ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಪುತ್ತೂರು : ತುರ್ತು ಕಾಮಗಾರಿ ನಿಮಿತ್ತ ಇಂದು(ಜೂ 22)ವಿದ್ಯುತ್ ನಿಲುಗಡೆ!!!

Posted by Vidyamaana on 2023-06-21 23:17:59 |

Share: | | | | |


ಪುತ್ತೂರು : ತುರ್ತು ಕಾಮಗಾರಿ ನಿಮಿತ್ತ ಇಂದು(ಜೂ 22)ವಿದ್ಯುತ್ ನಿಲುಗಡೆ!!!

ಪುತ್ತೂರು: 110/33/11 ಕೆವಿ ವುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110ಕೆಪಿ ಮತ್ತು 33ಕೆ.ಎ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರುಗಳ ಪಾಲನಾ ಕಾರ್ಯ ಹಮ್ಮಿಕೊ೦ಡಿರುವುದರಿಂದ ಜೂ.22 (ಗುರುವಾರ) ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ, 33ಕೆಪಿ ಪುತ್ತೂರು-ಕುಂಬ-ಬೆಳ್ಳಾರೆ, 33ಕೆ.ಎ ಪುತ್ತೂರು-ಸುಳ್ಯ ಹಾಗೂ 33ಕೆ.ಎ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು ಕಂಪ್ಯೂ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ಎದ್ಯುತ್‌ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಕಾಸರಗೋಡು: ಅಪಘಾತದ ಗಾಯಾಳು ಇಬ್ರಾಹಿಂ ಖಲೀಲ್ ಮೃತ್ಯು

Posted by Vidyamaana on 2023-10-03 13:42:04 |

Share: | | | | |


ಕಾಸರಗೋಡು: ಅಪಘಾತದ ಗಾಯಾಳು ಇಬ್ರಾಹಿಂ ಖಲೀಲ್ ಮೃತ್ಯು

ಕಾಸರಗೋಡು: ಸ್ಕೂಟರ್ ಮತ್ತು ಖಾಸಗಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಸವಾರನೋರ್ವ ಮೃತಪಟ್ಟಿದ್ದಾರೆ ಉಪ್ಪಳ ಸೊಂಕಾಲ್ ನ ಇಬ್ರಾಹಿಂ ಖಲೀಲ್ (23) ಮೃತ ಪಟ್ಟವರು.

Readmore...

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!


ಅ 01 ರಂದು ಭಾನುವಾರ ರಾತ್ರಿ ಕುಂಬಳೆ ಭಾಸ್ಕರ ನಗರದಲ್ಲಿ ಅಪಘಾತ ನಡೆದಿತ್ತು. ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಖಲೀಲ್ ಅ 03 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಜೊತೆಗಿದ್ದ ಉಪ್ಪಳ ಮಣಿಮುಂಡದ ಮುಹಮ್ಮದ್ ಮಾಝ್ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಶಕ್ತಿಯೋಜನೆ: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಮಹಿಳೆಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-09-04 07:15:05 |

Share: | | | | |


ಶಕ್ತಿಯೋಜನೆ: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಮಹಿಳೆಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವ ‘ಶಕ್ತಿಯೋಜನೆ’ ಜಾರಿಯಾದ ದಿನದಂದು ಮಹಿಳೆಯೊಬ್ಬರು ಬಸ್‌ ಗೆ ನಮಸ್ಕರಿಸಿ ಬಸ್​​ ಏರಿದ್ದರು. ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.


ಇದೀಗ ಆ ಮಹಿಳೆಯು ಕನ್ನಡದ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ”ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು” ಎಂದಿದ್ದಾರೆ.


ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್‌ ಕನ್ನಡ ವಾಹಿನಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಪಾಕಿಸ್ತಾನ ಆಪರೇಟಿವ್ಸ್ ಗಳಿಂದ ಹನಿಟ್ರ್ಯಾಪ್ ಗೆ ಸಿಲುಕಿದ್ದ ಬಿಎಸ್ ಎಫ್ ಸಿಬಂದಿ ನೀಲೇಶ್ ಬಾಲಿಯಾ ಬಂಧನ

Posted by Vidyamaana on 2023-07-08 14:27:30 |

Share: | | | | |


ಪಾಕಿಸ್ತಾನ ಆಪರೇಟಿವ್ಸ್ ಗಳಿಂದ ಹನಿಟ್ರ್ಯಾಪ್ ಗೆ ಸಿಲುಕಿದ್ದ ಬಿಎಸ್ ಎಫ್ ಸಿಬಂದಿ ನೀಲೇಶ್ ಬಾಲಿಯಾ ಬಂಧನ

ಸೂರತ್: ಪಾಕಿಸ್ತಾನದ ಮಹಿಳಾ ಗುಪ್ತಚರ ಅಧಿಕಾರಿಯೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಗಡಿ ಭದ್ರತಾ ಪಡೆ (BSF) ನೌಕರನನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆಬಂಧಿತ ಆರೋಪಿ ನೀಲೇಶ್ ಬಾಲಿಯಾ ಕಳೆದ ಐದು ವರ್ಷಗಳಿಂದ ಬಿಎಸ್‌ಎಫ್‌ನ ಭುಜ್ ಪ್ರಧಾನ ಕಚೇರಿಯಲ್ಲಿ ಸಿಪಿಡಬ್ಲ್ಯೂಡಿಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.2023 ರ ಜನವರಿಯಲ್ಲಿ ಪಾಕಿಸ್ಥಾನದ ಮಹಿಳಾ ಗುಪ್ತಚರ ಏಜೆಂಟ್ ಳೊಂದಿಗೆ ಸಂಪರ್ಕಕ್ಕೆ ಬಂದಿದ್ದ ಎಂದು ಎಟಿಎಸ್ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಜೋಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಕ್ತ ನಿಧನ

Posted by Vidyamaana on 2023-05-04 18:02:16 |

Share: | | | | |


ಪುತ್ತೂರು :  ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಕ್ತ ನಿಧನ

ಪುತ್ತೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಚೇತನ, ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ , ಸಂಘಟನಾ ಚತುರ ರಾಧಾಕೃಷ್ಣ ಭಕ್ತ (71) ಮೇ.4 ರಂದು ನಿಧನರಾದರು.

ಜನಸಂಘದ ಕಾಲದಲ್ಲಿ ಸಕ್ರೀಯರಾಗಿದ್ದು, ತಮ್ಮ ಮನೆಯನ್ನೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯ ಮಾಡಿಕೊಂಡಿದ್ದ ದಿ. ದೇವದಾಸ್ ಭಕ್ತ ಅವರ ಪುತ್ರ ರಾಧಾಕೃಷ್ಣ ಭಕ್ತ ತನ್ನ ತಂದೆಯ ಮಾರ್ಗದರ್ಶದನಲ್ಲೇ ಮುಂದುವರಿದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿದ್ದರು.ಪುತ್ತೂರಿನಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಸ್ಥಾಪನೆಯ ಮುಖ್ಯ ರೂವಾರಿಯಾಗಿ, ಸಂಚಾಲಕರಾಗಿ, ಪುತ್ತೂರು ಶ್ರೀ ಲಕ್ಷ್ಮಿವೆಂಕಟರಮಣ ದೇವಸ್ಥಾನದ ಮಾಜಿ ಆಡಳಿತ ಮೋಕ್ತೇಸರಾಗಿದ್ದು ಹಲವು ಸಾಮಾಜಿಕ, ಧಾರ್ಮಿಕ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಅಖಿಲ ಭಾರತ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯ ದೇವಾಲಯಗಳ ಒಕ್ಕೂಟದ ಉಪಾಧ್ಯಕ್ಷರಾಗಿದ್ದರು

ಮೃತರು ಪತ್ನಿ ಲಕ್ಷ್ಮಿಭಕ್ತ, ಪುತ್ರಿ ಅಶ್ವಿನಿ ಭಕ್ತ, ಸಹೋದರರಾದ ಯೋಗೀಶ್ ಭಕ್ತ, ಗುರುದತ್ ಭಕ್ತ ಮತ್ತು ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.

ರಾಧಾಕೃಷ್ಣ ಭಕ್ತ ಅವರ ಪಾರ್ಥಿವ ಶರೀರವನ್ನು ಕೋರ್ಟ್ ರಸ್ತೆಯಲ್ಲಿರುವ ಮನೆಯಲ್ಲಿ ಇರಿಸಲಾಗಿದ್ದು, ನಾಳೆ (ಮೇ.5) ಬೆಳಿಗ್ಗೆ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಮೃತರ ಸಹೋದರ ಯೋಗೀಶ್ ಭಕ್ತ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ : ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ :ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಣಕ್ಕೆ

Posted by Vidyamaana on 2024-03-13 19:27:50 |

Share: | | | | |


ಲೋಕಸಭೆ ಚುನಾವಣೆ : ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ :ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಣಕ್ಕೆ

ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಘೋಷಣೆ ಆಗಿದೆ.ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಬಾರಿ ಅಚ್ಚರಿಯ ಅಭ್ಯರ್ಥಿಯ ಘೋಷಣೆಯಾಗಿದೆ.


ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಲಾಗಿದೆ.ಉಡುಪಿಯಿಂದ ಮಾಜಿ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿ ಕಣಕ್ಕೆ ಇಳಿಯಲಿದ್ದಾರೆ. ಈ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರದಿಂದ ಟಿಕೇಟ್ ನೀಡಲಾಗಿದೆ.

ಬೆಂಗಳೂರು ಉತ್ತರ ಸಂಸದರಾಗಿದ್ದ ಡಿ.ವಿ. ಸದಾನಂದ ಗೌಡ ಅವರಿಗೆ ಟಿಕೇಟ್ ಕೈತಪ್ಪಿದೆ.

ಮೈಸೂರಿನಿಂದ ಯದುವೀ‌ರ್ ಕಣಕ್ಕೆ ಇಳಿಯಲಿದ್ದು, ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ನೀಡಿಲ್ಲ.



ಕ್ಯಾಪ್ಟನ್ ಬ್ರಿಜೇಶ್ ಚೌಟರ ಬಗ್ಗೆ..:


ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪ್ರಸ್ತುತ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದಾರೆ.


ಬ್ರಿಜೇಶ್ ಚೌಟರು ಕಾಲೇಜು ದಿನಗಳಲ್ಲಿಯೇ ಎನ್.ಸಿ.ಸಿಯಲ್ಲಿ ಹೆಸರು ಮಾಡಿ ಸೇನೆಗೆ ಸೇರ್ಪಡೆಯಾಗಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋ‌ರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು.


ಪದವಿಯಲ್ಲಿದ್ದಾಗ ಎನ್ ಸಿಸಿಯಲ್ಲಿ ಮಂಗಳೂರು ವಿವಿಯಲ್ಲಿ ಬೆಸ್ಟ್ ಕೇಡೆಟ್ ಎಂದು ಗುರುತಿಸಿದ್ದಲ್ಲದೆ, ದೆಹಲಿ ರಿಪಬ್ಲಿಕ್ ಪೆರೇಡ್ ನಲ್ಲಿ ಎನ್ಸಿಸಿ ಕೇಡೆಟ್ ಆಗಿ ಪಾಲ್ಗೊಂಡಿದ್ದರು.


ಯುಪಿಎಸ್ಸಿ ಆಯೋಜಿಸುವ ಕಂಬೈನ್ಸ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್ (CDSE) ಪರೀಕ್ಷೆ ಹಾಗೂ ಎಸ್ಎಸ್ಬಿ ಇಂಟರ್ವ್ಯೂ ನಲ್ಲಿ ತೇರ್ಗಡೆಗೊಂಡು ಚೆನ್ನೈ ಯಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA) ಯಲ್ಲಿ ತರಬೇತಿ ಪಡೆದು ಭಾರತೀಯ ಭೂ ಸೇನೆಯ ಪ್ರತಿಷ್ಠಿತ 8 ಗೋರ್ಖಾ ರೈಫಲ್ಸ್ ನ 7ನೇ ಬಾಟಲಿಯನ್ ನಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.


ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.


2011ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ್ದ ಬ್ರಿಜೇಶ್ ಚೌಟ ಆರ್.ಎಸ್.ಎಸ್ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.


2013ರಲ್ಲಿ ಯುವಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2016- 19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆನಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಕ್ಯಾಪ್ಟನ್, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು.


2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣಾ ಕರ್ತವ್ಯದಲ್ಲಿ ತೊಡಗಿಸಿದ್ದರು. ರಾಜ್ಯ ಬಿಜೆಪಿ ಚುನಾವಣಾ ಸಮಿತಿಯ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ.


2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವಕರನ್ನು ಕಟ್ಟಿಕೊಂಡು ಸತತ ಆರು ವರ್ಷಗಳಿಂದ ಮಂಗಳೂರು ಕಂಬಳ ಹೆಸರಲ್ಲಿ ಕಂಬಳ ನಡೆಸುತ್ತಿದ್ದಾರೆ.


ಮಂಗಳೂರು ಲಿಟ್ ಫೆಸ್ಟ್ ಆಯೋಜಕರಾಗಿ, ಸಮರ್ಥನ್ ಫೌಂಡೇಶನ್ ಟ್ರಸ್ಟಿಯಾಗಿ ಹೀಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಬ್ರಿಜೇಶ್ ಚೌಟ ತನ್ನನ್ನು ತೊಡಗಿಸಿಕೊಂಡಿದ್ದಾರೆ.



Leave a Comment: