ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


BREAKING :ರಾಜ್ಯದಲ್ಲಿ ಡೆಂಗ್ಯೂ ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಯೇ ಬಲಿ

Posted by Vidyamaana on 2024-06-13 20:00:22 |

Share: | | | | |


BREAKING :ರಾಜ್ಯದಲ್ಲಿ ಡೆಂಗ್ಯೂ ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಯೇ ಬಲಿ

ಶಿವಮೊಗ್ಗ : ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇದೀಗ ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ಕೂಡಲೇ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇ ಫೌಂಡೇಶನ್ (ರಿ.) (ಇ ಫ್ರೆಂಡ್ಸ್ )ವತಿಯಿಂದ ಸ್ಕೂಲ್ ಚಲೋ ಕಾರ್ಯಕ್ರಮ..!

Posted by Vidyamaana on 2024-06-15 20:09:54 |

Share: | | | | |


ಇ ಫೌಂಡೇಶನ್ (ರಿ.) (ಇ ಫ್ರೆಂಡ್ಸ್ )ವತಿಯಿಂದ ಸ್ಕೂಲ್ ಚಲೋ ಕಾರ್ಯಕ್ರಮ..!

ಪುತ್ತೂರು:- ಶೈಕ್ಷಣಿಕ ಅಭಿವೃದ್ಧಿಗಾಗಿ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ಇ ಫೌಂಡೇಶನ್ ಇಂಡಿಯಾ (ರಿ.) ವತಿಯಿಂದ ಸ್ಕೂಲ್ ಚಲೋ ಕಾರ್ಯಕ್ರಮವು ಸಂಸ್ಥೆಯ ಕಾರುಣ್ಯ ಕಛೇರಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಯಮಿಗಳಾದ ಯುನಿಟಿ ಶಮೀರ್ ಹಾಜಿ ಇವರು ಸಾಂಕೇತಿಕವಾಗಿ ಪುಸ್ತಕ ಹಾಗೂ ಬ್ಯಾಗ್ ಗಳನ್ನು ವಿತರಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಇಮ್ತಿಯಾಝ್ ಪಾರ್ಲೆ ಇವರು ಶಿಕ್ಷಣಕ್ಕೆ ಇ ಫ್ರೆಂಡ್ಸ್ ಪುತ್ತೂರು ನೀಡುತ್ತಿರುವ ಕೊಡುಗೆ ಮತ್ತು ಶೈಕ್ಷಣಿಕ ಪ್ರಗತಿ ಸಾಮುದಾಯಿಕ ಅನಿವಾರ್ಯ ಕೂಡ ಆಗಿದೆ ಎಂದು ತಿಳಿಸಿದರು.

ಸುಬ್ರಹ್ಮಣ್ಯ : ಕಾರಿನಿಂದ ಚಿನ್ನ ಕಳವು ಪ್ರಕರಣ : ಆರೋಪಿ ಹೊನ್ನವಳ್ಳಿ ಮೂಲದ ಪ್ರಭಾಕರ್ ಪೊಲೀಸ್ ವಶಕ್ಕೆ

Posted by Vidyamaana on 2023-10-11 15:14:04 |

Share: | | | | |


ಸುಬ್ರಹ್ಮಣ್ಯ : ಕಾರಿನಿಂದ ಚಿನ್ನ ಕಳವು ಪ್ರಕರಣ : ಆರೋಪಿ ಹೊನ್ನವಳ್ಳಿ ಮೂಲದ ಪ್ರಭಾಕರ್ ಪೊಲೀಸ್ ವಶಕ್ಕೆ

ಸುಬ್ರಹ್ಮಣ್ಯ : ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದು ಚಿನ್ನ ಕಳವು ಮಾಡಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ.


ಹೊನ್ನವಳ್ಳಿ ಮೂಲದ ಪ್ರಭಾಕರ್ (35) ಬಂಧಿತ ಆರೋಪಿ.


ಈತ ಸುಬ್ರಹ್ಮಣ್ಯ ಪಾರ್ಕಿಂಗ್ ಸ್ಥಳದಲ್ಲಿ ಕಾರಿನ ಗಾಜು ಒಡೆದು ಚಿನ್ನವನ್ನು ಕದ್ದಿದ್ದು, ಈತನನ್ನು ಸುಬ್ರಹ್ಮಣ್ಯ ರೈಲು ನಿಲ್ದಾಣ ಬಳಿ ಬಂಧಿಸಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.


ಈತನ ಖತರ್ನಾಕ್ ಖದೀಮನಾಗಿದ್ದು, 15 ದಿನದ ಹಿಂದೆ ಧರ್ಮಸ್ಥಳದಲ್ಲಿ 40 ಗ್ರಾಂ ಚಿನ್ನವನ್ನು ಇದೇ ಮಾದರಿಯಲ್ಲಿ ಕದ್ದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರ ಮುಂದೆ ಒಪ್ಪಿಕೊಂಡಿರುತ್ತಾನೆ.


ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಕಾರ್ತಿಕ ಅವರ ನೇತೃತ್ವದಲ್ಲಿ ಮುರಳಿಧರ್ (ತನಿಖೆ ) ಹಾಗೂ ಎರಡು ತಂಡ ರಚಿಸಲಾಗಿತ್ತು. ಸಿಬ್ಬಂದಿಗಳಾದ ಕರುಣಾಕರ, ಮಹೇಶ್, ಕುಮಾರ್, ಆನಂದ್, ವಿಠ್ಠಲ್ ಬಸವರಾಜ್, ರೋಹಿತ್, ಕೃಷ್ಣ ಭಾಗಿಯಾಗಿದ್ದರು.

ಮುಕ್ವೆ ನಿವಾಸಿ, ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ನಾಪತ್ತೆ!!

Posted by Vidyamaana on 2024-02-20 16:27:26 |

Share: | | | | |


ಮುಕ್ವೆ ನಿವಾಸಿ, ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ನಾಪತ್ತೆ!!

ಉಳ್ಳಾಲ: ಪುತ್ತೂರು ಮೂಲದ ವಿದ್ಯಾರ್ಥಿನಿಯೋರ್ವಳು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.


ಕೋಟೆಕಾರು ಬಳಿಯ ಮಾಡೂರಿನ ಪಿಜಿಯಲ್ಲಿದ್ದು, ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ, ಪುತ್ತೂರು ಮುಕ್ವೆ ನಿವಾಸಿ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿ. 


ಚೈತ್ರಾ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ ಡಿ ಅಧ್ಯಯನ ನಡೆಸುತ್ತಿದ್ದಳು. ಕೋಟೆಕಾರು ಮಾಡೂರಿನ ಅಹನಾ ಎಂಬ ಪಿಜಿಯಲ್ಲಿ ಚೈತ್ರಾ ನೆಲೆಸಿದ್ದಳು. 


ಚೈತ್ರಾಳ ತಂದೆ ಮೃತರಾಗಿದ್ದು ಮಂಗಳೂರಿನ ಸಂಬಂಧಿಕರ ಆಶ್ರಯದಲ್ಲಿದ್ದುಕೊಂಡು ಎಂಎಸ್ಸಿ ಪೂರೈಸಿದ್ದಳು. ಕಳೆದ ಫೆ.17ರಂದು ಬೆಳಗ್ಗೆ 9 ಗಂಟೆಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಕದ್ರಿಯ ಮನೆಗೂ ತೆರಳದೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಳು ಎಂದು ದೂರಲಾಗಿದೆ.


 ಫೆ.17 ರಂದು ಚೈತ್ರಾ ನಾಪತ್ತೆಯಾದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಇದಾಗಿ ಮೂರು ದಿನ ಕಳೆದರೂ ಚೈತ್ರಾ ಮರಳಿ ಬಂದಿಲ್ಲ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪದ್ಮರಾಜ್ ರಾಮಯ್ಯಗೆ ಕಾಂಗ್ರೆಸ್ ಟಿಕೆಟ್

Posted by Vidyamaana on 2024-03-21 21:55:06 |

Share: | | | | |


ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪದ್ಮರಾಜ್ ರಾಮಯ್ಯಗೆ ಕಾಂಗ್ರೆಸ್ ಟಿಕೆಟ್

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಆಯ್ಕೆ ಮಾಡಿದೆ.

ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ರಾಜಕಾರಣದಲ್ಲಿ ಸಕ್ರೀಯರಾಗಿರುವ ಪದ್ಮರಾಜ್, ಪಕ್ಷ ಸಂಘಟನೆಯ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜೊತೆ ಕೆಲಸ ಮಾಡುತ್ತಾ ಬಹುಸಂಖ್ಯಾತ ಬಿಲ್ಲದ ಸಮುದಾಯದ ಮತಗಳನ್ನು ಕ್ರೋಢಿಕರಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಬಹುಸಂಖ್ಯಾತ ಬಿಲ್ಲವರು ಮತ್ತು ಆರ್ಥಿಕವಾಗಿ ಹಿಂದುಳಿದವರ ಮತಗಳನ್ನು ಸೆಳೆಯುವ ಶಕ್ತಿ ಪದ್ಮರಾಜ್ ಅವರಲ್ಲಿದೆ ಎಂಬ ಕಾರಣಕ್ಕೆ ಅವರಿಗೆ ಅವಕಾಶ ಒದಗಿ ಬಂದಿದೆ ಎನ್ನಲಾಗುತ್ತಿದೆ. 2024ರ ಲೋಕಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ವರ್ಷದ ಹಿಂದೆ ಪದ್ಮರಾಜ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಬೆಂಗಳೂರು ಕಂಬಳದ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

Posted by Vidyamaana on 2023-11-22 21:47:50 |

Share: | | | | |


ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಬೆಂಗಳೂರು ಕಂಬಳದ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ನವೆಂಬರ್ 25ಮತ್ತು 26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಗೃಹಕಛೇರಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆದ ಅಶೋಕ್ ರೈ ಯವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ನೀಡಿದರು. 25 ರಂದು ಸಂಜೆ ನಡೆಯುವ ಮುಖ್ಯ ಸಭಾ ಕಾರ್ಯಕ್ರಮದಲ್ಲಿ ಡಿ ಕೆ ಶಿವಕುಮಾರ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕಂಬಳ ಸಮಿತಿ ಉಪಾಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ,ಸಂಗೀತ ನಿರ್ದೇಶಕರೂ  ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಗುರುಕಿರಣ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. .



Leave a Comment: