ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣದ ಬಗ್ಗೆ ಕೊನೆಗೂ ಮೌನ ಮುರಿದ ಮೋದಿ, ಹೇಳಿದ್ದೇನು?

Posted by Vidyamaana on 2024-05-07 06:51:24 |

Share: | | | | |


ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣದ ಬಗ್ಗೆ ಕೊನೆಗೂ ಮೌನ ಮುರಿದ ಮೋದಿ, ಹೇಳಿದ್ದೇನು?

ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ ಎಂದು ಸೋಮವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಜೆಡಿಎಸ್ ಸಂಸದ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದಾರೆ.

ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

Posted by Vidyamaana on 2023-07-10 07:10:00 |

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

ನೆಲ್ಯಾಡಿ : ಚತುಷ್ಪಥ ಕಾಮಗಾರಿ ಹಿನ್ನಲೆ ಅಳವಡಿಸಿದ ಡಿವೈಡರ್ ಗೆ ಕಾರು ಢಿಕ್ಕಿ – ಮಹಿಳೆ ಮೃತ್ಯು, ಪುತ್ರ ಹಾಗೂ ಪತಿ ಗಂಭೀರ

Posted by Vidyamaana on 2023-03-30 06:23:29 |

Share: | | | | |


ನೆಲ್ಯಾಡಿ : ಚತುಷ್ಪಥ ಕಾಮಗಾರಿ ಹಿನ್ನಲೆ ಅಳವಡಿಸಿದ ಡಿವೈಡರ್ ಗೆ ಕಾರು ಢಿಕ್ಕಿ – ಮಹಿಳೆ ಮೃತ್ಯು, ಪುತ್ರ ಹಾಗೂ ಪತಿ ಗಂಭೀರ

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ನೆಲ್ಯಾಡಿ ಸಮೀಪದ ಜ್ಞಾನೋದಯ ಬೆಥನಿ ಕಾಲೇಜು ಸಮೀಪ ಕರ್ಬಸಂಕ ಎಂಬಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಪತಿ ಮತ್ತು ಪುತ್ರ ಗಂಭೀರ ಗಾಯಗೊಂಡ ಘಟನೆ ಮಾ.30ರಂದು ಬೆಳಿಗ್ಗೆ ನಡೆದಿದೆ.ಅನ್ನಪೂರ್ಣ(50ವ.) ಮೃತ ಮಹಿಳೆ. ಇವರ ಪುತ್ರ ಅಶ್ವಿನ್(25ವ)ಹಾಗೂ ಪತಿ ಭಾಸ್ಕರ(56)ಗಂಭೀರ ವಾಗಿ ಗಾಯಗೊಂಡವರು. ಕಾರನ್ನು ಅಶ್ವಿನ್ ಚಲಾಯಿಯಿಸುತ್ತಿದ್ದು ಕಾರು ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಚಲಿಸುತಿತ್ತು ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆಕರೆದುಕೊಂಡು ಹೋಗಲಾಗಿದೆ.

ಅಪಘಾತವು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ  ರಸ್ತೆ ಹಾಗೂ ಸೇತುವೆ ಕಾಮಾಗಾರಿ ನಡೆಯುತ್ತಿರುವ ಹಿನ್ನಲೆ ಡಿವೈಡರ್ ಆಳವಡಿಸಲಾಗಿದೆ. ಇದಕ್ಕೆ ಚಾಲಕ ಢಿಕ್ಕಿ ಹೊಡೆದಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ರವಿ ಬಿ.ಎಸ್., ಸಬ್ ಇನ್ಸೆಕ್ಟರ್ ರಾಜೇಶ್ ಕೆ.ವಿ., ನೆಲ್ಯಾಡಿ ಹೊರಠಾಣೆಯ ಹೆಡ್‌ಕಾನ್‌ಸ್ಟೇಬಲ್ ಬಾಲಕೃಷ್ಣ, ಕುಶಾಲಪ್ಪ ನಾಯ್ಕರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಮನೆಯಲ್ಲಿದ್ದ ಮಹಿಳೆ ಬೆತ್ತಲೆ ಶವವಾಗಿ ಪತ್ತೆ

Posted by Vidyamaana on 2024-04-20 20:38:39 |

Share: | | | | |


ಬೆಂಗಳೂರು: ಮನೆಯಲ್ಲಿದ್ದ ಮಹಿಳೆ ಬೆತ್ತಲೆ ಶವವಾಗಿ ಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಘಟನೆ ನಡೆದಿದೆ.ಕೊಲೆಯಾದ ಮಹಿಳೆಯನ್ನು ಶೋಭಾ ಎಂದು ಗುರುತಿಸಲಾಗಿದೆ.

ಶೋಭಾ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿ ಕೊಟ್ಟಿದದ್ದ ಶೋಭಾ,ಭದ್ರಪ್ಪ ಲೇಔಟ್ ಮನೆಯಲ್ಲಿ ಕುಟುಂಬ ಸಮೇತ ವಾಸವಿದ್ದರು. ಮನೆಯಲ್ಲಿ ಆಗಾಗ್ಗೆ ಒಬ್ಬರೇ ಇರುತ್ತಿದ್ದರು

ಪುತ್ತೂರು : ವಿವಾಹ ನಿರಾಕರಿಸಿದ ವಿಚ್ಛೇದಿತೆಗೆ ಕಿರುಕುಳ: ಉಡುಪಿ ಮೂಲದ ಪ್ರಶಾಂತ್ ಕೋಟ್ಯಾನ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2024-03-20 16:20:44 |

Share: | | | | |


ಪುತ್ತೂರು : ವಿವಾಹ ನಿರಾಕರಿಸಿದ ವಿಚ್ಛೇದಿತೆಗೆ ಕಿರುಕುಳ: ಉಡುಪಿ ಮೂಲದ ಪ್ರಶಾಂತ್ ಕೋಟ್ಯಾನ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು : ಮಾ 20: ವಿವಾಹ ನಿರಾಕರಿಸಿದಕ್ಕಾಗಿ ಉಡುಪಿಯ ವ್ಯಕ್ತಿಯೊಬ್ಬ ವಿಚ್ಚೇದಿತ ಮಹಿಳೆಯ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದು ಹಾಗೂ ಕೊಲ್ಲುವುದಾಗಿ ಬೆದರಿಸಿರುವ ಬಗ್ಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂತ್ರಸ್ತ ಮಹಿಳೆಗೆ 7 ವರ್ಷದ ಹಿಂದೆ ಮದುವೆಯಾಗಿ ವಿಚ್ಛೇದನವಾಗಿರುತ್ತದೆ. ಸದ್ಯ ಆಕೆ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸ್ತವ್ಯವಿದ್ದಾರೆ. ಆಕೆಗೆ 2022ರಲ್ಲಿ ಮೇಟ್ರಿಮೋನಿಯೊಂದರ ಮೂಲಕ ಪ್ರಶಾಂತ್ ಕೋಟ್ಯಾನ್ ಉಡುಪಿ ಎಂಬಾತನ ಪರಿಚಯವಾಗುತ್ತದೆ. ಬಳಿಕ ಅವರಿಬ್ಬರು ವಿವಾಹವಾಗುವ ನಿರ್ಧಾರಕ್ಕೆ ಬರುತ್ತಾರೆ. ಈ ವೇಳೆ ಪ್ರಶಾಂತ್‌ ಪೂರ್ವಾಪರವನ್ನು ಸಂತ್ರಸ್ತೆಯ ಮನೆಯವರು ವಿಚಾರಿಸಿದಾಗ ಉತ್ತಮ ಅಭಿಪ್ರಾಯ ಕಂಡುಬಾರದ ಹಿನ್ನೆಲೆಯಲ್ಲಿ ಮದುವೆ ಮಾತುಕತೆ ಮುರಿದು ಬೀಳುತ್ತದೆ.


ಇದರಿಂದ ಅಸಮಧಾನಗೊಂಡ ಆರೋಪಿಯು ಸಂತ್ರಸ್ತೆಗೆ ಕರೆಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಫೋಟೋ ಗಳನ್ನು ಹಾಕುವುದಾಗಿ ಹಾಗೂ ಕೊಲೆ ಮಾಡುವುದಾಗಿ ಜೀವಬೆದರಿಕೆ ಒಡ್ಡಿರುತ್ತಾನೆ . ಅಷ್ಟು ಮಾತ್ರವಲ್ಲದೇ, ಆ ಮಹಿಳೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುತ್ತಾನೆ.ಈ ಕುರಿತು ಮಹಿಳೆಯು ನೀಡಿದ ದೂರಿನ ಮೇರೆಗೆ ಐಪಿಸಿ ಕಲಂ 354(D),506 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

ಉಡುಪಿ ತಾಯಿ ಮಕ್ಕಳ ಹತ್ಯೆ: ತ್ವರಿತಗತಿ ನ್ಯಾಯಾಲಯಕ್ಕೆ ವರ್ಗಾಯಿಸಿ ವಿಚಾರಣೆ ನಡೆಸಲು ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ಸಚಿವರಿಗೆ ಮನವಿ

Posted by Vidyamaana on 2023-12-01 10:40:43 |

Share: | | | | |


ಉಡುಪಿ ತಾಯಿ ಮಕ್ಕಳ ಹತ್ಯೆ: ತ್ವರಿತಗತಿ ನ್ಯಾಯಾಲಯಕ್ಕೆ ವರ್ಗಾಯಿಸಿ ವಿಚಾರಣೆ ನಡೆಸಲು ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ಸಚಿವರಿಗೆ ಮನವಿ

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂರು ಮಕ್ಕಳ ಬರ್ಬರ ಕೊಲೆ ಪ್ರಕರಣವನ್ನು ತ್ವರಿತಗತಿ ನ್ಯಾಯಾಲಯಕ್ಕೆ ವರ್ಗಾಯಿಸಿ ವಿಚಾರಣೆ ನಡೆಸಬೇಕು. ಹಂತಕನಿಗೆ ಗರಿಷ್ಠ ಪ್ರಮಾಣದ ಕಠಿಣ ಶಿಕ್ಷೆಯಾಗಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆಯ ನಿಯೋಗ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮೂಲಕ ಕಾನೂನು ಸಚಿವರಿಗೆ ಮನವಿ ಸಲ್ಲಿಸಿದೆ. ಇದೇ ಸಮಯದಲ್ಲಿ ಬಳಿಕ ಆರೋಪಿಯನ್ನು ಕೃತ್ಯ ನಡೆದ 2 ದಿನಗಳಲ್ಲಿ ಬಂಧಿಸಿದ ಪೊಲೀಸರ ಶ್ರಮ ಶ್ಲಾಘಿಸಿದ ವೇದಿಕೆ, ಎಸ್‌ಪಿ ಅರುಣ್ ಕುಮಾರ್ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದೆ. ಬಳಿಕ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದ ನಿಯೋಗ ಅವರಿಗೆ ಸಾಂತ್ವನ ಹೇಳಿದೆ.


ಮುಸ್ಲಿಂ ಸಾಹಿತಿಗಳು ಲೇಖಕರು, ಚಿಂತಕರ ವೇದಿಕೆಯಾದ ಮುಸ್ಲಿಂ ಬಾಂಧವ್ಯ ವೇದಿಕೆಯ ನಿಯೋಗದಲ್ಲಿ ವೇದಿಕೆಯ ಗೌರವಾಧ್ಯಕ್ಷ ಎಸ್.ಬಿ.ದಾರಿಮಿ, ಪ್ರಧಾನ ಕಾರ್ಯದರ್ಶಿ ಮುಷ್ತಾಕ್ ಹೆನ್ನಾಬೈಲ್, ಝಮೀರ್ ಅಹ್ಮದ್ ರಶಾದಿ, ಇಬ್ರಾಹಿಂ ಸಾಹೇಬ್ ಕೋಟ, ಮುಹಮ್ಮದ್ ಇರ್ಫಾನಿ, ನಜೀರ್ ಬೆಳವಾಯಿ, ಅಶ್ರಫ್ ಕುಂದಾಪುರ, ಇಕ್ಬಾಲ್ ಹಾಲಾಡಿ, ರಫೀಕ್ ನಾಗೂರು, ಅಬ್ದುಲ್ ರೌಫ್, ತೌಫೀಕ್ ಗಂಗೊಳ್ಳಿ, ಅಸ್ಲಮ್ ಹೈಕಾಡಿ, ಉಸ್ಮಾನ್ ಹೈಕಾಡಿ, ಆರ್.ಎ.ಲೋಹಾನಿ, ಮುಹಮ್ಮದ್ ಮುಹಸೀನ್ ಇದ್ದರು.

Recent News


Leave a Comment: