ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಮಂಗಳೂರು ಕಮಿಷನರ್ ಕುಲದೀಪ್ ಜೈನ್ ವರ್ಗಾವಣೆ

Posted by Vidyamaana on 2023-09-05 03:40:40 |

Share: | | | | |


ಮಂಗಳೂರು ಕಮಿಷನರ್ ಕುಲದೀಪ್ ಜೈನ್ ವರ್ಗಾವಣೆ

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ


ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.


ಕುಲದೀಪ್ ಅವರಿಗೆ ಇನ್ನು ಹುದ್ದೆ ತೋರಿಸಿದರೇ ವರ್ಗಾವಣೆ ಮಾಡಿದೆ.


ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಅಧಿಕಾರ ಖಚಿತವೆಂದು ನಂಬಿ 22 ಲ್ಯಾಂಡ್‌ ಕ್ರೂಸರ್ ಖರೀದಿಸಿದ್ದ ಕೆಸಿಆರ್: ರೇವಂತ್

Posted by Vidyamaana on 2023-12-28 12:07:33 |

Share: | | | | |


ಅಧಿಕಾರ ಖಚಿತವೆಂದು ನಂಬಿ 22 ಲ್ಯಾಂಡ್‌ ಕ್ರೂಸರ್ ಖರೀದಿಸಿದ್ದ ಕೆಸಿಆರ್: ರೇವಂತ್

ತೆಲಂಗಾಣ:ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸರ್ಕಾರ ಸುಮಾರು ₹66 ಕೋಟಿ ಖರ್ಚು ಮಾಡಿ 22 ಟೊಯೊಟಾ ಲ್ಯಾಂಡ್ ಕ್ರೂಸರ್‌ ಕಾರುಗಳನ್ನು ಖರೀದಿಸಿತ್ತು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇವಂತ್‌, ಹಿಂದಿನ ಸರ್ಕಾರದ ದುಂದು ವೆಚ್ಚದಿಂದ ಜನರು ಸಮಸ್ಯೆ ಎದುರಿಸಬೇಕಾಯಿತು ಎಂದರು.


ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನನಗಾಗಿ ಹೊಸ ವಾಹನಗಳನ್ನು ಖರೀದಿಸದಂತೆ ಅಧಿಕಾರಿಗಳಿಗೆ ತಿಳಿಸಿದ್ದೆ. ಹಳೆ ಕಾರುಗಳನ್ನೇ ರಿಪೇರಿ ಮಾಡಿ ಬಳಸುವಂತೆ ಸೂಚಿಸಿದ್ದೆ. ಈ ವೇಳೆ ಅಧಿಕಾರಿಗಳು ಹೊಸ ಕಾರುಗಳನ್ನು ಈಗಾಗಲೇ ಖರೀದಿಸಿರುವ ಬಗ್ಗೆ ನನಗೆ ಮಾಹಿತಿ ನೀಡಿದರು ಎಂದು ಹೇಳಿದ್ದಾರೆ.


ಹಿಂದಿನ ಸರ್ಕಾರ 22 ಲ್ಯಾಂಡ್ ಕ್ರೂಸರ್ ವಾಹನಗಳನ್ನು ಖರೀದಿಸಿತ್ತು. ಅವೆಲ್ಲವೂ ವಿಜಯವಾಡದಲ್ಲಿವೆ. ನೂತನ ಮುಖ್ಯಮಂತ್ರಿ(ಕೆಸಿಆರ್) ಪ್ರಮಾಣ ವಚನ ಸ್ವೀಕರಿಸಿದ ಮೇಲೆ ಅವುಗಳನ್ನು ತರಲು ಆಲೋಚಿಸಿದ್ದೆವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.ಇವುಗಳೆಲ್ಲವೂ ಬುಲೆಟ್ ಪ್ರೂಫ್‌ ಕಾರುಗಳಾಗಿದ್ದು, ಒಂದು ಕಾರಿನ ಬೆಲೆ ಸುಮಾರು ₹3 ಕೋಟಿ. ಈ ರೀತಿಯಲ್ಲಿ ಕೆಸಿಆರ್ ಸರ್ಕಾರ ರಾಜ್ಯದ ಸಂಪತ್ತನ್ನು ಕೊಳ್ಳೆ ಹೊಡೆಯಲು ಹೊರಟಿತ್ತು ಎಂದರು.

ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-04-01 16:31:44 |

Share: | | | | |


ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

ಪುತ್ತೂರು: ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.

ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು.

ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅಭ್ಯರ್ಥಿ ಪೇಟೆಯಲ್ಲಿ ಬೆಳೆದವರಲ್ಲ. ಹಳ್ಳಿಯ ಜೀವನ ಕಂಡವರು. ಕಷ್ಟ, ಬಡತನದಲ್ಲೇ ಬೆಳೆದು ಬಂದಿದ್ದಾರೆ. ಆದ್ದರಿಂದ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಮಾಡುವವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಬೇಕು. ಇದಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ನೀವೆಲ್ಲಾ ಜನರ ಮನೆಗೆ ಹೋಗಿ, ಮತ ಕೇಳಿದ ಕಾರಣ ನಾನು ಶಾಸಕನಾಗುವಂತಾಯಿತು. ಅದೇ ರೀತಿ ಪದ್ಮರಾಜ್ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡಬೇಕು ಎಂದರು.

ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಚುನಾವಣೆ ಎಂದ ಮಾತ್ರಕ್ಕಷ್ಟೇ ಎಲ್ಲಾ ಪ್ರಾರ್ಥನಾಲಯಗಳಿಗೆ ತೆರಳುತ್ತಿಲ್ಲ. 

ಪುತ್ತೂರು : ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2023-10-10 08:24:55 |

Share: | | | | |


ಪುತ್ತೂರು : ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


ಘಟನಾ ಸ್ಥಳಕ್ಕೆ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ, ಆರ್ಯಪು ಗ್ರಾಮಪಂಚಾಯತ್ ಸದಸ್ಯ ಯಾಕೂಬ್ ಕುರಿಯ ಸಹಿತ ಪೊಲೀಸರು ಭೇಟಿ ನೀಡಿದ್ದು, ಸಾವಿಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.

ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ


ಸಿದ್ದರಾಮಯ್ಯ ಎಂಬ ಹೆಸರಿನ ನಾನು.. 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ

Posted by Vidyamaana on 2023-05-20 07:30:03 |

Share: | | | | |


ಸಿದ್ದರಾಮಯ್ಯ ಎಂಬ ಹೆಸರಿನ ನಾನು.. 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ

ಬೆಂಗಳೂರು: “ಸಿದ್ದರಾಮಯ್ಯ ಎಂಬ ಹೆಸರಿನ ನಾನು…… “ ಸಿದ್ದರಾಮನಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಿತೀಶ್ ಕುಮಾರ್ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕರಾವಳಿಗರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಕೇಂದ್ರ ಸರಕಾರ ಮಾಡುತ್ತೆ: ಕಟೀಲ್

Posted by Vidyamaana on 2023-10-10 20:50:01 |

Share: | | | | |


ಕರಾವಳಿಗರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಕೇಂದ್ರ ಸರಕಾರ ಮಾಡುತ್ತೆ: ಕಟೀಲ್

ಮಂಗಳೂರು: ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.



ಇಸ್ರೇಲ್ ನಲ್ಲಿ ಹಮಾಸ್ ಬಂಡುಕೋರರು ನಡೆಸಿರುವ ರಾಕೆಟ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ನಡೆಸುತ್ತಿದ್ದು ಇದೀಗ ಇಸ್ರೇಲ್ ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದ್ದು ಅಲ್ಲದೆ ಉದ್ಯೋಗ ಅರಸಿ ಕರಾವಳಿಯಾ ಸಾವಿರಾರು ಮಂದಿ ಇದೀಗ ಇಸ್ರೇಲ್ ನಲ್ಲಿ ಸಿಲುಕಿದ್ದಾರೆ ಈ ಕುರಿತು ಮಾತನಾಡಿದ ನಳಿನ್ ಕುಮಾರ್ ಕಟೀಲ್ ಯಾರು ಭಯ ಪಡಬೇಕಾಗಿಲ್ಲ ಇಸ್ರೇಲ್ ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸ್ತೇವೆ ಅಲ್ಲದೆ ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ಹೇಳಿದರು.


ಕರಾವಳಿಗರ ರಕ್ಷಣೆ ಕುರಿತು ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ, ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿ ಕೊಳ್ಳಲು ಸೂಚಿಸ್ತೇನೆ ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತವೆ, ಈಗಲೂ ಇಸ್ರೇಲ್ ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದ್ದೆ ಇರುತ್ತದೆ, ರಷ್ಯಾ-ಉಕ್ರೇನ್ ಯುದ್ದ ಆದಾಗಲೂ ಇಂಥದ್ದೇ ಪರಿಸ್ಥಿತಿ ಇತ್ತು ಆಗಲೂ ಅವರ ಮನೆಗಳಿಗೆ ತೆರಳಿ ಸಮಾಧಾನ ಹೇಳಿದ್ದೆವು, ಮೋದಿ ಸರ್ಕಾರ ಆಗಲೂ ಅಲ್ಲಿದ್ದ ಭಾರತೀಯರ ರಕ್ಷಣೆ ‌ಮಾಡಿತ್ತು ಅದೇ ಕೆಲಸವನ್ನು ಈಗಲೂ ಮಾಡುತ್ತದೆ ಎಂದು ಹೇಳಿದರು.


ನಾನು ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ, ಯಾರೂ ಭಯ ಪಡೋ ಅಗತ್ಯ ಇಲ್ಲ, ಏನೇ ಆತಂಕ ಇದ್ದರೂ ನನ್ನನ್ನ ನೇರವಾಗಿ ಸಂಪರ್ಕಿಸಿ ಎಂದು ಹೇಳಿದರು.



Leave a Comment: