ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಕೈಯಿಲ್ಲದಿದ್ದರು 3 ಪದಕ ಗೆದ್ದ ಶೀತಲ್ ದೇವಿ ಭೇಟಿಯಾದ ಪ್ರಧಾನಿ ಮೋದಿ

Posted by Vidyamaana on 2023-11-02 20:12:02 |

Share: | | | | |


ಕೈಯಿಲ್ಲದಿದ್ದರು 3 ಪದಕ ಗೆದ್ದ ಶೀತಲ್ ದೇವಿ ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ಚೀನಾದ ಹ್ಯಾಂಗ್‌ಝೌನಲ್ಲಿ ಇತ್ತೀಚೆಗೆ ನಡೆದ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಮೂರು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ 16 ವರ್ಷದ ಬಿಲ್ಲುಗಾರ್ತಿ ಶೀತಲ್ ದೇವಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದಾರೆ.ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಟ್ವಿಟರ್ (ಎಕ್ಸ್‌)ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ಪೂರ್ಣ ನಂಬಿಕೆಯ ಆಶೀರ್ವಾದಗಳು ಎಂದು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ಕೈಯಿಲ್ಲದ ಶೀತಲ್ ದೇವಿ ತನ್ನ ಕಾಲುಗಳ ಬಳಸಿ ಬಿಲ್ಲುಹಿಡಿದು ಗುರಿಯತ್ತ ಬಾಣಗಳ ಹೊಡೆದಿದ್ದರು. ಈಕೆ ಕಾಲುಗಳ ಬಳಸಿದ್ದ ವಿಶ್ವದ ಏಕೈಕ ಬಿಲ್ಲುಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.



ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಲೋಯಿ ಧಾರ್ ಎಂಬ ದೂರದ ಹಳ್ಳಿಯಿಂದ ಬಂದ ಶೀತಲ್ ದೇವಿ ಅವರು ಅಪರೂಪದ ಕಾಯಿಲೆಯಾದ ಫೋಕೊಮೆಲಿಯಾದೊಂದಿಗೆ ಜನಿಸಿದರು, ಇದು ಅಪಕ್ವ ಅಂಗಗಳಿಗೆ ಕಾರಣವಾಗುತ್ತದೆ. ಹೀಗಿದ್ದರೂ ಚಲಬಿಡದ ಛಲಬಿಡದೆ ಆಕೆ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಭಾಗಿಯಾಗಿ ಪದಕ ಗೆದ್ದಿದ್ದಾರೆ.2019 ರಲ್ಲಿ ಕಿಶ್ತ್ವಾರ್‌ನಲ್ಲಿ ನಡೆದ ಯುವ ಕ್ರೀಡಾಕೂಟದಲ್ಲಿ ಭಾರತೀಯ ಸೇನೆಯು ಆಕೆಯನ್ನು ಗುರುತಿಸಿತ್ತು. ಆರಂಭದಲ್ಲಿ ಆಕೆಗೆ ಪ್ರಾಸ್ಥೆಟಿಕ್ ತೋಳನ್ನು ಪಡೆಯುವ ಯೋಜನೆ ಇತ್ತು, ಆದರೆ ಅದು ಕಾರ್ಯರೂಪಕ್ಕೆ ಬರದಿದ್ದಾಗ, ಅವಳನ್ನು ಬಿಲ್ಲುಗಾರಿಕೆಗೆ ಪರಿಚಯಿಸಲಾಯಿತು. ಆರಂಭಿಕ ಅಡೆತಡೆಗಳ ಹೊರತಾಗಿಯೂ, ಶೀತಲ್ ಅವರು ಬಿಲ್ಲುಗಳನ್ನು ಸರಿಯಾಗಿ ಎತ್ತಿಕೊಳ್ಳಲು ತಿಂಗಳುಗಟ್ಟಲೆ ಅಭ್ಯಾಸ ಮಾಡಿದ್ದರು.

ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

Posted by Vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪಿಎಸ್ಐ ನೇಮಕಾತಿ ಹಗರಣ: ಮರು ಪರೀಕ್ಷೆ ಗೆ ಹೈಕೋರ್ಟ್ ಆದೇಶ

Posted by Vidyamaana on 2023-11-10 13:54:17 |

Share: | | | | |


ಪಿಎಸ್ಐ ನೇಮಕಾತಿ ಹಗರಣ: ಮರು ಪರೀಕ್ಷೆ ಗೆ ಹೈಕೋರ್ಟ್ ಆದೇಶ

ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿ ಅಕ್ರಮ ಹಿನ್ನಲೆಯಲ್ಲಿ, ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ, ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.ಇದೀಗ ಹೈಕೋರ್ಟ್ ಪಿಎಸ್‌ಐ ನೇಮಕಾತಿಯ ಮರು ಪರೀಕ್ಷೆಗೆ ಆದೇಶ ಮಾಡಿದೆ. ಈ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದಂತ ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದೆ. 


ರಾಜ್ಯ ಸರ್ಕಾರವು ಪಿಎಸ್‌ಐ ನೇಮಕಾ ಅಕ್ರಮದ ನಂತ್ರ ಪರೀಕ್ಷೆ, ಆಯ್ಕೆ ಪಟ್ಟಿ ರದ್ದುಪಡಿಸಿದ್ದನ್ನು ಪ್ರಶ್ನಿಸಿ ಅಭ್ಯರ್ಥಿ ಎನ್ ವಿ ಚಂದನ್ ಸೇರಿದಂತೆ ಆಯ್ಕೆ ಪಟ್ಟಿಯಲ್ಲಿದ್ದ 296ಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಎಸ್ ಸಿಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.


ಮರು ಪರೀಕ್ಷೆ ವಿರೋಧಿಸಿ 296 ಅಭ್ಯರ್ಥಿಗಳು ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು, ಮರು ಪರೀಕ್ಷೆಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿತ್ತು. ಆ ಬಳಿಕ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠವು ಇಂದು ತನ್ನ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿದ್ದು, 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆ ನಡೆಸುವಂತ ಆದೇಶ ಹೊರಡಿಸಿದೆ. ಅಲ್ಲದೇ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ.


ಅಂದಹಾಗೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಂತ 296ಕ್ಕೂ ಹೆಚ್ಚು ಅಭ್ಯರ್ಥಿಗಳು ಅಕ್ರಮ ಎಸಗಿದವರನ್ನು ಪ್ರತ್ಯೇಕಿಸಿ, ಅಕ್ರಮದಲ್ಲಿ ಭಾಗಿಯಾಗಿರದೇ ಇರುವವರನ್ನು ನೇಮಕಾತಿ ಅಂತಿಮಗೊಳಿಸುವಂತೆ ಕೋರಿದ್ದರು. ಈ ಅರ್ಜಿಗೆ ಹೈಕೋರ್ಟ್ ಮರು ಪರೀಕ್ಷೆ ನಡೆಸುವಂತೆ ಮಹತ್ವದ ತೀರ್ಪನ್ನು ಹೊರಡಿಸಿದೆ.

ಬೆಳ್ತಂಗಡಿ :App ಮೂಲಕ ಸಾಲ ಕೊಡ್ತೇವೆ ಅಂದವ್ರೇ ಒಟ್ರಾಶಿ ಹಣ ಪೀಕಿದ್ರು..

Posted by Vidyamaana on 2024-04-05 04:38:50 |

Share: | | | | |


ಬೆಳ್ತಂಗಡಿ :App ಮೂಲಕ ಸಾಲ ಕೊಡ್ತೇವೆ ಅಂದವ್ರೇ ಒಟ್ರಾಶಿ ಹಣ ಪೀಕಿದ್ರು..

ಬೆಳ್ತಂಗಡಿ: ಆಪ್‌ ಮೂಲಕ ಸಾಲ ನೀಡುವುದಾಗಿ ಹೇಳಿ ಮಹಿಳೆಗೆ ವಂಚಿಸಿರುವ ಘಟನೆ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ.

ತೆಂಕಕಾರಂದೂರು ಗ್ರಾಮದ ನೆಬಿಸಾ (38) ಎಂಬವರಿಗೆ ಅಪರಿಚಿತರು ಮಾ. 21 ರಂದು ಫೇಸ್ ಬುಕ್ ನಲ್ಲಿ ಮನಿ ವ್ಯೂ ಪರ್ಸನಲ್ ಲೋನ್ ಆಪ್ ಮೂಲಕ ಪರಿಚಯಿಸಿಕೊಂಡಿದ್ದರು.

ವ್ಯಂಗ್ಯ ಚಿತ್ರ ರಚಿಸಿ ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ

Posted by Vidyamaana on 2023-05-30 11:58:10 |

Share: | | | | |


ವ್ಯಂಗ್ಯ ಚಿತ್ರ ರಚಿಸಿ ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ

ಪುತ್ತೂರು : ಮುಸಲ್ಮಾನರ ಭಾವನೆಗೆ ಚ್ಯುತಿ ತಂದಿರುವ ಸುದೀಪ್ ಪನಿಯನ್ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಸ್ಲಿಂ ಯುವ ಜನ ಪರಿಷತ್ ನ ಅಧ್ಯಕ್ಷ ಅಶ್ರಫ್ ಕಲ್ಲೇಗ ಪುತ್ತೂರು ಉಪವಿಭಾಗದ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.ಅರುಣ್ ಪುತ್ತಿಲ ಬ್ರಿಗ್ರೇಡ್ ಪಾಣಾಜೆ’ ಎಂಬ ವಾಟ್ಸಪ್ ಗ್ರೂಪಿನಲ್ಲಿ ಕಾರ್ಟೂನ್ ಅನ್ನು ರಚಿಸಿ ಆ ಕಾರ್ಟೂನ್ ನಲ್ಲಿ ಮುಸ್ಲಿಂ ಮಹಿಳೆಯು ಮುಸಲ್ಮಾನರ ಪವಿತ್ರ ನಮಾಜ್ ಪ್ರಾರ್ಥನೆ ನೇತೃತ್ವ ವಹಿಸಿ ಅವರ ಹಿಂದೆ ಮೂರು ಮುಸಲ್ಮಾನ ಪುರುಷರು ಪ್ರಾರ್ಥನೆ ಮಾಡುತ್ತಾ ಇರುವಂತೆ ಅಶ್ಲೀಲ ಭಂಗಿಯಲ್ಲಿ ಚಿತ್ರವನ್ನು ರಚಿಸಿ ವಾಟ್ಸಾಪ್ ಗ್ರೂಪ್ ನಲ್ಲಿ ಹರಿಯ ಬಿಟ್ಟು ಮುಸಲ್ಮಾನರ ಭಾವನೆಗೆ ಚ್ಯುತಿ ಹಾಗೂ ಭಂಗ ತಂದಿರುತ್ತಾರೆ.ಈ ವಿಚಾರದಿಂದ ಇಸ್ಲಾಂ ವಿಶ್ವಾಸಿಯಾದ ನನಗೆ ತೀವ್ರ ನೋವುಂಟಾಗಿರುತ್ತದೆ ಮಾತ್ರವಲ್ಲ ಇದು ಸಮಾಜದಲ್ಲಿ ಕೋಮು ಭಾವನೆ ಕೆರಳಿಸಲು ಪ್ರಯತ್ನಿಸಿ ಸಮಾಜದಲ್ಲಿ ಅಶಾಂತಿ ಉಂಟಾಗುವಂತೆ ಮಾಡಿದ ಕೃತ್ಯವಾಗಿರುತ್ತದೆ ಆದ್ದರಿಂದ ಆಪಾದಿತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಶ್ರಫ್ ಕಲ್ಲೇಗ ದೂರಿನಲ್ಲಿ ತಿಳಿಸಿದ್ದಾರೆ.

BREAKING : ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಸಂಸದೆ ಸುಮಲತಾ ಅಂಬರೀಶ್

Posted by Vidyamaana on 2024-04-05 14:00:14 |

Share: | | | | |


BREAKING : ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಮಂಡ್ಯ ಸಂಸದೆ ಅಂಬರೀಶ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.



Leave a Comment: