ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಅಯೋಧ್ಯಾ ಕರಸೇವಕ ನಟ್ಟೋಜ ಶಿವಾನಂದ ರಾವ್ ಅವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ

Posted by Vidyamaana on 2024-01-23 13:57:19 |

Share: | | | | |


ಅಯೋಧ್ಯಾ ಕರಸೇವಕ ನಟ್ಟೋಜ ಶಿವಾನಂದ ರಾವ್ ಅವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ

ಪುತ್ತೂರು: ಪುತ್ತೂರಿನ  ಹಿರಿಯ ಅಯೋಧ್ಯಾ ಕರಸೇವಕರಾದ ನಟ್ಟೋಜ ಶಿವಾನಂದ ರಾವ್‌ ಅವರನ್ನು ಪುತ್ತಿಲ ಪರಿವಾರದಿಂದ ಸನ್ಮಾನಿಸಲಾಯಿತು.


ನಟ್ಟೋಜ ಶಿವಾನಂದ ರಾವ್ ಅವರು ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿರುವುದರ ಜತೆಗೆ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷರು, ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರೂ ಆಗಿದ್ದರು. ಅಯೋಧ್ಯೆ ಈ ಸಂದರ್ಭ ಅವರ ಪುತ್ರ, ಪುತ್ತೂರು ಅಂಬಿಕಾ ವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಕಾರ್ಯದರ್ಶಿ ಉಮೇಶ್ ವೀರಮಂಗಲ, ರೂಪೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಮಂಗಳೂರು: ಸೇಂಟ್ ಜೆರೋಸಾ ಶಾಲೆ ಪ್ರಕರಣ: ವಿದ್ಯಾರ್ಥಿನಿಯ ಪೋಷಕಿಗೆ ಬೆದರಿಕೆ ಕರೆ, ದೂರು ದಾಖಲು

Posted by Vidyamaana on 2024-02-20 11:24:25 |

Share: | | | | |


ಮಂಗಳೂರು: ಸೇಂಟ್ ಜೆರೋಸಾ ಶಾಲೆ ಪ್ರಕರಣ: ವಿದ್ಯಾರ್ಥಿನಿಯ ಪೋಷಕಿಗೆ ಬೆದರಿಕೆ ಕರೆ, ದೂರು ದಾಖಲು

ಮಂಗಳೂರು: ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಧರ್ಮ ಅವಹೇಳನ ಆರೋಪ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ.


ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ಪೋಷಕಿಗೆ ವಿದೇಶದಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಪೋಷಕಿಯ ಕುಟುಂಬದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.


ಜೆಪ್ಪಿನಮೊಗರು ನಿವಾಸಿಯಾಗಿರುವ ಪೋಷಕಿ ಕವಿತಾ ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಕಂಕನಾಡಿ ನಗರ ಪೊಲೀಸ್‌ ಠಾಣೆಗೆ ಕವಿತಾ ದೂರು ನೀಡಿದ್ದಾರೆ.


ಕವಿತಾ ಪುತ್ರಿ ಸೇಂಟ್ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ದ ಪೋಷಕರ ಪ್ರತಿಭಟನೆಯಲ್ಲೂ ಕವಿತಾ ಭಾಗವಹಿಸಿದ್ದರು.


ಶಿಕ್ಷಕಿ ಆಡಿಯೋ ವೈರಲ್ ಮಾಡಿದ್ದು ಪೋಷಕಿ ಕವಿತಾ ಎಂದು ಆರೋಪಿಸಿ ಬೆದರಿಕೆ ಹಾಕಲಾಗಿದ್ದು, ಕತಾರ್, ದುಬೈ, ಸೌದಿ ಅರೇಬಿಯಾ ಸೇರಿದಂತೆ ಹಲವೆಡೆಯಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು,ಹಲವು ವಿದೇಶಿ ನಂಬ‌ರ್ ಗಳಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ಕವಿತಾ ದೂರು ದಾಖಲಿಸಿದ್ದಾರೆ

ವಿಟ್ಲದಲ್ಲಿ ಇತಿಹಾಸ ನಿರ್ಮಿಸಿದ ರೋಡ್ ಶೋ

Posted by Vidyamaana on 2023-05-04 15:23:10 |

Share: | | | | |


ವಿಟ್ಲದಲ್ಲಿ ಇತಿಹಾಸ ನಿರ್ಮಿಸಿದ ರೋಡ್ ಶೋ

ವಿಟ್ಲ: ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪರವಾಗಿ ವಿಟ್ಲದಲ್ಲಿ ಬೃಹತ್ ರೋಡ್ ಶೋ ನಡೆಯಿತು. 

ಪುತ್ತೂರು: ಎಸ್.ಡಿ.ಪಿ.ಐ ಚುನಾವಣಾ ಉಸ್ತುವಾರಿಗಳ ಸಭೆ- ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸ‌ ಕೊಡ್ಲಿಪೇಟೆ ಭಾಗಿ

Posted by Vidyamaana on 2023-03-08 09:36:51 |

Share: | | | | |


ಪುತ್ತೂರು: ಎಸ್.ಡಿ.ಪಿ.ಐ ಚುನಾವಣಾ ಉಸ್ತುವಾರಿಗಳ ಸಭೆ- ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸ‌ ಕೊಡ್ಲಿಪೇಟೆ ಭಾಗಿ

ಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಗಳ ಸಭೆ ಮಾ.6ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.ಸಭೆಯಲ್ಲಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಪರ್ ಕೊಡ್ಲಿಪೇಟೆ, ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಶಾಕಿ‌ ಅಳಕೆಮಜಲು ಭಾಗವಹಿಸಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ಎಸ್.ಡಿ.ಪಿ.ಐ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್, ಕಾರ್ಯದರ್ಶಿ ಅಬ್ದುಲ್ ರಹೀಂ, ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಾವು ಹಾಗೂ ಕ್ಷೇತ್ರದ ಎಲ್ಲಾ ಮಟ್ಟದ ನಾಯಕರುಗಳು ಭಾಗವಹಿಸಿದ್ದರು.

ದಕ್ಷಿಣಕನ್ನಡ ಜಿಲ್ಲೆಗೆ ಸೇರಿದಂತೆ ರಾಜ್ಯ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕ

Posted by Vidyamaana on 2024-01-15 04:50:45 |

Share: | | | | |


ದಕ್ಷಿಣಕನ್ನಡ ಜಿಲ್ಲೆಗೆ ಸೇರಿದಂತೆ ರಾಜ್ಯ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕ

ಮಂಗಳೂರು, ಜ.15: ರಾಜ್ಯದಲ್ಲಿ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಮಾಡಿದ್ದಾರೆ. 


ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ, ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ.ಶಿವಮೊಗ್ಗ - ಟಿಡಿ ಮೇಘರಾಜ್, ಉತ್ತರ ಕನ್ನಡ - ಎನ್.ಎಸ್ ಹೆಗಡೆ, ಕೊಡಗು - ರವಿ ಕಾಳಪ್ಪ , ಹಾಸನ - ಸಿದ್ದೇಶ್ ನಾಗೇಂದ್ರ, ಬೆಂಗಳೂರು ದಕ್ಷಿಣ- ಸಿಕೆ ರಾಮಮೂರ್ತಿ ಹೀಗೆ ಎಲ್ಲ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ

ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರೆ.ವಿಜಯ್ ಹಾರ್ವಿನ್ ಸಹಿತ 10 ಮಂದಿ ಆಯ್ಕೆ

Posted by Vidyamaana on 2023-11-01 04:33:15 |

Share: | | | | |


ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರೆ.ವಿಜಯ್ ಹಾರ್ವಿನ್ ಸಹಿತ 10 ಮಂದಿ ಆಯ್ಕೆ

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಸನ್ಮಾನಕ್ಕೆ 10 ಆಯ್ಕೆ ಮಾಡಲಾಗಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ಮಾರ್ಗದರ್ಶನದಲ್ಲಿ 5 ಮಂದಿಯ ಆಯ್ಕೆ ಸಮಿತಿಯಿಂದ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.ಡಾ.ಸುಬ್ರಾಯ ಭಟ್‌(ವೈದ್ಯಕೀಯ), ಎ.ಪಿ. ನಾರಾಯಣ ಮರಿಕೆ(ಕೃಷಿ), ನಿರ್ಮಲಾ ಸುರತ್ಕಲ್ (ಸಾಹಿತ್ಯ), ನಾರಾಯಣ ಕೆ(ಶಿಕ್ಷಣ), ದಯಾನಂದ ರೈ ಕೋರ್ಮಂಡ(ಕ್ರೀಡೆ), ಸುಂದರ ರೈ ಮಂದಾರ(ರಂಗಭೂಮಿ), ರೆ.ವಿಜಯ್ ಹಾರ್ವಿನ್(ಶಿಕ್ಷಣ- ಸಮನ್ವಯ), ಡಾ.ಅಜಯ್(ಸಮಾಜ ಸೇವೆ), ನಾರಾಯಣ ಕುಂಬ್ರ(ಸಾಹಿತ್ಯ ಸಂಘಟನೆ) ಮತ್ತು ಸಿದ್ದೀಕ್ ನೀರಾಜೆ (ಪತ್ರಿಕೋದ್ಯಮ) ಅವರನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಸೀಲ್ದಾರ್ ಜೆ ಶಿವಶಂಕರ್, ಸಮಿತಿ ಸಂಚಾಲಕರಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ನ್ಯಾಯವಾದಿ ಬೆಟ್ಟ ಈಶ್ವರ ಭಟ್, ಉಪನ್ಯಾಸಕ ನರೇಂದ್ರ ರೈ ದೇರ್ಲ ಅವರು ಆಯ್ಕೆ ಸಮಿತಿಯಲ್ಲಿದ್ದರು.



Leave a Comment: