ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Posted by Vidyamaana on 2023-06-06 05:24:39 |

Share: | | | | |


ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೋಲಿಸ್ ಅಧೀಕ್ಷರರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು ,ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ ,ಅನುದಾನವೂ ಅನುಮೋದನೆಯಾಗಿರುತ್ತದೆ . ಸರಕಾರವು ಈ ವಿಚಾರವನ್ನು ಪರಿಗಣಿಸಿ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಪುತ್ತೂರಿಗೆ ಉಪವಿಭಾಗಕ್ಕೆ ಎಸ್ ಪಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹಲವು ವರ್ಷಗಳಿಂದ ಸರಕಾರದ ಮೂಲಕ ಒತ್ತಡ ತರಲಾಗುತ್ತದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇದರ ಕಾರ್ಯ ನಡೆದಿರುವುದಿಲ್ಲ. ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶ ವ್ಯಾಪ್ತಿ‌ಮಂಗಳೂರು ಕಮಿಷನರ್ ಸುಪರ್ದಿಗೆ ಒಳಪಡುವ ಕಾರಣ  ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿದೆ. ಶಾಸಕ ಅಶೋಕ್ ರೈ ಮುಂದಾಳುತ್ವದಲ್ಲಿ ಈ ಬಾರಿ ಎಸ್ ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದ್ದು ಈಗಾಗಲೇ ರಾಜ್ಯ ಗೃಹ ಸಚಿವ ಪರಮೇಶ್ವರ್ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಈ ಮೂಲಕ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಬಹು ವರ್ಷದ ಕನಸು ಈ ಬಾರಿ ನನಸಾಗುವ ಸಾಧ್ಯತೆ ಇದೆ.

ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ,ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಈ ವೇಳೆ ಉಪಸ್ಥಿತರಿದ್ದರು.

ಬಂಟ್ವಾಳ: ಮಲಗಿದ್ದಲ್ಲೇ ಮೃತಪಟ್ಟ 23 ವರ್ಷದ ಮಿತ್ರ ಶೆಟ್ಟಿ

Posted by Vidyamaana on 2023-08-30 23:08:16 |

Share: | | | | |


ಬಂಟ್ವಾಳ: ಮಲಗಿದ್ದಲ್ಲೇ ಮೃತಪಟ್ಟ 23 ವರ್ಷದ ಮಿತ್ರ ಶೆಟ್ಟಿ

ಬಂಟ್ವಾಳ: ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ.

ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ. ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ.

ಊಟ ಮಾಡಿ ಮಲಗಿದ ಯುವತಿ ಬೆಳಿಗ್ಗೆ ನೋಡುವಾಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ತಂದೆ ಮತ್ತು ಅಣ್ಣ ಇಬ್ಬರು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಕಾರಣ ತಾಯಿ ಮತ್ತು ಮಗಳು ಪ್ರಸ್ತುತ ಕಾವಳಪಡೂರು ಗ್ರಾಮದ ಮದ್ವ ಕಂಬಲಡ್ಡ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದವಳು ಬೆಳಿಗ್ಗೆ ಎದ್ದು ನೋಡುವಾಗ ಎದ್ದೇಳುವುದಿಲ್ಲ ಮಾತನಾಡುವುದಿಲ್ಲ ಎಂದು ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.


ಬಳಿಕ ಮೃತದೇಹವನ್ನು ದೇರಳಕಟ್ಟೆ ಕೆ‌ಎಸ್.ಹೆಗ್ಡೆ ಯಲ್ಲಿ ಮರಣೋತ್ತರ ಪರೀಕ್ಷೆ ಗಾಗಿ ಕೊಂಡೋಯ್ಯಲಾಗಿದೆ. ಆರಂಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಹೇಳಲಾಗುತ್ತಿತ್ತು. ಆದರೆ ಬ್ರೈನ್ ಎಮರೇಜ್ ನಿಂದಲೂ ಸಾವು ಆಗಿರಬಹುದು ಎಂಬ ಸಂಶಯವಿದ್ದು, ವೈದ್ಯರು ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿದ ಬಳಿಕ ಸಾವಿನ ಸ್ಪಷ್ಟವಾದ ಕಾರಣ ಸಿಗಬಹುದು.ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ. ಕ್ರಿಯಾಶೀಲೆ ಯುವತಿ ಓಂಕಾರ ಫ್ರೆಂಡ್ಸ್ (ರಿ) ಮದ್ವ ಇದರ ಮಹಿಳಾ ಘಟಕದ ಸದಸ್ಯೆಯಾಗಿರುವ ಮಿತ್ರ ಶೆಟ್ಟಿ ಬಿಸಿರೋಡಿನ ವಕೀಲರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಳು. ಅತ್ಯಂತ ಕ್ರಿಯಾಶೀಲ ಯುವತಿಯಾಗಿದ್ದು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದಳು

ಪುತ್ತೂರು ಶಾಸಕರ ಇಂದಿನ ಕಾರ್ಯಕ್ರಮ ಜು 08

Posted by Vidyamaana on 2023-07-08 00:52:56 |

Share: | | | | |


ಪುತ್ತೂರು ಶಾಸಕರ ಇಂದಿನ ಕಾರ್ಯಕ್ರಮ ಜು 08

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 8 ರಂದು.

ಬೆಳ್ಳಗ್ಗೆ 10 ಗಂಟೆಗೆ

ಸರ್ಕಾರಿ ಪ್ರಥಮ ಧರ್ಜೆ ಕಾಲೇಜು ವಿಟ್ಲ  ವಾರ್ಷಿಕೋತ್ಸವ


ಬೆಳಗ್ಗೆ 11 ಗಂಟೆಗೆ

*ಸರ್ಕಾರಿ ಪ್ರಥಮ ಧರ್ಜೆ ಕಾಲೇಜು ಜಿಡೆಕಲ್ಲು ವಾರ್ಷಿಕೋತ್ಸವ*

*ಸಂಜೆ 4 ಗಂಟೆಗೆ*

*ಆರ್ಯಾಪು ಕೃಷಿ ಪಥಿನ ಸಹಕಾರಿ ಸಂಘದಲ್ಲಿ ಇಂದಿರಾ ಸೇವಾ ಕೇಂದ್ರ ಉದ್ಘಾಟನೆ

ಸಂಜೆ 4:30

ಕುರಿಯ  ಕೃಷಿ ಪಥಿನ ಸಹಕಾರಿ ಸಂಘದಲ್ಲಿ ಇಂದಿರಾ ಸೇವಾ ಕೇಂದ್ರ ಉದ್ಘಾಟನೆ

ಸಂಜೆ 7.30 ಶ್ರೀ ಶನೀಶ್ವರ ಸನ್ನಿಧಿ ಬನ್ನೂರು ಇವರಿಂದ ಶನೀಶ್ವರ ಪೂಜೆ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ.

ಬೆಳ್ತಂಗಡಿ :ಕಕ್ಕಿಂಜೆ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ

Posted by Vidyamaana on 2023-11-25 11:44:53 |

Share: | | | | |


ಬೆಳ್ತಂಗಡಿ :ಕಕ್ಕಿಂಜೆ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ


ಬೆಳ್ತಂಗಡಿ : ಮನೆಯ ಶೆಡ್ಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಕೆಲವ 14 ದಿನದಲ್ಲಿ ಭೇದಿಸಿ ನಾಲ್ಕು ಜನರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

*ಘಟನೆ ವಿವರ:* ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನವೆಂಬರ್ 9 ರಂದು ರಾತ್ರಿ 10 ಗಂಟೆ ಸಮಯಕ್ಕೆ ಇಸಾಕ್‌ ಎಂಬವರ ಅಕ್ಕನ ಮಗ ನೌಫಲ್‌ ಎಂಬವರು ತಮ್ಮ ಕಾರ್ ಶೆಡ್ಡಿನಲ್ಲಿ KA-02-MD-9042 ನೇ ಸಂಖ್ಯೆಯ ಇನ್ನೋವಾ ಕಾರನ್ನು ನಿಲ್ಲಿಸಿದ್ದು. ನವೆಂಬರ್ 10 ರಂದು ಬೆಳಿಗ್ಗೆ 6:30 ಗಂಟೆಗೆ ನೋಡಿದಾಗ ಕಾರು ಶೆಡ್ಡಿನಲ್ಲಿ ಕಾಣದೇ ಇರುವುದರಿಂದ ಈ ಬಗ್ಗೆ ಆಸುಪಾಸುಗಳಲ್ಲಿ ಹುಡುಕಾಡಿದರೂ ಪತ್ತೆಯಾಗದೇ ಇದ್ದು ಈ ಮೊದಲು ನೌಫಾಲ್ ನ ಗೆಳೆಯ ಸೈಪುದ್ದಿನ್ ಎಂಬಾತನ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಸದ್ರಿ ಕಾರನ್ನು ಬಾಡಿಗೆಗೆ ನೀಡುವಂತೆ ಕೇಳಿದಾಗ ನೀಡದೇ ಇದ್ದುದ್ದರಿಂದ ಸದ್ರಿ ಕಾರನ್ನು ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಯವರು ಕಳವು ಮಾಡಿ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ಇರುತ್ತದೆ. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂಪಾಯಿ 2,25,000/- ಆಗಬಹುದು ಎಂಬುವುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 379 IPC ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಧರ್ಮಸ್ಥಳ  ಪೊಲೀಸರ ತಂಡ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿ ನ.24 ರಂದು ಕಳ್ಳತನವಾದ ಇನೋವಾ ಕಾರು ಸಮೇತ ಪ್ರಕರಣದ ನಾಲ್ಕು ಜನ ಕಳ್ಳತನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



*ಆರೋಪಿಗಳ ವಿವರ:* ಆರೋಪಿಗಳಾದ ಮಂಗಳೂರು ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ನಿವಾಸಿ ಜಯರಾಮ ಶೆಟ್ಟಿ ಮಗನಾದ A-1 ಅಜಯ್ ಶೆಟ್ಟಿ(32) ,ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ದಿ.ಸುರೇಶ್ ಶೆಟ್ಟಿ ಮಗನಾದ A-2 ಸೂರಜ್ ಶೆಟ್ಟಿ(23), ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ A-3 ಮಂಜುನಾಥ ಪೂಜಾರಿ(30), ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಪರೆಕಲ್ ನಿವಾಸಿ ಪೂವಪ್ಪ ಪೂಜಾರಿ ಮಗನಾದ A-4 ಕಿಶೋರ್‌.ಟಿ(32) ಎಂಬವರನ್ನು ನ.24 ರಂದು ಬೆಳಗ್ಗೆ ವಶಕ್ಕೆ ಪಡೆದು ಅವರು ಕಳ್ಳತನ ಮಾಡಿಕೊಂಡು ಹೋಗಿದ್ದ  KA-02-MD -9042 ನಂಬರಿನ ಇನ್ನೋವಾ ಕಾರನ್ನು ಸ್ವಾಧೀನಪಡಿಸಿಕೊಂಡು ನಂತರ ವಿಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.



ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಿಷ್ಯಂತ್.ಸಿ.ಬಿ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಧರ್ಮಪ್ಪ ಎಂ.ಎನ್‌ ರವರ ನಿರ್ದೇಶನದಂತೆ ಬಂಟ್ವಾಳ ಡಿ.ವೈಎಸ್.ಪಿ ಶ್ರೀ ಪ್ರತಾಪ್‌ ಸಿಂಗ್ ಥೋರಾಟ್ ರವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ನಾಗೇಶ್ ಕದ್ರಿಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಅನೀಲ್ ಕುಮಾರ್.ಡಿ (ಕಾ&ಸು) ಮತ್ತು ಸಬ್‌ ಇನ್ಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ (ತನಿಖೆ) ಹಾಗೂ ಸಿಬ್ಬಂದಿಗಳಾದ ಎ.ಎಸ್.ಐಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬ್ಬಂದಿ ರಾಜೇಶ್.ಎನ್, ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ರಾಮ ಮಂದಿರ ಪ್ರತಿಷ್ಟಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಸೂಚನೆ

Posted by Vidyamaana on 2024-01-07 08:52:13 |

Share: | | | | |


ರಾಮ ಮಂದಿರ ಪ್ರತಿಷ್ಟಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಸೂಚನೆ

ಬೆಂಗಳೂರು : ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.ಜನವರಿ 22 ರಂದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್ ನಿಂದ 12 ಗಂಟೆ 32 ನಿಮಿಷಗಳವರೆಗೆ ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದರು.ಆ ಸಮಯದಲ್ಲಿ ಶ್ರೀ ರಾಮ ವಿಗ್ರಹ ಪ್ರತಿಷ್ಟಾಪನೆ ನಡೆಯಲಿದೆ.

ಚಂದ್ರಯಾನ-3 ಯಶಸ್ವಿ | ಆಗಸ್ಟ್​ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ : ಮೋದಿ ಘೋಷಣೆ

Posted by Vidyamaana on 2023-08-26 04:06:58 |

Share: | | | | |


ಚಂದ್ರಯಾನ-3 ಯಶಸ್ವಿ | ಆಗಸ್ಟ್​ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ : ಮೋದಿ ಘೋಷಣೆ

ಬೆಂಗಳೂರು: ಚಂದ್ರಯಾನ-3 ಯೋಜನೆ ಯಶಸ್ವಿಯಾದ, ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ದಿನವನ್ನು, ಅಂದರೆ ಆಗಸ್ಟ್ 23 ಅನ್ನು ಇನ್ನು ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ (National Space Day)’ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.


ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಚಂದ್ರಯಾನ-3 ರ ಯಶಸ್ಸಿನಲ್ಲಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು.


ಚಂದ್ರಯಾನ-2 ಪತನ ಸ್ಥಳಕ್ಕೆ ‘ತಿರಂಗ ಪಾಯಿಂಟ್’ ಎಂದು ನಾಮಕರಣ ಮಾಡಿದ ಅವರು, ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಚಂದ್ರನವರೆಗೂ ತಲುಪಿದೆ. ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ. ಚಂದ್ರಯಾನ-3 ರ ಯಶಸ್ಸಿನಿಂದ ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ. ಹೀಗಾಗಿ ಆಗಸ್ಟ್​ 23ರಂದು ರಾಷ್ಟ್ರೀಯ ಬಾಹ್ಯಾಕಾಶ​ ದಿನ ಎಂದು ಘೋಷಣೆ ಮಾಡಲಾಗುವುದು ಎಂದು ಮೋದಿ ಹೇಳಿದರು.


ಕೇಂದ್ರ, ರಾಜ್ಯ ಸರ್ಕಾರ ಸಹಯೋಗದಲ್ಲಿ ಬಾಹ್ಯಾಕಾಶ, ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗುವುದು. ಇಸ್ರೋ ವಿಜ್ಞಾನಿಗಳು ಹಲವು ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಉಪಗ್ರಹಗಳ ನೆರವಿನಿಂದ ಹಲವು ಕ್ಷೇತ್ರಗಳಿಗೆ ಅನುಕೂಲ ಆಗಲಿದೆ. ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಾದರೆ ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಮೋದಿ ಹೇಳಿದರು.


ಇದಕ್ಕೂ ಮುನ್ನ ಅವರು, ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಮೋದಿ ಘೋಷಣೆ ಮಾಡಿದರು.



Leave a Comment: