ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಸುದ್ದಿಗಳು News

Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

 Share: | | | | |


ಮಠದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಟ್ವಿಸ್ಟ್‌

Posted by Vidyamaana on 2024-07-06 12:19:18 |

Share: | | | | |


ಮಠದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಟ್ವಿಸ್ಟ್‌

ರಾಯಚೂರು: ಭಕ್ತರಿಗೆ ಸೇರಿದ್ದ 40 ಲಕ್ಷ ರೂಪಾಯಿ ಹಣವನ್ನು ಸ್ವಂತಕ್ಕೆ ಮಾಡಿಕೊಳ್ಳುವುದಕ್ಕೆ ಸಂಚು ರೂಪಿಸಿ ದರೋಡೆ ಕತೆಯನ್ನು ಸೃ ಷ್ಟಿಸಿದ ಸ್ವಾಮೀಜಿಯ ಕಳ್ಳಾಟ (Cheating case) ಬಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಪ್ರಾಥಮಿಕ ಹಂತದಲ್ಲಿಯೇ ಸ್ವಾಮೀಜಿಯ ಕತೆ ಬಹಿರಂಗಗೊಂಡಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿರೋ ವಿಜಯಮಹಾಂತೇಶ್ವರ ಶಾಖಾ ಮಠ ನುಗ್ಗಿದ ದರೋಡೆಕೋರರು ತಮ್ಮನ್ನು ಬೆದರಿಸಿ 40 ಲಕ್ಷ ರೂಪಾಯಿ ಹಣ ದರೋಡೆ ಮಾಡಿದ್ದಾರೆ ಎಂದು ಇಲ್ಲಿನ ವಿಜಯಮಹಾಂತೇಶ್ವರ ಶಾಖಾ ಮಠದ ಸಿದ್ದಲಿಂಗ ಸ್ವಾಮೀಜಿ ದೂರು ನೀಡಿದ್ದರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಂಚಲನ ಮೂಡಿತ್ತು. ಮಠಕ್ಕೆ ನುಗ್ಗಿ ಹಣವನ್ನು ದರೋಡೆ ಮಾಡಿದವರನ್ನು ಬಂಧಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆದರೆ, ದೂರು ನೀಡಿದ ಸ್ವಾಮೀಜಿಯ ಕೆಲವೊಂದು ನಡೆ ಬಗ್ಗೆ ಅನುಮಾನಗೊಂಡಿದ್ದ ಪೊಲೀಸರು ಎಫ್​ಐಆರ್​ ದಾಖಲಿಸಿ ಒಂದೇ ದಿನದಲ್ಲಿ ದರೋಡೆ ಕೇಸನ್ನು ಭೇದಿಸಿದ್ದಾರೆ.

BREAKING : ರಾಮ್ ಲಲ್ಲಾ ಪ್ರತಿಷ್ಠಾಪನೆ ನೆರವೇರಿಸಿದ್ದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ನಿಧನ

Posted by Vidyamaana on 2024-06-22 12:38:12 |

Share: | | | | |


BREAKING : ರಾಮ್ ಲಲ್ಲಾ ಪ್ರತಿಷ್ಠಾಪನೆ ನೆರವೇರಿಸಿದ್ದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ನಿಧನ

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದಲ್ಲಿ ರಾಮ್ ಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ನೆರವೇರಿಸಿದ್ದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ದೀರ್ಘಕಾಲದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಲಕ್ಷ್ಮೀಕಾಂತ್ ದೀಕ್ಷಿತ್ ಅವರು ವಾರಣಾಸಿಯ ಮೀರ್ ಘಾಟ್ ನ ಸಾಂಗ್ವೇದ್ ಕಾಲೇಜಿನಲ್ಲಿ ಹಿರಿಯ ಪ್ರಾಧ್ಯಾಪಕರಾಗಿದ್ದರು.


ಈ ವಿಶ್ವವಿದ್ಯಾಲಯವನ್ನು ಕಾಶಿ ನರೇಶ್ ಅವರ ಸಹಾಯದಿಂದ ಸ್ಥಾಪಿಸಲಾಯಿತು. ಆಚಾರ್ಯ ಲಕ್ಷ್ಮೀಕಾಂತ್ ಅವರನ್ನು ಕಾಶಿಯ ಯಜುರ್ವೇದದ ಶ್ರೇಷ್ಠ ವಿದ್ವಾಂಸರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.

ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

Posted by Vidyamaana on 2023-04-17 04:18:37 |

Share: | | | | |


ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

ಬೆಂಗಳೂರು: ಬಿಜೆಪಿ ಟಿಕೆಟ್‌ ನಿರಾಕರಣೆಯಿಂದ ತೀವ್ರ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.ಖರ್ಗೆ ಅವರು ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌, ಶೆಟ್ಟರ್‌ ಒಬ್ಬರ ಶ್ರೇಷ್ಠ, ಹಾಗೂ ಸರಳ, ಸಜ್ಜನಿಕೆಯ ರಾಜಕಾರಣಿ, ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿಕೊಂಡು ಬಂದಿದ್ದಾರೆ. ರಾಜ್ಯದ ಸಿಎಂ ಆಗಿ, ಸ್ಪೀಕರ್‌ ಆಗಿ ಕೆಲಸ ಮಾಡಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಮಾತನಾಡಿ, ಜಗದೀಶ್‌ ಶೆಟ್ಟರ್‌ ಯೊಬ್ಬ ಉತ್ತಮ ನಾಯಕ. ಅವರು ನಮ್ಮ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಶೆಟ್ಟರ್‌ ಕಾಂಗ್ರೆಸ್‌ ಸೇರುತ್ತಿದ್ದಾರೆ. ಶೆಟ್ಟರ್‌ ಪಕ್ಷ ಸೆರ್ಪಡೆಯಿಂದ ಉತ್ತರ ಕರ್ನಾಟಕದ ಭಾಗಕ್ಕೆ ಶಕ್ತಿ. ಶೆಟ್ಟರ್‌ ಅಭಯ್‌ ಸಿಂಗ್‌ ಪಾಟೀಲ್‌ ಸೇರಿ, ಹಲವು ನಾಯಕರು ಕಾಂಗ್ರೆಸ್‌ ಸೆರ್ಪಡೆಯಾಗುತ್ತಿದ್ದಾರೆ. ಶೆಟ್ಟರ್‌ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅದೇ ರೀತಿ ನಮ್ಮ ಪಕ್ಷದಲ್ಲೂ ಕೆಲಸ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ.  ಕರ್ನಾಟಕದಲ್ಲಿ ನಾವು 150 ಸ್ಥಾನವನ್ನು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್‌ ಪಕ್ಷಕ್ಕೆ ಜಗದೀಶ್‌ ಶೆಟ್ಟರ್‌ ಅವರನ್ನು ಸ್ವಾಗತಿಸುತ್ತೇನೆ ಎಂದರು.ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಜಗದೀಶ್‌ ಶೆಟ್ಟರ್‌,  ನಾನು ಬಿಜೆಪಿ ಬಿಟ್ಟು, ಕಾಂಗ್ರೆಸ್‌ ಸೇರಿರುವುದು ಬಹಳ ಜನಕ್ಕೆ ಅಚ್ಚರಿಯಾಗಿದೆ. ನಾನು ಬಿಜೆಪಿಯನ್ನು ಕಟ್ಟಿ ಬೆಳೆಸಿದ ವ್ಯಕ್ತಿ.  ಬಿಜೆಪಿ ನನಗೆ ಎಲ್ಲ ರೀತಿಯ ಗೌರವವನ್ನು ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಾನು ನಿಭಾಯಿಸಿದ್ದೇನೆ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ನೋವಾಗಿದೆ. ಜನರ ಆರ್ಶೀವಾದದಿಂದ ನಿರಂತರವಾಗಿ ಗೆಲ್ಲುತ್ತಾ ಬಂದಿದ್ದೇನೆ. ಈ ಬಾರಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು. ಆದರೆ ಟಿಕೆಟ್‌ ಇಲ್ಲ ಎಂದಾಗ ತುಂಬಾ ಬೇಸರವಾಯಿತು. ಮೊದಲೇ ಟಿಕೆಟ್‌ ಇಲ್ಲ ಎಂದಿದ್ದರೆ, ಬೇಜಾರ್‌ ಆಗುತ್ತಿರಲಿಲ್ಲ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ಬೇಸರವಾಗಿದೆ. ಬಿಜೆಪಿ ಪಕ್ಷ ಕಟ್ಟಿದ ನಾಯಕನಿಗೆ ಬೆಲೆ ಸಿಗಲಿಲ್ಲ. ಕಳೆದ 6 ತಿಂಗಳಿನಿಂದ ಪಕ್ಷ ನನ್ನನು ಕಡೆಗಣನೆ ಮಾಡಿದೆ. ಪಕ್ಷ ನನ್ನನು ಒತ್ತಾಯಪೂರ್ವಕವಾಗಿ ಹೊರ ಹಾಕಿದೆ. ಹಾಗಾಗಿ ನಾನು ಕಾಂಗ್ರೆಸ್‌ ನ ತತ್ವ ಸಿದ್ದಾಂತವನ್ನು ಒಪ್ಪಿ, ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಎಂದರು.

ಡಿಸೆಂಬರ್ 14 ರಿಂದ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದು

Posted by Vidyamaana on 2023-12-13 07:34:28 |

Share: | | | | |


ಡಿಸೆಂಬರ್ 14 ರಿಂದ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದು

ಮಂಗಳೂರು: ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಿನ್ಸಿಪಲ್ ಚೀಫ್ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ.


ನೈಋತ್ಯ ರೈಲ್ವೆಯ ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ನಲ್ಲಿ ವಿವಿಧ ಕಾಮಗಾರಿಗಳ ಹಿನ್ನಲೆ ಡಿಸೆಂಬ‌ರ್ 14 ರಿಂದ ಡಿಸೆಂಬರ್ 22 ರವರೆಗೆ ಬೇರೆ ಬೇರೆ ದಿನಗಳಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಿದೆ ಎಂದು ಅವರು ತಿಳಿಸಿದ್ದಾರೆ.


ರೈಲು ಸಂಖ್ಯೆ 16511 ಬೆಂಗಳೂರು- ಮಂಗಳೂರು- ಕಣ್ಣೂರು ಮತ್ತು ರೈಲು ಸಂಖ್ಯೆ 16595 ಬೆಂಗಳೂರು- ಕಾರವಾರ ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸೆಸ್ ಅನ್ನು ಡಿಸೆಂಬ‌ರ್ 16 ರಿಂದ ಡಿಸೆಂಬರ್ 20 ತನಕ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 16512 ಕಣ್ಣೂರು- ಮಂಗಳೂರು-ಬೆಂಗಳೂರು ಮತ್ತು ರೈಲು ಸಂಖ್ಯೆ 16596 ಕಾರವಾರ – ಬೆಂಗಳೂರು ಪಂಚಗಂಗಾ ಎಕ್ಸೆಸ ಡಿಸೆಂಬರ್ 17 ರಿಂದ ಡಿಸೆಂಬರ್ 21 ತನಕ ರದ್ದುಗೊಳಿಸಲಾಗಿದೆ.


ವಾರದಲ್ಲಿ ಮೂರು ದಿನ ಸಂಚರಿಸುವ ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್‌ನ್ನು ಡಿಸೆಂಬರ್ 14, 17, 19 ಮತ್ತು 21 ರಂದು ರದ್ದುಗೊಳಿಸಲಾಗಿದೆ.ಮಂಗಳೂರು ಜಂಕ್ಷನ್- ಯಶವಂತಪುರ ಗೋಮಟೇಶ್ವರ 관령 16576) v 15, 18, 20 총 22 ರಂದು ರದ್ದುಗೊಳಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್‌ ನಂಬರ್ 16515 ಪ್ರಯಾಣವನ್ನು ಡಿಸೆಂಬರ್ 13, 15,18,20 ಮತ್ತು 22 ರಂದು ರದ್ದುಪಡಿಸಲಾಗಿದೆ.


ವಾರದಲ್ಲಿ ಮೂರು ದಿನ ಸಂಚರಿಸುವ ಕಾರವಾರ- ಯಶವಂತಪುರ ನಂಬರ್ 16516 ನಂಬರ್ ರೈಲು ಸೇವೆಯನ್ನು ಡಿಸೆಂಬರ್ 14, 16, 19, 21 ಮತ್ತು 23 ರಂದು ರದ್ದುಗೊಳಿಸಲಾಗಿದೆ. ಡಿಸೆಂಬರ್ 16 ಮತ್ತು 17 ರಂದು ಯಶವಂತಪುರ- ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲ್(16539/ 16540) ಓಡಾಟವನ್ನು ಕ್ರಮವಾಗಿ ರದ್ದುಪಡಿಸಲಾಗಿದೆ. ಲಭ್ಯ ರೈಲು ಮಾರ್ಗ ಈ ಅವಧಿಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು- ಮುರ್ಡೇಶ್ವರ-ಬೆಂಗಳೂರು (ರೈಲು ಸಂಖ್ಯೆ. 16585/ 586) ರಾಜಧಾನಿಯನ್ನು ಕರಾವಳಿಯೊಂದಿಗೆ ಸಂಪರ್ಕಿಸುವ ಏಕೈಕ ರೈಲು ಆಗಿರುತ್ತದೆ.

ಪುತ್ತೂರು ಕ್ಷೇತ್ರದಲ್ಲಿ ಶೇ.80.08 ಮತದಾನ

Posted by Vidyamaana on 2023-05-11 01:51:32 |

Share: | | | | |


ಪುತ್ತೂರು ಕ್ಷೇತ್ರದಲ್ಲಿ ಶೇ.80.08 ಮತದಾನ

ಪುತ್ತೂರು:ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನ ಸಭಾ ಚುನಾವಣೆ ಮೇ10ರ೦ದು ಶಾಂತಿಯುತವಾಗಿ ಮುಕ್ತಾಯಗೊ೦ಡಿದೆ.ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ತನಕ ಮತದಾನ ನಡೆದಿದೆ.ಕೆಲವೊ೦ದು ಕೇಂದ್ರಗಳಲ್ಲಿ ಅವಧಿ ಮುಗಿದ ಬಳಿಕವೂ ಮತದಾನ ನಡೆದಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ80.08 ಮತ ಚಲಾವಣೆಯಾಗಿದೆ.ಮತಚಲಾಯಿಸಲು ಹಕ್ಕು ಪಡೆದಿದ್ದ 2,12,753 ಮತದಾರರಲ್ಲಿ 1,70,366 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. 1,04,918 ಪುರುಷ ಮತದಾರರ ಪೈಕಿ 84,087 ಮತ್ತು1,07,832 ಮಹಿಳಾ ಮತದಾರರ ಪೈಕಿ 86,278 ಮಂದಿ ಮತ ಚಲಾಯಿಸಿದ್ದಾರೆ. ಇವಿಎಂನಲ್ಲಿನ ತಾಂತ್ರಿಕ ದೋಷದಿಂದಾಗಿ ಕೆಲವೊಂದು ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಸ್ಥಗಿತಗೊಂಡು ವಿಳಂಬ ಹೊರತುಪಡಿಸಿದರೆ ಮತದಾನ ಸುಸೂತ್ರವಾಗಿ ನಡೆದಿದೆ.ಕ್ಷೇತ್ರದ ಕೆಲವು ಬೂತ್‌ಗಳಲ್ಲಿ ಮತದಾನ ಅವಧಿ ಮುಕ್ತಾಯದ ವೇಳೆಯೂ ಜನ ಸರತಿ ಸಾಲಲ್ಲಿ ನಿಂತಿದ್ದರಿಂದ ರಾತ್ರಿ 7.30ರ ತನಕವೂ ಮತದಾನ ಪ್ರಕ್ರಿಯೆ ನಡೆದಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೇ.78.53 ಮತ ಚಲಾವಣೆಯಾಗಿದೆ.ಒಟು 2,06,029 ಮತದಾರರ ಪೈಕಿ 1,61,788 ಮತದಾರರು ಮತ ಚಲಾಯಿಸಿದ್ದಾರೆ.ಬಂಟ್ವಾಳ ವಿಧಾನಸಭಾ ಚುನಾವಣೆಯಲ್ಲಿ 2,28,377 ಮತದಾರರ ಪೈಕಿ 1,83,326 ಮತದಾರರು ಮತ ಚಲಾಯಿಸುವ ಮೂಲಕ ಶೇ.80.27 ಮತದಾನವಾಗಿದೆ.

ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು

Posted by Vidyamaana on 2023-03-04 05:02:57 |

Share: | | | | |


ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.ಪ್ರಕರಣದ ತನಿಖೆ ಮುನ್ನಡೆದಿದ್ದು, ಈ ನಡುವೆ ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೊರಿ ಅರ್ಜಿ ಸಲ್ಲಿಸಿದ್ದ. ಧೀರ್ಘ ವಾದ ಪ್ರತಿವಾದದ ಬಳಿಕ ಇದೀಗ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಗುರುವಾರ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್ . ಎಸ್ .ಕೆ ಮತ್ತು ಹರ್ಷಿತ್ ವಾದಿಸಿದರು.

ಘಟನೆ ಹಿನ್ನೆಲೆ

ಮಂಗಳೂರು ಹೊರವಲಯದ ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಜಲೀಲ್(45) ಎಂಬುವರಿಗೆ ದುಷ್ಕರ್ಮಿಗಳು ಡಿ. 24ರಂದು ಚಾಕು ಇರಿದಿದ್ದಾರೆ. ಜಲೀಲ್ ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ಮಾಲಿಕರಾಗಿದ್ದರು. ಸ್ಟೋರ್​ನಲ್ಲಿದ್ದ ಜಲೀಲ್​ಗೆ ದುಷ್ಕರ್ಮಿಗಳ ಗುಂಪು ಚಾಕು ಇರಿದು ಪರಾರಿಯಾಗಿದ್ದರು. ಇದರಿಂದ ತೀರ್ವ ಗಯಗೊಂಡಿದ್ದ ಜಲೀಲ್​ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಲೀಲ್​ ಸಾವನ್ನಪ್ಪಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Recent News


Leave a Comment: