ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

Posted by Vidyamaana on 2023-11-04 08:34:52 |

Share: | | | | |


ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

ಪುತ್ತೂರು: ಮಾಣಿ-ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ೨೨೦೦ ಕೋಟಿ ರೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ನಾಲ್ಕು ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ ಭಾಗದ ಜನತೆಯ ಬಹುವರ್ಷಗಳ ಕನಸು ನನಸಾಗುವ ಕಾಲ ಬಂದಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

ಮಾಣಿಯಿಂದ ಸಂಪಾಜೆ ತನಕ ೭೬ ಕಿ ಮೀ ರಸ್ತೆಯು ಮುಂದಿನ ದಿನಗಳಲ್ಲಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಲಿದೆ. ೭೬ ಕಿ ಮಿ ರಸ್ತೆ ಕಾಮಗಾರಿಗೆ ಮೊದಲ ಹಂತದಲ್ಲಿ ೧೧೦೦ ಕೋಟಿ ರೂ ಮತ್ತು ಎರಡನೇ ಹಂತದಲ್ಲಿ ೧೧೦೦ ಕೋಟಿ ರೂ ಒಟ್ಟು ೨೨೦೦ ಕೋಟಿ ರೂ ಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ.

ಕಳೇದ ಕೆಲದಿನಗಳ ಹಿಂದೆ ಚತುಷ್ಪಥ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಜೊತೆ ಶಾಸಕರಾದ ಅಶೋಕ್ ರೈ ಹಾಗೂ ಮಂಗಳೂರು ಸಂಸದ ನಳಿನ್‌ಕುಮಾರ್ ಕಟೀಲ್ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಮಾಣಿಯಿಂದ ಪುತ್ತೂರು ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯ ವಿಚಾರವೂ ಚರ್ಚೆಯಾಗಿತ್ತು. ಆ ಬಳಿಕ ಕೇಂದ್ರ ಹೆದ್ದಾರಿ ಪ್ರಾಧಿಕಾರ ರೀಜನಲ್ ಮೆನೆಜರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಶಾಸಕರು ಮತ್ತು ಸಂಸದರು ಚರ್ಚೆ ನಡೆಸಿದ್ದರು. ಇದೀಗ ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಯೋಜನಾ ವರದಿಯನ್ನು ಸಿದ್ದಪಡಿಸಿಕೊಳ್ಳಲು ಮುಂದಾಗಿದೆ.

ಮಾಣಿಯಿಂದ ಸಂಪಾಜೆ ತನಕ ಭೂ ಒತ್ತುವರಿ ಪ್ರಕ್ರಿಯೆ, ಸೇತುವೆ ಕಾಮಗಾರಿ ಸೇರಿದಂತೆ ರಸ್ತೆ ಅಗಲೀಕರಣಕ್ಕೆ ಬೇಕಾದ ಎಲ್ಲಾ ಯೋಜನೆಗಳನ್ನು ಸಿದ್ದಪಡಿಸಲಾಗುತ್ತಿದ್ದು ಮುಂದಿನ ನಾಲ್ಕು ತಿಂಗಳೊಳಗೆ ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ. ಬಳಿಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಮುಂದಿನ ನಾಲ್ಕು ವರ್ಷದೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು ಮಾಣಿಯಿಂದ ಸಂಪಾಜೆ ತನಕ ಪೂರ್ಣ ಪ್ರಮಾಣದ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ.


೨ ಫೈಓವರ್ ೧ ಅಂಡರ್‌ಪಾಸ್

ಬೈಪಾಸ್ ಹಾಗೂ ದರ್ಬೆಯ ಬಳಿ ಫ್ಲೈ ಓವರ್ ನಿರ್ಮಾಣವಾಗಲಿದೆ ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆಯ ಬಳಿ ಅಂಡರ್‌ಪಾಸ್ ನಿರ್ಮಾಣವಾಗಲಿದೆ. ವಿದ್ಯಾರ್ಥಿಗಳ ಹಿತ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಅಂಡರ್‌ಪಾಸ್ ನಿರ್ಮಾಣ ಮಾಡಲಾಗುತ್ತದೆ. ಉಳಿದಂತೆ ಮಾಣಿಯಿಂದ ಸಂಪಾಜೆ ತನಕ ಅಗತ್ಯ ಇರುವ ಕಡೆಗಳಲ್ಲಿ ಫ್ಲೈ ಓವರ್ ಮತ್ತು ಅಂಡರ್ ಪಾಸ್ ಕಾಮಗಾರಿ ನಡೆಯಲಿದೆ.


ಕಿ ಮೀ ಕಡಿತವಾಗಲಿದೆ

ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ರಸ್ತೆಯು ನೇರವಾಗಿ ನಿರ್ಮಾಣವಾಗಲಿರುವ ಕಾರಣ ಕಿ ಮಿ ಅಂತರವೂ ಕಡಿಮೆಯಾಗುವ ಸಾಧ್ಯತೆ ಇದೆ.



ಶಾಸಕನಾಗಿ ಆಯ್ಕೆಯಾದ ಮೊದಲ ದಿನದಂದೇ ಚತುಷ್ಪಥ ರಸ್ತೆಯ ಕನಸು ಕಂಡಿದ್ದೆ. ಆ ಬಳಿಕ ನಾನು ಅದರ ಬಗ್ಗೆ ಮಾಹಿತಿ ಕಲೆ ಹಾಕಲು ಹೆದ್ದಾರಿ ಪ್ರಾಧಿಕಾರದ ದೆಹಲಿ ಮತ್ತು ಬೆಂಗಳೂರು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿದ್ದೆ. ಇದೀಗ ನಾನು ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಕಾಮಗಾರಿಗೆ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದೇವೆ. ಪ್ರಸ್ತಾವನೆಗೆ ಕೇಂದ್ರದ ಒಪ್ಪಿಗೆ ದೊರಕಿದ್ದು ಮುಂದೆ ಯೋಜನಾ ವರದಿ ಸಿದ್ದಗೊಂಡ ಬಳಿಕ ಕಾಮಗಾರಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಒಟ್ಟು ಎರಡು ಹಂತದಲ್ಲಿ ೨೨೦೦ ಕೋಟಿ ರೂ ಅನುದಾನಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದ್ದು ಸುಮಾರು ೩೦೦೦ ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅಭಿವೃದ್ದಿಗಾಗಿ ನಾನು ಮತ್ತು ನಳಿನ್‌ಕುಮಾರ್ ಕಟೀಲ್ ಜೊತೆಯಾಗಿ ಈ ವಿಚಾರದಲ್ಲಿ ಕೆಲಸ ಮಾಡಿದ್ದೇವೆ . ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಜನತೆಯ ಬಹುವರ್ಷಗಳ ಕನಸು ಮತ್ತು ನನ್ನ ಕನಸು ನನಸಾಗಿದ್ದು ಇದು ಬಹಳ ಸಂತೋಷದ ವಿಚಾರವಾಗಿದೆ


ಅಶೋಕ್ ರೈ, ಶಾಸಕರು ಪುತ್ತೂರು

ಎಲ್‌ ಕೆ ಅಡ್ವಾಣಿಗೆ ಭಾರತ ರತ್ನ ಗೌರವ… ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ

Posted by Vidyamaana on 2024-02-03 12:29:23 |

Share: | | | | |


ಎಲ್‌ ಕೆ ಅಡ್ವಾಣಿಗೆ ಭಾರತ ರತ್ನ ಗೌರವ… ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಭಾರತದ ಮಾಜಿ ಉಪ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ಮಾಹಿತಿಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡಿದ್ದು ‘ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಕವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು. ಅವರು ನಮ್ಮ ಗೃಹ ಮಂತ್ರಿ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಅನುಕರಣೀಯ ಮತ್ತು ಶ್ರೀಮಂತ ಒಳನೋಟಗಳಿಂದ ತುಂಬಿವೆ ಎಂದು ಬರೆದುಕೊಂಡಿದ್ದಾರೆ

ಕಾರ್ಕಳ | ನಕಲಿ ಪರಶುರಾಮ ಮೂರ್ತಿ: ಪ್ರಕರಣ ದಾಖಲು

Posted by Vidyamaana on 2024-06-23 17:28:15 |

Share: | | | | |


ಕಾರ್ಕಳ | ನಕಲಿ ಪರಶುರಾಮ ಮೂರ್ತಿ: ಪ್ರಕರಣ ದಾಖಲು

ಕಾರ್ಕಳ : ತಾಲ್ಲೂಕಿನ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿ ಮಾಡಿ ಕೊಡಲು ₹1.25 ಕೋಟಿ ಪಡೆದು, ನಕಲಿ ಮೂರ್ತಿಯನ್ನು ಮಾಡಿ ಕೊಟ್ಟು ಮೋಸ ಮಾಡಿದ್ದಾರೆ ಎಂಬ ಆರೋಪದಲ್ಲಿ ಕೃಷ್ಣ ಆರ್ಟ್ ವರ್ಲ್ಡ್‌ನ ಕೃಷ್ಣ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಗ್ರಾಪಂ ಎನ್.ಓ.ಸಿ. ತಿದ್ದುಪಡಿ ಮಾಡಿದ ವಿಚಾರಕ್ಕೆ ಅರ್ಜಿ ತಿರಸ್ಕೃತ ಮೆಸ್ಕಾಂ ಎಇಇಗೆ ಕೊಲೆ ಬೆದರಿಕೆ: ಆರೋಪಿ ನಿಸಾರ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-06-14 16:35:35 |

Share: | | | | |


ಗ್ರಾಪಂ ಎನ್.ಓ.ಸಿ. ತಿದ್ದುಪಡಿ ಮಾಡಿದ ವಿಚಾರಕ್ಕೆ ಅರ್ಜಿ ತಿರಸ್ಕೃತ  ಮೆಸ್ಕಾಂ ಎಇಇಗೆ ಕೊಲೆ ಬೆದರಿಕೆ: ಆರೋಪಿ ನಿಸಾರ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ವಿದ್ಯುತ್ ಗುತ್ತಿಗೆದಾರನೊಬ್ಬ ಪುತ್ತೂರಿನ  ಬನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಗೆ ತೆರಳಿ ಅವಾಚ್ಯವಾಗಿ ನಿಂಧಿಸಿ ಕೊಲೆ ಬೆದರಿಕೆ ಹಾಕುವ ಜತೆಗೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪುತ್ತೂರು ಸನಾ ಇಲೆಕ್ಟ್ರಿಕಲ್ಸ್ ಮಾಲೀಕ ಮಹಮ್ಮದ್ ನಿಸಾರ್ ಆರೋಪಿ. ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು, ದೂರು ನೀಡಿದ್ದಾರೆ.


ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಕಛೇರಿಗೆ ಆಗಮಿಸಿ ಮುಂಡೂರು ಗ್ರಾಮದ ರಮೇಶ್ ಎಂಬವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೇ, ಅರ್ಜಿಯನ್ನು ಮಂಜೂರು ಮಾಡದೇ ಹೋದಲ್ಲಿ ನಿನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ.

ಇಲಾಖೆಯ ನಿಯಮದ ತೊಡಕಿನಿಂದ ಅರ್ಜಿಯನ್ನು ತಿರಸ್ಕಾರ ಮಾಡಿದ್ದಾಗಿದೆ ಎಂದು ದಾಖಲೆ ಸಮೇತ ದೂರಿನಲ್ಲಿ ರಾಮಚಂದ್ರ ಅವರು ತಿಳಿಸಿದ್ದಾರೆ.

ತಿರಸ್ಕೃತ ಅರ್ಜಿಯನ್ನೇ ಮುಂದುವರಿಸಲು ಒತ್ತಡ, ಬೆದರಿಕೆ: ಮೆಸ್ಕಾಂ ಎಇಇ ರಾಮಚಂದ್ರ

ಗ್ರಾಮ ಪಂಚಾಯತ್ ಎನ್.ಓ.ಸಿ.ಯಲ್ಲಿ ಕೆರೆ ಎಂಬ ಶಬ್ದವನ್ನು‌ ತಿದ್ದುಪಡಿ ಮಾಡಿ, ಕೊಳವೆ ಬಾವಿ ಎಂದು ನಮೂದು ಮಾಡಲಾಗಿತ್ತು. ಇದರ ಬಗ್ಗೆ ಗ್ರಾಮ ಪಂಚಾಯತ್ ಸ್ಪಷ್ಟೀಕರಣ ನೀಡಿದ್ದು, ತಿದ್ದುಪಡಿ ಮಾಡಿಲ್ಲ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕಾನೂನು ಪ್ರಕಾರ ರದ್ದು ಮಾಡಿದ್ದೇವೆ. ಈ ವಿಚಾರವನ್ನು ಗ್ರಾಹಕರಿಗೆ ತಿಳಿಸಿದ್ದು, ಅವರು ಒಪ್ಪಿಕೊಂಡು ಬೇರೆಯೇ ಅರ್ಜಿ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಆದರೆ ನಿಸಾರ್ ಎಂಬವರು ನನ್ನ ಕಚೇರಿಗೆ ಬಂದು, ಅದೇ ಫೈಲನ್ನು ಮುಂದುವರಿಸುವಂತೆ ಹೇಳಿ ಬೆದರಿಕೆ ಹಾಕಿದ್ದಾರೆ. ಈ‌ ಹಿನ್ನೆಲೆಯಲ್ಲಿ‌ ದೂರು ನೀಡಿದ್ದೇನೆ.




ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ

Posted by Vidyamaana on 2024-03-07 12:39:49 |

Share: | | | | |


ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ

ಬೆಳ್ತಂಗಡಿ :ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ಸುದ್ದಿ ಉದಯ ಪತ್ರಿಕೆಯ ಆಡಳಿತ ನಿರ್ದೇಶಕ ತುಕಾರಾಮ್ ಬಿ. ಐದು ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಆನಂದ ಶೆಟ್ಟಿ, ಗೋಪಾಲ್ ರಾವ್, ಮಮತಾ ಶೆಟ್ಟಿ, ವೀಣಾ ವಿನೋದ್ ಕುಮಾರ್, ಕೃಷ್ಣಪ್ಪ ಗುಡಿಗಾರ್, ಸಚಿನ್ ಕುಮಾರ್ ನೊಜೋಡಿ, ಸಂತೋಷ್ ಕುಮಾರ್, ಶರತ್ ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ, ಪ್ರಸಾದ್ ಬಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ : ಬಾತ್ ರೂಂ ಕಿಂಡಿಯಿಂದ ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿ ಎಸ್ಕೇಪ್ ಆದ ಆಸಾಮಿ!

Posted by Vidyamaana on 2023-08-29 09:47:48 |

Share: | | | | |


ಬಂಟ್ವಾಳ : ಬಾತ್ ರೂಂ ಕಿಂಡಿಯಿಂದ ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿ ಎಸ್ಕೇಪ್ ಆದ ಆಸಾಮಿ!

ಬಂಟ್ವಾಳ: ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಈ ದೃಶ್ಯವನ್ನು ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿ ಬಳಿಕ ಅಲ್ಲಿಂದ ಎಸ್ಕೇಪ್ ಆಗಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಗೋಡೆಯ ಕಿಂಡಿ ನಡುವಿನಿಂದ ಮೊಬೈಲ್ ಮೂಲಕ ಸ್ನಾನದ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದ.

ಇದನ್ನು ಗಮನಿಸಿದ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದು, ತಕ್ಷಣವೇ ಅಪರಿಚಿತ ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.

 ಯುವತಿಯ ಬೊಬ್ಬೆ ಕೇಳಿ ಇವಳ ತಾಯಿ ಹಾಗೂ ನೆರೆಮನೆಯವರು ಓಡಿ ಬಂದು ವಿಷಯ ಕೇಳಿ, ಓಡಿಹೋದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ ಆದರೆ, ಅಂದು ಆತನ ಪತ್ತೆಯಾಗಿರಲಿಲ್ಲ.

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

 ಆರೋಪಿ ವಶಕ್ಕೆ 

 ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿ ಜಗದೀಪ್ ಆಚಾರ್ಯ ಎಂಬಾತನನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ. ರಾಮಕೃಷ್ಣ ನೇತೃತ್ವದ ತಂಡ ವಶಕ್ಕೆ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಗ್ರಾರ್ ನಿವಾಸಿಯಾಗಿರುವ ಆರೋಪಿಯನ್ನುಇದೀಗ  ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

  ಘಟನೆ ಕುರಿತು ಪ್ರಕರಣ ದಾಖಲಾದ ಬೆನ್ನಲ್ಲೆ ಪೋಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಬಳಿಕ,  ಸಂಶಯದ ಮೇಲೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಈತ ಸತ್ಯ ಬಾಯಿಬಿಟ್ಟಿದ್ದಾನೆ ಎಂಬುದು ತಿಳಿದು ಬಂದಿದೆ.



Leave a Comment: