಸ್‌(24) (Thaina Fields) ಅದಾದ ಒಂದೇ ತಿಂಗಳಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಆಕೆಯ ಆಪ್ತ ಸ್ನೇಹಿತ ಅಲೆಜಾಂಡ್ರಾ ಸ್ವೀಟ್ (Alejandra Sweet) ಅವರು ಸಂದರ್ಶನವೊಂದರಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ನನ್ನ ಸ್ನೇಹಿತೆಯ ಸಾವಿನಿಂದ ದುಃಖಿತನಾಗಿದ್ದೇನೆ, ಸದ್ಯಕ್ಕೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಆಕೆಯನ್ನು ಪ್ರೀತಿಸುವವರೆಲ್ಲರೂ ಅವಳ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ ಎಂದು ಹೇಳಿದ್ದಾರೆ.ಫೀಲ್ಡ್ ನೊಂದಿಗೆ ಕೆಲಸ ಮಾಡಿದ ಉತ್ಪಾದನಾ ಕಂಪನಿಗಳಲ್ಲಿ ಒಂದಾದ ಮಿಲ್ಕಿ ಪೆರು, ಥೈನಾ ಫೀಲ್ಡ್ಸ್‌ಗೆ ಸಂತಾಪ ಸೂಚಿಸಿದೆ. ವಯಸ್ಕ ಉದ್ಯಮದಲ್ಲಿ (Film Industry) ತಾನು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಥೈನಾ ಫೀಲ್ಡ್ಸ್‌ ಇತ್ತೀಚೆಗೆ ಹೇಳಿಕೊಂಡಿದ್ದಳು. ಅಡಲ್ಟ್ಸ್‌ ಕಂಟೆಂಟ್‌ನಲ್ಲಿ ನಟಿಸಲು ಪ್ರಾರಂಭಿಸಿದ ನಂತರ ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೆ. ತನ್ನನ್ನು ನೇಮಿಸಿಕೊಂಡವರು ತಮಗೆ ಬೇಕಾದುದ್ದನ್ನು ಮಾಡಬೇಕು ಎಂದು ಬಯಸುತ್ತಾರೆ. ಮಹಿಳೆಯರು ವಯಸ್ಕರ ಚಿತ್ರಗಳಲ್ಲಿ ನಟಿಸುವುದು ತುಂಬಾ ಕಷ್ಟಕರವಾಗಿತ್ತು. ಈ ಆರೋಪಗಳನ್ನು ಮಾಡಿದ ಕೆಲ ತಿಂಗಳ ನಂತರ, ಥೈನಾ ಫೀಲ್ಡ್ಸ್‌ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿನ ಕಾರಣ ಇನ್ನಷ್ಟೇ ಹೊರಬರಬೇಕಿದೆ.ಸದ್ಯ ಬೆಳಕಿಗೆ ಬಂದಿರುವ ಆಘಾತಕಾರಿ ಘಟನೆಯಲ್ಲಿ, ಪೆರುವಿಯನ್ ವಯಸ್ಕ ಚಲನಚಿತ್ರ ತಾರೆ- ಥೈನಾ ಫೀಲ್ಡ್ ಎಂಬ ಹೆಸರಿನಿಂದ ಕೆಲಸ ಮಾಡುತ್ತಿದ್ದು, ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ 24 ವರ್ಷದ ನಟಿಯ ದೇಹವು ಟ್ರುಜಿಲ್ಲೊದಲ್ಲಿನ ಅವರ ಮನೆಯಲ್ಲಿ ಪತ್ತೆಯಾಗಿದೆ. ಲೈಂಗಿಕ ಉದ್ಯಮದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿದ ಒಂದು ತಿಂಗಳ ನಂತರ ಈ ಘಟನೆ ವರದಿಯಾಗಿದೆ. ಆಕೆಯ ಉದ್ಯಮದಲ್ಲಿ ತೊಡಗಿದ್ದ ಮಿಲ್ಕಿ ಪೆರು ಕಂಪನಿಯೂ ನಟಿಯ ಸಾವಿಗೆ ಸಂತಾಪ ಸೂಚಿಸಿದೆ

ನವ ವಿವಾಹಿತ ಶೈಲೇಶ್ ಶೆಟ್ಟಿ ಕೆರೆಗೆ ಜಾರಿ ಬಿದ್ದು ಮೃತ್ಯು

Posted by Vidyamaana on 2024-05-26 08:19:14 |

Share: | | | | |


ನವ ವಿವಾಹಿತ ಶೈಲೇಶ್ ಶೆಟ್ಟಿ  ಕೆರೆಗೆ ಜಾರಿ ಬಿದ್ದು ಮೃತ್ಯು

ಬೆಳ್ತಂಗಡಿ : ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಕೃಷಿ ಕೆಲಸ ಮಾಡಿಕೊಂಡಿರುವ ಶೈಲೇಶ್ ಶೆಟ್ಟಿ(38) ಎಂಬವರು ತನ್ನ ಮನೆಯ ಕೆರೆಗೆ ಮೇ.25 ರಂದು

ಮಂಗಳೂರು: ಬಕ್ರೀದ್ ಹಿನ್ನಲೆ

Posted by Vidyamaana on 2023-06-27 05:29:56 |

Share: | | | | |


ಮಂಗಳೂರು: ಬಕ್ರೀದ್ ಹಿನ್ನಲೆ

ದ.ಕ.ಜಿಲ್ಲೆಯಲ್ಲಿ ಜೂ.29ರಂದು ನಡೆಯುವ ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭ ಜಾನುವಾರುಗಳನ್ನು ಅನಧಿಕೃತವಾಗಿ ವಧೆ ಮಾಡುವ ಮತ್ತು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವುದನ್ನು ತಡೆಗಟ್ಟುವ ಸಲುವಾಗಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು.ಎಲ್ಲಾ ಇಲಾಖೆಗಳ ಸಮನ್ವಯ ಸಾಧಿಸಿ ಮುಂಬರುವ ಬಕ್ರೀದ್ ಹಬ್ಬದ ಸಂಧರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಅನಧಿಕೃತ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಮತ್ತು ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು


ಜಾನುವಾರು ಸಾಗಾಣಿಕೆ ಪರವಾನಿಗೆ ಅನ್ ಲೈನ್ ತಂತ್ರಾಂಶದ ಮಾಹಿತಿಯನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಂಡು ಅನಧಿಕೃತ ಜಾನುವಾರು ಸಾಗಾಣಿಕೆ ತಡೆಗಟ್ಟಲು ಸೂಚಿಸಿದರು.


ಸಭೆಯಲ್ಲಿ ಪೊಲೀಸ್ ಉಪಾಯುಕ್ತ ಅಂಶುಕುಮಾರ್, ಜಿಲ್ಲಾ ಎಸ್ಪಿ ಸಿಬಿ ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ರವಿಕುಮಾರ್ ಎಂ, ದ.ಕ.ಜಿಪಂ ಉಪ ಕಾರ್ಯದರ್ಶಿ ಕೆ. ಆನಂದ ಕುಮಾರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಎನ್., ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಡಾ. ರವಿ ಡಿ.ಆರ್ ಮತ್ತಿತರರು ಉಪಸ್ಥಿತರಿದ್ದರು.

ಮಾವನಿಗೆ ಸೊಸೆಯಿಂದಲೇ ಹಲ್ಲೆ ; ಕೊಲೆಯತ್ನ ಕೇಸು ದಾಖಲು, ಆರೋಪಿತ ಕೆಇಬಿ ಅಧಿಕಾರಿ ಉಮಾಶಂಕರಿ ಪೊಲೀಸ್ ವಶಕ್ಕೆ

Posted by Vidyamaana on 2024-03-11 23:19:42 |

Share: | | | | |


ಮಾವನಿಗೆ ಸೊಸೆಯಿಂದಲೇ ಹಲ್ಲೆ ; ಕೊಲೆಯತ್ನ ಕೇಸು ದಾಖಲು, ಆರೋಪಿತ ಕೆಇಬಿ ಅಧಿಕಾರಿ ಉಮಾಶಂಕರಿ ಪೊಲೀಸ್ ವಶಕ್ಕೆ

ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.


ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.

ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಣ ಘಟನೆ : S P ಹಾಕೆ ಅಕ್ಷಯ್ ಮಚ್ಚಂದ್ರ ಸ್ಪಷ್ಟನೆ

Posted by Vidyamaana on 2023-07-25 08:00:56 |

Share: | | | | |


ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಣ ಘಟನೆ : S P ಹಾಕೆ ಅಕ್ಷಯ್ ಮಚ್ಚಂದ್ರ ಸ್ಪಷ್ಟನೆ

ಉಡುಪಿ: ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ.ಎಸ್ ಪಿ ಹೇಳಿದ್ದೇನು?: ಘಟನೆಗೆ ಸಂಬಂಧಪಟ್ಟಂತೆ ಹಲವಾರು ವಿಡಿಯೋಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಸುದ್ದಿಯಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ನಮಗೂ ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ತಿಳಿಯದೆ ಸುಮ್ಮನೆ ಮಾಹಿತಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.


ಘಟನೆ ಸಂಬಂಧಪಟ್ಟಂತೆ ಒಂದಷ್ಟು ಮಾಹಿತಿಗಳು ಹರಿದಾಡುತ್ತಿದೆ. ಆದರೆ ಪೊಲೀಸ್ ಇಲಾಖೆಗೆ ಘಟನೆಯ ವಿಡಿಯೋ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೂ ನಾವು ನಿಗಾ ಇಟ್ಟಿದ್ದು, ಅಲ್ಲೂ ನಮ್ಮ ಕಣ್ಣಿಗೆ ಬಿದ್ದಿಲ್ಲ. ಯಾರಾದರೂ ಸಿಕ್ಕಿದರೆ ನಮಗೆ ಮಾಹಿತಿ ತಿಳಿಸಿ ಎಂದಿದ್ದಾರೆ.ಘಟನೆಯ ಬಗ್ಗೆ ಯಾವುದೇ ದೂರು ನೀಡಲಾಗಿಲ್ಲ. ನಾವು ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ, ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು.


ಟ್ವೀಟ್ ವಿಚಾರಕ್ಕೆ ಮಾತನಾಡಿದ ಎಸ್ ಪಿ, ಟ್ವೀಟ್ ಮಾಡಿದವರು ಘಟನೆಯ ಸತ್ಯಾಸತ್ಯತೆಯ ಬಗ್ಗೆ ತಿಳಿದುಕೊಳ್ಳಬೇಕಿತ್ತು. ಅವರನ್ನು ಪೊಲೀಸರು ಸಂಪರ್ಕಿಸಿದ್ದು ಘಟನೆಯ ಮಾಹಿತಿ ನೀಡಲು ಹೊರತು ತೊಂದರೆ ಕೊಡಲು ಅಲ್ಲ ಎಂದರು.


ಸಾರ್ವಜನಿಕರಿಗೆ ಮನವಿ: ಜನರಿಗೆ ಮನವಿ ಮಾಡುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ವಿಚಾರಗಳನ್ನು ಈ ವಿಷಯಕ್ಕೆ ಲಿಂಕ್ ಮಾಡಿ ಜನರ ಮನಸ್ಸಿನಲ್ಲಿ ಆತಂಕ ಸೃಷ್ಟಿ ಮಾಡುವ ಅಥವಾ ಗೊಂದಲವುಂಟು ಮಾಡುವ ಪೋಸ್ಟ್ ಹಾಕಬೇಡಿ. ಏನಾದರೂ ಖಚಿತ ಮಾಹಿತಿ ಸಿಕ್ಕಿದರೆ ಶೇರ್ ಮಾಡುವ ಮೊದಲು ನಮಗೆ ತಿಳಿಸಿ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ವದಂತಿ ಹರಡಬೇಡ ಎಂದು ಎಸ್ ಪಿ ಮನವಿ ಮಾಡಿದರು.



Leave a Comment: