KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ತಲೆಗೆ 50 ಬಾರಿ ಸುತ್ತಿಗೆಯಿಂದ ಬಡಿದು ಕೊಲೆ

Posted by Vidyamaana on 2024-01-31 15:19:04 |

Share: | | | | |


ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ತಲೆಗೆ 50 ಬಾರಿ ಸುತ್ತಿಗೆಯಿಂದ ಬಡಿದು ಕೊಲೆ

ಅಮೆರಿಕ: ಅಂಗಡಿಯಲ್ಲಿ ಪಾರ್ಟ್ ಟೈಂ ಕೆಲಸ ಮಾಡಿ, ಶಿಕ್ಷಣ ಪಡೆಯುತ್ತಿದ್ದ ಭಾರತದ ವಿದ್ಯಾರ್ಥಿಯನ್ನ, ಅಮೆರಿಕದ ನಿವಾಸಿ ಕೊಂದಿರುವ ಘಟನೆ ನಡೆದಿದೆ.ಮೃತ ವಿದ್ಯಾರ್ಥಿ ವಿವೇಕ್ ಸೈನಿ(25) ಎಂದು ಗುರುತಿಸಲಾಗಿದ್ದು, ಈತ ಹರ್ಯಾಣಾದ ಪಂಚಕುಲದ ನಿವಾಸಿಯಾಗಿದ್ದ.ಅಮೆರಿಕದ ಜಾರ್ಜಿಯಾದಲ್ಲಿ, ಶಿಕ್ಷಣ ಪಡೆಯುತ್ತ, ಅಂಗಡಿಯೊಂದರಲ್ಲಿ ಪಾಾರ್ಟ್‌ ಟೈಮ್ ಕೆಲಸ ಮಾಡುತ್ತಿದ್ದ. ಈತನನ್ನು ಕೊಂದ ವ್ಯಕ್ತಿ ಜೂಲಿಯನ್ ಫಾಕ್ನರ್ ಎಂದು ಗುರುತಿಸಲಾಗಿದ್ದು, ಈತ ಮಾದಕ ವ್ಯಸನಿಯಾಗಿದ್ದ.


ಕೆಲ ದಿನಗಳಿಂದ ವಿವೇಕ್ ಕೆಲಸ ಮಾಡುತ್ತಿದ್ದ ಅಂಗಡಿಗೆ ಬಂದು, ವಿವೇಕ್ ಜೊತೆ ಫ್ರೆಂಡ್ಲಿಯಾಗಿದ್ದ. ಅಲ್ಲದೇ, ಪ್ರತಿದಿನ ಫ್ರೀಯಾಗಿ ಸಾಮಾನುಗಳನ್ನು ತೆಗೆದುಕೊಂಡು ಹೋಗುತ್ತಿದ್ದ. ಆದರೆ ಕೆಲ ದಿನಗಳ ಹಿಂದೆ ವಿವೇಕ್, ತಾನು ಇನ್ನು ಫ್ರೀಯಾಗಿ ಇದನ್ನೆಲ್ಲ ಕೊಡಲಾಗುವುದಿಲ್ಲ. ಇದುವರೆಗೆ ತೆಗೆದುಕೊಂಡು ಹೋದ ವಸ್ತುಗಳ ದುಡ್ಡನ್ನು ಹಿಂದಿರುಗಿಸು ಎಂದಿದ್ದಾನೆ.


ಈ ಕಾರಣಕ್ಕೆ ಕೋಪಗೊಂಡಿದ್ದ ಜೂಲಿಯನ್, ಸುತ್ತಿಗೆ ತಂದು, ವಿವೇಕ್ ಮೇಲೆ ಏಕಾಏಕಿ ದಾಳಿ ಮಾಡಿದ್ದಾನೆ. ಅಲ್ಲದೇ, 50 ಬಾರಿ ತಲೆಗೆ ಹೊಡೆದಿದ್ದಾನೆ. ಹೊಡೆದ ಪೆಟ್ಟಿಗೆ ವಿವೇಕ್ ಸಾವನ್ನಪ್ಪಿದ್ದಾನೆ.ಇನ್ನು ಆರೋಪಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಮೃತನ ಕುಟುಂಬಸ್ಥರು, ಮೃತದೇಹವನ್ನು ಭಾರತಕ್ಕೆ ತರಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

Posted by Vidyamaana on 2024-04-16 13:37:56 |

Share: | | | | |


ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು.

ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ರೋಡ್ ಶೋ ಆರಂಭಿಸಿದರು. ಪುತ್ತೂರು ಪೇಡೆಯಾದ್ಯಂತ ಸಂಚರಿಸಿದ ರೋಡ್ ಶೋ, ವಿಟ್ಲ ಬಸ್ ನಿಲ್ದಾಣದಲ್ಲಿ ಸಮಾಪನಗೊಂಡಿತು. ಬಳಿಕ ವಿಟ್ಲ ಸಂತೆ ಮಾರುಕಟ್ಟೆಗೆ ತೆರಳಿ ಮತ ಯಾಚನೆ ನಡೆಸಿದರು.

ರೋಡ್ ಶೋ ಉದ್ದಕ್ಕೂ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಅಭ್ಯರ್ಥಿಗೆ ಸಾಥ್ ನೀಡಿದರು.



ಏ.9 -ಜೈನ ಭವನದಲ್ಲಿ ಬಿಜೆಪಿ ಮಹಿಳಾ ಸಮಾವೇಶ

Posted by Vidyamaana on 2024-04-07 18:00:09 |

Share: | | | | |


ಏ.9 -ಜೈನ ಭವನದಲ್ಲಿ ಬಿಜೆಪಿ ಮಹಿಳಾ ಸಮಾವೇಶ

ಪುತ್ತೂರು: ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್‍ ತಿಳಿಸಿದ್ದಾರೆ.


ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪ್ರಧಾನಿಯವರ ಯೋಜನೆ ಕುರಿತು ತಿಳಿಸಲು ಮನೆ ಮನೆ ಭೇಟಿ, ಪ್ರತೀ ಬೂತ್‍ಗಳಲ್ಲಿ ಮಹಿಳಾ ಸಭೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತ್ರಿವಳಿ ತಲಾಖ್, ಮಹಿಳಾ ಮೀಸಲಾತಿ, ಮಹಿಳಾ ದೌರ್ಜನ್ಯಕ್ಕೆ ಕಠಿಣ ಶಿಕ್ಷೆ, ಉಜ್ವಲ ಯೋಜನೆ, ಮನೆ ನಿರ್ಮಾಣ ಮುಂತಾದ ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿಯವರು ಕಾನೂನಾತ್ಮಕವಾಗಿ ಒತ್ತು ನೀಡಿದ್ದಾರೆ ಎಂದು ತಿಳಿಸಿದರು. 

ಅಂಚೆ ಮತ ಎಣಿಕೆ: ಅಶೋಕ್ ಕುಮಾರ್ ರೈ ಮುನ್ನಡೆ

Posted by Vidyamaana on 2023-05-13 02:57:54 |

Share: | | | | |


ಅಂಚೆ ಮತ ಎಣಿಕೆ: ಅಶೋಕ್ ಕುಮಾರ್ ರೈ ಮುನ್ನಡೆ

ಪುತ್ತೂರು: ಮತಗಟ್ಟೆ ಕೊಠಡಿಯ ಬೀಗ ಮರೆತು ಬಂದದ್ದರಿಂದ ಮತಗಟ್ಟೆ ಕೊಠಡಿಯ ಬೀಗವನ್ನು ಒಡೆದು ಒಳಪ್ರವೇಶಿಸಿದ ವಿಲಕ್ಷಣ ಘಟನೆಗೆ ಮಂಗಳೂರು ಸಾಕ್ಷಿಯಾಯಿತು ಎಂದು ತಿಳಿದುಬಂದಿದೆ,


ಬಳಿಕ ನಡೆದ ಮತ ಎಣಿಕೆಯ ಆರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಕಾಯ್ದುಕೊಂಡರೆ, ನಂತರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ.


ಸುರತ್ಕಲ್ ಎನ್.ಐ.ಟಿ.ಕೆ. ಆವರಣದಲ್ಲಿ ನಡೆಯುತ್ತಿರುವ ಮತ ಎಣಿಕೆಗಾಗಿ ಎಲ್ಲರೂ ಬಂದು ಸೇರಿದ್ದರು. ಅಷ್ಟರಲ್ಲಿ ಅಧಿಕಾರಿಯೋರ್ವರು ಕೀ ಮರೆತು ಬಂದಿರುವುದು ಬೆಳಕಿಗೆ ಬಂದಿತು. ಪುನಃ ಹಿಂದಿರುಗಿ ಕೀ ತರುವಷ್ಟು ಸಮಯ ಇಲ್ಲದೇ ಇರುವುದರಿಂದ ಬಾಗಿಲಿನ ಕೀಯನ್ನು ಮುರಿದು ಒಳಪ್ರವೇಶಿಸಲಾಯಿತು. ಬಳಿಕ ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು ಎಂದು ಹೇಳಲಾಗಿದೆ. ಬಳಿಕ ನಡೆದ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್  ಅಭ್ಯರ್ಥಿ ಅಶೋಕ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಂತೂ ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಕಾರ್ಯಕ್ಷಮತೆ ಮೆರೆದರು.

ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ

Posted by Vidyamaana on 2024-07-02 10:10:36 |

Share: | | | | |


ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ

ಬೆಂಗಳೂರು, ಜುಲೈ 1: ನಾಪತ್ತೆಯಾಗಿದ್ದ ಕಾನ್ಸ್‌ಟೇಬಲ್‌ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಕಳೆದ ಜೂ.26ರಂದು ನಾಪತ್ತೆ ಆಗಿದ್ದರು.

2020ರಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದ ಕಾನ್ಸ್‌ಟೇಬಲ್‌ ಶಿವರಾಜ್‌ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಆದರೆ ಕಳೆದ 26ರಂದು ಶಿವರಾಜ್‌ ಯಾರ ಸಂಪರ್ಕಕ್ಕೂ ಸಿಗದೆ ಏಕಾಏಕಿ ನಾಪತ್ತೆ ಆಗಿದ್ದರು. ಹೀಗಾಗಿ ಶಿವರಾಜ್‌ ಸಹೋದರ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದೂರು ನೀಡಿದ್ದರು. ಸಹೋದರ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದರು.

ಮಂಗಳೂರು: ವಿಷಾಹಾರ ಸೇವನೆ : 100ಕ್ಕೂ ಅಧಿಕ ಸಿಟಿ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

Posted by Vidyamaana on 2023-02-06 23:17:30 |

Share: | | | | |


ಮಂಗಳೂರು: ವಿಷಾಹಾರ ಸೇವನೆ : 100ಕ್ಕೂ ಅಧಿಕ ಸಿಟಿ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100ಕ್ಕೂ ಅಧಿಕ ವಿದ್ಯಾರ್ಥಿನಿಯರು

ತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕೆಲವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.ವಿಷಾಹಾರ ಸೇವನೆಯ ವಿದ್ಯಾರ್ಥಿನಿಯರನ್ನು ದಾಖಲು ಮಾಡಿದ ಸಿಟಿ ಆಸ್ಪತ್ರೆ ಬಳಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್,

ಡಿಸಿಪಿಗಳು ಮತ್ತಿತರ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು ವಿಚಾರಣೆ ಮಾಡುತ್ತಿದ್ದಾರೆ. ವಿಷಾಹಾರ ಸೇವನೆಯ ಕಾರಣ ಇನ್ನು ಕೂಡ ಸ್ಪಷ್ಟವಾಗಿಲ್ಲ ಈ ಬಗ್ಗೆ ಪೊಲೀಸರು ವಿವಿಧ ತಜ್ಞರೊಂದಿಗೆತನಿಖೆ ಆರಂಭಿಸಿದ್ದಾರೆ.

Recent News


Leave a Comment: