ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ

Posted by Vidyamaana on 2023-02-23 11:49:48 |

Share: | | | | |


ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ

ಮಂಗಳೂರು:ಫೆ 23  ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.

ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಮೌಶ್ಮಿ ಶೆಟ್ಟಿ ಪಾತ್ರತೋಟ ಸಾಧನೆ

Posted by Vidyamaana on 2023-11-30 07:46:28 |

Share: | | | | |


ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಮೌಶ್ಮಿ ಶೆಟ್ಟಿ ಪಾತ್ರತೋಟ ಸಾಧನೆ

ಪುತ್ತೂರು: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ ಮಂಗಳೂರು ಟ್ರೋಫಿಯ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರ ತೋಟ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.


ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಮೌಶ್ಮಿ ಶೆಟ್ಟಿಯವರು ವಿ ಟಿವಿ ಯ ಮುಖ್ಯಸ್ಥರೂ ಆಗಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ಮತ್ತು ಸ್ನೇಹ ದಂಪತಿಯ ಪುತ್ರಿ.

ಭಾರತ ಸೇರಿ ಜಗತ್ತಿನಾದ್ಯಂತ X ಸರ್ವರ್ ಡೌನ್ ಬಳಕೆದಾರರ ಪರದಾಟ

Posted by Vidyamaana on 2024-04-23 21:50:13 |

Share: | | | | |


ಭಾರತ ಸೇರಿ ಜಗತ್ತಿನಾದ್ಯಂತ X ಸರ್ವರ್ ಡೌನ್ ಬಳಕೆದಾರರ ಪರದಾಟ

ನವದೆಹಲಿ: ಟ್ವಿಟರ್ ಸ್ಥಗಿತದ ಕೆಲವೇ ವಾರಗಳ ನಂತರ, ಎಲೋನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ಮಂಗಳವಾರ ಮತ್ತೆ ಸರ್ವರ್‌ ಡೌನ್ ಆಗಿರುವ ಬಗ್ಗೆ ವರದಿ ಬರುತ್ತಿದ್ದಾವೆ.ಎಕ್ಸ್‌ ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ Downdetector.com ಪ್ರಕಾರ, ಭಾರತದಲ್ಲಿ ನೂರಾರು ಬಳಕೆದಾರರು ಎಕ್ಸ್ ಅನ್ನು ಪ್ರವೇಶಿಸುವಲ್ಲಿ, ಬಳಕೆ ಮಾಡುವಲ್ಲಿ ಸಮಸ್ಯೆಗಳನ್ನು ಎದುರಿಸಿದ್ದಾರೆ.

ವಿಟ್ಲ:ಮಹಿಳೆ ಆತ್ಮಹತ್ಯೆ

Posted by Vidyamaana on 2023-01-28 15:59:05 |

Share: | | | | |


ವಿಟ್ಲ:ಮಹಿಳೆ ಆತ್ಮಹತ್ಯೆ

ವಿಟ್ಲ: ಖಿನ್ನತೆಗೆ ಒಳಗಾದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

         ಕೊಳ್ಳಾಡು ಗ್ರಾಮದ ತೋಡ್ಲ ನಿವಾಸಿ ದಿ. ಕರುಣಾಕರ ಪೂಜಾರಿ ಯವರ ಪತ್ನಿ ಶಾಲಿನಿ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

           ಶಾಲಿನಿ ಅವರ ಪತಿ ಕೆಲ ವರ್ಷಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಇವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.ಇಂದು ಬೆಳಿಗ್ಗೆ ಶಾಲಿನಿಯವರು ಮನೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದು, ಸಂಬಂಧಿಕರು ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದಿದಿದ್ದು, ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಯಾವುದೋ ಮಾತ್ರೆಗಳನ್ನು ಸೇವಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ..

PSI ನೇಮಕಾತಿ ಹಗರಣದ ಬೆನ್ನಲ್ಲೇ ಕಾನ್ಸ್ ಟೇಬಲ್ ಪರೀಕ್ಷೆಯಲ್ಲೂ ಅಕ್ರಮ : ನಾಲ್ವರು ಸಿಸಿಬಿ ವಶಕ್ಕೆ

Posted by Vidyamaana on 2023-09-11 09:47:24 |

Share: | | | | |


PSI ನೇಮಕಾತಿ ಹಗರಣದ ಬೆನ್ನಲ್ಲೇ ಕಾನ್ಸ್ ಟೇಬಲ್ ಪರೀಕ್ಷೆಯಲ್ಲೂ ಅಕ್ರಮ : ನಾಲ್ವರು ಸಿಸಿಬಿ ವಶಕ್ಕೆ

ಬೆಂಗಳೂರು : ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ಸಶಸ್ತ್ರಮೀಸಲು ಪೊಲೀಸ್ ಪಡೆಯ ) ಕಾನ್ ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲೂ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.ಅಕ್ರಮ ಎಸಗಲು ಕೆಲ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದ ಆರೋಪದಡಿ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೊಪ್ಪಳ ಜಿಲ್ಲೆ ಕುಷ್ಠಗಿ ಮೂಲದ ಬಸವರಾಜ್, ದಿಲೀಪ್, ತಿಮ್ಮೇಗೌಡ ಮತ್ತು ತುಮಕೂರು ಚಿಕ್ಕನಾಯಕನಹಳ್ಳಿ ಮೂಲದ ಹರಿಪ್ರಸಾದ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.ಪರೀಕ್ಷೆಗೆ ಒಂದು ದಿನ ಮುನ್ನ ಆರೋಪಿಗಳು ಅಭ್ಯರ್ಥಿಗಳನ್ನ ಒಂದೆಡೆ ಸೇರಲು ಹೇಳಿದ್ದರು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ನೀಡಲು ಏಜೆಂಟರು ತಯಾರಾಗಿದ್ದರು. ಇದೀಗ ಸಿಸಿಬಿ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಮುಂದಾಗಿದ್ದ ನಾಲ್ವರು ಏಜೆಂಟ್​​ಗಳನ್ನ ಬಂಧಿಸಿದ್ದಾರೆ


ಈ ಆರೋಪಿಗಳು 2018ರಲ್ಲಿ ನಡೆದಿದ್ದ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು, ನಂತರ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು. ಬಳಿಕ ಭಾನುವಾರ ರಾಜ್ಯದಲ್ಲಿ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗುವ ಸಂಬಂಧ ಆರೋಪಿಗಳು ಕೆಲದಿನಗಳ ಹಿಂದೆ ಕೆಲ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದರು ಎನ್ನಲಾಗಿದೆ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಕಾಲೇಜು ಅವರಣದಲ್ಲೇ ಬರ್ಬರ ಹತ್ಯೆ

Posted by Vidyamaana on 2024-04-18 20:51:23 |

Share: | | | | |


ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಕಾಲೇಜು ಅವರಣದಲ್ಲೇ ಬರ್ಬರ ಹತ್ಯೆ

ಹುಬ್ಬಳ್ಳಿ, ಏ 18:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಮಗಳನ್ನು  ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.


ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಕಾಲೇಜ್ ಅವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ  ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. 

ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ‌ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಬಂಧಿಸಿದ್ದಾರೆ.



Leave a Comment: