ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಮನೆಯೊಳಗೆ ಬಿದ್ದು ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ ಮನೆಗೆ ಭೇಟಿ ನೀಡಿ ಶಾಸಕರಿಂದ ಸಾಂತ್ವನ

Posted by Vidyamaana on 2023-06-13 10:36:54 |

Share: | | | | |


ಮನೆಯೊಳಗೆ ಬಿದ್ದು ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ ಮನೆಗೆ ಭೇಟಿ ನೀಡಿ ಶಾಸಕರಿಂದ ಸಾಂತ್ವನ

ಪುತ್ತೂರು: ಅನಾರೋಗ್ಯದಿಂದಿದ್ದ ಮೆಸ್ಕಾಂ ಪವರ್‌ಮ್ಯಾನ್ ಮನೆಯೊಳಗೆ ಕುಸಿದು ಬಿದ್ದು ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಮೃತರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಕುರಿಯ ಗ್ರಾಮದ ಇಡಬೆಟ್ಟು ಕುಂಡಕೋರಿ ನಿವಾಸಿ ಕುಂಡ ಮೇರ ಎಂಬವರ ಪುತ್ರ ಕುಂಬ್ರದಲ್ಲಿ ಮೆಸ್ಕಾಂ ಪವರ್‌ಮ್ಯಾನ್ ಆಗಿ ಕರ್ತವ್ಯದಲ್ಲಿರುವ ಉಮೇಶ್ ಕುಂಡಕೋರಿ (೪೨) ರವರು ಕೆಲದಿನಗಳಿಂದ ಅನಾರೋಗ್ಯ  ಪೀಡಿತರಾಗಿದ್ದು ಜೂ. ೧೨ ರಂದು ರಾತ್ರಿ ಮನೆಯೊಳಗೆ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯ ವಿಷಯ ತಿಳಿದು ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಕ್ಕೆ ಸಾಂತ್ವನ ಹೇಳಿದರು. ಕುಟುಂಬದ ಆಧಾರವಾಗಿದ್ದ ಉಮೇಶ್ ರವರ ಸಾವಿನಿಂದ ಕುಟುಂಬ ಕಂಗಲಾಗಿದ್ದು ಮಾನವೀಯ ನೆಲೆಯಲ್ಲಿ ಪುತ್ರನಿಗೆ ಮೆಸ್ಕಾಂ ನಲ್ಲಿ ಉದ್ಯೋಗ ಕೊಡಿಸುವಲ್ಲಿ ಅವಕಾಶಗಳಿದ್ದಲ್ಲಿ ಕೆಲಸ ಕೊಡಿಸುವುದಾಗಿ ಶಾಸಕರು ಕುಟುಂಬಕ್ಕೆ ಭರವಸೆ ನೀಡಿದರು.

ಕಾಂಗ್ರೆಸ್ ಪ್ರಮುಖರಾದ ಶಿವರಾಮ ಆಳ್ವ, ಸನತ್ ಕುರಿಯ, ನೇಮಾಕ್ಷ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಸ್ವಾತಂತ್ರ್ಯೋತ್ಸವಕ್ಕೆ ಇಲಾಖೆಯವರು ಹಣ ಸಂಗ್ರಹಿಸುವುದು ಬೇಡ ಪೂರ್ತಿ ಖರ್ಚು ನಾನು ನೀಡುತ್ತೇನೆ

Posted by Vidyamaana on 2023-08-12 03:27:28 |

Share: | | | | |


ಸ್ವಾತಂತ್ರ್ಯೋತ್ಸವಕ್ಕೆ ಇಲಾಖೆಯವರು ಹಣ ಸಂಗ್ರಹಿಸುವುದು ಬೇಡ ಪೂರ್ತಿ ಖರ್ಚು ನಾನು ನೀಡುತ್ತೇನೆ

ಪುತ್ತೂರು; ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಈ ಬರಿಯ ೭೬ ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಕಿಲ್ಲೆ ಮೈದಾನದಲ್ಲಿ ಎಂದಿನಂತೆ ನಡೆಯಲಿದ್ದು ಬಳಿಕ ಪುರಭವನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ. ಸ್ವಾತಂತ್ರ್ಯೋತ್ಸವ ದಿನದಂದು ಎಲ್ಲಾ ಖರ್ಚುಗಳನ್ನು ನಾನೇ ನೀಡುತ್ತೇನೆ ಎಂದು ಶಾಸಕರಾದ ಅಶೋಕ್ ರೈ ಅಧಿಕಾರಿಗಳಿಗೆ ವಾಗ್ದಾನ ನೀಡಿದ್ದು ಖರ್ಚಿನ ಮೊತ್ತವನ್ನು ಈಗಾಗಲೇ ಅಧಿಕಾರಿಗಳ ಕೈಗೆ ನೀಡಿದ್ದಾರೆ.

ಪ್ರತೀ ಬಾರಿ ಸ್ವಾತಂತ್ರ್ಯೋತ್ಸವ ದಿನದ ಖರ್ಚಿನ ಹಣವನ್ನು ವಿವಿಧ ಇಲಾಖೆಯಿಂದ ಒಟ್ಟುಗೂಡಿಸಿ ಅದನ್ನು ಬಳಸುತ್ತಿದ್ದರು. ಸ್ವಾತಂತ್ರ್ಯೋತ್ಸವ ಆಚರಣಾ ಪೂರ್ವಭಾವಿ ಸಭೆಯಲ್ಲಿ ಶಾಸಕರಿಗೆ ಅಧಿಕಾರಿಗಳು ಈ ವಿಚಾರವನ್ನು ತಿಳಿಸಿದ್ದರು. ಇಲಾ ಖೆಗಳಿಂದ ಹಣ ಒಗ್ಗೂಡಿಸುವುದು ಬೇಡ ಅದು ಕೂಡಾ ಭೃಷ್ಟಾಚಾರದ ಒಂದು ಭಾಗವಾಗಿದೆ ಯಾವುದೇ ಕಾರಣಕ್ಕೂ ಯಾವ ಇಲಾಖೆಯವರು ಕೂಡಾ ಸ್ವಾತಂತ್ರ್ಯೋತ್ಸವದ ಖರ್ಚಿಗೆ ಹಣ ನೀಡುವುದು ಬೇಡ ಎಷ್ಟು ಖರ್ಚಾಗುತ್ತದೆ ಎಂದು ತಿಳಿಸಿ ಆ ಮೊತ್ತವನ್ನು ನಾನು ನೀಡುವುದಾಗಿ ಶಾಸಕರು ತಿಳಿಸಿದ್ದಾರೆ. ಪುತ್ತೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಪುತ್ತೂರಿನಲ್ಲಿ ಸ್ವಂತ ಹಣದಿಂದ ಸರಕಾರಿ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದ್ದು ಶಾಸಕರ ನಡೆಗೆ ಮತ್ತು ಭೃಷ್ಟಾಚಾರದ ವಿರೋಧಿನಿಲುವಿಗೆ ಪ್ರಶಂಸೆ ವ್ಯಕ್ತವಾಗಿದೆ.

BREAKING: ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ

Posted by Vidyamaana on 2024-06-15 14:38:42 |

Share: | | | | |


BREAKING: ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೆಂಗಳೂರು : ಸಂಸದರಾಗಿ ಆಯ್ಕೆಯಾದ ನಂತ್ರ, ಕೋಟಾ ಶ್ರೀನಿವಾಸ ಪೂಜಾರಿಯವರು ವಿಧಾನಪರಿಷತ್ ಸದಸ್ಯಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ವಿಧಾನ ಪರಿಷತ್ ವಿಪಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದಂತೆ ಆಗಿದೆ.

ಇಂದು ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿಯಾದಂತ ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು, ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು.

BREAKING : ಗುಂಡು ಹಾರಿಸಿಕೊಂಡು ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಕಪಾಡೆ ಆತ್ಮಹತ್ಯೆ

Posted by Vidyamaana on 2024-05-15 21:00:12 |

Share: | | | | |


BREAKING : ಗುಂಡು ಹಾರಿಸಿಕೊಂಡು ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಕಪಾಡೆ ಆತ್ಮಹತ್ಯೆ

ಜಾಮ್ನರ್ : ರಜೆ ಕಳೆಯಲು ಮನೆಗೆ ಬಂದಿದ್ದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್ `ಪ್ರಕಾಶ್ ಕಪಾಡೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಜಾಮ್ನರ್ ನಲ್ಲಿ ಈ ಘಟನೆ ನಡೆದಿದೆ.ಜಾಮ್ನರ್ ಗಣಪತಿ ನಗರ ನಿವಾಸಿ ಪ್ರಕಾಶ್ ಗೋವಿಂದ ಕಪ್ಡೆ (37).

ನಂತೂರು ವೃತ್ತದಲ್ಲಿ ಪ್ರಾಣ ಹಿಂಡುತ್ತಿದ್ದ ಗುಂಡಿಗಳು

Posted by Vidyamaana on 2023-09-23 09:49:40 |

Share: | | | | |


ನಂತೂರು ವೃತ್ತದಲ್ಲಿ ಪ್ರಾಣ ಹಿಂಡುತ್ತಿದ್ದ ಗುಂಡಿಗಳು

ಮಂಗಳೂರು: ನಂತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಬಿದ್ದು ಕಳೆದ ಎರಡು ವಾರಗಳಲ್ಲಿ ವಾಹನ ಸವಾರರು ಚಲಿಸಲಾಗದ ಸ್ಥಿತಿ ಉಂಟಾಗಿತ್ತು. ತಿರುವಿನ ಭಾಗದಲ್ಲಿಯೇ ಇಂತಹ ಸ್ಥಿತಿಯಾಗಿದ್ದರಿಂದ ಅಲ್ಲಿ ಟ್ರಾಫಿಕ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿಯೂ ಭಾರೀ ತ್ರಾಸ ಪಡುತ್ತಿದ್ದರು. ಅಲ್ಲದೆ, ಟ್ರಾಫಿಕ್ ಜಾಮ್ ಸಮಸ್ಯೆಗೂ ಕಾರಣವಾಗಿತ್ತು. ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಪೊಲೀಸ್ ಸಿಬಂದಿಯೇ ಗುಂಡಿ ಬಿದ್ದ ಜಾಗಕ್ಕೆ ಜಲ್ಲಿ ಹುಡಿ ತಂದು ತಾತ್ಕಾಲಿಕ ರಿಪೇರಿ ಕೆಲಸ ಮಾಡಿದ್ದಾರೆ.


ಟ್ರಾಫಿಕ್ ಕರ್ತವ್ಯದಲ್ಲಿದ್ದ ಕದ್ರಿ ಸಂಚಾರಿ ಠಾಣೆ ವಿಭಾಗದ ಎಸ್ಐ ಈಶ್ವರ ಸ್ವಾಮಿ ಮತ್ತು ಎಎಸ್ಐ ವಿಶ್ವನಾಥ ರೈ ಅವರು ಹಾರೆ, ಗುದ್ದಲಿಯನ್ನು ಹಿಡಿದು ತಾವೇ ದುರಸ್ತಿ ಕೆಲಸ ಮಾಡಿದ್ದಾರೆ. ವಾಹನಗಳ ಸಾಗಾಟದ ನಡುವೆಯೇ ಗುಂಡಿ ಬಿದ್ದ ರಸ್ತೆಯನ್ನು ಮುಚ್ಚಿ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದಾರೆ.

ನಂತೂರು ವೃತ್ತದಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿ ಜೊತೆಗೂಡುವುದರಿಂದ ಸಾವಿರಾರು ವಾಹನಗಳು ಸಂಚಾರ ನಡೆಸುತ್ತವೆ. ಉಡುಪಿ ಕಡೆಯಿಂದ ಬರುವ ದೊಡ್ಡ ಗಾತ್ರದ ವಾಹನಗಳು ಬೆಂಗಳೂರು, ಪುತ್ತೂರು, ಮಡಿಕೇರಿ ಕಡೆಗೆ ಸಾಗಲು ನಂತೂರು ವೃತ್ತದಲ್ಲಿ ಎಡಕ್ಕೆ ತಿರುವು ಪಡೆಯುತ್ತದೆ. ಅದೇ ಜಾಗದಲ್ಲಿ ಪೂರ್ತಿ ಡಾಮರು ಕಿತ್ತು ಹೋಗಿದ್ದರಿಂದ ಗುಂಡಿ ಬಿದ್ದು ಜಲ್ಲಿ ಜಾರಿ ಹೋಗಿತ್ತು. ಇದರಿಂದ ದ್ವಿಚಕ್ರ ವಾಹನ ಸವಾರರಂತೂ ಪ್ರಾಣ ಕೈಯಲ್ಲಿ ಹಿಡಿದು ಸಾಗುವ ಸ್ಥಿತಿಯಾಗಿತ್ತು. ಇತ್ತೀಚೆಗೆ 15 ದಿನಗಳಲ್ಲಿ ಮಳೆ ಹೆಚ್ಚು ಬಿದ್ದಿದ್ದರಿಂದ ಸಂಚಾರವೇ ದುಸ್ತರವಾಗಿತ್ತು. ಮಹಿಳೆಯರು ದ್ವಿಚಕ್ರ ವಾಹನದಲ್ಲಿ ಸಾಗುವಾಗ ಅಲ್ಲಿಯೇ ನಿಂತು ಪೊಲೀಸರು ಜಾಗ್ರತೆ ವಹಿಸಬೇಕಾದ ಸ್ಥಿತಿಯಿತ್ತು.


ಹೆದ್ದಾರಿ ಅಧಿಕಾರಿಗಳಿಗೆ ಪೊಲೀಸರು ತಿಳಿಸಿದ್ದರೂ, ನಿರ್ಲಕ್ಷ್ಯ ವಹಿಸಿದ್ದರಿಂದ ಇದೀಗ ಪೊಲೀಸ್ ಸಿಬಂದಿಯೇ ಜಲ್ಲಿಯನ್ನು ತಂದು ರಸ್ತೆ ರಿಪೇರಿ ಮಾಡಿಸಿದ್ದಾರೆ. ಪೊಲೀಸರ ಕೆಲಸದ ಬಗ್ಗೆ ಸಾರ್ವಜನಿಕರ ಕಡೆಯಿಂದ ಅಭಿನಂದನೆಗಳ ಮಹಾಪೂರ ಜಾಲತಾಣದಲ್ಲಿ ಹರಿದು ಬಂದಿದೆ. ಇದೇ ಮಳೆಗಾಲದಲ್ಲಿ ಮೂರನೇ ಬಾರಿ ರಸ್ತೆ ಕಿತ್ತು ಹೋಗಿದ್ದು, ಹೆದ್ದಾರಿ ಅಧಿಕಾರಿಗಳ ಕಳಪೆ ಕಾಮಗಾರಿಯನ್ನೂ ಇದು ಎತ್ತಿತೋರಿಸಿದೆ.

ಶಾಸಕರ ಇಂದಿನ ಕಾರ್ಯಕ್ರಮ

Posted by Vidyamaana on 2023-05-26 03:40:35 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ

ಪುತ್ತೂರು: ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯನ್ನು ಈಡೇರಿಸಲು ಶಾಸಕ ಅಶೋಕ್ ಕುಮಾರ್ ರೈ ಅವರು ಹೆಜ್ಜೆ ಮುಂದಿಟ್ಟಿದ್ದಾರೆ.

ಬೆಳಿಗ್ಗೆ 10.30 ಕ್ಕೆ ನಗರಸಭೆಯಲ್ಲಿ ಅಧಿಕಾರಿಗಳ ಸಭೆ ಬಳಿಕ ಕಂದಾಯ ಕಚೇರಿ ಮಿನಿ ವಿಧಾನ ಸೌಧ ಭೇಟಿ

ಭ್ರಷ್ಟಾಚಾರವನ್ನು ತಡೆಯಬೇಕು, ಜನಸಾಮಾನ್ಯರಿಗೆ ಇಲಾಖೆಯಲ್ಲಿ ತೊಂದರೆ ಆಗಬಾರದು, ಇಲಾಖೆಗಳು ಜನಸ್ನೇಹಿಯಾಗಿ ಮೂಡಿಬರಬೇಕು ಎನ್ನುವ ದೂರದೃಷ್ಟಿಯಿಟ್ಟುಕೊಂಡು ಶಾಸಕ ಅಶೋಕ್ ಕುಮಾರ್ ರೈ ಅವರು ಶುಕ್ರವಾರ ತಾಲೂಕಿನ ಇಲಾಖೆಗಳಿಗೆ ಭೇಟಿ ನೀಡಲಿದ್ದಾರೆ.

ಇದುವರೆಗೆ ಇಲಾಖಾ ಅಧಿಕಾರಿ, ಸಿಬ್ಬಂದಿಗಳನ್ನು ಜನಪ್ರತಿನಿಧಿ, ಶಾಸಕರು ತಮ್ಮ ಬಳಿಗೆ ಕರೆಸಿಕೊಂಡಿರುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿ ಎಂಬಂತೆ ಸ್ವತಃ ಶಾಸಕರೇ ಇಲಾಖಾ ಭೇಟಿ ನಡೆಸುತ್ತಿದ್ದಾರೆ. ಇದು ಶಾಸಕರ ಮುಂದಿನ ತಮ್ಮ ದೂರದೃಷ್ಟಿತ್ವದ ಯೋಜನೆಗಳನ್ನು ಜಾರಿಗೆ ತರಲು ಹಾಕಿಕೊಂಡ ಮೊದಲ ಹೆಜ್ಜೆ ಎಂದೇ ವಿಶ್ಲೇಷಿಸಲಾಗುತ್ತಿದೆ.



Leave a Comment: