ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪ್ರಚಾರ ಕಾರ್ಯಕ್ರಮದ ವೇದಿಕೆ ಮೇಲೆ ಹೋಗದೇ ಏಕಾಂಗಿಯಾಗಿ ಕುಳಿತ ಅಭ್ಯರ್ಥಿ ರಕ್ಷಾ ರಾಮಯ್ಯ, ಕಾರಣವೇನು?

Posted by Vidyamaana on 2024-04-19 12:54:03 |

Share: | | | | |


ಪ್ರಚಾರ ಕಾರ್ಯಕ್ರಮದ ವೇದಿಕೆ ಮೇಲೆ ಹೋಗದೇ ಏಕಾಂಗಿಯಾಗಿ ಕುಳಿತ ಅಭ್ಯರ್ಥಿ ರಕ್ಷಾ ರಾಮಯ್ಯ, ಕಾರಣವೇನು?

ಚಿಕ್ಕಬಳ್ಳಾಪುರ, (ಏಪ್ರಿಲ್ 19): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು(ಏಪ್ರಿಲ್ 18) ಚಿಕ್ಕಬಳ್ಳಾಪುರ ಲೋಕಸಭಾ (Chikkaballapur Loksabha Election) ಕ್ಷೇತ್ರದ ಅಖಾಡಕ್ಕಿಳಿದಿದ್ದು, ತಮ್ಮ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯ (Raksha Ramaiah) ಪರ ಭರ್ಜರಿ ಮತಬೇಟೆ ನಡೆಸಿದರು. ಚಿಕ್ಕಬಳ್ಳಾಪುರ(Chikkaballapur) ವಿಧಾನಸಭಾ ವ್ಯಾಪ್ತಿಯಿಂದಲೇ ಪ್ರಚಾರ ಆರಂಭಿಸಿದ ಸಿದ್ದರಾಮಯ್ಯ, ಭರ್ಜರಿ ರೋಡ್​ ಶೋ ನಡೆಸಿದರು. ಈ ವೇಳೆ ಎನ್​​ಡಿಎ ಅಭ್ಯರ್ಥಿ ಡಾ ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಚಿಕ್ಕಬಳ್ಳಾಪುರದ ಬಾಗೆಪಲ್ಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭೇಟಿ

Posted by Vidyamaana on 2024-06-24 11:44:41 |

Share: | | | | |


ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭೇಟಿ

ಸುಬ್ರಮಣ್ಯ; ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು

ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅರುಣ್ ಕುಮಾ‌ರ್ ಪುತ್ತಿಲ

Posted by Vidyamaana on 2024-03-17 09:58:27 |

Share: | | | | |


ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅರುಣ್ ಕುಮಾ‌ರ್ ಪುತ್ತಿಲ

ಪುತ್ತೂರು: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಬಿಜೆಪಿ ಕಚೇರಿಗೆ ಮಾ 17 ರಂದು ಭೇಟಿ ನೀಡಿದರು.

ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅವರನ್ನು ಸ್ವಾಗತಿಸಿದರು. ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ರವಿ ಕುಮಾರ್, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾ‌ರ್ ಪುತ್ತಿಲ ಜೊತೆಗಿದ್ದರು.

ಸಂದರ್ಭ ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್, ಜಿಲ್ಲಾ ಬಿಜೆಪಿ ಪ್ರಮುಖರಾದ ಬುಡಿಯಾರು ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ,ಆರ್ ಸಿ ನಾರಾಯಣ್ ಸಹಜ್ ರೈ,ಸುರೇಶ್ ಕಣ್ಣರಾಯ, ಸುಧೀ‌ರ್ ಶೆಟ್ಟಿ, ಜ್ಯೋತಿ ಆರ್ ನಾಯಕ್, ರಾಧಾಕೃಷ್ಣ ನಂದಿಲ, ಇಂದುಶೇಖ‌ರ್, ಲೋಹಿತ್ ಅಮ್ಮಿನಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

Posted by Vidyamaana on 2024-06-29 13:06:13 |

Share: | | | | |


ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ ಗೆ ಷರತ್ತುಬದ್ಧ ಜಾಮೀನು

Posted by Vidyamaana on 2023-12-05 11:56:37 |

Share: | | | | |


ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು,  ಉದ್ಯಮಿ ಗೋವಿಂದಬಾಬು ಪೂಜಾರಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ ಎರಡನೇ ಆರೋಪಿ ಶ್ರೀಕಾಂತ್​ಗೆ ಮೂರನೇ ಎಸಿಎಂಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರಂತೆ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.


ಉದ್ಯಮಿ ಗೋವಿಂದ ಬಾಬು ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾಳನ್ನು ಸೆಪ್ಟೆಂಬರ್ 13 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.


ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಒಟ್ಟು 4 ಕೋಟಿ ರೂ. ಹಣ ಪಡೆದಿದ್ದಳು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಮತ್ತು ಗ್ಯಾಂಗ್ ಹಣ ನೀಡದೇ ವಂಚಿಸಿತ್ತು. ಈ ಬಗ್ಗೆ ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಸಿಸಿಬಿ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದರು.

ವರಿಷ್ಠರ ಭೇಟಿಗೆ ವಿಜಯೇಂದ್ರ, ಅಶೋಕ್‌ ಡಿ.1ರಂದು ದೆಹಲಿಗೆ

Posted by Vidyamaana on 2023-11-28 17:08:52 |

Share: | | | | |


ವರಿಷ್ಠರ ಭೇಟಿಗೆ ವಿಜಯೇಂದ್ರ, ಅಶೋಕ್‌ ಡಿ.1ರಂದು ದೆಹಲಿಗೆ

ಬೆಂಗಳೂರು (ನ.28) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಅವರು ಡಿ.1ರಂದು ಶುಕ್ರವಾರ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಸಂಬಂಧ ದೆಹಲಿಗೆ ತೆರಳಲಿದ್ದಾರೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಮತ್ತು ಅಶೋಕ್ ಅವರು ಪ್ರತಿಪಕ್ಷದ ನಾಯಕರಾದ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ತಿಳಿಸುವುದರ ಜತೆಗೆ ಕೋರ್ ಕಮಿಟಿ ಪುನಾರಚನೆ, ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ, ವಿಧಾನಸಭೆಯ ಉಪನಾಯಕ, ಮುಖ್ಯ ಸಚೇತಕ, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ, ಉಪನಾಯಕ ಮತ್ತು ಮುಖ್ಯ ಸಚೇತಕ ಹುದ್ದೆಗಳಿಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ ಎಂದು ಮುೂಲಗಳು ತಿಳಿಸಿವೆ.ಅಲ್ಲದೆ, ಉಭಯ ನಾಯಕರ ನೇಮಕಕ್ಕೆ ಸಂಬಂಧಿಸಿದಂತೆ ಬೃಹತ್ ಸಮಾವೇಶ ಆಯೋಜಿಸುವ ಉದ್ದೇಶವನ್ನು ಹೊಂದಲಾಗಿದೆ. ಹೀಗಾಗಿ, ಈ ಸಮಾವೇಶದ ದಿನಾಂಕ, ರಾಷ್ಟ್ರೀಯ ನಾಯಕರ ಲಭ್ಯತೆ ಆಧರಿಸಿ ಅವರನ್ನು ಆಹ್ವಾನಿಸುವ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆಯಿದೆ.


ಜತೆಗೆ ಪಕ್ಷದ ಸಂಘಟನೆ ಬಲಪಡಿಸುವ ಕುರಿತಂತೆ ಹೋರಾಟಗಳನ್ನು ಹಮ್ಮಿಕೊಳ್ಳುವ ಬಗ್ಗೆ ವರಿಷ್ಠರಿಂದ ಸಲಹೆ- ಸೂಚನೆಗಳನ್ನು ಪಡೆಯಬಹುದು. ಮುಖ್ಯವಾಗಿ ಪಕ್ಷ ತೊರೆಯಲು ಸಜ್ಜಾಗಿರುವ ಕೆಲವು ನಾಯಕರನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ವಿಜಯೇಂದ್ರ ಅವರು ವರಿಷ್ಠರೊಂದಿಗೆ ಮಾತುಕತೆ ನಡೆಸುವ ಸಂಭ‍ವ ಹೆಚ್ಚಾಗಿದೆ ಎನ್ನಲಾಗಿದೆ.



Leave a Comment: