ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಭೆ

Posted by Vidyamaana on 2023-05-25 10:08:00 |

Share: | | | | |


ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಭೆ

ಉಪ್ಪಿನಂಗಡಿ: ಕಾಲೇಜು ಆರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ದಾಖಲಾತಿಗಳು ಆರಂಭಗೊಂಡಿವೆ. ದಾಖಲಾತಿಗಾಗಿ ಬರುವ ಯಾವುದೇ ಅರ್ಜಿಗಳನ್ನು ತಿರಸ್ಕರಿಸಬಾರದು ಎಂದು ಅಶೋಕ್ ಕುಮಾರ್ ರೈ ಸೂಚನೆ ನೀಡಿದರು.

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

Posted by Vidyamaana on 2023-07-18 01:50:33 |

Share: | | | | |


ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ.


ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಇಂದು(ಜುಲೈ 18) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್ಎಲ್ಬಿ ಪದವಿ ಪೂರೈಸಿದ್ದರು.


ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ್ದರು. ಹೀಗೆ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯದತ್ತ ಆಕರ್ಷಿತರಾದ ಉಮ್ಮನ್ ಚಾಂಡಿ ಅವರು ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ್ದರು.

ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ದೇವರ ಪ್ರತಿಷ್ಠೆ

Posted by Vidyamaana on 2024-04-27 13:07:01 |

Share: | | | | |


ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ದೇವರ ಪ್ರತಿಷ್ಠೆ

ಪುತ್ತೂರು:ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪುನರ್ ಪ್ರತಿಷ್ಠ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.೨೬ರಂದು ಪ್ರಧಾನ ದೇವರಾಗಿರುವ ಶ್ರೀ ಸುಬ್ರಹ್ಮಣ್ಯ, ಪರಿವಾರ ದೇವರುಗಳಾದ ಗಣಪತಿ ಹಾಗೂ ದುರ್ಗಾದೇವಿ ಹಾಗೂ ದೈಗಳ ಪ್ರತಿಷ್ಠೆಯು ನೆರವೇರಿತು

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದಲ್ಲಿ ಪ್ರಾತಃಕಾಲ ಮಹಾಗಣಪತಿ ಹೋಮ, ಮಂಟಪ ಸಂಸ್ಕಾರ, ಕುಂಭೇಶಕರ್ಕರಿಪೂಜೆ,

ಕಂಬಳ ಪರ ಸುಪ್ರಿಂ ತೀರ್ಪು: ಪೇಟಾಗೆ ಭಾರೀ ಹಿನ್ನೆಡೆ

Posted by Vidyamaana on 2023-05-18 08:51:49 |

Share: | | | | |


ಕಂಬಳ ಪರ ಸುಪ್ರಿಂ ತೀರ್ಪು: ಪೇಟಾಗೆ ಭಾರೀ ಹಿನ್ನೆಡೆ

ಪುತ್ತೂರು:ಕಂಬಳ ಪರ ಸುಪ್ರಿಂಕೋರ್ಟು ತೀರ್ಪು ನೀಡಿದ್ದು ಉಪ್ಪಿನಂಗಡಿ ವಿಜಯವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾದ ಪ್ರಸ್ತುತ ಶಾಸಕರಾಗಿರುವ ಅಶೋಕ್ ಕುಮಾರ್ ರೈಯವರ ಸುದೀರ್ಘ ೧೨ ವರ್ಷಗಳ ಹೋರಾಟಕ್ಕೆ ಕೊನೆಗೂ ಜಯಸಿಕ್ಕಂತಾಗಿದೆ.

ಕಂಬಳ ತುಳುನಾಡಿನ ಜಾನಪದ ಕ್ರೀಡೆಯಾಗಿದ್ದು , ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಈ ಕ್ರೀಡೆನಡೆಯುತ್ತಿದ್ದು ಕರಾವಳಿಯ ರೈತಾಪಿ ಜನರು ಭತ್ತದ ಕೊಯ್ಲಿನ ಜನರು ತಮ್ಮ ಮನರಂಜನೆಗೋಸ್ಕರ ಏರ್ಪಡಿಸುತ್ತಿದ್ದ ಈ ಕಂಬಳ ಕ್ರೀಡೆಯು ಕ್ರಮೇಣಸಾಂಪ್ರದಾಯಿಕ ಕ್ರೀಡೆಯಾಗಿ ಬೆಳೆದು ಬಂತು.

ಕಂಬಳಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹಿಂದಿನ ಕಾಲದಲ್ಲಿ ರಾಜರುಗಳ ಬೆಂಬಲ ಮತ್ತು ಪ್ರೋತ್ಸಾಹದಿಂದ ಈ ಕ್ರೀಡೆ ನಡೆಯುತ್ತಿತ್ತು. ಹೆಚ್ಚಾಗಿ ನವೆಂಬರ್ ಬಳಿಕ ಮಾರ್ಚ್ ತನಕ ಕರಾವಳಿ ಜಿಲ್ಲೆಗಳಲ್ಲಿ ಈ ಕ್ರೀಡೆ ನಡೆಯುತ್ತದೆ. ಕಂಬಳದಲ್ಲಿ ಎರಡು ಬಲಿಷ್ಟ ಕೋಣಗಳ ಕುತ್ತಿಗೆಗೆ ನೊಗ ಕಟ್ಟಿ ಅವುಗಳನ್ನು ಓಡಿಸಲಾಗುತ್ತದೆ. ಈ ಸಮಯದಲ್ಲಿ ಕೋಣಗಳು ಅತೀ ವೇಗವಾಗಿ ಓಡಲಿಕ್ಕಾಗಿ ಓಡಿಸುವ ವ್ಯಕ್ತಿ ಕೋಣಗಳಿಗೆ ಹಿಂಸಾತ್ಮ ರೀತಿಯಲ್ಲಿ ಪೆಟ್ಟು ಕೊಡುತ್ತಾನೆ ಎಂಂದು ಪ್ರಾಣಿದಯಾಸಂಘ (ಪೇಟಾ) ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿ ಕಂಬಳವನ್ನು ನಿಷೇಧಿಸುವಂತೆ ಆಗ್ರಹಿಸಿತ್ತು. ಪೇಟಾ ನ್ಯಾಯಾಲಯದಲ್ಲಿ ಮಾಡಿರುವ ಆರೋಪಗಳಲ್ಲಿ ಕೋಣಗಳನ್ನು ಹಿಂಸಾತ್ಮಕ ರೀತಿಯಲ್ಲಿ ಎಳೆಯುವಿಕೆ, ಕುಣಿಯುವಿಕೆ ಮತ್ತು ಮೂಗಿನ ಹಗ್ಗಗಳ ಒರಟು ನಿರ್ವಹಣೆ ಮೂಲಕ ಪ್ರಾಣಿಗಳಿಗೆ ಹಿಂಸಾತ್ಮಕ ರೀತಿಯಲ್ಲಿ ಕೌರ್ಯವನ್ನು ಮೆರೆಯಲಾಗಿತ್ತು ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ದಾವೆಯಲ್ಲಿ ತಿಳಿಸಿತ್ತು. ಕಂಬಳದ ಜೊತೆ ತಮಿಳುನಾಡಿನಲ್ಲಿ ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ಗೂಳಿಯನ್ನು ಪಳಗಿಸುವ ಜಲ್ಲಿಕಟ್ಟು ವಿರುದ್ದವೂ ಪೇಟಾ ದಾವೆಯನ್ನು ಹೋಡಿತ್ತು. ಎರಡೂ ಪ್ರಕರಣಗಳು ಸುಪ್ರಿಂ ಅಗಳದಲ್ಲಿತ್ತು.

೧೨ ವರ್ಷಗಳ ಬಳಿಕ ನ್ಯಾಯ

ಪೇಟಾ ಹೂಡಿರುವ ದಾವೆಯ ವಿರುದ್ದ ಕಂಬಳದ ಪರವಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಲ ಸಮಿತಿ ಅಧ್ಯಕ್ಷರಾದ , ಪ್ರಸ್ತುತ ಪುತ್ತೂರು ಶಾಸಕರಾಗಿರುವ ಅಶೋಕ್‌ಕುಮಾರ್ ರೈಯವರು ಪೇಟಾ ವಿರುದ್ದ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿ ಕಂಬಳ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಇದರಲ್ಲಿ ಯಾವುದೇ ರೀತಿಯ ಪ್ರಾಣಿ ಹಿಂಸೆಯಾಗುತ್ತಿಲ್ಲ. ಕಂಬಳದ ಬಗ್ಗೆ ಪೇಟಾ ಮಾಡಿರುವ ಆರೋಪಗಳು ನ್ಯಾಯಬದ್ದತೆಯಿಂದ ಕೂಡಿಲ್ಲ ಎಂದು ಕಂಬಳ ಪರ ವಕೀಲರು ನ್ಯಾಯಾಲಯದಲ್ಲಿ ವಾದಮಂಡಿಸುವ ಮೂಲಕ ಕಂಬಳದಲ್ಲಿ ಪ್ರಾಣಿ ಹಿಂಸೆಯಿಲ್ಲ ಎಂಬುದನ್ನು ಸಾಭೀತುಪಡಿಸುವಲ್ಲಿ ಯಸಶ್ವಿಯಾಗಿದ್ದರು. ಇದೀಗ ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ರೈಯವರ ಏಕಾಂಗಿ ಹೋರಾಟಕ್ಕೆ ಜಯ ದೊರಕಿದ್ದು ಕಂಬಳ ಪರವಾಗಿ ದೇಶದ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಮುಂದಿನ ದಿನಗಳಲ್ಲಿ ಕಂಬಳ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಡೆಸಬಹುದಾಗಿದೆ.

ಹೋರಾಟಕ್ಕೆ ಸಂದ ಜಯ: ಅಶೋಕ್ ರೈ

ಕಂಬಳದ ವಿರುದ್ದ ಪೇಟಾ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿದಾಗ ಅದರ ವಿರುದ್ದ ನಾನು ಸುಪ್ರಿಂ ಕೋರ್ಟಿನಲ್ಲಿ ಕಾನೂನು ಹೋರಾಟವನ್ನು ನಡೆಸಿದ್ದೆ. ಕಂಬಳ ಸಮಿತಿಗಳ ಪರವಾಗಿ ತಾನು ಸುಪ್ರಿಂ ಕೋರ್ಟಿಗೆ ಸುಪ್ರಿಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸವಿದೆ. ಧಾರ್ಮಿಕ ಪರಂಪರೆ ಇದೆ, ಕಂಬಳದಲ್ಲಿ ಕೋಣಗಳಿಗೆ ಹಿಂಸೆಯಾಗುವುದಿಲ್ಲ, ಮಕ್ಕಳಂತೆ ಕೋಣಗಳನ್ನು ಸಾಕಿ ಸಲಹಲಾಗುತ್ತಿದೆ ಆದ್ದರಿಂದ ಕಂಬಳ ಕೂಟಕ್ಕೆ ನಿಷೇಧ ಹೇರಬಾರದು ಎಂದಿನಂತೆ ಕಂಬಳ ಕೂಟ ಆಯೋಜನೆಗೆ ಅವಕಾಶ ಮಾಡಿಕೊಡಬೇಕು ಎಂದು ನ್ಯಾಯಾಲಯದ ಮೂಲಕ ಮನವಿಯನ್ನು ಮಾಡಿದ್ದೆ. ನನ್ನ ಸತತ ೧೨ ವರ್ಷಗಳ ಹೋರಾಟಕ್ಕೆ ಜಯಗಳಿಸಿದ್ದು ತೀರ್ಪು ನಮ್ಮ ಪರ ಬಂದಿದೆ. ಇದು ತನಗೆ ಅತೀವ ಸಂತಸವನ್ನು ತಂದಿದೆ ಎಂದು  ಉಪ್ಪಿನಂಗಡಿ ವಿಜಯವಿಕ್ರಮ ಕಂಬಳ ಸಮಿತಿ ಅಧ್ಯಕ್ಷರೂ , ಶಾಸಕರೂ ಆಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದ್ದಾರೆ.

ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

Posted by Vidyamaana on 2024-01-29 07:59:38 |

Share: | | | | |


ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ : ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ.  ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.


ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68),  ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ. ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು.‌ ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. 


ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.

ನಂದಾವರ : ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೇಟಿ

Posted by Vidyamaana on 2023-07-08 16:19:45 |

Share: | | | | |


ನಂದಾವರ : ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೇಟಿ

ಬಂಟ್ವಾಳ : ಗುಡ್ಡ ಕುಸಿತದಿಂದಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಈಗಾಗಲೇ ಸರಕಾರದಿಂದ 6.20 ಲಕ್ಷ ರೂಪಾಯಿ ಮೊತ್ತವನ್ನು ಪರಿಹಾರ ಹಾಗೂ ಮನೆ ದುರಸ್ತಿಗಾಗ  ಸರಕಾರ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿರುವ ಗಾಯಾಳು ಯುವತಿಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಯವರ ವರದಿ ನೀಡಿದ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಹೇಳಿದರು.

ಶನಿವಾರ ಸಂಜೆ ನಂದಾವರ-ಗುಂಪುಮನೆ ಎಂಬಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳಕ್ಕೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಮಾತನಾಡಿದ ಅವರು ಗುಡ್ಡ ಕುಸಿತ ಉಂಟಾಗಿ ಮಹಿಳೆ ಮೃತಪಟ್ಟ ಘಟನೆ ಅತ್ಯಂತ ವಿಷಾದನೀಯ ವಾಗಿದ್ದು, ಮುಂದಕ್ಕೆ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ಮರುಕಳಿಸಬಾರದು. ಈ ಬಗ್ಗೆ ಸ್ಥಳೀಯ ಮಟ್ಟದ ಅಧಿಕಾರಿಗೂ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮಳೆ ಹಾಗೂ ಪ್ರಾಕೃತಿಕ ವಿಕೋಪದಂತಹ ಸಂದರ್ಭದಲ್ಲಿ ಜನರ ಬೇಡಿಕೆ, ಕರೆಗಳನ್ನು ನಿರ್ಲಕ್ಷಿಸದೆ ಅಧಿಕಾರಿಗಳು ತಕ್ಷಣ ಸ್ಪಂದಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. 

ನಂದಾವರ ಪರಿಸರದಲ್ಲಿ ಉಂಟಾಗಿರುವ ಅನಾಹುತಕ್ಕೆ ಕಾರಣ ಕಂಡುಕೊಂಡು ಮುಂದಕ್ಕೆ ಇಂತಹ ಘಟನೆ ಮರುಕಳಿಸದಂತೆ ಶಾಶ್ವತ ಪರಿಹಾರ ಕ್ರಮವನ್ನು ಕೈಗೊಳ್ಳುವಂತೆ ಇದೇ ವೇಳೆ ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು. ಎನ್ ಡಿ ಆರ್ ಎಫ್ ಅಥವಾ ಎಸ್ ಡಿ ಆರ್ ಎಫ್ ಯೋಜನೆಗಳಲ್ಲಿ ಒಂದು ವೇಳೆ ಇಂತಹ ದೊಡ್ಡ ಕೆಲಸಕ್ಕೆ ಅವಕಾಶ ಇಲ್ಲದಿದ್ದಲ್ಲಿ ಯಾವುದೇ ಯೋಜನೆಯಡಿ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಜನರ ಪ್ರಾಣ, ಸೊತ್ತು ಹಾನಿಯಾಗದಂತೆ ಶಾಶ್ವತ ಪರಿಹಾರವನ್ನು ತಕ್ಷಣ ಕೈಗೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗೆ ಸೂಚಿಸಿದರು.

ಇದೇ ವೇಳೆ ಸ್ಥಳೀಯ ನಿವಾಸಿ ಜಲಜಾ ನಾಯಕ್ ಅವರು ತನ್ನ ಮನೆ ತೀರಾ ಶಿಥಿಲಗೊಂಡು ವಾಸಿಸಲು ಅಸಾಧ್ಯ ಎಂದು ಸಚಿವರಲ್ಲಿ ಮನವಿ ಮಾಡಿದರು. ಮನೆ ಪರಿಶೀಲನೆ ನಡೆಸಿದ್ದ ಉಸ್ತುವಾರಿ ಸಚಿವರು ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.


   ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಸುದೀಪ್ ಕುಮಾರ್ ಶೆಟ್ಟಿ, ಬೇಬಿಕುಂದರ್,  ಮಹಮ್ಮದ್ ನಂದಾವರ, ಯೂಸುಫ್ ಕರಂದಾಡಿ, ಸಮದ್ ಕೈಕಂಬ, ಇಬ್ರಾಹಿಂ ನವಾಜ್ ಬಡಕಬೈಲು, ಆರಿಫ್ ನಂದಾವರ, ಶಾಫಿ ನಂದಾವರ, ಮುಸ್ತಾಕ್, ರಮ್ಸಾದ್ ಮೋನು, ಶರೀಫ್ ನಂದಾವರ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ತಹಶಿಲ್ದಾರ್ ಎಸ್.ವಿ.ಕೂಡಲಗಿ,  ಡಿ.ವೈ.ಎಸ್.ಪಿ‌. ಪ್ರಥಾಪ್ ಥೋರಾಟ್, ಇನ್ಸ್ಪೆಕ್ಟರ್ ವಿವೇಕಾನಂದ, ಪಿ.ಡಿ.ಒ. ಲಕ್ಷಣ್, ಮತ್ತಿತರರು ಉಪಸ್ಥಿತರಿದ್ದರು



Leave a Comment: