ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಸುದ್ದಿಗಳು News

Posted by vidyamaana on 2024-07-22 23:30:36 |

Share: | | | | |


ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ   ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯ‌ರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್‌ ಸಮೇತ  ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

 Share: | | | | |


ಪ್ರೀತಿಸಿ ಯುವತಿ ವಂಚಿಸಿದ ಆರೋಪ; ವಿಷ ಸೇವಿಸಿ ಸಾವಿಗೆ ಶರಣಾದ ಆಟೋ ಚಾಲಕ

Posted by Vidyamaana on 2023-10-08 21:27:17 |

Share: | | | | |


ಪ್ರೀತಿಸಿ ಯುವತಿ ವಂಚಿಸಿದ ಆರೋಪ; ವಿಷ ಸೇವಿಸಿ ಸಾವಿಗೆ ಶರಣಾದ ಆಟೋ ಚಾಲಕ

ಬೆಂಗಳೂರು: ಪ್ರೇಮ (Love) ವೈಫಲ್ಯದಿಂದ ಯುವಕ (Young Man) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್​ ಸಿಟಿಯ (Silicon City) ನಗರದ ಕುರುಬರಹಳ್ಳಿಯ ಜೆ.ಸಿ ನಗರದಲ್ಲಿ (JP Nagar) ನಡೆದಿದೆ. ಯೋಗೇಶ್ (25) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಆಕ್ಟೋಬರ್ 5ರಂದು ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ನಂತರ ಯೋಗೇಶ್ ನನ್ನು ಪೋಷಕರು ಅಸ್ಪತ್ರೆಗೆ (Hospital) ದಾಖಲಿಸಿ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಆದರೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಯುವಕ, ಚಿಕಿತ್ಸೆ (Treatment) ಫಲಿಸದೇ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ.

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಮೃತ ನಾಗೇಶ್​​ ನಾಗಮಂಗಲದ ಆಡೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ನಗರದಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದನಂತೆ. ನಾಗಮಂಗಲ ಮೂಲದ ಯುವತಿಯನ್ನ ಯೋಗೇಶ್​ ಪ್ರೀತಿಸುತ್ತಿದ್ದನಂತೆ. ಕಳೆದ ನಾಲ್ಕು ವರ್ಷಗಳಿಂದ ಯುವಕ‌-ಯುವತಿ ಪರಸ್ಪರ ಪ್ರೀತಿಸುತ್ತಿದ್ದರಂತೆ. ಆದರೆ ಇತ್ತೀಚಿಗೆ ಯೋಗೇಶ್ ನಿಂದ ಯುವತಿ ದೂರವಾಗಿದ್ದಳಂತೆ

ಮಲೇಷ್ಯಾದಲ್ಲಿ ಎರಡು ಮಿಲಿಟರಿ ಹೆಲಿಕಾಪ್ಟ‌ರ್ ಪತನಗೊಂಡು 10 ಮಂದಿ ಸಾವು! ವಿಡಿಯೋ ವೈರಲ್

Posted by Vidyamaana on 2024-04-23 12:13:34 |

Share: | | | | |


ಮಲೇಷ್ಯಾದಲ್ಲಿ ಎರಡು ಮಿಲಿಟರಿ ಹೆಲಿಕಾಪ್ಟ‌ರ್ ಪತನಗೊಂಡು 10 ಮಂದಿ ಸಾವು! ವಿಡಿಯೋ ವೈರಲ್

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪೆರಾಕ್ ನ ಲುಮುಟ್ ನಲ್ಲಿ ಮಂಗಳವಾರ ನಡೆದಿದೆ.ಫ್ರೀ ಮಲೇಷ್ಯಾ ಟುಡೇ ವರದಿಯ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ ಮತ್ತು ವೈದ್ಯಕೀಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಅವರ ಸಾವುಗಳನ್ನು ದೃಢಪಡಿಸಿದ್ದಾರೆ ಎಂದು ಹೇಳಿದರು.

ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಕಛೇರಿ ಉದ್ಘಾಟನೆ.

Posted by Vidyamaana on 2023-04-17 19:58:30 |

Share: | | | | |


ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಕಛೇರಿ ಉದ್ಘಾಟನೆ.

ಪುತ್ತೂರು: ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ಚುನಾವಣಾ ಕಚೇರಿ ಎ.17ರಂದು ಉದ್ಘಾಟನೆಗೊಂಡಿತ್ತು.ದರ್ಬೆಯ ಆರ್‌ಇಬಿ ಎಂಕೇವ್ ಕಟ್ಟಡದಲ್ಲಿರುವ ಈ ಕಛೇರಿಯಲ್ಲಿ ಅರ್ಚಕ ಹರಿಪ್ರಸಾದ್ ಬನಾರಿಯವರ ನೇತೃತ್ವದಲ್ಲಿ ಗಣಪತಿ ಹವನ, ಪೂಜಾ ವಿಧಿವಿಧಾನಗಳು ನೆರವೇರಿತು. ಬಳಿಕ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ, ಹಿರಿಯರಾದ ವಲೇರಿಯನ್ ಡಯಾಸ್ ಮೊದಲಾದವರು ದೀಪ ಬೆಳಗಿಸಿ ಕಛೇರಿಯನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಪುತ್ತೂರು ಮಹಾಲಿಂಗೇಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿಯೇ ಅಶೋಕ್ ರೈಯವರ ಪಕ್ಷದ ಕಚೇರಿಯು ಉದ್ಘಾಟನೆಗೊಳ್ಳುತ್ತಿದ್ದು ಪುತ್ತೂರಿನಲ್ಲಿ ಹಾಗೂ ರಾಜ್ಯದಲ್ಲಿ ಪಕ್ಷದ ತೇರು ಎಳೆಯುವಂತಾಗಲಿ ಎಂದರು.ಪುತ್ತೂರಿನಲ್ಲಿ 14 ಮಂದಿ ಆಕಾಂಕ್ಷಿಯಾಗಿದ್ದರು ಅವರವರ ಅಭಿಮಾನದಲ್ಲಿ ಹಲವು ಮಂದಿಯಿದ್ದರು. ಆವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾರ ಮನಸ್ಸಿಗೂ ನೋವಾಗದಂತೆ ಕೆಲಸಮಾಡಬೇಕು ಎಂದು ಶುಭ ಹಾರೈಸಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಮಾತನಾಡಿ, ಪಕ್ಷದ ಕಾರ್ಯಕರ್ತರು ಪ್ರತಿಯೊಬ್ಬರೂ ನಾನೇ ಅಭ್ಯರ್ಥಿ ಎಂಬ ಭಾವನೆಯೊಂದಿಗೆ ಚುನಾವಣಾ ಹೋರಾಟದಲ್ಲಿ ಭಾಗಿಗಳಾಗುವ ಮೂಲಕ ಪಕ್ಷದ ಗೆಲುವಿಗೆ ಕಾರಣರಾಗಬೇಕು. ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಮಾತ್ರವಲ್ಲದೆ ರಾಜ್ಯದಲ್ಲಿಯೂ ಬದಲಾವಣೆಯನ್ನು ತರುವಂತಾಗಬೇಕು. ಕಾಂಗ್ರೆಸ್ ಪಕ್ಷದ ಶಾಸಕರ ಮೂಲಕ ಪುತ್ತೂರಿನಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಬೇಕು. ವಿಜಯದ ಸಂಕೇತ ಕಚೇರಿಯಿಂದ ಪ್ರಾರಂಭವಾಗಿದ್ದು ಮೆ.13 ರ ಫಲಿತಾಂಶವು ಇದೇ ಕಚೇರಿಯಲ್ಲಿ ನಡೆಯಬೇಕು ಎಂದು ಹೇಳಿದರು.

ಬಹಳಷ್ಟು ಜವಾಬ್ದಾರಿ ನನ್ನ ತಲೆ ಮೇಲಿದೆ

ರಾಜ್ಯದಲ್ಲಿರುವ ಬಿಜೆಪಿನ ಸರಕಾರ ಭ್ರಷ್ಠಾಚಾರದಿಂದ ತುಂಬಿ ತುಳುಕಿದೆ. ಬಿಜೆಪಿಯ ಎಲ್ಲಾ ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ.ಬಿಜೆಪಿ ಸರಕಾರದಲ್ಲಿ ಈಗಿರುವಷ್ಟು ಭ್ರಷ್ಟಾಚಾರ ಈ ಹಿಂದೆ ಯಾರಿಂದಲೂ ನಡೆದಿಲ್ಲ.ನಾನು ಹಣ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ. ಪಕ್ಷಕ್ಕಾಗಿ ದುಡಿಯುತ್ತೇನೆ. ಬಡವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಬಡವರಿಗೆ ದೊರೆಯಬೇಕಾದ 94 ಸಿಯನ್ನು ಮನೆ ಮನೆ ಹೋಗಿ ನ್ಯಾಯ ಒದಗಿಸುತ್ತೇನೆ. ಅದರಲ್ಲಿ ಯಾವುದೇ ರಾಜಿಯಿಲ್ಲ. ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲರಿಗೂ ಕಾನೂನು ಬದ್ಧವಾಗಿ ದೊರೆಯಬೇಕಾದ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಪ್ರಯತ್ನಿಸುತ್ತೇನೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುವುದೇ ನನ್ನ ಗುರಿಯಾಗಿದೆ ಎಂದ ಅವರು, ಪುತ್ತೂರಿನಲ್ಲಿ 14 ಮಂದಿ ಆಕಾಂಕ್ಷಿಗಳಿದ್ದರೂ ನನಗೆ ಅವಕಾಶ ದೊರೆತಿದೆ. ಬಹಳಷ್ಟು ಜವಾಬ್ದಾರಿ ನನ್ನ ತಲೆ ಮೇಲಿದ್ದು ನನ್ನ ಜವಾಬ್ದಾರಿ ಅರಿತು ಕೆಲಸ ಮಾಡುತ್ತೇನೆ ಎಂದರು.

.ಎ.19 - ನಾಮಪತ್ರ

ಮೇ.18 ರಂದು ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದು ಎ.19 ರಂದು ನಾಮಪತ್ರ ಸಲ್ಲಿಸಲಾಗುವುದು. ಬೆಳಿಗ್ಗೆ 9.30ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಲಿ ನಾಮಪತ್ರ ಸಲ್ಲಿಸಲಾಗುವುದು. ಮೆರವಣಿಗೆಯಲ್ಲಿ 25000ಮಂದಿ ಭಾಗವಹಿಸುವ ಮೂಲಕ ನಮ್ಮಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.ಜಿ.ಪಂ ಮಾಜಿ ಸದಸ್ಯ ಎಂ.ಎ ಮಹಮ್ಮದ್ ಮಾತನಾಡಿ ಶುಭ ಹಾರೈಸಿದರು .ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು..

ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆ

Posted by Vidyamaana on 2023-09-09 16:49:51 |

Share: | | | | |


ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆ

ಪುತ್ತೂರು : ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಪಿನ್ ಗೌಡ ಗೆಲುವು ಸಾಧಿಸಿದ್ದಾರೆ.

ಕಾರ್ಯದರ್ಶಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಮೃದ್ಧಿ ಶೆಣೈ ಗೆಲುವು ಸಾಧಿಸಿದ್ದು, ಜೊತೆ ಕಾರ್ಯದರ್ಶಿಯಾಗಿ ರಕ್ಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಫಿಲೋಮಿನಾ ಕಾಲೇಜು ಬಳಿ ಭೇಟಿ ನೀಡಿ ಗೆಲುವು ಸಾಧಿಸಿದ ಮೂವರು ವಿದ್ಯಾರ್ಥಿಗಳಿಗೆ ಅಭಿನಂದಿಸಿ, ವಿದ್ಯಾರ್ಥಿಗಳೊಂದಿಗೆ ರಕ್ಷಾಬಂಧನ ಆಚರಿಸಿದರು..

ಹಿರಿಯ ನಾಗರೀಕರಿಗೆ ಹಾಗೂ ಅಂಗವಿಕಲರಿಗೆ ನಡೆಯುವ ಮನೆ ಮತಧಾನದ ದಿನಾಂಕ ಬದಲು ಇಲ್ಲಿದೆ ಬದಲಾದ ದಿನಾಂಕ

Posted by Vidyamaana on 2024-04-13 13:43:08 |

Share: | | | | |


ಹಿರಿಯ ನಾಗರೀಕರಿಗೆ ಹಾಗೂ ಅಂಗವಿಕಲರಿಗೆ ನಡೆಯುವ ಮನೆ ಮತಧಾನದ ದಿನಾಂಕ ಬದಲು ಇಲ್ಲಿದೆ ಬದಲಾದ ದಿನಾಂಕ

ಪುತ್ತೂರು: ಹಿರಿಯ ನಾಗರೀಕರಿಗೆ ಹಾಗೂ ಅಂಗವಿಕಲರಿಗೆ ನಡೆಯುವ ಮನೆ ಮತಧಾನ ಪ್ರಕ್ರಿಯೆ ಏ.೧೪ರಂದು ಸೌರ ಯುಗಾದಿ (ವಿಷು ಹಬ್ಬ) ಇರುವ ಹಿನ್ನಲೆಯಲ್ಲಿ ಏ.೧೪ರ ಬದಲಾಗಿ ಏ.೧೫ರಂದು ಪ್ರಾರಂಭವಾಗಿ, ೧೭ರವರೆಗೆ ನಡೆಯಲಿದೆ. 

ಜಾರ್ಖಂಡ್ ನಲ್ಲಿ ಭಾರತ ಜೋಡೊ ನ್ಯಾಯ ಯಾತ್ರೆ ರದ್ದು

Posted by Vidyamaana on 2024-02-14 12:41:32 |

Share: | | | | |


ಜಾರ್ಖಂಡ್ ನಲ್ಲಿ ಭಾರತ ಜೋಡೊ ನ್ಯಾಯ ಯಾತ್ರೆ ರದ್ದು

ರಾಂಚಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ 2ನೇ ಹಂತದ ‘ಭಾರತ ಜೋಡೊ ನ್ಯಾಯ ಯಾತ್ರೆ’ಯನ್ನು ಜಾರ್ಖಂಡ್ ನಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ರೈತರು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ರಾಹುಲ್ ತೆರಳಿರುವುದರಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

‘ಮಂಗಳವಾರ ತಡರಾತ್ರಿ ಕೈಗೊಂಡ ನಿರ್ಧಾರದಂತೆ, ಜಾರ್ಖಂಡ್ ನಲ್ಲಿ ನಡೆಯಬೇಕಿದ್ದ ಭಾರತ್ ಜೋಡೊ ನ್ಯಾಯ ಯಾತ್ರೆಯ ಎಲ್ಲ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಕಾಂಗ್ರೆಸ್ ವಕ್ತಾರ ಸೋನಲ್ ಶಾಂತಿ ತಿಳಿಸಿದ್ದಾರೆ.

Recent News


Leave a Comment: