ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಭರ್ಜರಿ ಬೇಟೆ

Posted by Vidyamaana on 2024-03-23 19:42:29 |

Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಭರ್ಜರಿ ಬೇಟೆ

ಪುತ್ತೂರು :ನಗರ ಠಾಣಾ ಪೊಲೀಸರು ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳಿಯನ್ನು ಬಂಧಿಸಿದ್ದು, ಅಕೆಯಿಂದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.


ಪೆ. 12ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಈ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿದ್ದು, ಪ್ರಕರಣದ ಆರೋಪಿ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿ ಈಸ್ಟರಿ (45) ಎಂಬಾಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಆಕೆಯ ಬಳಿಯಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ.


ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಬೆಳ್ತಂಗಡಿ ಚಂದು ಎಲ್. ನಿಧನ

Posted by Vidyamaana on 2024-06-20 09:36:07 |

Share: | | | | |


ಬೆಳ್ತಂಗಡಿ  ಚಂದು ಎಲ್. ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ (52) ಅವರು ಅಲ್ಪ ಕಾಲದ‌ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂ.19 ರಂದು ರಾತ್ರಿ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಚಳವಳಿಯನ್ನು ಕಟ್ಟಿ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದ ಚಂದು ಎಲ್.

ನಮ್ಮೂರಿನ ನಮ್ಮ ಅಭ್ಯರ್ಥಿ -ಇಂದು ಸಂಜೆ ತವರೂರಲ್ಲಿ ಅಶೋಕ್ ರೈ ಭರ್ಜರಿ ಪ್ರಚಾರಕ್ಕೆ ಸಿದ್ಧತೆ

Posted by Vidyamaana on 2023-05-04 10:01:41 |

Share: | | | | |


ನಮ್ಮೂರಿನ ನಮ್ಮ ಅಭ್ಯರ್ಥಿ -ಇಂದು ಸಂಜೆ ತವರೂರಲ್ಲಿ ಅಶೋಕ್ ರೈ ಭರ್ಜರಿ ಪ್ರಚಾರಕ್ಕೆ ಸಿದ್ಧತೆ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಶೋಕ್ ಕುಮಾರ್ ರೈ ಅವರ ತವರೂರು ಕೋಡಿಂಬಾಡಿ, ಬೆಳ್ಳಾಪ್ಪಾಡಿಯಲ್ಲಿ ಭರ್ಜರಿ ಪ್ರಚಾರಕ್ಕೆ ಸಿದ್ಧತೆ ನಡೆಯುತ್ತಿದೆ.

ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಶೋಕ್ ಕುಮಾರ್ ರೈ ಅವರ ಹಿತೈಷಿಗಳು ಈ ಕಾರ್ಯಕ್ರಮ ಆಯೋಜಿಸಿದ್ದಾರೆ.

ಕೋಡಿಂಬಾಡಿ ಹೋಟೆಲ್ ತುಳುನಾಡ್ ಹತ್ತಿರ ಮೇ ೪ರಂದು ಸಂಜೆ ೬ರಿಂದ ಪ್ರಚಾರ ಸಭೆ ನಡೆಯಲಿದೆ. ಅಶೋಕ್ ಕುಮಾರ್ ರೈ ಅವರ ಮನೆಯಿರುವ ಕೋಡಿಂಬಾಡಿ ಪ್ರದೇಶದಲ್ಲಿ ಈ ಸಭೆ ಆಯೋಜನೆಯಾಗಿರುವುದರಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಪುತ್ತೂರು : ಇನ್‌ಸ್ಟ್ರಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಮೂವರು ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ : ಮಂಗಳೂರು ಮೂಲದ ರಿತಿಕ್ಷ್ ಅರೆಸ್ಟ್

Posted by Vidyamaana on 2023-11-19 04:39:01 |

Share: | | | | |


ಪುತ್ತೂರು : ಇನ್‌ಸ್ಟ್ರಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಮೂವರು  ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ : ಮಂಗಳೂರು ಮೂಲದ  ರಿತಿಕ್ಷ್ ಅರೆಸ್ಟ್

ಪುತ್ತೂರು : ಮೂವರು ಅಪ್ರಾಪ್ತೆಯರಿಗೆ ಇನ್‌ಸ್ಟ್ರಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ದೂರಿಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.


ಮಂಗಳೂರು ಅಡ್ಯಾರುಪದವು ನಾರಾಯಣ ಪೂಜಾರಿ ಎಂಬವರ ಪುತ್ರ ಸಂತೋಷ್ ಯಾನೆ ರಿತಿಕ್ಷ್ ಬಂಧಿತ ಯುವಕ.


ಆರೋಪಿ ಪುತ್ತೂರಿನ ಮೂವರು ಅಪ್ರಾಪ್ತೆಯರನ್ನು ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಮೆಸೇಜ್ ಮತ್ತು ಕರೆ ಮಾಡಿ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ತನಿಖೆ ನಡೆಸಿದರು.


ಆರೋಪಿಯನ್ನು ಮಂಗಳೂರಿನಿಂದ ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಭಾರ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇವರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಪುತ್ತೂರು : ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

Posted by Vidyamaana on 2023-10-19 07:22:53 |

Share: | | | | |


ಪುತ್ತೂರು : ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

ಪುತ್ತೂರು: ಮಂಗಳೂರುನಿಂದ ಸುಳ್ಯದ ಕಡೆಗೆ ಪಾಮ್‌ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರೊಂದು ಪಲ್ಟಿಯಾಗಿ ಪಾಮ್ ಆಯಿಲ್‌ ಸೋರಿಕೆ ರಸ್ತೆಯಲ್ಲೆಲ್ಲಾ ಹರಿದು ಹೋದ ಘಟನೆ ಅ.18ರ ರಾತ್ರಿ ಇಲ್ಲಿನ ಬೈಪಾಸ್‌ ರಸ್ತೆ ಉರ್ಲಂಡಿಯಲ್ಲಿ ನಡೆದಿದೆ.


ರಾತ್ರಿ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.ಟ್ಯಾಂಕ‌ ಪಲ್ಟಿಯಾದ ಶಬ್ದ ಕೇಳುತ್ತಲೇ ಸ್ಥಳೀಯರು ಆಗಮಿಸಿ ಇತರರಿಗೆ ಮಾಹಿತಿ ನೀಡಿದ್ದರುಘಟನೆಯಿಂದ ವಿದ್ಯುತ್‌ ತಂತಿ ತುಂಡರಿಸಲ್ಪಟ್ಟಿದ್ದು ಸಂಪರ್ಕ ಕಡಿತಗೊಂಡಿದೆ.ಟ್ಯಾಂಕರ್‌ ವಿದ್ಯುತ್‌ ಕಂಬ, ತಂತಿಗಳಿಗೆ ತಾಗಿತ್ತಾದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರೊಂದಕ್ಕೆ ಅಪಘಾತವಾಗುವುದನ್ನು ತಪ್ಪಿಸುವ ಯತ್ನದಲ್ಲಿ ಟ್ಯಾಂಕ‌ ಪಲ್ಟಿಯಾಗಿದೆ ಎನ್ನಲಾಗಿದೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳು ಚಾಲಕನನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.ಅಗ್ನಿ ಶಾಮಕ ದಳದವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದಾರೆ.ಘಟನಾಸ್ಥಳದಲ್ಲಿ ಹಲವು ಮಂದಿ ಜಮಾಯಿಸಿದ್ದರು.


10 ಸಾವಿರ ಲೀ ಪಾಮ್ ಆಯಿಲ್ ಸೋರಿಕೆ: ಟ್ಯಾಂಕರ್‌ನಲ್ಲಿ 30 ಸಾವಿರ ಲೀ. ಪಾಮ್ ಆಯಿಲ್ ತುಂಬಿಸಲಾಗಿದ್ದು, ಅದರಲ್ಲಿದ್ದ 10 ಸಾವಿರ ಲೀ. ಪಾಮ್ ಆಯಿಲ್ ಸೋರಿಕೆಯಾಗಿ ಹೋಗಿದೆ ಎಂದು ತಿಳಿದು ಬಂದಿದೆ.

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಗಡುವು ಜೂನ್ 30ರ ವರೆಗೆ ವಿಸ್ತರಣೆ

Posted by Vidyamaana on 2023-03-28 10:04:26 |

Share: | | | | |


ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಗಡುವು ಜೂನ್ 30ರ ವರೆಗೆ ವಿಸ್ತರಣೆ

ಪುತ್ತೂರು : ಪಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಕೇಂದ್ರ ಸರಕಾರ ಮುಂದೂಡಿದೆ.ಜೂನ್ 30ರವರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು ಜುಲೈ 1ರಿಂದ ಲಿಂಕ್ ಕಡ್ಡಾಯವೆಂದು ಕೇಂದ್ರ ಹಣಕಾಸು ಇಲಾಖೆ ಸೂಚನೆ ನೀಡಿದೆ..



Leave a Comment: