ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಸುದ್ದಿಗಳು News

Posted by vidyamaana on 2024-07-01 12:44:53 |

Share: | | | | |


ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.‌

ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ.‌ ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 Share: | | | | |


ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಸನ್ನಿದಿಯಲ್ಲಿ ಅಯ್ಯಪ್ಪ ದೀಪೋತ್ಸವ : ಆಮಂತ್ರಣ ಪತ್ರ ಬಿಡುಗಡೆ

Posted by Vidyamaana on 2023-12-21 11:15:59 |

Share: | | | | |


ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಸನ್ನಿದಿಯಲ್ಲಿ ಅಯ್ಯಪ್ಪ ದೀಪೋತ್ಸವ : ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಡಿ.27 ರಂದು ನಡೆಯಲಿರುವ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಡಿ.20 ರಂದು ನಡೆಯಿತು.ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯುವ ಅಯ್ಯಪ್ಪ ದೀಪೋತ್ಸವ ಆಮಂತ್ರಣ ಪತ್ರವನ್ನು ಶ್ರೀ ಮಹಾಲಿಂಗೇಶ್ವರ ದೇವರ ಸತ್ಯ ಧರ್ಮ ನಡೆಯಲ್ಲಿಟ್ಟು ಪ್ರಾರ್ಥನೆ ಸಲ್ಲಿಸಿದ ಬಳಿಕ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು.



ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರಾಮಚಂದ್ರ ಕಾಮತ್, ರವೀಂದ್ರನಾಥ್ ರೈ ಬಳ್ಳಮಜಲು, ಡಾ. ಸುಧಾ ಎಸ್. ರಾವ್, ರಾಮದಾಸ್ ಗೌಡ, ಶೇಖರ್ ನಾರಾವಿ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಅಯ್ಯಪ್ಪ ಭಕ್ತವೃಂದ ದೇವಾನಂದ ಸಹಿತ ಹಲವರು ಉಪಸ್ಥಿತರಿದ್ದರು

ಮುಳಿಯ ಮಾನ್ಸೂನ್ ಧಮಾಕ ಇಂದೇ ಕೊನೆ

Posted by Vidyamaana on 2023-08-31 06:39:36 |

Share: | | | | |


ಮುಳಿಯ ಮಾನ್ಸೂನ್ ಧಮಾಕ ಇಂದೇ ಕೊನೆ

ಪುತ್ತೂರು: ಮುಂಗಾರಿನ ಸಿಂಚನದೊಂದಿಗೆ ಆರಂಭಗೊಂಡ ಮುಳಿಯ ಮಾನ್ಸೂನ್ ಧಮಾಕ ಇಂದು ಅಂದರೆ ಆಗಸ್ಟ್ 31ರಂದು ಕೊನೆಯಾಗಲಿದೆ.

ಮುಂಗಾರು ಮಳೆಯ ಸಂಭ್ರಮವನ್ನು ಇಮ್ಮಡಿಗೊಳಿಸಿ ಮುಳಿಯ ಜ್ಯುವೆಲ್ಸ್’ನೊಂದಿಗೆ ಎನ್ನುವ ಸಾಲಿನೊಂದಿಗೆ ಗ್ರಾಹಕರ ಮುಂದೆ ಬಂದ ಹಬ್ಬಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಪುತ್ತೂರು ಹಾಗೂ ಬೆಳ್ತಂಗಡಿಯ ಮುಳಿಯ ಶೋರೂಂಗೆ ಆಗಮಿಸಿದ ಗ್ರಾಹಕರು, ಮುಳಿಯ ಮಾನ್ಸೂನ್ ಧಮಾಕದ ವಿಶೇಷ ಆಫರ್’ಗಳಿಗೆ ಮನಸೋತ ನಿದರ್ಶನ ಇದೆ.

ಆಯ್ದ ಆಭರಣಗಳ ಮೇಲೆ ಕಾಸ್ಟ್ ಪ್ರೈಸ್ ಸೇಲ್, ನಿಮ್ಮ ಹಳೆಯ ಚಿನ್ನಾಭರಣಗಳನ್ನು ಹೊಸ 916 ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳುವ ಅವಕಾಶವಿದ್ದು ಪ್ರತಿ ಗ್ರಾಂ ಮೇಲೆ 100 ರೂ.ಗೂ ಅಧಿಕ ಮೊತ್ತವನ್ನು ಪಡೆಯಬಹುದು. ಇದಲ್ಲದೇ, ವಿಎ ಚಾರ್ಜಸ್ ಮೇಲೆ ಶೇ. 50ರವರೆಗೆ, ವಜ್ರದ ಮೌಲ್ಯದ ಮೇಲೆ ಶೇ, 10ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಶೇ. 5ರವರೆಗೆ ರಿಯಾಯಿತಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ಅಂದಹಾಗೇ, ಈ ಎಲ್ಲಾ ಆಫರ್’ಗಳು ಇಂದು ಸಂಜೆಯವರೆಗೆ ಮಾತ್ರ ಲಭ್ಯವಿದೆ.

ಬೆಳ್ತಂಗಡಿ : ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ರೇಪ್ - ಮರ್ಡರ್ ಪ್ರಕರಣ

Posted by Vidyamaana on 2023-06-16 10:31:41 |

Share: | | | | |


ಬೆಳ್ತಂಗಡಿ : ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ರೇಪ್ - ಮರ್ಡರ್ ಪ್ರಕರಣ

ಬೆಳ್ತಂಗಡಿ : ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಉಜಿರೆ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಪಂಗಾಳ ನಿವಾಸಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣ 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು(ಇಂದು) ತೀರ್ಪು ಪ್ರಕಟವಾಗಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಪ್ರಕರಣದ ದೋಷಮುಕ್ತ ಎಂದು ಸಿಬಿಐ ನ್ಯಾಯಧೀಶ ಸಂತೋಷ್ ಸಿ.ಬಿ ಆದೇಶ ಮಾಡಿದ್ದಾರೆ.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಗಳ ಎರಡನೇ ಮಗಳು ಸೌಜನ್ಯ (17) ಕಾಲೇಜ್ ಮುಗಿಸಿ ಮನೆಗೆ ವಾಪಸ್ ಹೋಗುವಾಗ 9-10-2012 ರಂದು ಸಂಜೆ 4:15 ಕ್ಕೆ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.


10-10-2012 ರಂದು ರಾತ್ರಿ 10:30 ಕ್ಕೆ ಧರ್ಮಸ್ಥಳ ಮಣ್ಣಸಂಖದಲ್ಲಿ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರೇಪ್ & ಮಾರ್ಡರ್ ಅಗಿ ಪ್ರಕರಣ ದಾಖಲಾಗಿತ್ತು. 11-10-2012 ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ (38) ಬಾಹುಬಳಿ ಬೆಟ್ಟದ ಗುಡ್ಡದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಪೊಲೀಸರಿಂದ ಬಂಧಿಸಲಾಗಿತ್ತು. ಈ ಬಗ್ಗೆ ರಾಜ್ಯ ಸರಕಾರ ಸಿಐಡಿ ತನಿಖೆಗೆ ನೀಡಿತ್ತು. ನಂತರದ ದಿನಗಳಲ್ಲಿ ಪ್ರತಿಭಟನೆ ಕೂಗು ಹೆಚ್ಚಾದ ಕಾರಣದಿಂದ ರಾಜ್ಯ ಸರಕಾರ ಮತ್ತೆ ಕೇಂದ್ರ ಸಿಬಿಐ ತನಿಖೆ ನಡೆಸಲು ಆದೇಶ ಮಾಡಿತ್ತು. ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ. ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಕಳೆದ ಆರು ಭಾರಿಗೂ ಹೆಚ್ಚು ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದಾದ ಬಳಿಕ ಕೋರ್ಟ್ ಜೂನ್.16 ರಂದು ಖದ್ದು ಹಾಜರಾಗಲು ಸಮಸ್ಸ್ ನೀಡಿತ್ತು.ಅದರಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದು. ಇದೀಗ ಆರೋಪಿ ಸಂತೋಷ್ ರಾವ್ ದೋಷಮುಕ್ತನಾಗಿದ್ದಾನೆ.

ಮಂಗಳೂರು: SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

Posted by Vidyamaana on 2023-05-05 08:31:45 |

Share: | | | | |


ಮಂಗಳೂರು:  SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು.

ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ನವಾಝ್ ಉಳ್ಳಾಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ  ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು ಹಾಗೂ ಇತರ ನಾಯಕರು ಉಪಸ್ಥಿತರಿದ್ದರು

ಇಂದು ಮತ್ತು ನಾಳೆ ಉಳ್ವಾಲ, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ನಡೆಯುವ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಎಂ.ಕೆ ಫೈಝಿಯವರು ಭಾಗವಹಿಸಲಿದ್ದಾರೆ.

ರೈಲ್ವೆಗೆ ಇನ್ನು ಒಂದೇ ಸಹಾಯವಾಣಿ

Posted by Vidyamaana on 2023-06-12 08:22:08 |

Share: | | | | |


ರೈಲ್ವೆಗೆ ಇನ್ನು ಒಂದೇ ಸಹಾಯವಾಣಿ

ನವದೆಹಲಿ: ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಕರು ತಮ್ಮ ಎಲ್ಲಾ ವಿಚಾರಣೆಗಳು ಮತ್ತು ದೂರುಗಳನ್ನು ಗಮನದಲ್ಲಿಟ್ಟುಕೊಂಡು ಕೇವಲ ಒಂದು ಸಂಖ್ಯೆಯನ್ನು ಮಾತ್ರ ನೆನಪಿಟ್ಟುಕೊಳ್ಳಬೇಕು. ವಿವಿಧ ರೀತಿಯ ಕಾಳಜಿಗಳು ಅಥವಾ ಸೇವೆಗಳಿಗಾಗಿ ಅನೇಕ ಸಹಾಯವಾಣಿಗಳನ್ನು ಡಯಲ್ ಮಾಡುವ ಬದಲು, ಪ್ರಯಾಣಿಕರು ಈಗ ಒಂದೇ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡುವ ಮೂಲಕ ತಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಬಹುದು.ಪ್ರಯಾಣದ ಸಮಯದಲ್ಲಿ ಯಾವುದೇ ರೀತಿಯ ಸಹಾಯಕ್ಕಾಗಿ ಪ್ರವಾಸಿಗರು ಅಧಿಕೃತ website-railm

non

non

@rb.railnet.gov.in ಭೇಟಿ ನೀಡಬಹುದು. ಉದಾಹರಣೆಗೆ, ವೈದ್ಯಕೀಯ ಸಹಾಯ. ರೈಲು ಸಹಾಯ ಅಪ್ಲಿಕೇಶನ್ ಅನ್ನು ಉಮಾಂಗ್ ಅಪ್ಲಿಕೇಶನ್ ಮೂಲಕವೂ ಪ್ರವೇಶಿಸಬಹುದು. ಪ್ರಯಾಣದ ಸಮಯದಲ್ಲಿ ಗ್ರಾಹಕರ ಪ್ರಶ್ನೆಗಳು ಮತ್ತು ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಅನುಕೂಲವಾಗುವಂತೆ, ರೈಲ್ವೆ 182 ಸೇವೆಗಳು ಸೇರಿದಂತೆ ಎಲ್ಲಾ ಸಹಾಯವಾಣಿಗಳನ್ನು 139 ಎಂಬ ಒಂದೇ ಸಂಖ್ಯೆಯ ಅಡಿಯಲ್ಲಿ ಸಂಪರ್ಕಿಸಿದೆ. ಕಳ್ಳತನ ಮತ್ತು ಇತರ ಅಪರಾಧ ಘಟನೆಗಳಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆ 182 ಆಗಿದೆಪ್ರಯಾಣಿಕರು ಯಾವ ಸೌಲಭ್ಯಗಳನ್ನು ಪಡೆಯುತ್ತಾರೆ?

ರೈಲು ದೂರುಗಳು

ಈ ಸೇವೆಯು ನಾಗರಿಕರಿಗೆ ದೂರು ಸಲ್ಲಿಸಲು ಅಥವಾ ಘಟನೆಯ ಆಯ್ದ ದಿನಾಂಕಗಳಿಗೆ (ಪ್ರಸ್ತುತ ದಿನಾಂಕ ಅಥವಾ ಕೊನೆಯ ನಾಲ್ಕು ದಿನಾಂಕಗಳು) ಸಲಹೆಗಳನ್ನು ಒದಗಿಸುತ್ತದೆ. ದೂರು ನೀಡಲು, ಪ್ರಯಾಣಿಕರು ಘಟನೆಯ ದಿನಾಂಕದ ನಂತರ ರೈಲು ಸಂಖ್ಯೆಯನ್ನು ನಮೂದಿಸಬಹುದು, ನಂತರ ಕಾಯ್ದಿರಿಸದ ಟಿಕೆಟಿಂಗ್ ಸಿಸ್ಟಮ್ (ಯುಟಿಎಸ್) ಸಂಖ್ಯೆ ಅಥವಾ ಪಿಎನ್‌ಆರ್ ಸಂಖ್ಯೆಯನ್ನು ನಮೂದಿಸಬಹುದು.ಸ್ಟೇಷನ್ ದೂರು ಆಯ್ಕೆ ಮಾಡಿದ ಘಟನೆಯ ದಿನಾಂಕಕ್ಕೆ (ಪ್ರಸ್ತುತ ದಿನಾಂಕ ಅಥವಾ ಕೊನೆಯ ನಾಲ್ಕು ದಿನಾಂಕಗಳು) ಸ್ಟೇಷನ್-ಸಂಬಂಧಿತ ದೂರು ಅಥವಾ ಸಲಹೆಯನ್ನು ಸಲ್ಲಿಸಲು ಈ ಸೇವೆಯು ನಾಗರಿಕರನ್ನು ಒದಗಿಸುತ್ತದೆ.

ನಿಮ್ಮ ದೂರನ್ನು ಟ್ರ್ಯಾಕ್ ಮಾಡಿ ಈ ಸೇವೆಯು ನಾಗರಿಕರಿಗೆ ರೈಲು ಅಥವಾ ನಿಲ್ದಾಣಕ್ಕೆ ಸಂಬಂಧಿಸಿದ ತಮ್ಮ ನೋಂದಾಯಿತ ದೂರುಗಳನ್ನು ಉಲ್ಲೇಖ ಸಂಖ್ಯೆಯನ್ನು ಒದಗಿಸುವ ಮೂಲಕ ಟ್ರ್ಯಾಕ್ ಮಾಡಲು ಅನುವು ಮಾಡಿಕೊಡುತ್ತದೆ.

ಸರಕುಗಳು / ಪಾರ್ಸೆಲ್ ವಿಚಾರಣೆಘಟನೆಯ ದಿನಾಂಕದಿಂದ 30 ದಿನಗಳ ಒಳಗೆ ಆಯ್ದ ಘಟನೆಯ ದಿನಾಂಕಕ್ಕಾಗಿ ಸರಕು / ಪಾರ್ಸೆಲ್ ವಿಚಾರಣೆಗಳಿಗೆ ಸಂಬಂಧಿಸಿದ ವಿಚಾರಣೆಗಳು / ದೂರುಗಳನ್ನು ಸಲ್ಲಿಸಲು ಈ ಸೇವೆಯು ನಾಗರಿಕರಿಗೆ ಅನುವು ಮಾಡಿಕೊಡುತ್ತದೆ.

ನನ್ನ ಸಾವಿಗೆ ನಾನೇ ಕಾರಣ.. ಕಾಯರ್ತಡ್ಕದಲ್ಲಿ ಯುವತಿ ನೇಣಿಗೆ ಶರಣು

Posted by Vidyamaana on 2024-02-08 17:57:10 |

Share: | | | | |


ನನ್ನ ಸಾವಿಗೆ ನಾನೇ ಕಾರಣ.. ಕಾಯರ್ತಡ್ಕದಲ್ಲಿ ಯುವತಿ ನೇಣಿಗೆ ಶರಣು

ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಯುವತಿ ತನ್ನ ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಮೃತ ಯುವತಿ.ವನಿತಾರವರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದವರು ಅನಾರೋಗ್ಯ ಸಮಸ್ಯೆ ಕಾಡಿದ ಹಿನ್ನಲೆಯಲ್ಲಿ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಫೆ. 8 ರಂದು ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವುದು ಪತ್ತೆಯಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಡೆತ್ ನೋಟ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.



Leave a Comment: