ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


ತುಮಕೂರಿನಲ್ಲಿ ಭೀಕರವಾಗಿ ಹತ್ಯೆಯಾದ ದುರ್ದೈವಿಗಳ ಮನೆಗಳಿಗೆ ಇನಾಯತ್ ಅಲಿ ಭೇಟಿ

Posted by Vidyamaana on 2024-03-24 21:08:22 |

Share: | | | | |


ತುಮಕೂರಿನಲ್ಲಿ ಭೀಕರವಾಗಿ ಹತ್ಯೆಯಾದ ದುರ್ದೈವಿಗಳ ಮನೆಗಳಿಗೆ ಇನಾಯತ್ ಅಲಿ ಭೇಟಿ

ಬೆಳ್ತಂಗಡಿ: ಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಇನಾಯತ್ ಅಲಿ, ಘಟನೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಲ್ಲಿ ಹಾಗೂ ಗೃಹ ಸಚಿವರಲ್ಲಿ ಮಾತನಾಡಿದ್ದೇನೆ. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿಯೂ ಮನವಿ ಮಾಡಿದ್ದೇನೆ. ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕಳೆದುಕೊಂಡು ತೀವ್ರ ಆಘಾತಕ್ಕೊಳಕ್ಕಾಗಿರುವ ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಒದಗಿಸುವಂತೆಯೂ ಮುಖ್ಯಮಂತ್ರಿಗಳಲ್ಲಿ ಕೋರಿದ್ದೇನೆಂದು ಎಂದು ತಿಳಿಸಿದ್ದಾರೆ.

ವಂದೇ ಭಾರತ್ ರೈಲಿನ ಟಾಯ್ಲೆಟ್ ನಲ್ಲಿ ವ್ಯಕ್ತಿಯ ಕಿತಾಪತಿ ತಂದ ಪಜೀತಿ

Posted by Vidyamaana on 2023-08-10 15:13:43 |

Share: | | | | |


ವಂದೇ ಭಾರತ್ ರೈಲಿನ ಟಾಯ್ಲೆಟ್ ನಲ್ಲಿ ವ್ಯಕ್ತಿಯ ಕಿತಾಪತಿ ತಂದ ಪಜೀತಿ

ವಿಜಯವಾಡ: ಟಿಕೆಟ್ ಇಲ್ಲದೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಟಿಕೆಟ್ ಕಲೆಕ್ಟರ್ ಗಳ ಕಣ್ತಪ್ಪಿಸಲು ಟಾಯ್ಲೆಟ್ ಸೇರಿಕೊಂಡು ಅಲ್ಲಿ ಬಳಿಕ ಸಿಗರೇಟ್ ಸೇದುವ ಮೂಲಕ ಅಧ್ವಾನ ಸೃಷ್ಟಿಸಿದ ಘಟನೆಯೊಂದು ವರದಿಯಾಗಿದೆ.


ತಿರುಪತಿ-ಸಿಕಂದರಾಬಾದ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ರೈಲಿನ ಬೋಗಿಯ ಟಾಯ್ಲೆಟ್ ನಿಂದ ಹೊಗೆ ಬರುತ್ತಿದ್ದ ಕಾರಣ ಅಪಾಯದ ಕರೆಗಂಟೆ ಬಾರಿಸಿದ ಮತ್ತು ಆಟೋಮ್ಯಾಟಿಕ್ ಬೆಂಕಿ ನಿಯಂತ್ರಕ ವ್ಯವಸ್ಥೆ ಕಾರ್ಯಪ್ರವೃತ್ತಗೊಂಡ ಕಾರಣ ರೈಲು ನಿಲುಗಡೆಗೊಂಡ ಘಟನೆಯೂ ನಡೆದಿರುವುದನ್ನು ರೈಲ್ವೇ ಅಧಿಕಾರಿಗಳು ನೀಡಿರುವ ಮಾಹಿತಿಯಲ್ಲಿ ತಿಳಿಸಿದ್ದಾರೆ.


ರೈಲು ಸಂಖ್ಯೆ – 20702 ಆಂಧ್ರಪ್ರದೇಶದ ಗುಡೂರು ಮೂಲಕ ಸಾಗುತ್ತಿದ್ದಾಗ ಈ ಘಟನೆ ನಡೆದಿದ್ದು, ಸಿ-13 ಬೋಗಿಯಲ್ಲಿ ಇದು ನಡೆದಿದೆ. ಟಿಕೆಟ್ ಪಡೆದುಕೊಳ್ಳದ ವ್ಯಕ್ತಿಯೊಬ್ಬ ತಿರುಪತಿಯಲ್ಲಿ ರೈಲನ್ನು ಹತ್ತಿ ಸಿ-13 ಬೋಗಿಯಲ್ಲಿರುವ ಟಾಯ್ಲೆಟ್ ಒಳಹೊಕ್ಕು ಲಾಕ್ ಮಾಡಿಕೊಂಡಿದ್ದಾನೆ.


ಬಳಿಕ, ಅಲ್ಲಿ ಆ ವ್ಯಕ್ತಿ ಧೂಮಪಾನ ಮಾಡಿದ ಕಾರಣ ಟಾಯ್ಲೆಟ್ ಒಳಗಿದ್ದ ಸ್ವಯಂಚಾಲಿತ ಬೆಂಕಿ ನಿಯಂತ್ರಕ ವ್ಯವಸ್ಥೆ ಚಾಲನೆಗೊಂಡಿದೆ ಎಂಬ ಮಾಹಿತಿಯನ್ನು ದಕ್ಷಿಣ ಮಧ್ಯೆ ರೈಲ್ವೇ ವಲಯದ ವಿಜಯವಾಡ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


ಮುನ್ನೆಚ್ಚರಿಕೆ ಗಂಟೆ ಬಾರಿಸುತ್ತಿದ್ದಂತೆ ಬೆಂಕಿ ನಿಯಂತ್ರಕದಿಂದ ಅಗ್ನಿ ಶಾಮಕ ಪೌಡರ್ ಬೋಗಿ ತುಂಬೆಲ್ಲಾ ಚಿಮುಕಲಾರಂಭಿಸಿದೆ, ಇದರಿಂದ ಗಾಬರಿಗೊಂಡ ಆ ಬೋಗಿಯಲ್ಲಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಬಳಿಕ ಅಲ್ಲಿದ್ದ ಎಮರ್ಜೆನ್ಸಿ ಫೋನ್ ಮೂಲಕ ರೈಲಿನ ಗಾರ್ಡಿಗೆ ಮಾಹಿತಿ ನೀಡಿದ್ದಾರೆ. ಬಳಿಕ ರೈಲು ಮನುಬೋಲು ಎಂಬಲ್ಲಿ ನಿಂತಿದೆ.


ತಕ್ಷಣವೇ ಆ ಬೋಗಿಯ ಕಡೆಗೆ ಆಗಮಿಸಿದ ರೈಲ್ವೇ ಪೊಲೀಸರು ಬೆಂಕಿ ನಿಯಂತ್ರಕ ವ್ಯವಸ್ಥೆಯೊಂದಿಗೆ ಬಂದವರೇ ಟಾಯ್ಲೆಟ್ ನ ಕಿಟಕಿ ಮುರಿದು ಒಳನುಗ್ಗಿದಾಗ ಅಸಲೀ ವಿಷಯ ಬೆಳಕಿಗೆ ಬಂದಿದೆ. ಇದೀಗ ಆ ವ್ಯಕ್ತಿಯನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ರೈಲು ಅಲ್ಲಿಂದ ತನ್ನ ಪ್ರಯಾಣವನ್ನು ಮುಂದುವರೆಸಿದೆ.

ಚಾರ್ಮಾಡಿ ಘಾಟ್ ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ

Posted by Vidyamaana on 2023-07-07 13:49:31 |

Share: | | | | |


ಚಾರ್ಮಾಡಿ ಘಾಟ್  ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಎರಡೂ ಬಸ್ ಗಳ ಡ್ರೈವರ್ ಗಳ ಕಾಲಿಗೂ ತೀವ್ರ ಗಾಯಗಳಾಗಿದ್ದು ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಘಟನೆ ನಡೆದಿದ್ದು, ಎರಡು ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದರು.

ಅಪಘಾತಕ್ಕೆ ರಸ್ತೆ ಕಾಮಗಾರಿ ಮತ್ತು ಕವಿದಿದ್ದ ದಟ್ಟ ಮಂಜು ಕಾರಣ ಎಂದು ಹೇಳಲಾಗಿದೆ.

ಅಪಘಾತದಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ಕೆಲವು ಪ್ರಯಾಣಿಕರು ಹತ್ತು ಕಿಲೋ ಮೀಟರ್ ದೂರ ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.

ಚಿಕ್ಕಮಗಳೂರು :ಟ್ರಕ್ಕಿಂಗ್ ಹೋಗಿದ್ದ ರಕ್ಷಿತ್ ಹೃದಯಘಾತದಿಂದ ಮೃತ್ಯು

Posted by Vidyamaana on 2023-06-30 23:43:11 |

Share: | | | | |


ಚಿಕ್ಕಮಗಳೂರು :ಟ್ರಕ್ಕಿಂಗ್ ಹೋಗಿದ್ದ ರಕ್ಷಿತ್ ಹೃದಯಘಾತದಿಂದ ಮೃತ್ಯು

ಚಿಕ್ಕಮಗಳೂರು : ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಮೃತಪಟ್ಟ ಯುವಕ ಮೈಸೂರು ಮೂಲದ 7 ಯುವಕರ ತಂಡ ಟ್ರಕ್ಕಿಂಗ್ ಗೆ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ ವೇಳೆ ಮಾರ್ಗ ಮಧ್ಯದಲ್ಲಿ ರಕ್ಷಿತ್‌ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃದಯಾಘಾತ ಸಂಭವಿಸಿದೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವ್ಯಸಗಿದ ಪ್ರಕರಣ : ಅರ್ಜಿ ವಾಪಸ್ ಪಡೆದ HD ರೇವಣ್ಣ

Posted by Vidyamaana on 2024-05-03 12:33:26 |

Share: | | | | |


ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವ್ಯಸಗಿದ ಪ್ರಕರಣ : ಅರ್ಜಿ ವಾಪಸ್ ಪಡೆದ HD ರೇವಣ್ಣ

ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಸಗಿದ ಕೇಸ್ ಸಂಬಂಧಿಸಿದಂತೆ ಶಾಸಕ HD ರೇವಣ್ಣ ನಿನ್ನೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ನಂತರ ಎಸ್‌ಐಟಿ ಹೇಳಿಕೆ ಹಿನ್ನೆಲೆಯಲ್ಲಿ ಇದೀಗ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರಿಗರೇ ಇಂದು ಇಲ್ಲೆಲ್ಲ ಕರೆಂಟ್ ಇರಲ್ಲ; ಈ ಲಿಸ್ಟ್ನಲ್ಲಿ ನಿಮ್ಮ ಏರಿಯಾ ಇದೆಯಾ ನೋಡಿ

Posted by Vidyamaana on 2023-11-09 04:50:50 |

Share: | | | | |


ಪುತ್ತೂರಿಗರೇ ಇಂದು ಇಲ್ಲೆಲ್ಲ ಕರೆಂಟ್ ಇರಲ್ಲ; ಈ ಲಿಸ್ಟ್ನಲ್ಲಿ ನಿಮ್ಮ ಏರಿಯಾ ಇದೆಯಾ ನೋಡಿ

ಪುತ್ತೂರು: 110/33/11 ಕೆವಿ ಪುತ್ತೂರು

ವಿದ್ಯುತ್‌ ಉಪಕೇಂದ್ರದಲ್ಲಿ ಪಾಲನಾ

ಕಾರ್ಯ ಹಮ್ಮಿಕೊ೦ಡಿರುವುದರಿ೦ದ

ನ.9ರಂದು ಪೂರ್ವಾಹ್ನ 10 ರಿಂದ

ಸಾಯಂಕಾಲ 4 ಗಂಟೆಯವರೆಗೆ 33 ಕೆಪಿ

ಪುತ್ತೂರು, ಕಡಬ, ಸುಬ್ರಹ್ಮಣ್ಯ, 33ಕವಿ

ಪುತ್ತೂರು-ಕುಂಬ್ರ-ಬೆಳ್ಳಾರೆ, 33 ಕೆವಿ

ಪುತ್ತೂರು-ಸುಳ್ಯ ಹಾಗೂ 33 ಕೆವಿ ಪುತ್ತೂರು

ಸವಣೂರು ನೆಲ್ಯಾಡಿ ವಿದ್ಯುತ್‌ ಮಾರ್ಗಗಳ

ವಿದ್ಯುತ್‌ ನಿಲುಗಡೆ ಮಾಡಲಾಗುವುದು.

ಆದ್ದರಿಂದ 110/33/11 ಕೆವಿ ಪುತ್ತೂರು

ಹಾಗೂ 33/11 ಕೆವಿ ಕಡಬ, ನೆಲ್ಯಾಡಿ,ಸವಣೂರು, ಬಿಂದು ಮತ್ತು ಕ್ಯಾಂಪೋ

ವಿದ್ಯುತ್‌ ಉಪಕೇಂದ್ರದಿಂದ ಹೊರಡುವ

ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್‌

ಸರಬರಾಜಾಗುವ ವಿದ್ಯುತ್‌ ಬಳಕೆದಾರರು

ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ



Leave a Comment: