ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಏನಿದು ಹಸಿರು ಪಟಾಕಿ? ಖರೀದಿಸುವಾಗ ಅವುಗಳನ್ನು ಗುರುತಿಸುವುದು ಹೇಗೆ?

Posted by Vidyamaana on 2023-10-11 08:38:40 |

Share: | | | | |


ಏನಿದು ಹಸಿರು ಪಟಾಕಿ? ಖರೀದಿಸುವಾಗ ಅವುಗಳನ್ನು ಗುರುತಿಸುವುದು ಹೇಗೆ?

ಭಾರತೀಯ ಸಂಸ್ಕೃತಿ ಪ್ರತೀಕ ಬೆಳಕಿನ ಹಬ್ಬ ದೀಪಾವಳಿ (Diwali) ಸಮೀಪಿಸುತ್ತಿದೆ. ಮನೆಗಳಲ್ಲಿ ದೀಪಗಳನ್ನು ಬೆಳಗಿ, ಪಟಾಕಿ ಸಿಡಿಸಿ ಸಂಭ್ರಮಿಸಲು ಎಲ್ಲರೂ ಕಾಯುತ್ತಿದ್ದಾರೆ. ಪಟಾಕಿ ಹಬ್ಬ ಬಂತೆಂದರೆ ಸಾಕು, ಪರಿಸರ ಕಾಳಜಿ ಕೂಗೂ ಕೇಳಿಬರುತ್ತೆ. ವಾಯುಮಾಲಿನ್ಯ ಸಮಸ್ಯೆ ಕಾರಣ ಹಾನಿಕಾರಕ ಪಟಾಕಿಗಳ ಬದಲಿಗೆ ಪರಿಸರಕ್ಕೆ ಪೂರಕವಾದ ಪಟಾಕಿಗಳನ್ನು ಸಿಡಿಸುವಂತೆ ಸರ್ಕಾರಗಳು ಪ್ರತಿ ವರ್ಷ ಜಾಗೃತಿ ಮೂಡಿಸುತ್ತಲೇ ಇವೆ. ಈ ಅಭಿಯಾನಕ್ಕೆ ಅನೇಕ ಸಂಘಟನೆಗಳು ಸಹ ಕೈಜೋಡಿಸಿವೆ.


ವಾಯುಮಾಲಿನ್ಯದ ಕೇಂದ್ರ ಸ್ಥಾನವಾದ ದೆಹಲಿಯಲ್ಲಿ ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಜೈಲು ಗ್ಯಾರಂಟಿ. ಅಂತೆಯೇ ಅನೇಕ ರಾಜ್ಯಗಳಲ್ಲಿ ಸಂಪೂರ್ಣ ನಿರ್ಬಂಧ ವಿಧಿಸದಿದ್ದರೂ, ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು (Green Crackers) ಸಿಡಿಸುವಂತೆ ಸಲಹೆ ನೀಡಲಾಗಿದೆ. ಆ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನೂ ನಡೆಸಲಾಗುತ್ತಿದೆ.ಹಾಗಾದರೆ ಏನಿದು ಹಸಿರು ಪಟಾಕಿ? ಮಾರುಕಟ್ಟೆಗಳಲ್ಲಿ ಅತ್ಯಾಕರ್ಷಕ ಪ್ಯಾಕೆಟ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುವ ಪರಿಸರಕ್ಕೆ ಹಾನಿಕಾರವಾದ ಪಟಾಕಿಗಳ ನಡುವೆ ಹಸಿರು ಪಟಾಕಿಗಳನ್ನು ಗುರುತಿಸಿ ಖರೀದಿಸುವುದಾದರೂ ಹೇಗೆ?


ಸಾಮಾನ್ಯ ಪಟಾಕಿ ಹಾಗೂ ಹಸಿರು ಪಟಾಕಿಗೆ ಇರುವ ವ್ಯತ್ಯಾಸವೇನು?

ಒಂದರ್ಥದಲ್ಲಿ ಹೇಳುವುದಾದರೆ, ಹಸಿರು ಪಟಾಕಿ ಹಾಗೂ ಸಾಮಾನ್ಯ ಪಟಾಕಿ ಎರಡು ಕೂಡ ಮಾಲಿನ್ಯ ಉಂಟು ಮಾಡುತ್ತವೆ. ಆದರೆ ಸಾಮಾನ್ಯ ಪಟಾಕಿಗಳಿಗೆ ಹೋಲಿಸಿದರೆ ಹಸಿರು ಪಟಾಕಿಗಳು ಶೇಕಡಾ 30 ರಷ್ಟು ಕಡಿಮೆ ವಾಯು ಮಾಲಿನ್ಯಕಾರಕವನ್ನು ಹೊರಸೂಸುತ್ತದೆ. ಹಸಿರು ಪಟಾಕಿಗಳು ಮಾಲಿನ್ಯಕಾರಕ ಹೊಗೆ ಹೊರಸೂಸುವುದನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ, ಧೂಳನ್ನು ಹೀರಿಕೊಳ್ಳುತ್ತದೆ. ಅಲ್ಲದೇ ಬೇರಿಯಮ್ ನೈಟ್ರೇಟ್‌ನಂತಹ ಅಪಾಯಕಾರಿ ಅಂಶಗಳನ್ನು ಹೊಂದಿರುವುದಿಲ್ಲ. ಸಾಮಾನ್ಯ ಪಟಾಕಿಗಳಲ್ಲಿನ ವಿಷಕಾರಿ ಲೋಹಗಳನ್ನು ಕಡಿಮೆ ಅಪಾಯಕಾರಿ ಸಂಯುಕ್ತಗಳೊಂದಿಗೆ ಬದಲಾಯಿಸಲಾಗುತ್ತದೆ. ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ದ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಪ್ರಕಾರ, ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಕಳಪೆಯಾಗಿರುವ ನಗರಗಳು ಮತ್ತು ಪಟ್ಟಣಗಳಲ್ಲಿ ಮಾತ್ರ ಹಸಿರು ಪಟಾಕಿಗಳನ್ನು ಅನುಮತಿಸಲಾಗಿದೆ.

ಹಸಿರು ಪಟಾಕಿ ಎಲ್ಲಿ ಸಿಗುತ್ತೆ? ಗುರುತಿಸುವುದು ಹೇಗೆ?

ಹಸಿರು ಪಟಾಕಿಗಳ ಉತ್ಪಾದನೆಗೆ ಸಂಬಂಧಿಸಿದಂತೆ ಸರ್ಕಾರ ದೇಶದ 230 ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಹಸಿರು ಪಟಾಕಿಗಳ ಲಭ್ಯತೆ ಹಾಗೂ ಅವುಗಳನ್ನು ಗುರುತಿಸುವ ಬಗ್ಗೆ ಜನರಲ್ಲಿ ಗೊಂದಲ ಇದೆ. ಹಸಿರು ಪಟಾಕಿಗಳನ್ನು ಮಾರಾಟ ಮಾಡಲು ಸರ್ಕಾರ ಸಂಬಂಧಪಟ್ಟ ಇಲಾಖೆಗಳಿಂದ ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಗಷ್ಟೇ ಮಾರಾಟಕ್ಕೆ ಅನುಮತಿ ನೀಡಿರುತ್ತದೆ.


ಗ್ರಾಹಕರು ತಾವು ಖರೀದಿಸುವ ಪಟಾಕಿಗಳು ಹಸಿರು ಪಟಾಕಿ ಹೌದೆ? ಅಥವಾ ಇಲ್ಲವೇ? ಎಂಬುದನ್ನು ತಿಳಿದುಕೊಳ್ಳಲು, ಪಟಾಕಿ ಪ್ಯಾಕ್‌ ಮೇಲಿನ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಬೇಕು. ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ (CSIR), ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಹಾಗೂ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆಯ ವಿಶಿಷ್ಟ ಹಸಿರು ಲೋಗೋ ಮೂಲಕ ಸಹ ಹಸಿರು ಪಟಾಕಿಗಳನ್ನು ಗುರುತಿಸಬಹುದಾಗಿದೆ. SWAS, SAFAL ಮತ್ತು STAR ಎಂಬ ಮೂರು ವರ್ಗದಲ್ಲಿ ಹಸಿರು ಪಟಾಕಿಗಳು ಸಿಗುತ್ತವೆ. ಇವನ್ನು CSIR ಅಭಿವೃದ್ಧಿಪಡಿಸಿದೆ.CSIR NEERI ಗ್ರೀನ್ ಕ್ಯೂಆರ್ ಕೋಡ್ ಅಪ್ಲಿಕೇಶನ್

ಹಸಿರು ಪಟಾಕಿಗಳು ಹೂ ಕುಂಡ, ಸುರುಸುರು ಬತ್ತಿ ರೀತಿ ಇರುತ್ತವೆ. ನಕಲಿ ಉತ್ಪನ್ನಗಳ ಮಾರಾಟ ತಪ್ಪಿಸಲು ಹಸಿರು ಪಟಾಕಿಗಳ ಮೇಲೆ ಕ್ಯೂಆರ್‌ ಕೋಡ್‌ ವ್ಯವಸ್ಥೆ ಇರುತ್ತದೆ. ಹಸಿರು ಪಟಾಕಿಗಳು ಶೆಲ್‌ ಗಾತ್ರಕ್ಕಿಂತಲೂ ಕಡಿಮೆ ಗಾತ್ರದಲ್ಲಿ ಮಾಡಲಾಗಿರುತ್ತದೆ. ಬೀದಿ ಬದಿ ವ್ಯಾಪಾರಿಗಳಿಂದ ಹಸಿರು ಪಟಾಕಿಗಳನ್ನು ಖರೀದಿಸಬಾರದು. ಪರವಾನಗಿ ಹೊಂದಿರುವ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು. ಗೂಗಲ್ ಪ್ಲೇಸ್ಟೋರ್‌ನಿಂದ CSIR NEERI ಗ್ರೀನ್ ಕ್ಯೂಆರ್ ಕೋಡ್ ಅಪ್ಲಿಕೇಶನ್ ಬಳಸಿ ಸ್ಕ್ಯಾನರ್ ಅನ್ನು ಡೌನ್‌ಲೋಡ್ ಮಾಡಿ ಅದರ ಮೂಲಕ ಗ್ರಾಹಕರು ಹಸಿರು ಪಟಾಕಿಗಳನ್ನು ಗುರುತಿಸಬಹುದು.ಹಸಿರು ಪಟಾಕಿ ಸಿಡಿಸುವವರು ಈ ಅಂಶಗಳನ್ನು ಗಮನದಲ್ಲಿಡಿ

ಹಸಿರು ಪಟಾಕಿಗಳನ್ನು ಸುಡುವಾಗ ಪಟಾಕಿ ಹಾಗೂ ನಿಮ್ಮ ನಡುವಿನ ಅಂತರ ಹೆಚ್ಚಿರಬೇಕು. ಕೈಯನ್ನು ನೇರವಾಗಿ ಇರಿಸಿ ಪಟಾಕಿಗೆ ಕಿಡಿ ತಾಗಿಸಬೇಕು. ಪಟಾಕಿಗಳನ್ನು ಸಿಡಿಸುವಾಗ ಬೂಟುಗಳನ್ನು ಧರಿಸುವುದು ಉತ್ತಮ. ಆಟದ ಮೈದಾನಗಳಂತಹ ತೆರೆದ ಸ್ಥಳಗಳಲ್ಲಿ ಪಟಾಕಿಗಳನ್ನು ಸಿಡಿಸುವುದು ಒಳಿತು. ಹಸಿರು ಪಟಾಕಿಗಳನ್ನು ಬೆಳಗಿಸುವ ಸಂದರ್ಭದಲ್ಲಿ ಒಂದೆರಡು ಬಕೆಟ್‌ಗಳಷ್ಟು ನೀರನ್ನು ಹತ್ತಿರದಲ್ಲಿ ಇಟ್ಟುಕೊಳ್ಳಬೇಕು. ಪಟಾಕಿ ಸಿಡಿಸುವವರು ಉದ್ದವಾದ, ಸಡಿಲವಾದ ಸಿಂಥೆಟಿಕ್ ಬಟ್ಟೆಗಳನ್ನು ಧರಿಸಬಾರದು.

ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Posted by Vidyamaana on 2024-05-04 21:14:26 |

Share: | | | | |


ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

ವಿಟ್ಲ: ಬಿಸಿಲಿನ ತೀವ್ರತೆಯಿಂದಾಗಿ ಚಲಿಸುತ್ತಿದ್ದ ಬಸ್ಸಿನ ಗಾಜು ಇದ್ದಕ್ಕಿಂದ್ದಂತೆ ಒಡೆದ ಘಟನೆ ವಿಟ್ಲದ ಉರಿಮಜಲು ಎಂಬಲ್ಲಿ ನಡೆದಿದೆ. ಕೇರಳ ರಾಜ್ಯ ಸಾರಿಗೆ ಬಸ್ಸಿನ ಗಾಜು ಒಡೆದಿದ್ದು, ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡಿದ್ದಾರೆ.

ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ.

ಎಪ್ರಿಲ್ 14ರಂದು ಮೋದಿ ಮಂಗಳೂರಿಗೆ ; ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

Posted by Vidyamaana on 2024-04-13 04:44:24 |

Share: | | | | |


ಎಪ್ರಿಲ್ 14ರಂದು ಮೋದಿ ಮಂಗಳೂರಿಗೆ ; ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು, ಎ.12: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 14ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 


ಪ್ರಧಾನ ಮಂತ್ರಿಗಳ ಭದ್ರತೆ ಹಾಗೂ ಸಾರ್ವಜನಿಕರ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿ ಅಂದು ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ಪಾರ್ಕಿಂಗ್ ಸ್ಥಳಗಳನ್ನು ನಿಗದಿಪಡಿಸಲಾಗಿದೆ. 


ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.


1. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.

2. ಕೆ.ಎಸ್.ಅರ್.ಟಿ.ಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.

4. ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಬರುವ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.

5. ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.

6. ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.

7. ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.

8. ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

9. ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

10. ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

ಕಿನ್ನಿಗೋಳಿ, ಮೂಡುಬಿದ್ರೆ ಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಪ್ರಚಾರ

Posted by Vidyamaana on 2024-04-17 04:22:35 |

Share: | | | | |


ಕಿನ್ನಿಗೋಳಿ, ಮೂಡುಬಿದ್ರೆ ಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಪ್ರಚಾರ

ಮಂಗಳೂರು, ಎ.16: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮೂಲ್ಕಿ- ಮೂಡುಬಿದ್ರೆ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ ನಡೆಸಿದ್ದಾರೆ. ಅಭ್ಯರ್ಥಿಯಾದ ಬಳಿಕ ಚೌಟ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಸಂಚಾರ ನಡೆಸಿದ್ದು, ಹಳೆಯಂಗಡಿ, ಕಿನ್ನಿಗೋಳಿ ಪೇಟೆ ಮತ್ತು ಮೂಡುಬಿದ್ರೆ ಪೇಟೆಯಲ್ಲಿ ಉದ್ದಕ್ಕೂ ಸಂಚರಿಸಿ ಅಂಗಡಿ, ಬೀದಿಗಳಲ್ಲಿ ಜನರ ಬಳಿ ಮತಯಾಚನೆ ಮಾಡಿದ್ದಾರೆ.


ಬೆಳಗ್ಗೆ ತೋಕೂರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ ಬ್ರಿಜೇಶ್ ಚೌಟ, ಬಿಜೆಪಿ ಕಾರ್ಯಕರ್ತರ ಜೊತೆಗೆ ದೇವರಲ್ಲಿ ಪ್ರಾರ್ಥಿಸಿ ಮತಯಾಚನೆಗೆ ತೊಡಗಿದ್ದಾರೆ. ಬಳಿಕ ಹಳೆಯಂಗಡಿ ಮತ್ತು ಕಿನ್ನಿಗೋಳಿ ಪೇಟೆಯಲ್ಲಿ ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಬಿಜೆಪಿ ಪ್ರಮುಖರ ಜೊತೆಗೆ ಸಂಚರಿಸಿದ ಚೌಟರಿಗೆ ಅಪಾರ ಜನಬೆಂಬಲ ವ್ಯಕ್ತವಾಗಿದೆ. ಮತದಾರರು ಕೈಕುಲುಕಿ ಬಿಜೆಪಿ ಮತ್ತು ಮೋದಿಗೆ ಜೈಕಾರ ಕೂಗಿದ್ದಾರೆ. ಇದರ ನಡುವೆ ಬಳ್ಕುಂಜೆ ವಿಠೋಧರ ಮಂದಿರ, ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿಯಿತ್ತು ವಿಶೇಷ ಪ್ರಾರ್ಥನೆ ನೆರವೇರಿಸಿದ್ದಾರೆ.

77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

Posted by Vidyamaana on 2023-08-15 03:26:47 |

Share: | | | | |


77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

ಹೊಸದಿಲ್ಲಿ: ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಇಂದು (ಮಂಗಳವಾರ) ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.


77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು.


ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.


ಹಿಂದಿನ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿಯ ಜೊತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಪುತ್ತೂರು ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯಿಂದ ಹಲ್ಲೆ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Posted by Vidyamaana on 2023-08-23 07:32:14 |

Share: | | | | |


ಪುತ್ತೂರು  ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯಿಂದ ಹಲ್ಲೆ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಪುತ್ತೂರು: ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಅಸ್ವಸ್ಥಗೊಂಡ ಮಹಿಳೆಯರಿಬ್ಬರನ್ನು ಪುತ್ತೂರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಡಗನ್ನೂರು ನಿವಾಸಿ ಸುಲೇಖ ಮತ್ತು ಅವರ ಮನೆಗೆ ಕೆಲಸಕ್ಕೆ ಬಂದ ಗಿರಿಜಾ ಹಲ್ಲೆಗೊಳಗಾದವರು. ಸುರೇಶ್ ನಾಯ್ಕ ಎಂಬಾತ ಹಲ್ಲೆ ಮಾಡಿದ ಆರೋಪಿ.

ಮಹಿಳೆಯರಿಬ್ಬರು ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸುಲೇಖ ಅವರ ದೂರದ ಸಂಬಂಧಿ ಸುರೇಶ್ ನಾಯ್ಕ ಬಂದು ಸುಲೇಖ ಅವರ ಕುತ್ತಿಗೆ ಬಟ್ಟೆ ಸುತ್ತಿ ಕೊಲೆಗೆ ಯತ್ನಿಸಿದ್ದಾರೆನ್ನಲಾಗಿದೆ. ಇದನ್ನು ನೋಡಿದ ಕೆಲಸಾಕೆ ಗಿರಿಜಾ ಅವರಿಗೂ ಆತ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಇನ್ನು ಗಾಯಾಳುಗಳಿಬ್ಬರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



Leave a Comment: