ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಬಳ್ಪದಲ್ಲಿ ನಡೆದ ಮನಕಲಕುವ ಘಟನೆ

Posted by Vidyamaana on 2023-05-08 15:58:55 |

Share: | | | | |


ಬಳ್ಪದಲ್ಲಿ ನಡೆದ ಮನಕಲಕುವ ಘಟನೆ


ಬಳ್ಪ :ಸಮೀಪದ  ಕೇನ್ಯ ಕಣ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು  ನೀರು ಪಾಲಾಗಿದ್ದು ಇಬ್ಬರ ಮೃತದೇಹವೂ ಪತ್ತೆಯಾಗಿದೆ.

ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ. ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾದರು.

ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದು, ರಾತ್ರಿ ವೇಳೆಗೆ ಇಬ್ಬರ ಮೃತದೇಹವೂ ಪತ್ತೆಯಾಯಿತು. ಸ್ಥಳೀಯರು ಕಾರ್ಯಾಚರಣೆಗೆ ಸಹಕರಿಸಿದರು.

ಶಾಸಕರ ಇಂದಿನ ಕಾರ್ಯಕ್ರಮ ಆ 22

Posted by Vidyamaana on 2023-08-22 02:05:43 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 22

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 22 ರಂದು

*ಶಾಸಕರಾದ ಅಶೋಕ್ ರೈ ಯವರ ನಾಳಿನ ಕಾರ್ಯಕ್ರಮ*


ದಿನಾಂಕ 22/8/2023 ಮಂಗಳವಾರ


ಬೆಳಿಗ್ಗೆ 10 ಗಂಟೆಗೆ ಸರಕಾರಿ ಅಧಿಕಾರಿಗಳ ಜೊತೆ ಸಭೆ

11 ಗಂಟೆಗೆ ಸರ್ವೆ ಕಲ್ಪನೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುವುದು

ಮಧ್ಯಾಹ್ನ 2 ಗಂಟೆಗೆ ಸರಕಾರಿ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಕತ್ತಿ ವಶಕ್ಕೆ

Posted by Vidyamaana on 2024-08-29 05:58:32 |

Share: | | | | |


ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಕತ್ತಿ ವಶಕ್ಕೆ

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಆ.26 ರಂದು ಐದು ದಿನ ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ಆ.28 ರಂದು ಮಧ್ಯಾಹ್ನ ಕಾಸರಗೋಡು ಮನೆಗೆ ತೆರಳಿದ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ

ನೇಜಾರು ಕೊಲೆ ಪ್ರಕರಣ ಶೌಚಾಲಯಕ್ಕೆ ಓಡಿ ಪ್ರಾಣ ಉಳಿಸಿಕೊಂಡ ಅತ್ತೆ

Posted by Vidyamaana on 2023-11-12 20:32:32 |

Share: | | | | |


ನೇಜಾರು ಕೊಲೆ ಪ್ರಕರಣ  ಶೌಚಾಲಯಕ್ಕೆ ಓಡಿ ಪ್ರಾಣ ಉಳಿಸಿಕೊಂಡ ಅತ್ತೆ

ಉಡುಪಿ : ದೀಪಾವಳಿ ವೇಳೆ ಉಡುಪಿ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದ, ಭಾನುವಾರ ನೇಜಾರುವಿನ ತೃಪ್ತಿ ನಗರದಲ್ಲಿ ನಡೆದ  ಮುಸ್ಲಿಂ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿದೆ.

ಘಟನೆ ಕುರಿತು ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉಡುಪಿ ಎಸ್ಪಿ ಡಾ.ಅರುಣ್, ಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಲೆ ಮಾಡಲಾಗಿದ್ದು, ಇನ್ನೊಬ್ಬರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಹಸೀನಾ ಮತ್ತವರ ಮೂವರು ಮಕ್ಕಳನ್ನು ಕೊಲೆ ಮಾಡಲಾಗಿದೆ. ನಾವು ತನಿಖೆ ಮಾಡಿ ಶೀಘ್ರ ಇದರ ಹಿಂದಿನ‌ ಕಾರಣ ಪತ್ತೆ ಹಚ್ಚುತ್ತೇವೆ. ಮನೆಯೊಳಗೆ ಯಾವುದೇ ಸೊತ್ತುಗಳು ಕಳವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಬೆಳಗ್ಗೆ ಹತ್ತು ಗಂಟೆ ಹೊತ್ತಿಗೆ ನಮಗೆ ಮಾಹಿತಿ ಬಂದಿದ್ದು, ಮಾಹಿತಿ ಬಂದ ತತ್ ಕ್ಷಣ ಬಂದು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದೇವೆ. ಕೊಲೆಗೆ ಏನು ಕಾರಣ ಎಂದು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

ರಿಕ್ಷಾದಲ್ಲಿ ಬಂದಿದ್ದ ಆರೋಪಿ

ಸಂತೆಕಟ್ಟೆಯಿಂದ ತೃಪ್ತಿ ನಗರಕ್ಕೆ ಆರೋಪಿ ರಿಕ್ಷಾದಲ್ಲಿ ಬಂದಿರುವುದು ಸ್ಪಷ್ಟವಾಗಿದೆ. ಸಂತೆಕಟ್ಟೆ ಸ್ಟಾಂಡ್ ನ ರಿಕ್ಷಾ ಚಾಲಕ ಶ್ಯಾಮ್ ಹೇಳಿಕೆ ನೀಡಿದ್ದು, ಆರೋಪಿ ಮನೆಯ ವಿಳಾಸವನ್ನು ಸರಿಯಾಗಿಯೇ ತಿಳಿಸಿದ್ದ. ದಾರಿ ತಪ್ಪಿದಾಗ ಆರೋಪಿಯೇ ಮನೆಯ ಗುರುತು ಹೇಳಿದ್ದ. ದೃಢಕಾಯದ ವ್ಯಕ್ತಿ, 45ರ ಆಸುಪಾಸಿನ ವಯಸಿನವನಾಗಿದ್ದಾನೆ. ಬ್ರೌನ್ ಕಲರ್ ಅಂಗಿ ಧರಿಸಿದ್ದು, ಬಿಳಿ ಬಣ್ಣದ ಮಾಸ್ಕ್ ಹಾಕಿಕೊಂಡಿದ್ದ. ಮನೆಯಲ್ಲಿ ಬಿಟ್ಟು ಹೋಗಿ 15 ನಿಮಿಷಕ್ಕೆ ಮತ್ತೆ ಸಂತೆಕಟ್ಟೆ ಸ್ಟ್ಯಾಂಡ್ ಗೆ ಬಂದಿದ್ದ. ಗಡಿಬಿಡಿ ಅಲ್ಲಿ ತನ್ನನ್ನು ಕರೆದುಕೊಂಡು ಹೋಗುವಂತೆ ರಿಕ್ಷಾ ಚಾಲಕರಿಗೆ ಕೇಳಿಕೊಂಡಿದ್ದ. ಘಟನಾ ಸ್ಥಳದಿಂದ ದ್ವಿಚಕ್ರ ವಾಹನದಲ್ಲಿ ಆಟೋ ಸ್ಟಾಂಡ್ ತಲುಪಿದ್ದ ಎನ್ನುವುದು ಸ್ಪಷ್ಟವಾಗಿದೆ.ಆರೋಪಿ ಬೆಂಗಳೂರು ಭಾಗದ ಶೈಲಿಯ ಕನ್ನಡ ಮಾತನಾಡುತ್ತಿದ್ದು, ಮೇಲ್ನೋಟಕ್ಕೆ ಪರಿಚಯದವನೇ ಆಗಿದ್ದು ಆತನಿಂದಲೇ ಕೃತ್ಯ ನಡೆದಿರುವ ಸಾಧ್ಯತೆ ಇದೆ.

ಸ್ಥಳಕ್ಕೆ ಶಾಸಕ ಭೇಟಿ

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿದ್ದು, ”ಘಟನೆಯ ಬಗ್ಗೆ ಪೊಲೀಸರ ಜೊತೆ ಮಾತನಾಡಿದ್ದೇನೆ. ಕೌಟುಂಬಿಕ ವಿಚಾರ ಹಿನ್ನೆಲೆಯಲ್ಲಿ ಕೃತ್ಯ ಆಗಿರಬಹುದು ಎಂದು ಅನ್ನಿಸುತ್ತಿದೆ. ಉಡುಪಿ ಎಸ್ಪಿ ಡಾ. ಅರುಣ್ ಈಗಾಗಲೇ ತಂಡವನ್ನು ರಚನೆ ಮಾಡಿದ್ದಾರೆ. ಆರೋಪಿಯನ್ನ ಪತ್ತೆಹಚ್ಚಲು ಈಗಾಗಲೇ ಪೊಲೀಸರು ಬೆನ್ನುಬಿದ್ದಿದ್ದಾರೆ. ಈ ಕೃತ್ಯ ಬಹಳ ಬೇಸರ ತರಿಸುವಂತದ್ದು,ದೀಪಾವಳಿ ಈ ಸಂದರ್ಭದಲ್ಲಿ ಘಟನೆ ಎಲ್ಲರ ದುಃಖಕ್ಕೆ ಕಾರಣವಾಗಿದೆ.ಕುಟುಂಬದ ಬಗ್ಗೆ ಮಾಹಿತಿ ಇದ್ದೇ ಈ ಕೃತ್ಯ ಎಸಗಿರುವ ಬಗ್ಗೆ ಶಂಕೆ ಇದೆ” ಎಂದು ಹೇಳಿದ್ದಾರೆ.


ಹತ್ಯೆಗೀಡಾದ ಯುವತಿ ಅಫ್ನಾನ್(23) ಬೆಂಗಳೂರು ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ರಾತ್ರಿಯಷ್ಟೇ ರಜೆಯಲ್ಲಿ ಉಡುಪಿಗೆ ಬಂದಿದ್ದರು. ಮನೆಯ ಯಜಮಾನ ನೂರ್ ಮಹಮ್ಮದ್ ಸೌದಿ ಅರೇಬಿಯಾದಲ್ಲಿ ಉದ್ಯೋಗಿಯಾಗಿದ್ದಾರೆ. ತಾಯಿ ಹಸೀನಾ(46)ಗೃಹಿಣಿಯಾಗಿದ್ದರು. ಅಯ್ನಾಝ್(21) ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದು, ಆಸಿಂ(12) ಉಡುಪಿಯಲ್ಲಿ 8ನೇ ತರಗತಿ ಓದುತ್ತಿದ್ದ.


ಏಕಾಏಕಿ ಮನೆಗೆ ನುಗ್ಗಿ ಮಾತಿನ ಚಕಮಕಿ ನಡೆಸಿದ ದುಷ್ಕರ್ಮಿ ಹಸೀನಾ, ಅಫ್ನಾನ್,ಅಯ್ನಾಝ್ ಗೆ ಮೊದಲು ಇರಿದಿದ್ದಾನೆ. ಬೊಬ್ಬೆ ಕೇಳಿ ಆಟವಾಡುತ್ತಿದ್ದ ಆಸೀಮ್ ಒಳ ಬರುತ್ತಿದ್ದಂತೆ ಆತನನ್ನೂ ಇರಿದು ಕೊಲ್ಲಲಾಗಿದೆ. ಸ್ಥಳಕ್ಕೆ ಬಂದ ಪಕ್ಕದ ಮನೆ ಯುವತಿಯನ್ನೂ ಬೆದರಿಸಿದ ದುಷ್ಕರ್ಮಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮನೆಯೊಳಗಿದ್ದ ಅತ್ತೆಗೂ ತೀವ್ರ ತರದ ಗಾಯವಾಗಿದೆ. ಒಬ್ಬರ ಮೇಲೆ ದ್ವೇಷದಿಂದ ಸಾಕ್ಷ್ಯ ನಾಶ ಮಾಡಲು ಉಳಿದ ಮೂವರ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಲ್ಪೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದ್ದು, ಪೊಲೀಸರು ನಾಲ್ಕು ತಂಡಗಳು ಸಿಸಿಟಿವಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣ, ದ. ಕನ್ನಡ ಪ್ರಥಮ

Posted by Vidyamaana on 2023-04-21 05:11:29 |

Share: | | | | |


ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣ, ದ. ಕನ್ನಡ ಪ್ರಥಮ

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9ರಿಂದ 29ರವರೆಗೆ ನಡೆದಿತ್ತು.

ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಈ ಬಾರಿ ಒಂದು ಬದಲಾವಣೆ ಮಾಡಲಾಗಿದ್ದು, ಮರು ಮೌಲ್ಯಮಾಪನದಲ್ಲಿ ಕನಿಷ್ಠ ಒಂದು ಮಾರ್ಕ್ ಬದಲಾವಣೆಯಾದರೂ ಅದನ್ನು ಮಾರ್ಕ್ ಕಾರ್ಡ್ ನಲ್ಲಿ ಅಳವಡಿಸಲಾಗುವುದುhttps://karresults.nic.in ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸಬಹುದು.

ಡಿವೈಡರ್ ಗೆ ಡಿಕ್ಕಿಯಾಗಿ ಅಪ್ಪಚ್ಚಿಯಾದ ಕಾರು - ಹಾರಿ ಹೋಯ್ತು ಯುವಕನ ಪ್ರಾಣ

Posted by Vidyamaana on 2024-03-23 14:29:07 |

Share: | | | | |


ಡಿವೈಡರ್ ಗೆ ಡಿಕ್ಕಿಯಾಗಿ ಅಪ್ಪಚ್ಚಿಯಾದ ಕಾರು - ಹಾರಿ ಹೋಯ್ತು ಯುವಕನ ಪ್ರಾಣ

ಮಂಗಳೂರು, ಮಾ.23: ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪ್ಪಚ್ವಿಯಾದ ಘಟನೆ ನಂತೂರಿನಲ್ಲಿ ತಡರಾತ್ರಿ ಸಂಭವಿಸಿದ್ದು ಭೀಕರ ರಸ್ತೆ ಅಪಘಾತಕ್ಕೆ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿಯಾಗಿದ್ದಾನೆ.


ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಸಾವನ್ನಪ್ಪಿರುವ ಯುವಕ. ಶಮಿತ್ ನಿನ್ನೆ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಯಾವುದೆಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಲಲಿತಾ ಸುಂದರ್ ಅವರು ಬಿಜೆಪಿಯ ಹಿರಿಯ ನಾಯಕಿಯಾಗಿದ್ದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಆಶೀರ್ವಾದ್ ಕಾಂಪ್ಲೆಕ್ಸ್ ಹೆಸರಿನ ಬೃಹತ್ ವಾಣಿಜ್ಯ ಕಟ್ಟಡ ಮತ್ತು ಹೊಟೇಲ್ ಹೊಂದಿದ್ದಾರೆ. ಲಲಿತಾ ಅವರ ಏಕೈಕ ಮಗ ಸಂತೋಷ್ ಯಾನೆ ಸಂತು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಮೊಮ್ಮಗ ಶಮಿತ್ ಬಾಲ್ಯದಿಂದಲೇ ತಾಯಿ, ಅಜ್ಜಿಯ ಆರೈಕೆಯಲ್ಲಿ ಬೆಳೆದಿದ್ದ. ಶಮಿತ್  ಮದುವೆ ಮಾಡಲು ವಧುವಿನ ಅನ್ವೇಷಣೆಯನ್ನೂ ಪೋಷಕರು ನಡೆಸುತ್ತಿದ್ದರು.


ಲಲಿತಾ ಸುಂದರ್ ಅವರು ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ನ ಕೊರಗಜ್ಜ ಸೇವಾ ಸಮಿತಿಯ ಗೌರವಾಧ್ಯಕ್ಷೆ ಆಗಿದ್ದು ಕುಟುಂಬವು ಕಳೆದ ಎರಡು ವರುಷದ ಹಿಂದೆ ಕೊರಗಜ್ಜನಿಗೆ ಬೆಳ್ಳಿಯ ಮುಟ್ಟಾಲೆ, ದಂಟೆಯನ್ನ ಹರಕೆ ರೂಪದಲ್ಲಿ ಸಮರ್ಪಿಸಿತ್ತು. ಶಮಿತ್ ಅವರ ಅಕಾಲಿಕ ಅಗಲಿಕೆಗೆ ಬಿಜೆಪಿ ಜಿಲ್ಲಾ ಮತ್ತು ಮಂಗಳೂರು ಮಂಡಲದ ನಾಯಕರು ಶೋಕ ವ್ಯಕ್ತ ಪಡಿಸಿದ್ದಾರೆ. ಮೃತ ಶಮಿತ್ ತಾಯಿ, ಸಹೋದರಿ, ಅಜ್ಜಿಯನ್ನು ಅಗಲಿದ್ದಾರೆ.

Recent News


Leave a Comment: