ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಅಕ್ರಮ ಸಂಬಂಧ ಇದೆಯೆಂದು ಹಲ್ಲೆ

Posted by Vidyamaana on 2023-08-23 16:26:59 |

Share: | | | | |


ಅಕ್ರಮ ಸಂಬಂಧ ಇದೆಯೆಂದು ಹಲ್ಲೆ

ಮಂಗಳೂರು: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 


ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.‌


ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ.‌ ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. 


ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ.‌ ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ನ 12

Posted by Vidyamaana on 2023-11-12 07:38:42 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ನ 12

ಪುತ್ತೂರು : ಶಾಸಕ ಅಶೋಕ್ ಕುಮಾರ್ ಅವರು  ನವಂಬರ್ 12 ರಂದು

ಬೆಳಿಗ್ಗೆ 10 ಗಂಟೆಗೆ ಕೋಡಿಂಬಾಡಿ‌ಮಹಿಷಮರ್ಧಿನಿ‌ದೇವಸ್ಥಾನಕ್ಕೆ ಭೇಟಿ,ಪೂಜಾ ಕಾರ್ಯಕ್ರಮ

12._ಗಂಟೆಗೆ ಕೊಡಿಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

1 ಗಂಟೆಗೆ ಮುಳಿಯ ಹಾಲ್ ನಲ್ಲಿ ಗೂಡುದೀಪ ಸ್ಪರ್ದೆಯಲ್ಲಿ ಭಾಗವಹಿಸುವುದು

ಸಂಜೆ 3 ಗಂಟೆಗೆ ಕೊಂಬೆಟ್ಟು ಮೈದಾನದಲ್ಲಿ‌ರೈ ಚಾರಿಟೇಬಲ್ ಟ್ರಸ್ಟ್ ಸಭೆ ಯಲ್ಲಿ  ಭಾಗವಹಿಸಲಿದ್ದಾರೆ

ಮಂಗಳೂರು : ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ನಿವೇಶನ ಒದಗಿಸಲು ಎಲ್ಲ ರೀತಿಯ ಪ್ರಯತ್ನ :ಸಚಿವ ಬಿ.ಜಮೀರ್ ಅಹ್ಮದ್ ಭರವಸೆ

Posted by Vidyamaana on 2023-09-07 07:12:10 |

Share: | | | | |


ಮಂಗಳೂರು : ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ನಿವೇಶನ ಒದಗಿಸಲು ಎಲ್ಲ ರೀತಿಯ ಪ್ರಯತ್ನ :ಸಚಿವ ಬಿ.ಜಮೀರ್ ಅಹ್ಮದ್ ಭರವಸೆ

ಮಂಗಳೂರು: ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು  ವಸತಿ, ವಕ್ಫ್ ಮತ್ತು ಅಲ್ಯಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವ ಬಿ.ಜಮೀರ್ ಅಹ್ಮದ್ ತಿಳಿಸಿದರು.


ಬುಧವಾರ ಮಂಗಳೂರು ಪ್ರೆಸ್ ಕ್ಲಬ್‌ಗೆ ಭೇಟಿ ನೀಡಿ ಪತ್ರಕರ್ತರ ಜತೆ ಮಾತನಾಡಿದ ಅವರು ಪತ್ರಕರ್ತರ ಬೇಡಿಕೆಗಳಿಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಿದೆ ಎಂದರು.


 ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಕ್ಷೇಮಾಭಿವೃದ್ಧಿ ನಿಧಿಗೆ ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಜಮೀರ್ ಅಹ್ಮದ್ ಅವರು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ನಿವೇಶನ ಒದಗಿಸಲು ಎಲ್ಲ ರೀತಿಯ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.



 ಎಂಎಲ್‌ಸಿ ಹರೀಶ್ ಕುಮಾರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ,  ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಅನ್ನು ಮಂಗಳೂರು, ರಾಜ್ಯ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ನಿವೃತ್ತ ಪೊಲೀಸ್ ಆಧಿಕಾರಿ ಜಿ.ಎ.ಬಾವಾ ಉಪಸ್ಥಿತರಿದ್ದರು.


ಪತ್ರಕರ್ತರ ಸಂಘದ ವತಿಯಿಂದ ಸಚಿವರನ್ನು ಹಾಗೂ ಅವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಅವರನ್ನು ಗೌರವಿಸಲಾಯಿತು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಅರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

ಜಾರ್ಖಂಡಿನಲ್ಲಿ ರಾತ್ರಿ ತಂಗಿದ್ದ ಸ್ಪೇನ್ ಮೂಲದ ಬ್ಲಾಗರ್ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ವಿಡಿಯೋ ಮಾಡಿ ನೋವು ಹಂಚಿಕೊಂಡ ಯುವತಿ

Posted by Vidyamaana on 2024-03-12 07:37:45 |

Share: | | | | |


ಜಾರ್ಖಂಡಿನಲ್ಲಿ ರಾತ್ರಿ ತಂಗಿದ್ದ ಸ್ಪೇನ್ ಮೂಲದ ಬ್ಲಾಗರ್ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ  ವಿಡಿಯೋ ಮಾಡಿ ನೋವು ಹಂಚಿಕೊಂಡ ಯುವತಿ

ನವದೆಹಲಿ, ಮಾ.12: ಬೈಕಿನಲ್ಲಿ ವಿಶ್ವ ಪರ್ಯಟನೆ ಹೊರಟಿದ್ದ ಸ್ಪೈನ್ ಮೂಲದ ಬ್ಲಾಗರ್ ಯುವತಿಯನ್ನು ಜಾರ್ಖಂಡಿನಲ್ಲಿ ಏಳು ಜನರು ಸೇರಿ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಘಟನೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಯುವತಿ ತನ್ನ ಮೇಲಾದ ಹಲ್ಲೆ, ಅತ್ಯಾಚಾರ ಕೃತ್ಯದ ಬಗ್ಗೆ ವಿಡಿಯೋ ಮಾಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಗೆ ಕುಂದು ಬಂದಿದೆ.


28 ವರ್ಷದ ಯುವತಿ ಮತ್ತು ಆಕೆಯ ಬಾಯ್ ಫ್ರೆಂಡ್ ಜೊತೆಯಾಗಿ ಕಳೆದ ಆರು ತಿಂಗಳಿನಿಂದ ಭಾರತದಲ್ಲಿ ಪ್ರತ್ಯೇಕ ದ್ವಿಚಕ್ರ ವಾಹನಗಳಲ್ಲಿ ಸುತ್ತಾಡಿದ್ದರು. ಮಾ.2ರಂದು ಜಾರ್ಖಂಡ್ ರಾಜಧಾನಿ ರಾಂಚಿಯಿಂದ 300 ಕಿಮೀ ದೂರದ ದುಮ್ಕಾ ಜಿಲ್ಲೆಯ ಕುರುಮಹತ್ ಎಂಬಲ್ಲಿ ರಾತ್ರಿ ತಂಗಿದ್ದರು. ಸಂಜೆಯ ವೇಳೆಗೆ ಕಾಡು ಆವರಿಸಿದ ಜಾಗದಲ್ಲಿ ರಾತ್ರಿ ತಂಗಲು ಟೆಂಟ್ ಹಾಕಿದ್ದರು. 7.30ರ ವೇಳೆಗೆ ಹೊರಗೆ ಇಬ್ಬರು ಕಾಣಿಸಿಕೊಂಡಿದ್ದು ಆನಂತರ ಮೊಬೈಲಿನಲ್ಲಿ ಮಾತನಾಡುತ್ತಲೇ ಮತ್ತೆ ಐವರನ್ನು ಸ್ಥಳಕ್ಕೆ ಕರೆಸಿದ್ದಾರೆ. ಆನಂತರ, ಸ್ಥಳೀಯ ಭಾಷೆ ಮತ್ತು ನಡುವೆ ಇಂಗ್ಲಿಷ್ ಶಬ್ದಗಳನ್ನು ಮಾತನಾಡುತ್ತ ಹತ್ತಿರ ಬಂದಿದ್ದು ಜಗಳ ಶುರು ಮಾಡಿದ್ದಾರೆ.  ಯುವತಿಯ ಬಾಯ್ ಫ್ರೆಂಡ್ ಮೇಲೆ ಹಲ್ಲೆಗೈದು ಕಟ್ಟಿ ಹಾಕಿದ್ದಾರೆ. ನಂತರ, ಯುವತಿ ಮೇಲೂ ಹಲ್ಲೆಗೈದು ಸರಣಿಯಾಗಿ ಒಬ್ಬರ ಮೇಲೆ ಮತ್ತೊಬ್ಬರಂತೆ ಅತ್ಯಾಚಾರ ನಡೆಸಿದ್ದಾರೆ. 7.30ರಿಂದ ಹತ್ತು ಗಂಟೆಯ ವರೆಗೂ ಕೃತ್ಯ ಮುಂದುವರಿಸಿದ್ದಾರೆ. ಬಳಿಕ ಯುವಕರು ಅಲ್ಲಿಂದ ಬಿಟ್ಟು ಹೋಗಿದ್ದಾರೆ. ವಿದೇಶಿಗರು ಬಳಿಕ ನೇರವಾಗಿ ಸ್ಥಳೀಯ ಹನ್ಸಿದಿಯಾ ಠಾಣೆಗೆ ತೆರಳಿ ದೂರು ನೀಡಿದ್ದು, ತಡರಾತ್ರಿ ಪೊಲೀಸರು ಯುವತಿಯ ಹೇಳಿಕೆ ದಾಖಲು ಮಾಡಿದ್ದಾರೆ. ಕೃತ್ಯದ ಬಗ್ಗೆ ಯುವತಿ ಬಳಿಕ ವಿಡಿಯೋ ಮಾಡಿದ್ದು, ತನಗಾದ ಹಲ್ಲೆ, ಅತ್ಯಾಚಾರವನ್ನು ಹೇಳಿಕೊಂಡಿದ್ದಾಳೆ. ಯುವಕರು ಕುಡಿತದ ನಶೆಯಲ್ಲಿದ್ದರು. ಅಲ್ಲದೆ, ಕೃತ್ಯದ ಬಳಿಕ ತಮ್ಮಲ್ಲಿದ್ದ ಸ್ವಿಸ್ ಚೂರಿ, ವಾಚ್, ಪ್ಲಾಟಿನಂ ರಿಂಗ್, ಕಿವಿಯೋಲೆ, ಬ್ಲಾಕ್ ಪರ್ಸ್, ಕ್ರೆಡಿಟ್ ಕಾರ್ಡ್, 11 ಸಾವಿರ ರೂ. ನಗದು, 300 ಯುಎಸ್ ಡಾಲರ್ ಕರೆನ್ಸಿಯನ್ನೂ ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಳುಭಾರತದ ಜನರು ಒಳ್ಳೆಯವರು


ಅತ್ಯಾಚಾರ, ಹಲ್ಲೆ ಘಟನೆಯಾದರೂ ಆಕೆ ತನ್ನ ಬೈಕ್ ಸುತ್ತಾಟವನ್ನು ನಿಲ್ಲಿಸಿಲ್ಲ. ಯುವತಿ ಬಿಹಾರ ಮೂಲಕ ನೇಪಾಳ ತಲುಪಿದ್ದು, ಅಲ್ಲಿ ತಲುಪಿದ ಕೂಡಲೇ ಮತ್ತೊಂದು ವಿಡಿಯೋ ಮಾಡಿದ್ದಾಳೆ. ನಾವು ಭಾರತದಲ್ಲಿ ಆರು ತಿಂಗಳಲ್ಲಿ 20 ಸಾವಿರ ಕಿಮೀ ಸುತ್ತಾಡಿದ್ದೇವೆ. ಭಾರತದ ಜನರು ಒಳ್ಳೆಯವರು. ನಮಗೆ ಎಲ್ಲ ರೀತಿಯಲ್ಲಿ ಸಹಕಾರ ನೀಡಿದ್ದಾರೆ. ಕೆಲವು ಕ್ರಿಮಿನಲ್ ಗಳು ಹೊರತುಪಡಿಸಿ ಉಳಿದೆಲ್ಲ ಕಡೆ ಜನ ಒಳ್ಳೆಯವರಿದ್ದಾರೆ. ನಾವು ಅಲ್ಲಿನ ಪರಿಸರ ಒಳ್ಳೆಯದಾಗಿತ್ತು ಎಂದು ದುಮ್ಕಾ ಜಿಲ್ಲೆಯ ಕಾಡಿನ ಬಳಿ ರಾತ್ರಿ ತಂಗಲು ನಿರ್ಧಾರ ಮಾಡಿದ್ದೆವು. ಅಲ್ಲಿ ಕ್ರಿಮಿನಲ್ಗಳಿದ್ದಾರೆಂದು ತಿಳಿದಿರಲಿಲ್ಲ. 20 ಸಾವಿರ ಕಿಮೀ ಸುತ್ತಾಟದಲ್ಲಿ ಎಲ್ಲಿಯೂ ನಾವು ತೊಂದರೆ ಅನುಭವಿಸಿಲ್ಲ. ಮೊದಲ ಬಾರಿಗೆ ಇಂತಹ ಅನುಭವ ಆಗಿದೆ ಎಂದು ಹೇಳಿದ್ದಾಳೆ.

ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೆಡಿಕಲ್‍ ಅಸೋಸಿಯೇಶನ್‍ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ | ಸರಕಾರದ ಗಮನ ಸೆಳೆಯುವಂತೆ ಆಗ್ರಹ

Posted by Vidyamaana on 2023-02-28 10:45:53 |

Share: | | | | |


ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೆಡಿಕಲ್‍ ಅಸೋಸಿಯೇಶನ್‍ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ | ಸರಕಾರದ ಗಮನ ಸೆಳೆಯುವಂತೆ ಆಗ್ರಹ

ಪುತ್ತೂರು: ಯಶಸ್ವಿನಿ ಯೋಜನೆಯಲ್ಲಿ ಚಿಕಿತ್ಸಾ ದರ ಪರಿಷ್ಕರಿಸುವ ಸಹಿತ ವಿವಿಧ ಬೇಡಿಕೆಗಳನ್ನು ಸರಕಾರದ ಗಮನ ಸೆಳೆಯಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ನಿರ್ಧಾರವನ್ನು ಮೆಡಿಕಲ್‍ ಅಸೋಸಿಯೇಶನ್‍ ಕೈಗೊಂಡಿದೆ ಎಂದು ಅಸೋಸಿಯೇಶನ್‍ ಅಧ್ಯಕ್ಷ ಡಾ.ಶ್ರೀಪತಿ ರಾವ್‍ ತಿಳಿಸಿದ್ದಾರೆ..

ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಎಲ್ಲಾ ಹಣವನ್ನು ಕೂಡಲೇ ಸಂದಾಯ ಮಾಡಬೇಕು, ರೋಗಿಗಳು ಆಸ್ಪತ್ರೆಗೆ ಸೇರುವಾಗ ಇರುವ ನಿಬಂಧನೆಗಳನ್ನು ಸಡಿಲಿಕರಣಗೊಳಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದರು.

ಪುತ್ತೂರಿನ ಆಸ್ಪತ್ರೆಗಳಲ್ಲಿ ಸರಕಾರಿ ಯೋಜನೆಗಳಾದ ಇಎಸ್‌ಐ, ಯಶಸ್ವಿನಿ ಸಹಿತ ಹಲವಾರು ಯೋಜನೆಗಳನ್ನು ಉತ್ತಮವಾಗಿ ನಿಭಾಯಿಸುತ್ತಿವೆ. ಆದರೆ ಇದೀಗ ಸ್ಥಗಿತಗೊಳಿಸಿದ ಯಶಸ್ವಿ ಯೋಜನೆ ಮರು ಪ್ರಾಂಭಿಸುವಾಗ ಹಲವಾರು ನಿಬಂಧನೆ ಮತ್ತು ರೋಗಿಗಳ ಚಿಕಿತ್ಸಾ ದರವನ್ನು ಕಡಿಮೆ ಗೊಳಿಸಿದ್ದರಿಂದ ನ್ಯಾಯುತವಾಗಿ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ. ಕೇಂದ್ರ ಸಿ.ಜಿ.ಎಸ್.ಹೆಚ್.ಎಸ್ ನಂತೆ 2014ರ ಇಸವಿಯ ಚಿಕಿತ್ಸಾ ದರವೇ ಈಗಲೂ ಚಾಲ್ತಿಯಲ್ಲಿದೆ. 2014ರ ಚಿಕಿತ್ಸಾ ದರ 2017 ಮತ್ತು 2020ರಲ್ಲಿ ಹಾಗೂ 2023ರಲ್ಲಾದರೂ ಪರಿಷ್ಕರಣೆ ಆಗಬೇಕಾಗಿತ್ತು. ಆದರೆ ಅದನ್ನು ಮಾಡಿಲ್ಲ. ಈ ಹಿಂದೆ ಇದ್ದ ಯಶಸ್ವಿನಿ ಯೋಜನೆ ಉತ್ತಮವಾಗಿತ್ತು. ಆದರೆ ಅದರಲ್ಲೂ ಹಲವು ಆಸ್ಪತ್ರೆಗಳಿಗೆ ಹಣ ಸಂದಾಯ ಬಾಕಿ ಇದೆ. ಈ ನಿಟ್ಟಿನಲ್ಲಿ ಯಸ್ವಿನಿ ಯೋಜನೆಗೆ ಬಹುತೇಕ ಆಸ್ಪತ್ರೆಗೆಳು ಸೇರ್ಪಡೆಗೊಂಡಿಲ್ಲ.ಇತ್ತೀಚೆಗೆ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ಸಂದರ್ಭ ಬಂದಿರುವ ಪ್ರಶ್ನೆಗೆ ಜಿಲ್ಲಾಧಿಕಾರಿಗಳು ನಮಗೆ ನೋಟೀಸ್ ನೀಡಿದ್ದಾರೆ. ಈ ನೋಟೀಸ್‌ಗೆ ಸಂಬಂಧಿಸಿ ನಾವು ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆಯಲ್ಲಿ ಸೇರಬೇಕಾದರೆ ನಮ್ಮ ಕೆಲವೊಂದು ಬೇಡಿಕೆಗಳಿವೆ. ಅದನ್ನು ಈಡೇರಿಸವಂತೆ ಮನವಿ ಮಾಡಲಿದ್ದೇವೆ. ಖಾಸಗಿ ಕೊಠಡಿಗಳಿಗೂ ರೋಗಿಗಳಿಗೆ ಅನುಮತಿ ನೀಡಬೇಕೆಂದು ಮನವಿ ನೀಡಲಿದ್ದೇವೆ ಎಂದು ತಿಳಿಸಿದ ಅವರು, ಒಟ್ಟಿನಲ್ಲಿ ಉಳುವ ರೈತರ ಹೈನುಗಾರರ ಆರೋಗ್ಯದ ಮೇಲೆ ಕಾಳಜಿ ವಹಿಸಿ ಅವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಸಿಗುವಂತೆ ಮಾಡುವ ಜವಾಬ್ದಾರಿ ಸರಕಾರಕ್ಕೂ ಮತ್ತು ಖಾಸಗಿ ಆಸ್ಪತ್ರೆಗಳ ಮೇಲೆ ಇದೆಯೆಂದು ತಿಳಿದು ಸರಕಾರ ಉತ್ತಮ ಕ್ರಮ ಕೈಗೊಳ್ಳುವಂತೆ ವಿನಂತಿಸುತ್ತೇವೆ ಎಂದರು.

ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆಯಡಿ ಪುತ್ತೂರಿನ ನಾಲ್ಕು ಆಸ್ಪತ್ರೆಗಳಿಗೆ ಹಣ ಸಂದಾಯ ಬಾಕಿ ಇದೆ. ಹಿಂದೆ ಸರಕಾರದಿಂದ ಯೋಜನೆ ಚಾಲ್ತಿಯಲ್ಲಿತ್ತು. ಬಳಿಕ ಅದನ್ನು ಇನ್‌ಶ್ಯುರೆನ್ಸ್ ಕಂಪೆನಿಗೆ ವರ್ಗಾಯಿಸಲಾಯಿತು. ಈ ಸಂದರ್ಭ ಆಸ್ಪತ್ರೆಗಳಿಗೆ ಚಿಕಿತ್ಸಾ ದರ ಪಾವತಿ ಬಾಕಿಯಾಗುತ್ತಿತ್ತು. ಈ ಕುರಿತು ಹಲವು ಬಾರಿ ಪತ್ರ ಬರೆಯಲಾಗಿದೆ. ಯಾವುದೇ ಸ್ಪಂದನೆ ಸಿಕ್ಕಿಲ್ಲ. ಒಟ್ಟು ನಾಲ್ಕು ಆಸ್ಪತ್ರೆಗೆಳಿಗೆ ಸುಮಾರು ರೂ. 22ಲಕ್ಷ ಬಾಕಿ ಇದೆ. ಎಂದು ಅಸೋಸಿಯೇಶನ್‍ ಉಪಾಧ್ಯಕ್ಷ ಡಾ.ಭಾಸ್ಕರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಶನ್‌ನ ಕಾರ್ಯದರ್ಶಿ ಡಾ. ಎಸ್.ಎಸ್ ಜೋಶಿ, ಕೋಶಾಧಿಕಾರಿ ಡಾ. ಅಶೋಕ್ ಪಡಿವಾಳ್, ಸದಸ್ಯರಾದ ಡಾ. ಜೆ.ಸಿ.ಅಡಿಗ, ಡಾ. ರವೀಂದ್ರ ಉಪಸ್ಥಿತರಿದ್ದರು.

ಮಲೇಷ್ಯಾದಲ್ಲಿ ಎರಡು ಮಿಲಿಟರಿ ಹೆಲಿಕಾಪ್ಟ‌ರ್ ಪತನಗೊಂಡು 10 ಮಂದಿ ಸಾವು! ವಿಡಿಯೋ ವೈರಲ್

Posted by Vidyamaana on 2024-04-23 12:13:34 |

Share: | | | | |


ಮಲೇಷ್ಯಾದಲ್ಲಿ ಎರಡು ಮಿಲಿಟರಿ ಹೆಲಿಕಾಪ್ಟ‌ರ್ ಪತನಗೊಂಡು 10 ಮಂದಿ ಸಾವು! ವಿಡಿಯೋ ವೈರಲ್

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪೆರಾಕ್ ನ ಲುಮುಟ್ ನಲ್ಲಿ ಮಂಗಳವಾರ ನಡೆದಿದೆ.ಫ್ರೀ ಮಲೇಷ್ಯಾ ಟುಡೇ ವರದಿಯ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ ಮತ್ತು ವೈದ್ಯಕೀಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಅವರ ಸಾವುಗಳನ್ನು ದೃಢಪಡಿಸಿದ್ದಾರೆ ಎಂದು ಹೇಳಿದರು.



Leave a Comment: