ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ವಾರ್ಡ್ ಸಮಸ್ಯೆ ಪರಿಹರಿಸದ ನಗರಸಭೆ ಸದಸ್ಯನನ್ನು ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು

Posted by Vidyamaana on 2023-07-27 13:13:01 |

Share: | | | | |


ವಾರ್ಡ್ ಸಮಸ್ಯೆ ಪರಿಹರಿಸದ ನಗರಸಭೆ ಸದಸ್ಯನನ್ನು ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು

ಗದಗ: ವಾರ್ಡ್ ಸಮಸ್ಯೆ ಪರಿಹರಿಸಲು ನಿರ್ಲಕ್ಷಿಸಿದ ಆರೋಪದ ಮೇಲೆ ಸ್ಥಳೀಯ ನಿವಾಸಿಗಳು ನಗರಸಭೆ ಸದಸ್ಯನನ್ನು ಗಂಟೆಗೂ ಅಧಿಕ ಕಾಲ ಕೊಠಡಿಯಲ್ಲಿ ಕೂಡಿ ಹಾಕಿದ ಘಟನೆ ಸ್ಥಳೀಯ ಬಣ್ಣದ ನಗರದಲ್ಲಿ ಗುರುವಾರ ನಡೆದಿದೆ.


ನಗರಸಭೆ ಮೂರನೇ ವಾರ್ಡಿನ ಸದಸ್ಯ ಮಾಧುಸಾ ಮೇರವಾಡೆ ಅವರನ್ನು ಸ್ಥಳೀಯ ಮಹಿಳೆಯರು ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಸದಸ್ಯ ಮಾಧುಸಾ ಅವರನ್ನು ಬಿಡುಗಡೆಗೊಳಿಸಿದರು.


ನಗರಸಭೆ 3ನೇ ವಾರ್ಡ್ ನ ಬಣ್ಣದ ನಗರವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ರಸ್ತೆಗಳು ಹದಗೆಟ್ಟಿವೆ. ಬೀದಿ ದೀಪಗಳಿಲ್ಲದೇ ಸ್ಥಳೀಯ ನಿವಾಸಿಗಳಿಗೆ ಸಂಚರಿಸಲು ಸಮಸ್ಯೆ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರುಬಣ್ಣದ ನಗರವು ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ನಗರಸಭೆ ಸದಸ್ಯ ಮಾಧುಸಾ ಮೇರವಾಡೆ ಅವರಿಗೆ ಹಲವಾರು ಬಾರಿ ಗಮನಕ್ಕೆ ತಂದಿದ್ದರೂ, ಸಮಸ್ಯೆಗೆ ಸ್ಪಂಧಿಸದ ಕಾರಣ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ನಗರದ ಈಶ್ವರ ಸೇವಾ ಟ್ರಸ್ಟ್ ಕಮೀಟಿ ಕಚೇರಿಯ ಕೊಠಡಿಯಲ್ಲಿ ಕೂಡಿಹಾಕಿದರು. ಇದರಿಂದ ವಿಚಲಿತಗೊಂಡ ಸದಸ್ಯ ಮಾಧುಸಾ ಅವರು ವಿಷಯ ತಿಳಿಸಲು ನಗರಸಭೆ ಪೌರಾಯುಕ್ತರಿಗೆ ದೂರವಾಣಿ ಮೂಲಕ ಕರೆ ಮಾಡಿದರು. ಆದರೆ, ಆಯುಕ್ತರು ಕರೆ ಸ್ವೀಕರಿಸಿಲ್ಲ.

ಸುಳ್ಯ ಕಲ್ಲಪಳ್ಳಿ ಪಾಣತ್ತೂರು ರಸ್ತೆ ಮಧ್ಯೆ ಪೆರಿಯಾರಂ ಟ್ಯಾಂಕರ್ ಅಪಘಾತ

Posted by Vidyamaana on 2023-06-30 23:49:49 |

Share: | | | | |


ಸುಳ್ಯ  ಕಲ್ಲಪಳ್ಳಿ ಪಾಣತ್ತೂರು ರಸ್ತೆ ಮಧ್ಯೆ ಪೆರಿಯಾರಂ ಟ್ಯಾಂಕರ್ ಅಪಘಾತ

ಸುಳ್ಯ: ಕಲ್ಲಪಳ್ಳಿ ಪಾಣತ್ತೂರು ರಸ್ತೆ ಮಧ್ಯೆ ಪೆರಿಯಾರಂ ನಲ್ಲಿ ಸಂಭವಿಸಿದ ಟ್ಯಾಂಕರ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.


ಅಪಘಾತದಲ್ಲಿ ಚಾಲಕ ಮತ್ತು ಕ್ಲೀನರ್ ಗಂಭೀರ ಗಾಯಗೊಂಡಿದ್ದು ಅವರಿಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಗಾಯಗೊಂಡ ಲಾರಿ ಚಾಲಕ ಹಾಸನ ಮೂಲದ ಪ್ರವೀಣ್ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಟ್ಯಾಂಕರ್ ನಲ್ಲಿದ್ದ ಗಾಯಗೊಂಡ ವ್ಯಕ್ತಿಯ ಸ್ಥಿತಿಯು ಗಂಭೀರವಾಗಿದೆ ಎನ್ನಲಾಗಿದೆ.

ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

Posted by Vidyamaana on 2024-08-29 05:52:22 |

Share: | | | | |


ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

ಪುತ್ತೂರು: ಭ್ರಷ್ಟಾಚಾರ, ಅಧಿಕಾರ ದುರ್ಬಳಕೆಯಂತಹ ಕೆಟ್ಟ ಆಡಳಿತವನ್ನು ನೀಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಸಂಘರ್ಷದಿಂದಲೇ ಹುಟ್ಟಿದ ಬಿಜೆಪಿ ಪಕ್ಷ ಸಂಘರ್ಷಕ್ಕೆ ಇಳಿದರೆ ಏನಾಗಬಹುದು ಎನ್ನುವುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳಲಿ ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಹೇಳಿದರು.


ಭ್ರಷ್ಟ ರಾಜ್ಯ ಸರಕಾರ ಹಾಗೂ ರಾಜಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಪುತ್ತೂರು ಬಿಜೆಪಿ ನಗರ, ಪುತ್ತೂರು ಬಿಜೆಪಿ ಯುವ ಮೋರ್ಚಾ ಹಾಗೂ ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ದರ್ಬೆ ವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.


ನಮ್ಮ ಪ್ರತಿಭಟನೆ ಕಾಂಗ್ರೆಸ್ ನ ಅಧಿಕಾರ ದುರುಪಯೋಗ, ದರ್ಪದ ವಿರುದ್ಧ. ಮೂಡದಲ್ಲಿ ಸೈಟ್ ಸಿದ್ದಣ್ಣಬಹು ದೊಡ್ಡ ಭ್ರಷ್ಟಾಚಾರ ಮಾಡಿದ್ದಾರೆ. ನಾವು ಏನು ಮಾಡಿದ್ರು ನಡೀತದೆ ಎನ್ನುವ ಮನೋಸ್ಥಿತಿ ಇವರದು. ಐವನ್, ಜಮೀರ್, ಕ್ರಷ್ಣ ಬೈರೇಗೌಡ ಅವರು ರಾಜ್ಯಪಾಲರ ವಿರುದ್ಧ ಕೆಟ್ಟ ಭಾಷೆ ಬಳಕೆ ಮಾಡಿರುವುದನ್ನು ನಾವು ಖಂಡಿಸುತ್ತೇವೆ ಎಂದರು.

ಯಡಿಯೂರಪ್ಪ ನಿರಪರಾಧಿತನ ಸಾಬೀತಾದ ಬಳಿಕ ಅಧಿಕಾರ ವಹಿಸಿಕೊಂಡಿ ದ್ದರು. ತಾಕತ್ತಿದ್ದಾರೆ ಅಧಿವೇಶನದಲ್ಲಿ ಮಾತನಾಡಿ ಎಂದು ಸಿದ್ದರಾಮಯ್ಯಗೆ ನಾವು ಚಾಲೆಂಜ್ ಮಾಡಿದ್ದೆವು. ಆದರೆ ಅವರು ಪಲಾಯನ ಮಾಡಿದರು ಎಂದು ವ್ಯಂಗ್ಯವಾಡಿದರು.

ಅಧಿಕಾರ ದುರ್ಬಳಕೆಗೆ ಸರಕಾರ ತಕ್ಕ ಪಾಠ ಎದುರಿಸಲಿದೆ. ಪುನಃ ನಮ್ಮ ಸರಕಾರ ಬರ್ತದೆ. ಅಧಿಕಾರಿಗಳು ಯೋಚನೆ ಮಾಡಿ. ಈ ರೀತಿಯ ವರ್ತನೆಗೆ ಅರ್ಥ ಆಗುವ ಹಾಗೆ ಉತ್ತರ ಕೊಡ್ತೇವೆ ಎಂದರು.


 ಸಿದ್ದರಾಮಯ್ಯ ಬಳಿ ಭಿಕ್ಷೆ ಪಾತ್ರೆ ಹಿಡಿದು ಐವನ್ಗೆ ಸ್ಥಾನ ಲಭಿಸಿದೆ. ರಾಜ್ಯಪಾಲರ ವಿರುದ್ಧ ಮಾತನಾಡಿದ ಐವನ್ ಮೇಲೆ ಪ್ರಕರಣ ದಾಖಲಿಸಲು ನಾನೇ ಪೊಲೀಸ್ ಕಮಿಷನರಿಗೆ 

 ಸೆಕ್ಷನ್ ಕಳುಹಿಸಿದ್ದೆ. ಹಿಂದೆ ನಾನು ಸ್ಥಳದಲ್ಲಿ ಇಲ್ಲದಿದ್ದರೂ ಕೇಸ್ ಹಾಕಿದ್ರು. ನಿಮ್ಮ ಕೇಸ್ ನಮಗೆ ಲೆಕ್ಕ ಅಲ್ಲ. ಇದು ಟ್ರೈಲರ್ ಹೋರಾಟ ಮಾತ್ರ. ಮುಂದೆ ತೀವ್ರ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ ಎಂದರು.

ನಂದಾವರದಲ್ಲಿ ಮನೆಯೊಂದರ ಮೇಲೆ ಕುಸಿದ ಗುಡ್ಡ

Posted by Vidyamaana on 2023-07-07 04:37:35 |

Share: | | | | |


ನಂದಾವರದಲ್ಲಿ ಮನೆಯೊಂದರ ಮೇಲೆ ಕುಸಿದ ಗುಡ್ಡ

ಬಂಟ್ವಾಳ : ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆಯೋರ್ವರು ಮೃತಪಟ್ಟು, ಯುವತಿಯೋರ್ವಳು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

   ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ. ಮಹಿಳೆ ಮೃತಪಟ್ಟಿದ್ದಾರೆ.

   ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು. ಝರಿನಾ ಅವರು ಮೃತಪಟ್ಟಿದ್ದು,  ಸಫಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕೆಲವು ಗಂಟೆಗಳ ಕಾಲ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದರು. ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ, ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳಕ್ಕೆ ಧಾವಿಸಿದ್ದಾರೆ.

ಶತ್ರುವಿನ ಶತ್ರು ಮಿತ್ರ..!! ಸಿದ್ದುಗೆ ಬಿಜೆಪಿಗರು ಬೆಂಬಲಿಸುತ್ತಿರೋದೇಕೆ?

Posted by Vidyamaana on 2024-08-18 06:38:13 |

Share: | | | | |


ಶತ್ರುವಿನ ಶತ್ರು ಮಿತ್ರ..!! ಸಿದ್ದುಗೆ ಬಿಜೆಪಿಗರು ಬೆಂಬಲಿಸುತ್ತಿರೋದೇಕೆ?

ರಾಜ್ಯದಲ್ಲಿ ಮೂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಏರು ಧ್ವನಿಯಲ್ಲಿ ಆಗ್ರಹಿಸುತ್ತಿದ್ದಾರೆ.

ಆದರೆ ಇದೇ ವಿಚಾರವಾಗಿ ಬಿಜೆಪಿ ಪಾಳಯದಲ್ಲೇ ಭಿನ್ನರಾಗ ಕೇಳಿ ಬಂದಿದೆ.

ಹೌದು, ಮೂಡ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ತೀವ್ರ ಸ್ವರೂಪದ ಹೋರಾಟ ನಡೆಸಿದ್ದು,ಇದೀಗ ಅದಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ.ಇದೇ ಹಿನ್ನೆಲೆಯಲ್ಲಿ ಹಲವಾರು ಬಿಜೆಪಿಯ ಪ್ರಮುಖ ನಾಯಕರು ಸಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ. ಆದ್ರೆ ಈ ಮಧ್ಯೆ ಅಚ್ಚರಿ ಎಂಬಂತೆ ಕೆಲ ಬಿಜೆಪಿ ನಾಯಕರು ಉಲ್ಟಾ ಹೊಡೆದಿದ್ದಾರೆ. ಪರೋಕ್ಷ ಹೇಳಿಕೆಗಳನ್ನ ನೀಡುವ ಮೂಲಕ ಬಿಜೆಪಿ ಕೆಲವು ನಾಯಕರೇ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ.

ರಾಜ್ಯ ಬಿಜೆಪಿ ಪಾಳಯದಲ್ಲಿ ಸಾಲು ಸಾಲು ನಾಯಕರು ಸಿದ್ದು ವಿರುದ್ಧ ಮುಗಿಬಿದ್ದಿದ್ರೆ, ಇತ್ತ ಸಚಿವ ವಿ.ಸೋಮಣ್ಣ,ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಆದಿಯಾಗಿ ಕೆಲವು ನಾಯಕರು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಂತೆ ಭಾಸವಾಗುತ್ತಿದೆ. ಅದಕ್ಕೆ ಕಾರಣ ಇಂದು ಅವರು ನೀಡಿರುವ ಹೇಳಿಕೆಗಳು.

ಬೆಳ್ಳಂಬೆಳಿಗ್ಗೆ ಯುವಕನ ಪಾಲಿಗೆ ಮೃತ್ಯುವಾದ ತರಕಾರಿ ಸಾಗಾಟದ ವಾಹನ

Posted by Vidyamaana on 2024-02-25 11:00:13 |

Share: | | | | |


ಬೆಳ್ಳಂಬೆಳಿಗ್ಗೆ ಯುವಕನ ಪಾಲಿಗೆ ಮೃತ್ಯುವಾದ ತರಕಾರಿ ಸಾಗಾಟದ ವಾಹನ

ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಭಾನುವಾರ ಮುಂಜಾನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.

    ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು - ಆಲಡ್ಕ ವಾಸ್ತವ್ಯವಿರುವ  ಆಶ್ರಫ್ (32) ಮೃತಪಟ್ಟ ಯುವಕ.

     ಆಲಡ್ಕ ನಿವಾಸಿ ತನ್ವೀರ್ ಆಶ್ರಫ್ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತನಿಗೆ ಡ್ರಾಫ್ ಕೊಡುವ ಉದ್ದೇಶದಿಂದ ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡಿಗೆ ತೆರಳಿದ್ದು ಬೆಳಿಗ್ಗೆ ಸುಮಾರು 5.30 ರ ವೇಳೆ ಆಶ್ರಫ್ ಅವರು ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತ ತನ್ವೀರ್ ನ್ನು ಇಳಿಸಬೇಕು ಎನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸು ಹೋಗುವ ಲಾರಿಯ ಚಾಲಕ ಲಾರಿಯನ್ನು ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.


    ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಆಶ್ರಫ್ ನನ್ನು ತಕ್ಷಣ  ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Recent News


Leave a Comment: