ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಬೆಳ್ತಂಗಡಿ: ಹಿಮ್ಮುಖವಾಗಿ ಚಲಿಸಿದ ಪಿಕಪ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

Posted by Vidyamaana on 2024-04-18 09:48:31 |

Share: | | | | |


ಬೆಳ್ತಂಗಡಿ: ಹಿಮ್ಮುಖವಾಗಿ ಚಲಿಸಿದ ಪಿಕಪ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಚಾಲಕನ ಅಜಾಗರೂಕತೆಯಿಂದಾಗಿ ಪಿಕಪ್‌ ವಾಹನ ಹಿಮ್ಮುಖವಾಗಿ ಚಲಿಸಿ ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ರುಕ್ಮ ಮುಗೇರ ಮೃತ ವ್ಯಕ್ತಿ. ಶಿಬಾಜೆ ಬಳಿ ಪಿಕಪ್ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್‌ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ.

ಇಂದು ಪುತ್ತೂರಿಗೆ ಅಣ್ಣಾಮಲೈ

Posted by Vidyamaana on 2023-04-29 02:42:29 |

Share: | | | | |


ಇಂದು ಪುತ್ತೂರಿಗೆ  ಅಣ್ಣಾಮಲೈ

ಪುತ್ತೂರು:ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಕರ್ನಾಟಕ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಅವರು ಏ.29ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ ಗಂಟೆ 11.30ಕ್ಕೆ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಮಧ್ಯಾಹ್ನ ಗಂಟೆ 3ಕ್ಕೆ ಕಾವು ಜನಮಂಗಲದಲ್ಲಿ ಕಾರ್ಯಕರ್ತರೊಂದಿಗೆ ಸ೦ವಾದ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ವಿಟ್ಲದಲ್ಲಿ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ತಿಳಿಸಿದೆ.

ನೈತಿಕ ಪೊಲೀಸ್ ಗಿರಿ ಕಡಿವಾಣ ಹಾಕಿ: ಕಮಿಷನರ್ ಎಸ್ಪಿಗೆ ಸಿ ಎಂ ಖಡಕ್ ಆದೇಶ

Posted by Vidyamaana on 2023-08-02 10:11:10 |

Share: | | | | |


ನೈತಿಕ ಪೊಲೀಸ್ ಗಿರಿ ಕಡಿವಾಣ ಹಾಕಿ: ಕಮಿಷನರ್ ಎಸ್ಪಿಗೆ ಸಿ ಎಂ ಖಡಕ್ ಆದೇಶ

ಪುತ್ತೂರು: ದ ಕ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಬೇಕು, ಪೊಲೀಸ್ ಗಿರಿ ಮಾಡುವ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು,ಇದರಲ್ಲಿ ಯಾವುದೇ ಮುಲಾಜು ಮಾಡುವುದು ಬೇಡ .ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಎಲ್ಲೂ ನೈತಿಕ ಪೊಲೀಸ್ ಗಿರಿ ನಡೆಯಬಾರದು ಎಂದು ಸಿ ಎಂ ಸಿದ್ದರಾಮಯ್ಯ ಮಂಗಳೂರು ಕಮಿಷನರ್ ಮತ್ತು ಎಸ್ಪಿಯವರಿಗೆ ಖಡಕ್ ಆದೇಶ ವನ್ನು ನೀಡಿದ್ದಾರೆ.

ದ ಕ ಜಿಲ್ಲೆಯಲ್ಲಿ ಪದೇ ಪದೇ ಕಿರಾತಕರು ಹಲ್ಲೆ ನಡೆಸುವ ಘಟನೆಗಳು ನಡೆಯುತ್ತಿದೆ ಇದಕ್ಕೆ ಯಾಕೆ ನೀವು ಕಡಿವಾಣ ಹಾಕಿಲ್ಲ ಎಂದು ಏರು‌ಧ್ವನಿಯಲೇ ಇಬ್ಬರನ್ನೂ ಪ್ರಶ್ನಿಸಿದ ಸಿ ಎಂ ಮುಂದೆ ಎಲ್ಲೂ ಇಂತದ್ದಕ್ಕೆ ಅವಕಾಶ ನೀಡಲೇ ಬಾರದು ಎಂದು ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸೂಚನೆ ನೀಡಿದ್ದಾರೆ

ಇಕ್ಬಾಲ್ ಅನ್ಸಾರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ

Posted by Vidyamaana on 2024-01-06 04:42:27 |

Share: | | | | |


ಇಕ್ಬಾಲ್  ಅನ್ಸಾರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ

ಅಯೋಧ್ಯೆ: ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ಮೊಕದ್ದಮೆ ಹೂಡಿದ್ದ ಇಕ್ಬಾಲ್ ಅನ್ಸಾರಿ ಶುಕ್ರವಾರ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಆಹ್ವಾನವನ್ನು ಸ್ವೀಕರಿಸಿದ್ದು, ಈ ಮಹಾಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.ಇದು ಅಯೋಧ್ಯೆ ನಗರಿ, ಇದು ಧರ್ಮದ ನಗರ, ಹಿಂದೂ ಮತ್ತು ಮುಸ್ಲಿಂ ಸಮುದಾಯದ ದೇವತೆಗಳು ಇಲ್ಲಿ ಇದ್ದಾರೆ. ಅಯೋಧ್ಯೆಯ ಹಿಂದೂಗಳು ಮತ್ತು ಮುಸ್ಲಿಮರಲ್ಲಿ ಸಹೋದರತೆ ಮತ್ತು ಏಕತೆ ಇದೆ ಮತ್ತು ಯಾವುದೇ ಅಶಾಂತಿ ಇಲ್ಲ. ದೇವಸ್ಥಾನ, ಮಸೀದಿ, ಗುರುದ್ವಾರ ಎಂಬ ಭೇದಭಾವವಿಲ್ಲ. ಅಯೋಧ್ಯೆಗೆ ಬರುವವರಲ್ಲಿ ಸೌಹಾರ್ದತೆಯ ಭಾವನೆ ಇದೆ’ ಎಂದು ಆಹ್ವಾನ ಸ್ವೀಕರಿಸಿದ ಕೂಡಲೇ ಪಿಟಿಐಗೆ ಹೇಳಿಕೆ ನೀಡಿದ್ದಾರೆ.ರಾಮ್ ಪಥ್ ಬಳಿಯ ಕೋಟ್ಯ ಪಂಜಿತೋಲದಲ್ಲಿರುವ ನಿವಾಸದಲ್ಲಿ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಲಾಯಿತು ಎಂದು ಅವರ ಪುತ್ರಿ ಶಮಾ ಪರ್ವೀನ್ ಪಿಟಿಐಗೆ ತಿಳಿಸಿದ್ದಾರೆ.


ಜನವರಿ 22 ರಂದು ‘ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯ ಪಟ್ಟಣಕ್ಕೆ ಬರುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಆಹ್ವಾನಿತರ ಪಟ್ಟಿಯಲ್ಲಿ ಭಾರತ ಮತ್ತು ವಿದೇಶಗಳಿಂದ ಸುಮಾರು 7,000 ಅತಿಥಿಗಳು ಸೇರಿದ್ದಾರೆ.ಅನ್ಸಾರಿ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ರಾಮ ಮಂದಿರ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ 2019ರ ತೀರ್ಪನ್ನು ಮುಸ್ಲಿಂ ಸಮುದಾಯ ಗೌರವಿಸುತ್ತದೆ ಎಂದು ಹೇಳಿದ್ದರು.



ಅನ್ಸಾರಿಯವರ ತಂದೆ ಹಾಶಿಮ್ ಅನ್ಸಾರಿ ಅವರು 2016 ರಲ್ಲಿ 90 ರ ಹರೆಯದಲ್ಲಿ ನಿಧನ ಹೊಂದಿದ್ದು ಕೊನೆಯವರೆಗೂ ಅಯೋಧ್ಯೆ ಪ್ರಕರಣದ ಪ್ರಮುಖ ದಾವೆದಾರರಲ್ಲಿ ಒಬ್ಬರಾಗಿದ್ದರು.

BREAKING: ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಖಾತೆ ತೆರೆದ ಬಿಜೆಪಿ: ಸೂರತ್ ನಲ್ಲಿ ಅಭ್ಯರ್ಥಿ ಅವಿರೋಧ ಆಯ್ಕೆ

Posted by Vidyamaana on 2024-04-22 16:11:35 |

Share: | | | | |


BREAKING: ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಖಾತೆ ತೆರೆದ ಬಿಜೆಪಿ: ಸೂರತ್ ನಲ್ಲಿ ಅಭ್ಯರ್ಥಿ ಅವಿರೋಧ ಆಯ್ಕೆ

ನವದೆಹಲಿ: ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆದ್ದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) 2024 ರ ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆಗೆ ಮುಂಚಿತವಾಗಿ ತನ್ನ ಖಾತೆಯನ್ನು ತೆರೆದಿದೆ.ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರ ನಾಮಪತ್ರಕ್ಕೆ ಸಹಿ ಹಾಕಿಲ್ಲ ಎಂದು ಅವರ ಪ್ರಸ್ತಾಪಕರು ಹೇಳಿದ ನಂತರ ಚುನಾವಣಾ ಆಯೋಗ ಅವರ ನಾಮಪತ್ರವನ್ನು ತಿರಸ್ಕರಿಸಿತ್ತು.ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪಡ್ಸಾಲ ಅವರಿಗೂ ಇದೇ ಗತಿಯಾಗಿದ್ದು, ಈ ಪ್ರಮುಖ ನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಚುನಾವಣಾ ಸ್ಪರ್ಧೆಯಿಂದ ಪರಿಣಾಮಕಾರಿಯಾಗಿ ತೆಗೆದುಹಾಕಲಾಗಿದೆ.

ಕುಂಬೋಳ್ ತಂಙಳ್ ವಿಧಾನ ಸೌಧದಲ್ಲಿ

Posted by Vidyamaana on 2023-05-23 09:22:02 |

Share: | | | | |


ಕುಂಬೋಳ್ ತಂಙಳ್ ವಿಧಾನ ಸೌಧದಲ್ಲಿ

ಬೆಂಗಳೂರು: ಸುನ್ನಿ ಉಲೆಮಾ ಲೋಕದ ಮಹಾನ್ ವಿದ್ವಾಂಸರಾದ ಶೈಕುನಾ ಸಯ್ಯದ್ ಕುಂಞಿ ಕೋಯಾ ತಂಙಳ್ ರವರು‌ಮಂಗಳವಾರ ವಿಧಾನ ಸೌಧದಲ್ಲಿ ಕಾಣಿಸಿಕೊಂಡರು.

ಉಳ್ಳಾಲ ಶಾಸಕ ಯು ಟಿ ಖಾದರ್ ಜೊತೆ ಬೆಂಗಳೂರಿಗೆ ತೆರಳಿದ್ದ ಅವರು ಇಂದು ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಕುಶಲೋಪರಿ ನಡೆಸಿದರು. ಅನೇಕ ಪವಾಡಗಳಿಂದ ಪ್ರಸಿದ್ದಿ ಪಡೆದ ಕುಂಬೋಳ್ ತಂಙಳ್  ಈ ಸಂದರ್ಬದಲ್ಲಿ ಯು ಟಿ ಖಾದರ್ ರವರಿಗೆ ಉಡುಗೋರೆ ನೀಡಿ ಆಶೀರ್ವದಿಸಿದರು.ಮುಖ್ಯಮಂತ್ರಿ  ಹಾಗೂ ಡಿಸಿಎಂ ತಂಙಳ್ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.



Leave a Comment: