ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಕಾಪು : ರಂಗ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

Posted by Vidyamaana on 2023-12-13 09:16:32 |

Share: | | | | |


ಕಾಪು : ರಂಗ ಕಲಾವಿದ  ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಕಾಪು: ಸಮಾಜ ಸೇವಕ, ಹಿರಿಯ ರಂಗ ಕಲಾವಿದ, ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು, ಧರಣಿ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ, ಕಾಪು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಲೀಲಾಧರ ಶೆಟ್ಟಿ (68) ಅವರು ಪತ್ನಿ ವಸುಂಧರಾ ಶೆಟ್ಟಿ (58) ಸಮೇತರಾಗಿ ಮಂಗಳವಾರ ಮಧ್ಯರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.



ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ದಂಪತಿ ಮಂಗಳವಾರ ಮಧ್ಯರಾತ್ರಿ 11.20 ರಿಂದ 12.30 ರ ನಡುವಿನ‌ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ‌ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.


ಸಾವಿನ ಬಗ್ಗೆ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿವೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಮುಂದುವರಿಸಿದ್ದಾರೆ.


 ಎಲ್.ಐ.ಸಿ. ಏಜಂಟರಾಗಿ, ಕಲಾ ಸಂಘಟಕ, ಕಲಾಪೋಷಕರಾಗಿದ್ದ ಅವರು ವಿವಿಧ ಕಾರ್ಯಕ್ರಮಗಳ ಆಯೋಜಕರಾಗಿ ಕಲೆ, ಸಂಸ್ಕೃತಿ, ಸಂಸ್ಕಾರ, ಧಾರ್ಮಿಕ, ಜನಪದ, ಶೈಕ್ಷಣಿಕ ಕ್ಷೇತ್ರಗಳ ಪೋಷಕರಾಗಿ ಸ್ಚಾರ್ಥವಿಲ್ಲದೇ, ಕಳಂಕ ರಹಿತರಾಗಿ ಸಮಾಜದಲ್ಲಿ ಗುರುತಿಸಲ್ಪಟ್ಟಿದ್ದರು. ಅವರ ಸೇವೆಗಾಗಿ ಎಲ್ಲರೂ ಅವರನ್ನು ಆತ್ಮೀಯವಾಗಿ ಲೀಲಣ್ಣ ಎಂದೇ ಕರೆಯುತ್ತಿದ್ದರು.

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಗಡುವು ಜೂನ್ 30ರ ವರೆಗೆ ವಿಸ್ತರಣೆ

Posted by Vidyamaana on 2023-03-28 10:04:26 |

Share: | | | | |


ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಗಡುವು ಜೂನ್ 30ರ ವರೆಗೆ ವಿಸ್ತರಣೆ

ಪುತ್ತೂರು : ಪಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಕೇಂದ್ರ ಸರಕಾರ ಮುಂದೂಡಿದೆ.ಜೂನ್ 30ರವರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು ಜುಲೈ 1ರಿಂದ ಲಿಂಕ್ ಕಡ್ಡಾಯವೆಂದು ಕೇಂದ್ರ ಹಣಕಾಸು ಇಲಾಖೆ ಸೂಚನೆ ನೀಡಿದೆ..

ಪುತ್ತೂರು : ಸುಲ್ತಾನ್ ಡೈಮಂಡ್ಸ್ - ಗೋಲ್ಡ್ ಮಳಿಗೆಗೆ ಶಾಸಕ ಅಶೋಕ್‌ ಕುಮಾ‌ರ್ ರೈ ಭೇಟಿ

Posted by Vidyamaana on 2024-03-21 09:50:58 |

Share: | | | | |


ಪುತ್ತೂರು : ಸುಲ್ತಾನ್ ಡೈಮಂಡ್ಸ್ - ಗೋಲ್ಡ್ ಮಳಿಗೆಗೆ ಶಾಸಕ ಅಶೋಕ್‌ ಕುಮಾ‌ರ್ ರೈ ಭೇಟಿ

ಪುತ್ತೂರು: ಬಹುಭಾಷಾ ತಾರೆ ಪ್ರಿಯಾಮಣಿ ಅವರನ್ನು ಪುತ್ತೂರಿಗೆ ಕರೆಸಿಕೊಂಡು ಅದ್ದೂರಿಯಾಗಿ ಪುತ್ತೂರಿನ ಜನರ ಸೇವೆಗೆ ತೆರೆದುಕೊಂಡ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಗೆ ಶಾಸಕ ಅಶೋಕ್‌ ಕುಮಾ‌ರ್ ರೈ ಭೇಟಿ ನೀಡಿದರು.

ಉದ್ಘಾಟನೆ ಸಂದರ್ಭ ಅಧಿವೇಶನ ನಡೆಯುತ್ತಿದ್ದ ಕಾರಣ ಭಾಗವಹಿಸಲು ಅಸಾಧ್ಯವಾಗಿತ್ತು. ಆದ್ದರಿಂದ ಇದೀಗ ಮಳಿಗೆಗೆ ಭೇಟಿ ನೀಡಿದರು.

ವಜ್ರ ಮತ್ತು ಚಿನ್ನದ ಆಭರಣಗಳ ವಿವಿಧ ವಿನ್ಯಾಸಗಳನ್ನು ಕಂಡ ಶಾಸಕ ಅಶೋಕ್ ಕುಮಾರ್ ರೈ ಅವರು ಮಳಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ರಾಂಚ್ ಮ್ಯಾನೇಜರ್ ಕೆ.ಎಸ್ ಮುಸ್ತಫಾ ಕಕ್ಕಿಂಜೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹಮ್ರಾಝ್, ಪವನ್, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ

Posted by Vidyamaana on 2024-03-27 12:26:28 |

Share: | | | | |


ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ

ಬೆಳ್ತಂಗಡಿ: ಕಾಂಗ್ರೆಸ್ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್,  ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಟ್ಲ: ಬಾಣಂತಿ ಬಾವಿಗೆ ಹಾರಿ ಆತ್ಮಹತ್ಯೆ

Posted by Vidyamaana on 2023-06-28 11:30:27 |

Share: | | | | |


ವಿಟ್ಲ: ಬಾಣಂತಿ ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ: ಇಲ್ಲಿನ‌ ಜೋಗಿಮಠದಲ್ಲಿ ವಿವಾಹಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಬಂಟ್ವಾಳ ತಾಲೂಕು ಕೈರಂಗಳ ಗ್ರಾಮದ ಮೋಟುಗೋಳಿ ಮುನೀರ್ ಕಾಟೇಜ್ ನ ಅಬ್ದುಲ್ ರಹಿಮಾನ್ ರವರ ಪುತ್ರಿ ಅನಿಶಾ (34) ಆತ್ಮಹತ್ಯೆ ಮಾಡಿಕೊಂಡವರು.

ಈ ಬಗ್ಗೆ ಪ್ರಕರಣ ದಾಖಲಿಸಿರುವ ಮೃತರ ಸಹೋದರ ಮುನೀರ್ ಅಹಮ್ಮದ್ ಅವರು, ತನ್ನ ಅಕ್ಕನ‌ ಸಾವಿನಲ್ಲಿ ಯಾವುದೇ ಸಂಶಯವಿಲ್ಲ. ನಾಲ್ಕನೇ ಹೆರಿಗೆಯಾದ ಬಳಿಕ ಆಕೆ ಮಾನಸಿಕವಾಗಿ ನೊಂದಿದ್ದಳು ಎಂದು ತಿಳಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ

Posted by Vidyamaana on 2023-10-08 21:23:11 |

Share: | | | | |


ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ

 ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ.ಶಾಸಕ ಎಸ್ಟಿ ಸೋಮಶೇಖರ್ ಕೂಡ ಬಹಿರಂಗವಾಗಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.


ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಇದೀಗ ಈ ಸಾಲಿಗೆ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿವಿ ಸದಾನಂದ ಗೌಡ ಸೇರಿದ್ದು, ಪಕ್ಷದ ರಾಜ್ಯ ನಾಯಕರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಯಲ್ಲಿನ ಶೇ 75ರಷ್ಟು ಜನರಿಗೆ ಈ ಮೈತ್ರಿ ಇಷ್ಟವಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಪತ್ರಿಕೆಯೊಂದರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಎನ್ಡಿಎ ಮೈತ್ರಿಕೂಟವನ್ನು ಬಲಪಡಿಸಬೇಕು ನಿಜ.


ಆದರೆ, ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚಿಸದೆ, ಏಕಪಕ್ಷೀಯವಾಗಿ ಮೈತ್ರಿ ಮಾಡಿಕೊಂಡರೆ, ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಚುನಾವಣೆ ಮುಗಿದು ನಾಲ್ಕುತಿಂಗಳು ಕಳೆದರೂ ಪರಿಸ್ಥಿತಿ ಬದಲಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿತ್ತು.


ಇದೀಗ ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗುತ್ತದೆ. ಪಕ್ಷದಲ್ಲಿ ಒಕ್ಕಲಿಗ ನಾಯಕರ ಮಾತುಗಳಿಗೂ ಬೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಪಕ್ಷವು ನನಗೆ ಎಲ್ಲವನ್ನೂ ನೀಡಿದೆ. ರಾಜ್ಯದಲ್ಲಿ ಅತ್ಯಂತ ಬಲಿಷ್ಠವಾಗಿದ್ದ ಪಕ್ಷಕ್ಕೆ ಈ ಸ್ಥಿತಿ ಬಂದಿರುವುದರ ಬಗ್ಗೆ ನೋವಿದೆ.


ಅದನ್ನು ಸರಿಪಡಿಸಬೇಕು ಎಂಬುದಷ್ಟೇ ನನ್ನ ಆಗ್ರಹ. ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ವಾಸ್ತವ ವಿಚಾರಗಳನ್ನು ಮಾತನಾಡಲು ನನಗೆ ಯಾವ ರೀತಿಯ ಭಯವೂ ಇಲ್ಲ ಎಂದು ಹೇಳಿದರು.



Leave a Comment: