ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


Mahindra Thar: ಬಿಡುಗಡೆಗೆ ಇನ್ನಷ್ಟು ದಿನ ಬಾಕಿ.. ಹೊಸ ಮಹೀಂದ್ರಾ ಥಾರ್ 5-ಡೋರ್ ವೈಶಿಷ್ಟ್ಯ ಹೇಗಿದೆ ಗೊತ್ತಾ?

Posted by Vidyamaana on 2023-09-17 13:15:25 |

Share: | | | | |


Mahindra Thar: ಬಿಡುಗಡೆಗೆ ಇನ್ನಷ್ಟು ದಿನ ಬಾಕಿ.. ಹೊಸ ಮಹೀಂದ್ರಾ ಥಾರ್ 5-ಡೋರ್ ವೈಶಿಷ್ಟ್ಯ ಹೇಗಿದೆ ಗೊತ್ತಾ?

ಆಫ್-ರೋಡಿಂಗ್ ಚಾಲನೆಯನ್ನು ಇಷ್ಟಪಡುವವರಿಗೆ ನಿಮಿಷ್ಟದ ಕಾರು ಯಾವುದೇ ಎಂದು ಕೇಳಿದರೆ, ಅವರಿಂದ ಬರುವ ಒಂದೇ ಉತ್ತರ ಮಹೀಂದ್ರಾ ಥಾರ್ (Mahindra Thar) ಎಂದು. ಅಷ್ಟರಮಟ್ಟಿಗೆ ಜನಪ್ರಿಯವಾಗಿದೆ. ಸದ್ಯ, ಕಂಪನಿಯು ಈ ಎಸ್‌ಯುವಿಯನ್ನು 5 ಡೋರ್ ಆಯ್ಕೆಯಲ್ಲಿ ಅಭಿವೃದ್ಧಿಪಡಿಸುತ್ತಿದ್ದು, ಇತ್ತೀಚೆಗೆ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ.ಈ ವೇಳೆ, ಸೆರೆಹಿಡದ ಸ್ಪೈ ಚಿತ್ರಗಳು ಇಂಟರ್ನೆಟ್ ನಲ್ಲಿ ಸೋರಿಕೆಯಾಗಿದ್ದು, ಅದರಲ್ಲಿ ಒಳಭಾಗದಲ್ಲಿ ವೈಶಿಷ್ಟ್ಯಗಳನ್ನು ನೋಡಬಹುದು. ಪ್ರಸ್ತುತ ಖರೀದಿಗೆ ದೊರೆಯುವ 3 ಡೋರ್ ಥಾರ್ ಎಸ್‌ಯುವಿಗೆ ಹೋಲಿಸಿದರೆ, 5 ಡೋರ್ ಥಾರ್ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ಮುಖ್ಯವಾಗಿ, ದೊಡ್ಡದಾದ 12.3 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ ಅನ್ನು ಹೊಂದಿದೆ.


ಮುಂಬರುವ ಮಹೀಂದ್ರಾ ಥಾರ್ 5 - ಡೋರ್, ನವೀನ ಸ್ಟೀರಿಂಗ್ ವೀಲ್ ಪಡೆದಿದೆ. ಇದು, XUV700ಗೆ ಹೋಲಿಕೆಯಾಗುತ್ತದೆ. ಜೊತೆಗೆ ವೃತ್ತಾಕಾರದ ಎಸಿ ವೆಂಟ್ಸ್ ಅನ್ನು ಹೊಂದಿದೆ. ಇದರೊಟ್ಟಿಗೆ ಆರ್ಮ್‌ರೆಸ್ಟ್ ಇದ್ದು, ಹಳೆಯ ಕಾರುಗಳಂತೆ ಡೋರ್ ಪ್ಯಾಡ್‌ಗಳಲ್ಲಿ ವಿಂಡೋ ಸ್ವಿಚ್‌ಗಳನ್ನು ಅಳವಡಿಕೆ ಮಾಡಲಾಗಿದೆ. ಈ ಮೂಲಕ ಹೊಸ 5 - ಡೋರ್ ಎಸ್‌ಯುವಿ, ಕ್ಯಾಬಿನ್ ಒಳಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ.ಹೊಸ ಥಾರ್ ಇನ್ನೂ ಯಾವ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ನೋಡುವುದಾದರೆ, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ, ವೈರ್‌ಲೆಸ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಎಸಿ ವೆಂಟ್ಸ್, ಆಟೋ ಡಿಮ್ಮಿಂಗ್ ಐಆರ್‌ವಿಎಂ, ಆಟೋ ಹೆಡ್‌ಲ್ಯಾಂಪ್ಸ್ ಮತ್ತು ಸೆನ್ಸಿಂಗ್ ವೈಪರ್ಸ್ ಅನ್ನು ಪಡೆದಿರುವ ನೀರಿಕ್ಷೆಯಿದೆ.


ಹೊಸ ಮಹೀಂದ್ರಾ ಥಾರ್ 5 - ಡೋರ್, ಎರಡು ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಸಿಗಬಹುದು. ಅವುಗಳೆಂದರೆ, 2.0 - ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2 - ಲೀಟರ್ ಡೀಸೆಲ್ ಎಂಜಿನ್. ಕ್ರಮವಾಗಿ, 150 bhp ಪವರ್, 320 Nm ಪೀಕ್ ಟಾರ್ಕ್, 130 bhp ಗರಿಷ್ಠ ಪವರ್ 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿರಬಹುದು. ಕಂಪನಿಯು ಈವರೆಗೆ ಈ ಎಸ್‌ಯುವಿ ಬೆಲೆಯನ್ನು ಎಲ್ಲಿಯೂ ಬಹಿರಂಗಪಡಿಸಿಲ್ಲ.ಪ್ರಸ್ತುತ, ದೇಶದಲ್ಲಿ 3 - ಡೋರ್ ಆಯ್ಕೆಯಲ್ಲಿ ಸಿಗುವ ಮಹೀಂದ್ರಾ ಥಾರ್, ರೂ.10.54 ಲಕ್ಷದಿಂದ ರೂ.16.78 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆಯಲ್ಲಿ ದೊರೆಯಲಿದ್ದು, ಅದಕ್ಕೆ ತಕ್ಕಂತೆ ಕಾರ್ಯಕ್ಷಮತೆಯನ್ನು ಹೊಂದಿದೆ. 4WD (ಫೋರ್ ವೀಲ್ ಡ್ರೈವ್) ಹಾಗೂ RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.


ಮಹೀಂದ್ರಾ ಥಾರ್ ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಕೊಂಚ ಕಡಿಮೆ ಇಂಧನ ದಕ್ಷತೆ ಹೊಂದಿದ್ದು, 15.2 kmpl ಮೈಲೇಜ್ ನೀಡುತ್ತದೆ. ಎವರೆಸ್ಟ್ ವೈಟ್, ರೆಡ್ ರೇಜ್, ನಪೋಲಿ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದ್ದು 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮ್ಯಾನ್ಯುವಲ್ ಎಸಿ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ.

BREAKING : ಲೋಕಮಾನ್ಯ ತಿಲಕ್ ವಿಶೇಷ ರೈಲಿನ ಎಸಿ ಬೋಗಿಯಲ್ಲಿ ಅಗ್ನಿ ಅವಘಡ

Posted by Vidyamaana on 2024-03-27 08:24:14 |

Share: | | | | |


BREAKING : ಲೋಕಮಾನ್ಯ ತಿಲಕ್ ವಿಶೇಷ ರೈಲಿನ ಎಸಿ ಬೋಗಿಯಲ್ಲಿ ಅಗ್ನಿ ಅವಘಡ

ಪಾಟ್ನಾ : ಲೋಕಮಾನ್ಯ ತಿಲಕ್ ವಿಶೇಷ 01410 ರೈಲಿನ ಎಸಿ ಬೋಗಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.ಲೋಕಮಾನ್ಯ ತಿಲಕ್ ವಿಶೇಷ ರೈಲಿನ ಎಸಿ ಬೋಗಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹೋಳಿ ಹಬ್ಬದ ಕಾರಣದಿಂದಾಗಿ, ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ತುಂಬಾ ಕಡಿಮೆ ಇತ್ತು, ಇದರಿಂದಾಗಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.ಏತನ್ಮಧ್ಯೆ, ರೈಲ್ವೆ ಸಹಾಯವಾಣಿ ಸಂಖ್ಯೆಯನ್ನು ಸಹ ಬಿಡುಗಡೆ ಮಾಡಿದೆ, ಅದರ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ದಾನಾಪುರ ಸಹಾಯವಾಣಿ ಸಂಖ್ಯೆ 06115232401, ಅರಾ ಸಹಾಯವಾಣಿ ಸಂಖ್ಯೆ 9341505981 ಮತ್ತು ಬಕ್ಸಾರ್ ಸಹಾಯವಾಣಿ ಸಂಖ್ಯೆ 9341505972.


ಮಾಹಿತಿಯ ಪ್ರಕಾರ, ಘಟನೆಯ ನಂತರ ಅರಾ ರೈಲ್ವೆ ನಿಲ್ದಾಣದಿಂದ ಅನೇಕ ರೈಲುಗಳ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಈ ಅನುಕ್ರಮದಲ್ಲಿ ಅನೇಕ ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ, ಇದರಿಂದಾಗಿ ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿದೆ.

ಬೆಳ್ತಂಗಡಿ : ಸವಣಾಲು ಎರಡು ಬೈಕ್ ಗಳ ನಡುವೆ ಅಪಘಾತ ಹೆನ್ರಿ ಡಿಸೋಜಾ ಸ್ಥಳದಲ್ಲಿಯೇ ಮೃತ್ಯು, ಇನ್ನೊಬ್ಬರಿಗೆ ಗಂಭೀರ ಗಾಯ

Posted by Vidyamaana on 2023-03-30 08:41:43 |

Share: | | | | |


ಬೆಳ್ತಂಗಡಿ : ಸವಣಾಲು ಎರಡು  ಬೈಕ್ ಗಳ ನಡುವೆ ಅಪಘಾತ  ಹೆನ್ರಿ ಡಿಸೋಜಾ ಸ್ಥಳದಲ್ಲಿಯೇ ಮೃತ್ಯು, ಇನ್ನೊಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ಇನ್ನೋರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ  ಮಾ 30 ರಂದು ನಡೆದಿದೆ .

ಬೆಳ್ತಂಗಡಿ ತಾಲೂಕಿನ ಸವಣಾಲು ಮಸೀದಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ರಿ ಡಿಸೋಜಾ(62) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇಸ್ಪೆಕ್ಟರ್  ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಳಿಯ ಪುತ್ತೂರು – ಬೆಳ್ತಂಗಡಿ ಶೋರೂಂಗಳಲ್ಲಿ ಡೈಮಂಡ್ ಪ್ರಭೆ

Posted by Vidyamaana on 2023-09-18 15:56:15 |

Share: | | | | |


ಮುಳಿಯ ಪುತ್ತೂರು – ಬೆಳ್ತಂಗಡಿ ಶೋರೂಂಗಳಲ್ಲಿ ಡೈಮಂಡ್ ಪ್ರಭೆ

ಪುತ್ತೂರು: ವೈವಿಧ್ಯಮಯ ಚಿನ್ನಾಭರಣಗಳಿಗೆ ಹೆಸರುವಾಸಿಯಾಗಿರುವ ಮುಳಿಯ ಜ್ಯುವೆಲ್ಲರ್ಸ್’ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಸೆ. 18ರಿಂದ ಅ. 5ರವರೆಗೆ ಡೈಮಂಡ್ ಫೆಸ್ಟ್ ಹಮ್ಮಿಕೊಳ್ಳಲಾಗಿದೆ.


ಕೈಗಟುಕು ವೈಭವ ಎನ್ನುವ ಸಾಲಿನೊಂದಿಗೆ ಗ್ರಾಹಕರ ಮುಂದೆ ಬಂದಿರುವ ಡೈಮಂಡ್ ಫೆಸ್ಟ್, ಹೆಸರಿನಂತೆ ಗ್ರಾಹಕರ ಕೈಗೆಟಕುವ ರೀತಿಯಲ್ಲಿದೆ. ಮಾತ್ರವಲ್ಲ ಗ್ರಾಹಕರಿಗಾಗಿ, ವಿಶೇಷ ಆಫರ್, ಗಿಫ್ಟ್’ಗಳನ್ನು ನೀಡಲಾಗಿದೆ.


ಡೈಮಂಡ್ ರಿಂಘ್ ಗೆಲ್ಲುವ ಅವಕಾಶದ ಜೊತೆಗೆ ನಿಮ್ಮ ಹಳೆ ಚಿನ್ನಾಭರಣಗಳನ್ನು ಹೊಸ ವಜ್ರಾಭರಣಗಳಿಗೆ ವಿನಿಮಯ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ. ಇದರಲ್ಲಿ ಪ್ರತಿ ಗ್ರಾಂ ಮೇಲೆ 100 ರೂ.ಗೂ ಅಧಿಕ ಪಡೆಯುವ ಸುವರ್ಣಾವಕಾಶ ಗ್ರಾಹಕರಿಗಿದೆ. ಹೆಚ್ಚಿನ ಮಾಹಿತಿಗೆ ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಮಳಿಗೆಯ 9844692916 ಹಾಗೂ ಬೆಳ್ತಂಗಡಿ ಮುಖ್ಯರಸ್ತೆಯಲ್ಲಿರುವ ಮುಳಿಯ ಮಳಿಗೆ 9343004916 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

Posted by Vidyamaana on 2023-04-27 11:52:58 |

Share: | | | | |


ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿಸಿಕೊಂಡಿದ್ದು ಎಲ್ಲಾ ನಾಯಕರು ವಿವಿಧ ಭಾಗಗಳಲ್ಲಿ ಅದ್ದೂರಿಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ನಮ್ಮ ಒಗ್ಗಟ್ಟನ್ನು ಕಂಡು ಬಿಜೆಪಿ ಕೊತಕೊತ ಕುದಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ಹೇಳಿದರು.

ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ೧೪ ಮಂದಿ ಟಕೆಟ್ ಆಕಾಂಕ್ಷಿಗಳು ಇದ್ದರೂ ಹೈಕಮಾಂಡ್ ಆಯ್ಕೆ ಮಾಡಿರುವ ಅಶೋಕ್ ರೈಯವ ರನ್ನು ಎಲ್ಲರೂ ಬೆಂಬಲಿಸಿ ಅವರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಈ ಬಾರಿಯ ಚುನಾವಣೆಯಲ್ಲಿ ಅಶೋಕ್ ರೈ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ಮುಂದಿನ ಐದು ವರ್ಷದಲ್ಲಿ ಪುತ್ತೂರು ಅಭಿವೃದ್ದಿ ಕಾಣಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಶ್ರೀರಾಂ ಪಕ್ಕಳ , ಅಭ್ಯರ್ಥಿ ಅಶೋಕ್ ರೈ , ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ತಿತರಿದ್ದರು.

ಜೂ. ೧೧ ರಿಂದ ಕೆಎಸ್‌ಆರ್‌ಟಿಸಿಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಚಾಲನೆ

Posted by Vidyamaana on 2023-06-09 15:23:12 |

Share: | | | | |


ಜೂ. ೧೧ ರಿಂದ ಕೆಎಸ್‌ಆರ್‌ಟಿಸಿಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಚಾಲನೆ

ಪುತ್ತೂರು; ಜೂ. ೧೧ ರಂದು ಭಾನುವಾರ ಮಧ್ಯಾಹ್ನ ಒಂದುಗಂಟೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಸರಕರಿ ಬಸ್ ಪ್ರಯಾಣ ( ನಮ್ಮ ಪ್ರಮಾಣ ನಿಮ್ಮ ಪ್ರಯಾಣ) ಯೋಜನೆಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದು ಅದೇ ಸಮಯಕ್ಕೆ ಪುತ್ತೂರಿನಲ್ಲಿಯೂ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು ಆ ದಿನ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದು ಪುತ್ತೂರು ಸಾಸಕರಾದ ಅಶೋಕ್ ರೈ ಹೇಳಿದರು.

ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ೫ ಉಚಿತ ಯೋಜನೆಗಳ ಭರವಸೆಯನ್ನು ನೀಡಿತ್ತು. ಈ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಣವೂ ಇತ್ತು. ಈ ಯೋಜನೆಯನ್ನು ಜೂ. ೧೧ ರಂದು ಸರಕಾರ ಆರಂಭಿಸಲಿದೆ. ಪುತ್ತೂರಿನಲ್ಲಿ ಮಧ್ಯಾಹ್ನ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಗ್ರಾಮಗ್ರಾಮಗಳಲ್ಲಿ ಐದು ಉಚಿತ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮತ್ತು ಮತದಾರರಿಗೆ ಮನವರಿಕೆ ಮಾಡುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಐದು ಬಸ್ ನಗರದೆಲ್ಲೆಡೆ ಸಂಚಾರ

ಐದು ಬಸ್ಸುಗಳು ಆದಿನ ನಗರದೆಲ್ಲೆಡೆ ಸಂಚಾರವನ್ನು ನಡೆಸಲಿದೆ. ಮಹಿಳಾ ಕಾರ್ಯಕರ್ತರು ಬಸ್ಸಲ್ಲಿ ಉಚಿತವಾಗಿ ಪ್ರಯಾಣ ಮಾಡಲಿದ್ದು ಈ ಪ್ಯಕಿ ಒಂದು ಬಸ್ಸನ್ನು ಅಲಂಕಾರ ಮಾಡಲಾಗುತ್ತದೆ. ಐದು ಬಸ್ಸುಗಳು ಯೋಜನೆಯ ಪ್ರಚಾರಕ್ಕಾಇ ಬಳಸಲಾಗುತ್ತದೆ. ಪುತ್ತೂರು ನಗರ, ನೆಹರೂನಗರ, ಬನ್ನೂರುಮ ಪರ್ಲಡ್ಕ, ದರ್ಬೆ, ಬೈಪಾಸ್, ಸಾಲ್ಮರ, ಕೆಮ್ಮಾಯಿ ಹೀಗೇ ನಗರದಾದ್ಯಂತ ಸಂಚಾರ ನಡೆಸಲಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಣದ ಬಗ್ಗೆ ಮನವರಿಕೆ ಮಾಡುವ ಕಾರ್ಯಕ್ರಮ ಇದೇ ಇದನ ನಡೆಯಲಿದೆ.

ಮಹಿಳೆಯರಿಂದ ನೃತ್ಯ ಕಾರ್ಯಕ್ರಮ

ಉಚಿತ ಯೋಜನೆಯ ಅಂಗವಾಗಿ ಮಹಿಳೆಯರಿಂದ ನೃತ್ಯ ಕಾರ್ಯಕ್ರಮ ಇರುತ್ತದೆ. ವಿಶೇಷ ಬ್ಯಾಂಡ್, ವಾದ್ಯ ಮೇಳದವರು ಭಾಗವಹಿಸಲಿದ್ದಾರೆ. ನೃತ್ಯ ಕಾರ್ಯಕ್ರಮದ ಬಳಿಕ ಸಭಾ ಕಾರ್ಯಕ್ರಮವಿದ್ದು ಆ ಬಳಿಕ ಭೋಜನದ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಮಾಡಲಾಗಿದೆ.

೬ ವರ್ಷ ಪ್ರಾಯದಿಂದ ಎಲ್ಲರಿಗೂ ಉಚಿತ

೬ ವರ್ಷ ಪ್ರಯದ ಹೆಣ್ಣು ಮಗುವಿನಿಂದ ಹಿಡಿದು ವಯೋವೃದ್ದರ ವರೆಗೆ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಣವಾಗಿರುತ್ತದೆ. ನಿರ್ವಾಹಕ ಟಿಕೆಟ್ ನೀಡುತ್ತಾರೆ ಆದರೆ ಹಣ ಪಾವತಿ ಇಲ್ಲ. ಪ್ರತೀಯೊಬ್ಬ ಪ್ರಯಾಣಿಕೆಗೂ ಟಿಕೆಟ್ ನೀಡಲಾಗುತ್ತದೆ. ಝೀರೋದಿಂದ ೬ ವರ್ಷದ ತನಕ ಯವುದೇ ಮಕ್ಕಳಿಗೂ ಬಸ್ಸಿನಲ್ಲಿ ಟಿಕೆಟ್ ಇಲ್ಲ ಎಂದು ಪುತ್ತೂರು ಕೆಎಸ್ಸಾರ‍್ಟಿಸಿ ಡಿಪೊ ಮೆನೆಜರ್ ಇಸ್ಮಾಯಿಲ್ ಸಭೆಗೆ ಮಾಹಿತಿ ನೀಡಿದರು.

 

ಅಂತರರಾಜ್ಯ ಬಸ್ಸುಗಳಿಗೆ ಟಿಕೆಟ್ ಇದೆ


ಕರ್ನಾಟಕಕ್ಕೆ ಸೇರಿದ ಅಂತರರಾಜ್ಯ ಬಸ್ಸುಗಳಲ್ಲಿ ಕರ್ನಾಟಕದ ಗಡಿತನಕ ಉಚಿತವಾಗಿ ಸಂಚಾರ ಮಾಡಬಹುದಾಗಿದೆ. ಬೇರೆ ರಜ್ಯದ ಬಸ್ಸುಗಳಲ್ಲಿ ಉಚಿತ ಪ್ರಯಾಣ ಇರುವುದಿಲ್ಲ.ಪುತ್ತೂರಿನಿಂದ ಗಾಳಿಮುಖಕ್ಕೆ ತೆರಳುವ ಸರಕಾರಿ ಬಸ್ಸುಗಳಲ್ಲಿ ಗಾಳಿಮುಖ ತನಕ ಉಚಿತವಾಗಿ ಸಂಚಾರ ಮಾಡಬಹುದಾಗಿದೆ. ಗಾಳಿಮುಖಕ್ಕೆ ಸಂಚಾರ ಮಾಡುವಾಗ ರಸ್ತೆ ಮಧ್ಯೆ ಕೇರಳ ರಸ್ತೆ ಸಿಕ್ಕಿದರೂ ಆ ಬಳಿಕ ಕರ್ನಾಟಕ ಸೇರುವ ಕಾರಣ ಅಲ್ಲಿಗೆ ತೆರಳುವ ಬಸ್ಸುಗಳಲ್ಲಿ ಪ್ರಯಣ ಉಚಿತವಾಗಿದೆ. ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೂ ಉಚಿತ ಪ್ರಯಾಣ ಅನ್ವಯವಾಗುತ್ತದೆ ಎಂದು ಡಿಪೋ ಮೆನೆಜರ್ ಇಸ್ಮಾಯಿಲ್ ಸಭೆಗೆ ತಿಳಿಸಿದರು.


ಉಚಿತ ಪ್ರಯಣಕ್ಕೆ ಏನು ಬೇಕು

ಉಚತ ಪ್ರಯಾಣಕ್ಕೆ ಮೂರು ತಿಂಗಳ ಅವಧಿಗೆ ಆಧಾರ್ ಕಾರ್ಡು, ರೇಶನ್ ಕಾರ್ಡು ಅಥವಾ ಇತರೆ ವಾಸ್ತವ್ಯದ ದಾಖಲೆಗಳನ್ನು ಪ್ರಯಣಿಸುವ ವೇಳೆ ನಿರ್ವಾಹಕನಿಗೆ ತೋರಿಸಬೇಕು. ಮೂರು ತಿಂಗಳ ಬಳಿಕ ಸ್ಮಾರ್ಟ್ ಕರ್ಡು ರೀತಿಯಲ್ಲಿ ಪ್ರಯಾಣದ ಕಾರ್ಡನ್ನು ವಿತರಣೆ ಮಾಡಲಾಗುವುದು ಎಂದು ಡಿಪೋ ಮೆನೆಜರ್ ತಿಳಿಸಿದರು.

ಲಗೇಜ್ ಚಾರ್ಜ್ ಇರುತ್ತದೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಲಗೇಜ್ ದರ ಈ ಹಿಂದಿನಂತೆಯೇ ಚಾಲ್ತಿಯಲ್ಲಿರುತ್ತದೆ. ಸಣ್ಣ ಪ್ರಮಣದ ಅಂದ್ರೆ ಕೈಯ್ಯಲ್ಲಿ ಹಿಡಿದುಕೊಳ್ಳುವ ಸಾಮಾನ್ಯ ಲಗೇಜ್‌ಗೆ ದರ ಇರುವುದಿಲ್ಲ ಎಂದು ಇಸ್ಮಾಯಿಲ್ ತಿಳಿಸಿದರು.


ಕೊಟ್ಟ ಭರವಸೆ ಎಲ್ಲವೂ ಈಡೇರಿಸುತ್ತೇವೆ: ಅಶೋಕ್ ರೈ

ಚುನಾವಣೆಯ ಸಂದರ್ಬದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎನೆಲ್ಲಾ ಭರವಸೆಯನ್ನು ಕೊಟ್ಟಿದೆಯೋ ಅದೆಲ್ಲವನ್ನೂ ಒಂದೊಂದಾಗಿ ಈಡೇರಿಸಲಿದ್ದು ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಕಾಂಗ್ರೆಸ್ ಎಂದೆಂದೂ ಬಡವರ ಪರವಾಗಿಯೇ ಇರುತ್ತದೆ ಎಂಬುದಕ್ಕೆ ಐದು ಉಚಿತ ಗ್ಯಾರಂಟಿಗಳೇ ಸಾಕ್ಷಿಯಾಗಿದೆ. ಎಲ್ಲಾ ಐದು ಗ್ಯಾರಂಟಿಗಳೂ ಬಡವರ ಪರವಾಗಿಯೇ ಇದೆ. ಪುತ್ತೂರು ಕ್ಷೇತ್ರದಾದ್ಯಂತ ಸರಕಾರದ ಐದು ಗ್ಯಾರಂಟಿ ಬಗ್ಗೆ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತೇವೆ. ಹಳ್ಳಿ ಹಳ್ಳಿಗಳಲ್ಲಿ ಫ್ಲೆಕ್ಸ್ ಹಾಕುವ ಮೂಲಕ ಪ್ರಚಾರ ಕಾರ್ಯ ನಡೆಸಲು ಈಗಾಗಲೇ ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದು ಶಾಸಕರು ತಿಳಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ ಗ್ಯಾರಂಠಿ ಯೋಜನೆ ಅನುಷ್ಠಾನಗೊಳ್ಳುತ್ತಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಕಾಂಗ್ರೆಸ್ ಜನರ ಆಶೋತ್ತರಗಳನ್ನು ಈಡೇರಿಸಲಿದೆ ಎಂದು ಹೇಳಿದರು. ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಜನತೆಗೆ ಮುಂದಿನ ದಿನಗಳಲ್ಲಿ ನೆಮ್ಮದಿಯ ಜೀವನ ದೊರೆಯಲಿದೆ. ಪಕ್ಷ ಬೇದವಿಲ್ಲದೆ ಎಲ್ಲಾ ಮಹಿಳೆಯರಿಗೂ ಉಚಿತ ಐದು ಗ್ಯಾರಂಟಿ ಯೋಜನೆಗಳು ಲಬ್ಯವಾಗಲಿದೆ ಎಂದು ಹೇಳಿದರು. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಮಾತನಾಡಿ ದುಷ್ಟ ಸರಕಾರ ರಾಜ್ಯದಿಂದ ತೊಳಗಿದೆ ಮುಂದೆ ಬೆಸ್ಟ್ ಸರಕಾರ. ಬೆಸ್ಟ್ ಸರಕಾರ ಜನರ ಸೇವೆ ಮಾಡಲಿದೆ ಎಂದು ಹೇಳಿದರು.


ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರಾದ ಜೋಕಿಂಡಿಸೋಜಾ, ಮಾಜಿ ಪುಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಉಪಸ್ಥಿತರಿದ್ದರು.

ಬಸ್ ನಿಲ್ಲಿಸದೇ ಇದ್ದರೆ ವಿಡಿಯೋ ಮಾಡಿ ಕಳಿಸಿ

ವಿದ್ಯಾರ್ಥಿಗಳನ್ನು ಕಂಡರೆ ಬಸ್ಸು ನಿಲ್ಲಿಸುವುದಿಲ್ಲ. ಬಸ್ಸು ಖಾಲಿ ಇದ್ದರೂ ನಿಲ್ಲಿಸದೆ ತೆರಳುತ್ತಾರೆ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ ಎಂದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಸಭೆಯಲ್ಲಿ ತಿಳಿಸಿದರು. ಇದಕ್ಕೆ ಉತ್ತರಿಸಿದ ಶಾಸಕರು ಖಾಲಿ ಬಸ್ಸು ಇದ್ದರೂ ನಿಲ್ಲಿಸದೇ ಇರುವ ಮತ್ತು ವಿದ್ಯಾರ್ಥಿಗಳನ್ನು ಕಂಡರೆ ನಿಲ್ಲಿಸದ ಬಸ್ಸುಗಳ ವಿಡಿಯೋ ಮಾಡಿ ನನಗೆ ಕಳಿಸಿ ನಾನು ಖುದ್ದಾಗಿ ಪರಿಶೀಲಿಸಿ ಕ್ರಮಕ್ಕೆ ಅಗ್ರಹಿಸುತ್ತೇನೆ ಎಂದು ಸಭೆಗೆ ತಿಳಿಸಿದರು. ನಿಲ್ಲಿಸದ ಬಸ್ ಚಾಲಕರಿಗೆ ಈಗಾಗಲೇ ಮೆಮೋ ಕಳುಹಿಸಲಾಗಿದೆ ಮುಂದಿನ ದಿನಗಳಲ್ಲಿ ಪುನರಾವರ್ತನೆಯಾದರೆ ಕ್ರಮಕೈಗೊಳ್ಳಲಿದ್ದೇವೆ ಎಂದು ಡಿಪೋ ಮೆನೆಜರ್ ಇಸ್ಮಾಯಿಲ್ ತಿಳಿಸಿದರು.




Leave a Comment: