ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಅಧಿಕಾರಿಗಳಿಗೆ ಅವಾಚ್ಯವಾಗಿ ನಿಂದನೆ ಆರೋಪ : ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್

Posted by Vidyamaana on 2024-05-19 19:29:41 |

Share: | | | | |


ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಅಧಿಕಾರಿಗಳಿಗೆ ಅವಾಚ್ಯವಾಗಿ ನಿಂದನೆ ಆರೋಪ : ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್

ಬೆಳ್ತಂಗಡಿ : ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.


ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮೋದ್‌ ಉಜಿರೆ ಹಾಗೂ ಶಶಿರಾಜ್‌ ಶೆಟ್ಟಿ (35) ಎಂಬವರುಗಳ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಿನಾಂಕ 18.05.2024 ರಂದು ಅ.ಕ್ರ: 56/2024, ಕಲಂ: 9B(1)(b) Explosive act 1884 ಕಲಂ 5 The Explosives Substance Act-1908 ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪೈಕಿ ಶಶಿರಾಜ್‌ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ,

ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Posted by Vidyamaana on 2024-05-01 09:29:26 |

Share: | | | | |


ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

ಉಪ್ಪಿನಂಗಡಿ : ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್‌ ಅವರ ಪತ್ನಿ ರೀಮಾ ಸೋಂಕರ್‌ (26) ಮತ್ತು ಮಗು ರಿಯಾ (1) ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಂಟೀರಿಯರ್‌ ಡೆಕೊರೇಟರ್‌ ಆಗಿರುವ ಸೋನು ಸೋಂಕರ್‌ ಉತ್ತರ ಪ್ರದೇಶದ ಅಜಾಮ್‌ ಘರ್‌ ಜಿಲ್ಲೆಯ

ಮಿತ್ತೂರು : ಇನ್ನೋವಾ - ಟಿಪ್ಪರ್ ನಡುವೆ ಅಪಘಾತ: ನಾಲ್ವರು ಆಸ್ಪತ್ರೆಗೆ

Posted by Vidyamaana on 2023-07-25 08:33:03 |

Share: | | | | |


ಮಿತ್ತೂರು : ಇನ್ನೋವಾ - ಟಿಪ್ಪರ್ ನಡುವೆ ಅಪಘಾತ: ನಾಲ್ವರು ಆಸ್ಪತ್ರೆಗೆ

ವಿಟ್ಲ: ಇನ್ನೋವಾ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರಿನ ಪರ್ಲೋಟ್ಟು ಎಂಬಲ್ಲಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಈ ಭಾಗದಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದಂಡ್ ಶಿಲಾಲ್ ಪರಿಚಾರಕ ಸಂಪತ್ ಪೂಜಾರಿ ನಿಧನ

Posted by Vidyamaana on 2023-12-06 12:15:05 |

Share: | | | | |


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದಂಡ್ ಶಿಲಾಲ್ ಪರಿಚಾರಕ ಸಂಪತ್ ಪೂಜಾರಿ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂದರ್ಭ ದಂಡ್ ಶಿಲಾಲ್ ಪರಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆರೆಮೂಲೆ ನಿವಾಸಿ ಸಂಪತ್ ಪೂಜಾರಿ (31) ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುತ್ತೂರು ಆಸ್ಪತ್ರೆಗೆ ದಾಖಲಾಗಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.


ಸಂಪತ್ ರವರು ಜೆಸಿಬಿ ಹಾಗೂ ಹಿಟಾಚಿ, ಟಿಪ್ಪರ್ ಹೊಂದಿದ್ದು, ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಂದೆ, ತಾಯಿ ಸಹೋದರರನ್ನು ಅಗಲಿದ್ದಾರೆ.

ಗದಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ನಲ್ಲಿ ಭಾರಿ ಗೊಂದಲ

Posted by Vidyamaana on 2023-12-17 12:31:37 |

Share: | | | | |


ಗದಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ನಲ್ಲಿ ಭಾರಿ ಗೊಂದಲ

ಗದಗ : ಸಿಎಂ ಸಿದ್ದರಾಮಯ್ಯ ಅವರು ಇಂದು ಗದಗ ಪ್ರವಾಸ ಕೈಗೊಂಡಿದ್ದು, ಈ ವೇಳೆ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲವಾಗಿರುವ ಘಟನೆ ನಡೆದಿದೆ.ಗದಗದ ಹೆಲಿಪ್ಯಾಡ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ದ ಹೆಲಿಕಾಪ್ಟರ್‌ ಪೈಲಟ್‌ ಅರ್ಧಕ್ಕೆ ಇಳಿಸಿ ಮತ್ತೆ ಹೆಲಿಕಾಪ್ಟರ್‌ ಹಾರಿಸಿದ್ದು, ಭಾರೀ ಗೊಂದಲಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು, ಜಿಲ್ಲಾಡಳಿತ, ಕಾಂಗ್ರೆಸ್‌ ಮುಖಂಡರು ಕಕ್ಕಾಬಿಕ್ಕಿಯಾಗಿದ್ದರು.

ಉತ್ತರಕಶಿ ಸುರಂಗ ದುರಂತ ಎರಡು ಮೀಟರ್‌ ಕೊರೆದರೆ ಎಲ್ಲ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಬಹುದು: ಲೆಫ್ಟಿನೆಂಟ್‌ ಜನರಲ್‌ (ನಿವೃತ್ತ) ಸೈಯದ್‌ ಅಟಾ ಹಸ್ನೈನ್‌

Posted by Vidyamaana on 2023-11-28 17:49:47 |

Share: | | | | |


ಉತ್ತರಕಶಿ ಸುರಂಗ ದುರಂತ  ಎರಡು ಮೀಟರ್‌ ಕೊರೆದರೆ ಎಲ್ಲ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಬಹುದು: ಲೆಫ್ಟಿನೆಂಟ್‌ ಜನರಲ್‌ (ನಿವೃತ್ತ) ಸೈಯದ್‌ ಅಟಾ ಹಸ್ನೈನ್‌

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ (Uttarkashi Tunnel) ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ನಡೆಯುತ್ತಿರುವ ಕಾರ್ಯಾಚರಣೆಯು ಕೊನೆಯ ಹಂತ ತಲುಪಿದೆ. ರ‍್ಯಾಟ್‌ ಹೋಲ್‌ ಮೈನಿಂಗ್‌ (Rat Hole Mining) ಮೂಲಕ ಸುಮಾರು 58 ಮೀಟರ್‌ ಸುರಂಗವನ್ನು ಕೊರೆಯಲಾಗಿದ್ದು, ಇನ್ನು ಎರಡೇ ಮೀಟರ್‌ ಬಾಕಿ ಇದೆ.ಎರಡು ಮೀಟರ್‌ ಕೊರೆದರೆ ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಬಹುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA) ಸದಸ್ಯ ಲೆಫ್ಟಿನೆಂಟ್‌ ಜನರಲ್‌ (ನಿವೃತ್ತ) ಸೈಯದ್‌ ಅಟಾ ಹಸ್ನೈನ್‌ ಮಾಹಿತಿ ನೀಡಿದ್ದಾರೆ.


ರಕ್ಷಣಾ ಕಾರ್ಯಾಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರುವುದು ನಮ್ಮ ಕರ್ತವ್ಯವಾಗಿದೆ. ಇದುವರೆಗೆ 58 ಮೀಟರ್‌ ಕೊರೆಯಲಾಗಿದೆ. ಇನ್ನೂ ಎರಡು ಮೀಟರ್‌ ಕೊರೆಯುವುದು ಬಾಕಿ ಇದೆ. ಈಗಾಗಲೇ ನಾವು ಕಾರ್ಮಿಕರ ಸಮೀಪ ತೆರಳಿದ್ದೇವೆ. ಕಾರ್ಮಿಕರ ಧ್ವನಿಯು ನಮಗೆ ಕೇಳುತ್ತಿದೆ. ಸ್ವಲ್ಪ ವಿಳಂಬವಾದರೂ ಪರವಾಗಿಲ್ಲ, ಎಲ್ಲ ಕಾರ್ಮಿಕರನ್ನು ರಕ್ಷಣೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಉತ್ತರಕಾಶಿ ಸುರಂಗದಲ್ಲಿಯೇ ತಾತ್ಕಾಲಿಕವಾಗಿ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅಲ್ಲದೆ, ಏಮ್ಸ್‌ ವೈದ್ಯರ ನಾಲ್ಕು ತಂಡಗಳು ಸುರಂಗದ ಬಳಿಯೇ ಬೀಡುಬಿಟ್ಟಿವೆ. ಯಾವಾಗ ಬೇಕಾದರೂ ಜನರನ್ನು ಹೊರಗೆ ಕರೆತರುವ ಸಾಧ್ಯತೆ ಇರುವುದರಿಂದ ಅವರ ಆರೋಗ್ಯವನ್ನು ಕ್ಷಿಪ್ರವಾಗಿ ತಪಾಸಣೆ ಮಾಡಲು ಸುರಂಗದಲ್ಲಿಯೇ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಸುರಂಗದ ಹೊರಗೆ ಸುಮಾರು 16 ಆಂಬುಲೆನ್ಸ್‌ಗಳು ಕಾಯುತ್ತಿದ್ದು, ತಪಾಸಣೆ ಬಳಿಕ ಅವರನ್ನು ಬೇರೊಂದು ಆಸ್ಪತ್ರೆಗೆ ಸಾಗಿಸಲಾಗುತ್ತದೆ ಎನ್ನಲಾಗಿದೆ.


ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿತ್ತು. ನವೆಂಬರ್‌ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಷ್ಟಾದರೂ ಕ್ಷಿಪ್ರವಾಗಿ ಕಾರ್ಮಿಕರನ್ನು ರಕ್ಷಣೆ ಮಾಡಲು ಆಗಿರಲಿಲ್ಲ. ಕೊನೆಗೆ 17 ದಿನಗಳ ಬಳಿಕ ಎಲ್ಲ ಕಾರ್ಮಿಕರ ರಕ್ಷಣೆಯು ಕೊನೆಯ ಹಂತ ತಲುಪಿದೆ.



Leave a Comment: